Site icon Vistara News

Koppala News: ಜಿಲ್ಲೆಯಲ್ಲಿ ಕಾನೂನುಬಾಹಿರ ಚಟುವಟಿಕೆ ತಡೆಯುವಲ್ಲಿ ಜಿಲ್ಲಾಡಳಿತ ವಿಫಲ; ಶಾಸಕ ಜನಾರ್ದನ ರೆಡ್ಡಿ ಆರೋಪ

District administration failed to prevent illegal activities in the district MLA Janardhana Reddy alleges

ಗಂಗಾವತಿ: ಜಿಲ್ಲೆಯಲ್ಲಿ ನಡೆಯುತ್ತಿರುವ ಮಿತಿಮೀರಿದ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸುವಲ್ಲಿ ಜಿಲ್ಲಾಡಳಿತ (Koppala News) ಸಂಪೂರ್ಣ ವಿಫಲವಾಗಿದೆ. ಮುಖ್ಯವಾಗಿ ಜಿಲ್ಲಾಧಿಕಾರಿ, ಜಿಲ್ಲಾ ಎಸ್ಪಿ ಆಡಳಿತ ನಿರ್ವಹಿಸುವಲ್ಲಿ ಪೂರ್ಣ ವಿಫಲರಾಗಿದ್ದಾರೆ ಎಂದು ಶಾಸಕ ಜಿ. ಜನಾರ್ದನ ರೆಡ್ಡಿ ಆರೋಪಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮುಖ್ಯವಾಗಿ ನನ್ನ ಗಂಗಾವತಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಮಿತಿ ಮೀರಿದ ಪ್ರಮಾಣದಲ್ಲಿ ಮಟ್ಕಾ, ಇಸ್ಪೀಟ್ ಜೂಜಾಟ, ಅಕ್ರಮ ಮರಳು ಸಾಗಾಣಿಕೆ, ಮುಖ್ಯವಾಗಿ ಯುವ ಜನರನ್ನು ಬಲಿ ತೆಗೆದುಕೊಳ್ಳುತ್ತಿರುವ ಡ್ರಗ್ಸ್ ಮಾಫಿಯ ಜೋರಾಗಿದೆ.

ಇದನ್ನೂ ಓದಿ: Job Recruitment: ಬ್ಯಾಂಕ್ ಆಫ್ ಬರೋಡಾದಲ್ಲಿ 627 ಹುದ್ದೆಗಳಿಗೆ ಅರ್ಜಿ ಆಹ್ವಾನ; 55 ಲಕ್ಷದವರೆಗೆ ಸಂಬಳ!

ಯುವ ಅಧಿಕಾರಿಗಳಾದ ಜಿಲ್ಲಾಧಿಕಾರಿ ನಲೀನ್ ಅತುಲ್, ಎಸ್ಪಿ ಯಶೋಧಾ ಒಂಟಗೋಡಿ ಅವರು ಉತ್ತಮ ಆಡಳಿತ ನೀಡುವ ವಿಶ್ವಾಸವಿತ್ತು. ಆದರೆ ಕಾನೂನು ಬಾಹಿರ ಕೃತ್ಯ ನಿಯಂತ್ರಣಕ್ಕೆ ಬರುತ್ತಿಲ್ಲ. ಹೀಗಾಗಿ ಗಂಗಾವತಿ ಉಪ ವಿಭಾಗದ ಎಲ್ಲಾ ಪೊಲೀಸ್ ಅಧಿಕಾರಿಗಳ ಸಾಮೂಹಿಕ ವರ್ಗಾವಣೆಯಂತ ಪ್ರಕ್ರಿಯೆ ನಡೆಯಬೇಕು.

ಕಾನೂನು ಬಾಹಿರ ಕೃತ್ಯಗಳಿಗೆ ಕಡಿವಾಣ ಹಾಕಬೇಕಿದ್ದ ಎಸ್ಪಿ ಯಶೋಧಾ ಒಂಟಗೋಡಿ ಅವರ ನೇತೃತ್ವದಲ್ಲಿನ ಪೊಲೀಸ್ ಇಲಾಖೆ ಸಂಪೂರ್ಣ ವೈಫಲ್ಯ ಅನುಭವಿಸುತ್ತಿದೆ. ಪರಿಣಾಮ ಕಾನೂನು ಬಾಹಿರ ಚಟುವಟಿಕೆಗಳು ನಿಯಂತ್ರಣಕ್ಕೆ ಬಾರದಂತಾಗಿವೆ ಎಂದು ಆರೋಪಿಸಿದರು.

ಒಂದು ವಾರದ ಗಡುವು

ನನ್ನ ಕ್ಷೇತ್ರದಲ್ಲಿ ನಡೆಯುತ್ತಿರುವ ಮಿತಿಮೀರಿದ ಕಾನೂನು ಬಾಹಿರ ಚಟುವಟಿಕೆಗಳು ಮತ್ತು ನಿಯಂತ್ರಿಸುವಲ್ಲಿ ವಿಫಲವಾಗಿರುವ ಪೊಲೀಸರ ಬಗ್ಗೆ ಬಗ್ಗೆ ಐಜಿ, ಡಿಜಿ ಸೇರಿದಂತೆ ಗೃಹ ಇಲಾಖೆ ಕಾರ್ಯದರ್ಶಿ ಮತ್ತು ಸಚಿವರ ಗಮನಕ್ಕೆ ತರಲಾಗುವುದು.

ಇದನ್ನೂ ಓದಿ: NEETPG 2024 : ಜೂ.23ಕ್ಕೆ ನೀಟ್‌ ಪಿಜಿ ಪರೀಕ್ಷೆ; ನಾಳೆಯಿಂದಲೇ ಪ್ರವೇಶ ಪತ್ರ ಬಿಡುಗಡೆ

ಕ್ಷೇತ್ರದಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಚಟುವಟಿಕೆಗಳನ್ನು ಕೂಡಲೆ ನಿಯಂತ್ರಿಸಲು ಪೊಲೀಸ್ ಇಲಾಖೆ ಮುಂದಾಗಬೇಕು, ಇದಕ್ಕಾಗಿ ಒಂದು ವಾರದ ಗಡುವು ನೀಡಲಾಗುವುದು. ನಿಯಂತ್ರಣ ಸಾಧ್ಯವಾಗದೇ ಹೋದಲ್ಲಿ ಸಾವಿರಾರು ಜನರೊಂದಿಗೆ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಶಾಸಕ ಜಿ. ಜನಾರ್ದನ ರೆಡ್ಡಿ ಎಚ್ಚರಿಕೆ ನೀಡಿದರು.

Exit mobile version