ಕಾರಟಗಿ: ತಾಲೂಕಿನ ಒಟ್ಟು 13 ಗ್ರಾಮ ಪಂಚಾಯಿತಿಗಳ (Grama panchayats) ಎರಡನೇ ಹಂತದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ (President, vice president) ಜಾತಿವಾರು ಮೀಸಲಾತಿಯನ್ನು ಕಾರಟಗಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಮುದಾಯ ಭವನದಲ್ಲಿ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಅವರ ಅಧ್ಯಕ್ಷತೆಯಲ್ಲಿ ಪ್ರಕಟಿಸಲಾಯಿತು.
ಮೀಸಲಾತಿ ವಿವರ
ತಾಲೂಕಿನ ಉಳೆನೂರು ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಉಪಾಧ್ಯಕ್ಷ ಸ್ಥಾನಕ್ಕೆ ಪ.ಜಾ. ಮಹಿಳೆ ಮೀಸಲು, ಬೆನ್ನೂರು ಗ್ರಾಪಂ ಅಧ್ಯಕ್ಷರ ಸ್ಥಾನಕ್ಕೆ ಸಾಮಾನ್ಯ, ಉಪಾಧ್ಯಕ್ಷರ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಬೂದಗುಂಪಾ ಗ್ರಾಮ ಪಂಚಾಯತಿಗೆ ಅಧ್ಯಕ್ಷ ಪ.ಪಂ. ಮಹಿಳೆ, ಉಪಾಧ್ಯಕ್ಷರ ಸ್ಥಾನಕ್ಕೆ ಸಾಮಾನ್ಯ. ಯರಡೋಣಾ ಗ್ರಾಮ ಪಂಚಾಯಿತಿ ಅಧ್ಯಕ್ಷರ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಸಾಮಾನ್ಯ ಸ್ಥಾನ. ಗುಂಡೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರ ಸ್ಥಾನಕ್ಕೆ ಪ.ಜಾ. ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಸಾಮಾನ್ಯ ಮಹಿಳೆ. ಮರ್ಲಾನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಪ.ಪಂ. ಮಹಿಳೆ ಮೀಸಲು ಬಂದಿದೆ.
ಇದನ್ನೂ ಓದಿ:Gruhalakshmi Scheme : ಆ. 18ರಂದು ಖಾತೆಗೆ 2000 ರೂ. ಗ್ಯಾರಂಟಿ; ಪಂಚಾಯತಲ್ಲೂ ಅರ್ಜಿ ಹಾಕ್ಬೋದು
ಹುಳ್ಕಿಹಾಳ ಗ್ರಾಮ ಪಂಚಾಯಿತಿಗೆ ಅಧ್ಯಕ್ಷ ಸ್ಥಾನಕ್ಕೆ ಪ.ಪಂ. ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಸಾಮಾನ್ಯ ಮಹಿಳೆ. ಚಳ್ಳೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷರ ಸ್ಥಾನಕ್ಕೆ ಪ.ಪಂ. ಮೀಸಲು. ಮೈಲಾಪುರ ಗ್ರಾಮ ಪಂಚಾಯತಿಯ ಅಧ್ಯಕ್ಷರ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಪ.ಜಾ. ಮಹಿಳೆ.
ಇನ್ನು ಬೇವಿನಾಳ ಗ್ರಾಮ ಪಂಚಾಯಿತಿ ಅಧ್ಯಕ್ಷರ ಸ್ಥಾನಕ್ಕೆ ಪ.ಜಾ. ಮಹಿಳೆ, ಉಪಾಧ್ಯಕ್ಷರ ಸ್ಥಾನಕ್ಕೆ ಪ್ರವರ್ಗ-ಎ ಮಹಿಳೆ. ಬರಗೂರು ಗ್ರಾಮ ಪಂಚಾಯಿತಿಗೆ ಅಧ್ಯಕ್ಷರ ಸ್ಥಾನಕ್ಕೆ ಪ್ರವರ್ಗ-ಎ ಮಹಿಳೆ, ಉಪಾಧ್ಯಕ್ಷರ ಸ್ಥಾನಕ್ಕೆ ಪ.ಜಾ. ಮುಷ್ಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷರ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಸಾಮಾನ್ಯ. ಸಿದ್ದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರ ಸ್ಥಾನಕ್ಕೆ ಪ.ಜಾ. ಮಹಿಳೆ ಉಪಾಧ್ಯಕ್ಷರ ಸ್ಥಾನಕ್ಕೆ ಸಾಮಾನ್ಯ ಮೀಸಲು ಬಂದಿವೆ.
ಇದನ್ನೂ ಓದಿ: Indira Canteen : ಇನ್ನು ಮುಂದೆ ಇಂದಿರಾ ಕ್ಯಾಂಟೀನ್‌ನಲ್ಲಿ ಮಾಂಸಾಹಾರಕ್ಕೂ ಅವಕಾಶ
ಈ ಸಂದರ್ಭದಲ್ಲಿ ಕಾರಟಗಿ ತಹಸಿಲ್ದಾರ್ ಬಸವರಾಜಪ್ಪ, ಕಾರಟಗಿ ತಾಲೂಕ ಪಂಚಾಯತಿ ಇ ಓ ನರಸಪ್ಪ ಎನ್. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು ಹಾಗೂ ಸದಸ್ಯರು ಸೇರಿದಂತೆ ಇತರರು ಪಾಲ್ಗೊಂಡಿದ್ದರು.