ಕಾರಟಗಿ: ಪ್ರಧಾನಮಂತ್ರಿ ನರೇಂದ್ರ ಮೋದಿ (Prime Minister Narendra Modi) ಅವರ ನೇತೃತ್ವದ ಕೇಂದ್ರ ಸರ್ಕಾರದ (Central government) 9 ವರ್ಷದ ಸಾಧನೆ (Achievement) ಕುರಿತು ಮನೆ-ಮನೆಗೆ ತಿಳಿಸುವ ಪ್ರಚಾರ ಕಾರ್ಯಕ್ರಮ ಕಾರಟಗಿಯಲ್ಲಿ ನಡೆಯಿತು.
ಸಂಸದ ಸಂಗಣ್ಣ ಕರಡಿ ನೇತೃತ್ವದಲ್ಲಿ ಮನೆ ಮನೆಗೆ ತೆರಳಿ, ಕೇಂದ್ರ ಸರ್ಕಾರದ ಒಂಭತ್ತು ವರ್ಷಗಳ ಸಾಧನೆ ಬಗ್ಗೆ ಮಾಹಿತಿ ನೀಡಿದರು. ಮೋದಿಯವರು ಜಾರಿ ಮಾಡಿದ ವಿವಿಧ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.
ಇದನ್ನೂ ಓದಿ: Ambani to Shiv Nadar : ಭಾರತದ 7 ಬಿಲಿಯನೇರ್‌ಗಳ ವಿದ್ಯಾರ್ಹತೆ ಏನು?
ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಸಂಗಣ್ಣ ಕರಡಿ, ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾದ ಬಳಿಕ ಸಾಕಷ್ಟು ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಕಿಸಾನ್ ಸಮ್ಮಾನ್, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಸೇರಿದಂತೆ ಜನರಿಗೆ ಅನುಕೂಲವಾಗುವಂತಹ ಯೋಜನೆಗಳನ್ನು ಈ 9 ವರ್ಷದ ಅವರ ಆಡಳಿತದಲ್ಲಿ ಜಾರಿ ಮಾಡಿದ್ದಾರೆ. ಈ ಯೋಜನೆಗಳನ್ನು ಜನರಿಗೆ ತಿಳಿಸುವಂತಹ ಕೆಲಸವನ್ನು ಮಾಡುವಂತೆ ಪಕ್ಷದ ವರಿಷ್ಠರು ಸೂಚನೆ ನೀಡಿದ್ದಾರೆ. ಅದರಂತೆ ನಾವು, ಪ್ರಧಾನಿಯವರು ಜಾರಿ ಮಾಡಿರುವ ಕಾರ್ಯಕ್ರಮಗಳನ್ನು ಮನೆ ಮನೆಗೆ ತಿಳಿಸುವ ಕಾರ್ಯ ಹಮ್ಮಿಕೊಂಡಿದ್ದೇವೆ ಎಂದರು.
ಇನ್ನು ತಾವು ಈಗ ಬಿಜೆಪಿಯಲ್ಲಿ ಚೆನ್ನಾಗಿರುವೆ. ಪಕ್ಷ ಟಿಕೆಟ್ ಕೊಟ್ಟರೆ ಸ್ಪರ್ಧಿಸುವೆ, ಇಲ್ಲವಾದರೆ ಸ್ಪರ್ಧೆ ಮಾಡದೇ ಪಕ್ಷದಲ್ಲಿರುವೆ ಎಂದು ಇದೇ ಸಂದರ್ಭದಲ್ಲಿ ಸಂಸದ ಸಂಗಣ್ಣ ಕರಡಿ ಹೇಳಿದರು.
ಇದನ್ನೂ ಓದಿ: Bangalore University : ನಾಳೆ ಬೆಂಗಳೂರು ವಿವಿ ಬಂದ್! ತರಗತಿ ಬಾಯ್ಕಾಟ್
ಈ ಸಂದರ್ಭದಲ್ಲಿ ಮಾಜಿ ಶಾಸಕ ಬಸವರಾಜ ದಡೇಸೂಗೂರು, ಕಾರಟಗಿ ಮಂಡಲ ಅಧ್ಯಕ್ಷ ಚಂದ್ರಶೇಖರ ಮುಸಾಲಿ, ಮಂಡಲ ಮಾಜಿ ಅಧ್ಯಕ್ಷ ಶರಣೇಗೌಡ ಯರಡೋಣಿ, ರಮೇಶ್ ನಾಡಿಗೇರ್, ನವೀನ ಗುಳಗಣ್ಣನವರ್, ನರಸಿಂಗರಾವ್ ಕುಲಕರ್ಣಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.