Koppala News Make cleanliness a top priority provide clean drinking water KV Kavyarani advises Koppala News: ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿ, ಶುದ್ಧ ಕುಡಿಯುವ ನೀರು ಒದಗಿಸಿ: ಕೆ.ವಿ ಕಾವ್ಯರಾಣಿ ಸೂಚನೆ - Vistara News

ಕರ್ನಾಟಕ

Koppala News: ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿ, ಶುದ್ಧ ಕುಡಿಯುವ ನೀರು ಒದಗಿಸಿ: ಕೆ.ವಿ ಕಾವ್ಯರಾಣಿ ಸೂಚನೆ

Koppala News: ಜನ ವಸತಿ ಪ್ರದೇಶಗಳಲ್ಲಿ ಸ್ವಚ್ಛತೆ‌ ಕಾಪಾಡಲು ಮೊದಲ ಆದ್ಯತೆ ನೀಡಿ, ಗ್ರಾಮ ನೈರ್ಮಲ್ಯ ಕಾಪಾಡಲು ಅಧಿಕಾರಿಗಳು ಮುಂದಾಗಬೇಕು ಜತೆಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲು ಕ್ರಮವಹಿಸಬೇಕು ಎಂದು ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕಿ ಕೆ.ವಿ ಕಾವ್ಯರಾಣಿ ಸೂಚನೆ ನೀಡಿದ್ದಾರೆ.

VISTARANEWS.COM


on

Progress review meeting at Karatagi
ಕಾರಟಗಿಯ ಎಪಿಎಂಸಿಯ ಸಭಾಂಗಣದಲ್ಲಿ ನಡೆದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕಿ ಕೆ.ವಿ ಕಾವ್ಯರಾಣಿ ಮಾತನಾಡಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರಟಗಿ: ಜಿಲ್ಲೆಯಲ್ಲಿ ವಾಂತಿ ಭೇದಿ ಪ್ರಕರಣಗಳು (Vomiting and dysentery cases) ಹೆಚ್ಚಾಗದಂತೆ ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು (Precautionary measures) ಕೈಗೊಳ್ಳಬೇಕು ಎಂದು ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಕೆ.ವಿ ಕಾವ್ಯರಾಣಿ ಸೂಚನೆ ನೀಡಿದರು.

ಪಟ್ಟಣದ ಎಪಿಎಂಸಿಯ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.

ಜನರಿಗೆ ಸರಬರಾಜು ಮಾಡುವ ನೀರಿನ ಬೋರ್‌ವೆಲ್ ಹಾಗೂ ಪೈಪ್ ಲೈನ್ ಮೂಲಕ ಮನೆಗೆ ಪೂರೈಕೆಯಾಗುವ ನೀರಿನ ಪರೀಕ್ಷೆ ನಡೆಸಿ ಕುಡಿಯಲು ಯೋಗ್ಯ ಇದೆಯೋ ಇಲ್ಲ ಎಂಬುದನ್ನು ಪತ್ತೆ ಹಚ್ಚಬೇಕು ಎಂದು ಸೂಚಿಸಿದರು.
ಪ್ರತಿನಿತ್ಯ ಕುಡಿಯಲು ಬಳಸುವ ನೀರನ್ನು ಕುದಿಸಿ ಆರಿಸಿ ಕುಡಿಯುವಂತೆ ಪಟ್ಟಣ ಸೇರಿ ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಕ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಇದನ್ನೂ ಓದಿ: Nikhil Siddharth: ಇದೇ 29ಕ್ಕೆ ನಿಖಿಲ್ ಸಿದ್ದಾರ್ಥ್ ಸಿನಿಮಾ ರಿಲೀಸ್; ಸ್ಪೆಷಲ್‌ ರೋಲ್‌ನಲ್ಲಿ ರಾಣಾ ದಗ್ಗುಭಾಟಿ!

ಎಲ್ಲಾ ವಸತಿ ‌ನಿಲಯಗಳಲ್ಲಿ ಮಕ್ಕಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಿ, ಮಕ್ಕಳಿಗೆ ಸ್ವಚ್ಛತೆ‌‌ ಬಗ್ಗೆ ಮಾಹಿತಿ ನೀಡಬೇಕು. ವಸತಿ ‌ನಿಲಯಗಳನ್ನು ಆದಷ್ಟು ಸುಸಜ್ಜಿತವಾಗಿಟ್ಟುಕೊಳ್ಳಲು ಮುಂದಾಗಬೇಕು ಎಂದರು.

ರೈತರಿಗೆ ಹೆಚ್ಚಾಗಿ ರಾಸಾಯನಿಕ ರಸಗೊಬ್ಬರಗಳ ಬಳಸದಂತೆ ಜಾಗೃತಿ ಮೂಡಿಸಿ, ಸಾವಯವ ರಸಗೊಬ್ಬರಗಳ ಬಳಕೆಗೆ ಕುರಿತು ಮಾಹಿತಿ ನೀಡಿ, ರೈತರಿಗೆ ರಸಗೊಬ್ಬರಗಳ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮವಹಿಸಬೇಕು ಎಂದು ತಿಳಿಸಿದರು.

ಶಿಶು ಅಭಿವೃದ್ಧಿ ಇಲಾಖೆಯಡಿ ಗ್ರಾಮೀಣ ಮತ್ತು ಪಟ್ಟಣದಲ್ಲಿ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡವನ್ನು ನಿರ್ಮಾಣ ಮಾಡಲು ಸ್ಥಳಾವಕಾಶ ಇದ್ದರೆ ಅಂತಹ ಕಟ್ಟಡವನ್ನು ಪ್ರಾರಂಭಿಸಲು ಮುಂದಾಗಬೇಕು ಎಂದು ಹೇಳಿದರು.

ಇದನ್ನೂ ಓದಿ: Kedarnath Temple: ಕೇದಾರನಾಥ ದೇಗುಲ ಚಿನ್ನದ ಹಗರಣ; ಉನ್ನತ ಸಮಿತಿ ರಚನೆಗೆ ಸರ್ಕಾರ ನಿರ್ಧಾರ

ತಹಸೀಲ್ದಾರ್ ಎಂ ಬಸವರಾಜ್ ಮಾತನಾಡಿ, ಜಿಲ್ಲೆಯಲ್ಲಿ ಕೆಲವು ಕಡೆ ವಾಂತಿ ಭೇದಿ ಪ್ರಕರಣಗಳಿದ್ದು, ಅದರಂತೆ ನಮ್ಮ ತಾಲೂಕಿನಲ್ಲಿ ಈಗಾಗಲೇ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ತಾ.ಪಂ ಇಒ ನರಸಪ್ಪ ‌ಎನ್‌. ಮಾತನಾಡಿ, ಗ್ರಾಮದಲ್ಲಿ ನೀರಿನ ತಪಾಸಣೆ, ಪೈಪ್‌ಲೈನ್ ದುರಸ್ತಿಯಾಗಿ ಕಲುಷಿತ ನೀರು ಸರಬರಾಜು ಕಂಡು ಬಂದರೆ ತ್ವರಿತವಾಗಿ ಗಮನಹರಿಸಿ ದುರಸ್ತಿಗೊಳಿಸಬೇಕು. ಗ್ರಾಮಸ್ಥರು ಕುಡಿಯುವ ನೀರಿನಲ್ಲಿ ಯಾವುದೇ ರಾಸಾಯನಿಕ ಮತ್ತು ಇತರೆ ಹಾನಿಕಾರಕ ವಸ್ತುಗಳು ಮಿಶ್ರಣ ಗೊಂಡಿರುವ ನೀರನ್ನು ಸಾರ್ವಜನಿಕ ಬಳಸದಂತೆ ಹಾಗೂ ಕುದಿಸಿದ ನೀರನ್ನು ಬಳಸುವಂತೆ ಜಾಗೃತಿ ಮೂಡಿಸಬೇಕು ಎಂದರು.

ಇದನ್ನೂ ಓದಿ: Amruthadhare Kannada Serial: ಹೆಣ್ಮಕ್ಕಳ ಮೂಕ ವೇದನೆಗೆ ದನಿಯಾದ ಭೂಮಿಕಾ: ನಟಿಯ ಅಭಿನಯಕ್ಕೆ ಮನಸೋತ ಪ್ರೇಕ್ಷಕರು!

ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ತಾಲೂಕು ‌ಮಟ್ಟದ ಅನುಷ್ಠಾನ ಅಧಿಕಾರಿಗಳು, ಪುರಸಭಾ ಅಧಿಕಾರಿಗಳು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾ.ಪಂ ಸಿಬ್ಬಂದಿಗಳು ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಸಿನಿಮಾ

Golden Star Ganesh: ಮೈಸೂರಿನಲ್ಲಿ ಮೇ 25ರಂದು ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ಫಸ್ಟ್‌ ಸಾಂಗ್‌ ರಿಲೀಸ್‌

Golden Star Ganesh: ಖ್ಯಾತ ನಿರ್ದೇಶಕ ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರದ ಬಹು ನಿರೀಕ್ಷಿತ ಮೊದಲ ಹಾಡು ಇದೇ ಮೇ 25 ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಅರ್ಜುನ್ ಜನ್ಯ ಅವರು ಸಂಗೀತ ನೀಡಿರುವ ಆರು ಸುಮಧುರ ಹಾಡುಗಳು “ಕೃಷ್ಣಂ ಪ್ರಣಯ ಸಖಿ” ಚಿತ್ರದಲ್ಲಿದೆ. ಆ ಪೈಕಿ ನಿಶಾನ್ ರಾಯ್ ಅವರು ಬರೆದು ಹೆಸರಾಂತ ಗಾಯಕ ಚಂದನ್ ಶೆಟ್ಟಿ ಹಾಡಿರುವ ಈ ಚಿತ್ರದ ಮೊದಲ ಹಾಡು ಸಾಂಸ್ಕೃತಿಕ ನಗರಿ ಮೈಸೂರಿನ “ಮಾಲ್ ಆಫ್ ಮೈಸೂರಿನಲ್ಲಿ” ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

VISTARANEWS.COM


on

Golden Star Ganesh Krishnam Pranaya Sakhi movie first song release on May 25 in Mysore
Koo

ಬೆಂಗಳೂರು: ಖ್ಯಾತ ನಿರ್ದೇಶಕ ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರದ ಬಹು ನಿರೀಕ್ಷಿತ ಮೊದಲ ಹಾಡು ಇದೇ ಮೇ 25 ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ.

“ಕೃಷ್ಣಂ ಪ್ರಣಯ ಸಖಿ” ಸಿನಿಮಾ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದ್ದು, ಈ ಚಿತ್ರದ ಫಸ್ಟ್ ಲುಕ್ ಹಾಗೂ ಪೋಸ್ಟರ್‌ಗಳು ಎಲ್ಲರ ಮೆಚ್ಚುಗೆ ಗಳಿಸಿದೆ. ಬಹು ನಿರೀಕ್ಷಿತ ಈ ಚಿತ್ರದ ಮೊದಲ ಹಾಡು ಮೇ 25ರಂದು ಮೈಸೂರಿನಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ: Jagannath Puri Temple: ಪುರಿ ಜಗನ್ನಾಥ ದೇವಸ್ಥಾನದ 7 ಅಚ್ಚರಿಯ ಸಂಗತಿಗಳಿವು!

ಅರ್ಜುನ್ ಜನ್ಯ ಅವರು ಸಂಗೀತ ನೀಡಿರುವ ಆರು ಸುಮಧುರ ಹಾಡುಗಳು “ಕೃಷ್ಣಂ ಪ್ರಣಯ ಸಖಿ” ಚಿತ್ರದಲ್ಲಿದೆ. ಆ ಪೈಕಿ ನಿಶಾನ್ ರಾಯ್ ಅವರು ಬರೆದು ಹೆಸರಾಂತ ಗಾಯಕ ಚಂದನ್ ಶೆಟ್ಟಿ ಹಾಡಿರುವ ಈ ಚಿತ್ರದ ಮೊದಲ ಹಾಡು ಸಾಂಸ್ಕೃತಿಕ ನಗರಿ ಮೈಸೂರಿನ “ಮಾಲ್ ಆಫ್ ಮೈಸೂರಿನಲ್ಲಿ” ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಮೈಸೂರಿನಲ್ಲಿ ಮೊದಲ ಹಾಡು ಬಿಡುಗಡೆ ಮಾಡುವುದರ ಮೂಲಕ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ ಸಿಗಲಿದೆ.

ಸದ್ಯದಲ್ಲೇ ಚಿತ್ರ ತೆರೆಗೆ

ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಿಸಿದ್ದಾರೆ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದ್ದು, ಬೆಂಗಳೂರು, ವಿಯೆಟ್ನಾಂ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವ ಸಿದ್ಧತೆ ನಡೆಯುತ್ತಿದೆ‌.

ಇದನ್ನೂ ಓದಿ: Chardham Yatra 2024: ಚಾರ್‌ಧಾಮ್‌, ಕೇದಾರನಾಥನ ದರ್ಶನ ಮಾಡಲು ಬಯಸಿದ್ದೀರಾ? ನಿಮಗೆ ಬೇಕಾದ ಮಾಹಿತಿ ಇಲ್ಲಿದೆ

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41ನೇ ಚಿತ್ರ

ಬಹು ನಿರೀಕ್ಷಿತ “ಕೃಷ್ಣಂ ಪ್ರಣಯ ಸಖಿ” ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41ನೇ ಚಿತ್ರ. ಚಿತ್ರದ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದವರು ತಾರಾಬಳಗದಲ್ಲಿದ್ದಾರೆ.

Continue Reading

ಮಳೆ

Karnataka Rain : ಮಳೆ ಅವಘಡಕ್ಕೆ ಜನರು ತತ್ತರ; ಧರೆಗುರುಳಿದ ಮರಗಳು, ಕುಸಿದು ಬಿದ್ದ ಮನೆಗಳು

Rain News : ರಾಜ್ಯದ ಹಲವೆಡೆ ಮಳೆಯು (Karnataka Rain) ಅಬ್ಬರಿಸುತ್ತಿದೆ. ಮೈಸೂರಿನ ಹುಣಸೂರಿನಲ್ಲಿ ಜೋರು ಮಳೆಗೆ ಮನೆ ಕುಸಿದು ಬಿದ್ದರೆ, ಬೆಳಗಾವಿಯಲ್ಲಿ ಗಾಳಿ ಮಳೆಗೆ ಶಾಲೆಯ ಶೆಡ್‌
(Karnataka Weather Forecast) ಹಾರಿ ಹೋಗಿದೆ. ಯಾದಗಿರಿ, ಧಾರವಾಡದಲ್ಲಿ ಮರಗಳು ಧರೆಗುರುಳಿದ್ದವು.

VISTARANEWS.COM


on

By

Karnataka rain
Koo

ಮೈಸೂರು: ಮೈಸೂರಿನ ಹುಣಸೂರು ಭಾಗದಲ್ಲಿ ವರುಣನ (Rain News) ಅಬ್ಬರ ಜೋರಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ (Karnataka Rain) ತಾಲೂಕಿನ ಹಲವು ಗ್ರಾಮಗಳಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಕಾಳೇನಹಳ್ಳಿಯಲ್ಲಿ ಶ್ರೀನಿವಾಸ್ ಎಂಬುವರಿಗೆ ಸೇರಿದ ಮನೆಯು ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಜೋರಾಗಿ ಸುರಿದ ಮಳೆಗೆ ಮನೆಯಲ್ಲಿದ್ದ ವಸ್ತುಗಳೆಲ್ಲ ನಾಶವಾಗಿದೆ. ವಾಸಕ್ಕೆ ಮನೆಯಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕುಟುಂಬಸ್ಥರು ಪರಿಹಾರಕ್ಕಾಗಿ ಮನವಿ ಮಾಡಿದ್ದಾರೆ.

ಇತ್ತ ಹನಗೋಡಿನಲ್ಲಿ ಭಾರಿ ಮಳೆಗೆ ಜನರು ತತ್ತರಿಸಿದ್ದರು. ಹುಣಸೂರು ತಾಲೂಕಿನ ಹನಗೋಡಿ ಗ್ರಾಮದಲ್ಲಿ ವಾರದಿಂದ ಸುರಿಯುತ್ತಿರುವ ಮಳೆಗೆ ಮನೆ ಅಂಗಡಿಗಳಿಗೆ ನೀರು ನುಗ್ಗಿ ಸಂಪೂರ್ಣ ಜಲಾವೃತಗೊಂಡಿತ್ತು. ಬಸ್ ನಿಲ್ದಾಣ ಕೆರೆಯಂತಾಗಿತ್ತು. ಚರಂಡಿಗಳ ವ್ಯವಸ್ಥೆ ಸರಿಯಿಲ್ಲದೆ ನೀರು ಹೋಗದೆ ನಿಂತಲ್ಲೇ ನಿಂತು ಜನರಿಗೆ ತೊಂದರೆಯಾಗಿತ್ತು.

ಇದನ್ನೂ ಓದಿ: Accident Case : ಇಳಿಜಾರಿನಲ್ಲಿ ತಪ್ಪಿದ ಕಂಟ್ರೋಲ್‌; ಟ್ರ್ಯಾಕ್ಟರ್‌ ಪಲ್ಟಿಯಾಗಿ ಯುವಕ ಮೃತ್ಯು

ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಶೆಡ್‌

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಜೋರು ಗಾಳಿ ಮಳೆಗೆ ಶೆಡ್ ಹಾರಿ ಹೋಗಿತ್ತು. ಶಾಲೆಗೆ ರಜೆ ಇದ್ದಿದ್ದರಿಂದ ಭಾರಿ ಅನಾಹುತ ತಪ್ಪಿತ್ತು. ಶಾಲೆಯ ಶೆಡ್ ಹಾರಿ ಅಕ್ಕಪಕ್ಕದ ಮನೆಗಳು ಹಾಗೂ ವಿದ್ಯುತ್ ತಂತಿಗಳು ಮೇಲೆ ಬಿದ್ದು ಹಾನಿಯಾಗಿತ್ತು.

ಯಾದಗಿರಿಯಲ್ಲಿ ಧರೆಗುರುಳಿದ ಮರಗಳು

ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆಗೆ ಬೃಹತ್ ಮರಗಳು ಧರೆಗುರುಳಿದ್ದವು. ಸತತ ಒಂದು ಗಂಟೆಗೂ ಹೆಚ್ಚು ಸಮಯ ಸುರಿದ ಮಳೆಗೆ ಮರಗಳ ಮೇಲ್ಭಾಗದ ರಂಬೆ, ಕೊಂಬೆಗಳು ಸಂಪೂರ್ಣ ಗಾಳಿಗೆ ಮುರಿದು ಬೋಳಾಗಿದ್ದವು. ಕೆಲವೆಡೆ ಮನೆ ಮುಂದೆ ಇದ್ದ ಮರಗಳು ನೆಲಕ್ಕುರುಳಿದ್ದವು. ಭಾರಿ ಮಳೆಗೆ ಸುಭಾಷ್ ವೃತ್ತದ ಸಮೀಪದ ಪಿಡ್ಲೂಡಿ ಕಚೇರಿ ಆವರಣದೊಳಗೆ ಮಳೆ ನೀರು ನುಗ್ಗಿತ್ತು. ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರ ಜನಸಂಪರ್ಕದ ಕಚೇರಿ ಆವರಣದಲ್ಲಿ ಮರಗಳು ಧರೆಗುರುಳಿದ್ದವು.

ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಆರು ಜನರ ಕುಟುಂಬವೊಂದು ಪ್ರಾಣಾಪಾಯದಿಂದ ಜಸ್ಟ್ ಮಿಸ್ ಆಗಿದೆ. ಯಾದಗಿರಿಯ ಮಾತಾಮಣಿಕೇಶ್ವರಿ ನಗರದಲ್ಲಿ ಭಾರೀ ಮಳೆ ಗಾಳಿಗೆ ಮನೆಗೆ ಹಾಕಿದ ಟಿನ್ ಶೆಡ್ ಹಾರಿಹೋಗಿದೆ. ಮಳೆ ಗಾಳಿ ಜೋರಾಗುತ್ತಿದ್ದಂತೆ ಇಡೀ ಕುಟುಂಬ ಮನೆಯಿಂದ ಹೊರಬಂದು ಬಚಾವ್ ಆಗಿದ್ದಾರೆ. ಮನೆಯಿಂದ ಹೊರ ಬಂದ ಕೆಲವೇ ಕ್ಷಣದಲ್ಲಿ ಟಿನ್ ಶೆಡ್ ಕುಸಿದು ಬಿದ್ದಿದೆ. ಇತ್ತ ದಿನಸಿ ಸಾಮಾನು ಸೇರಿದಂತೆ ಎಲ್ಲ ವಸ್ತುಗಳು ಹಾಳಾಗಿವೆ.

ಧಾರಾವಾಡದಲ್ಲಿ ಧಾರಾಕಾರ ಮಳೆಗೆ ರಸ್ತೆ ಮೇಲೆ ನಿಂತ ನೀರು

ಧಾರವಾಡದಲ್ಲಿ ಗುರುವಾರದಂದು ಅರ್ಧ ಗಂಟೆಗೂ ಹೆಚ್ಚು ಸಮಯ ಮಳೆಯಾಗಿತ್ತು. ಎರಡು ದಿನದಿಂದ ಬ್ರೇಕ್‌ ಕೊಟ್ಟಿದ್ದ ಮಳೆಯು ಗುರುವಾರ ದಿಢೀರ್‌ ಅಪ್ಪಳಿಸಿತ್ತು. ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಧಾರವಾಡ ಹೊರವಲಯದ ಕೆಎಂಎಫ್ ಬಳಿ ಧಾರಾಕಾರ ಮಳೆಗೆ ರಸ್ತೆಯಲ್ಲೇ ನೀರು ನಿಂತಿತ್ತು. ಬಿಆರ್‌ಟಿಎಸ್ ಕಾರಿಡಾರ್‌ನಿಂದ ಹರಿದು ಹೋಗದೇ ಇರುವುದೇ ಕಾರಣ ಎಂದು ಸ್ಥಳೀಯರು ಆಕ್ರೋಶಿಸಿದರು.

ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಸರೀಕಟ್ಟೆ, ತರೀಕೆರೆಯಲ್ಲೂ ಭಾರೀ ಮಳೆಯಾಗಿದ್ದು ರಸ್ತೆಯಲ್ಲಿ ಎರಡು ಅಡಿ ನೀರು ನಿಂತಿತ್ತು. ತರೀಕೆರೆ ಪಟ್ಟಣದ ಗಣಪತಿ ಪೆಂಡಾಲ್ ಮುಂಭಾಗ ಕಾರು, ಬೈಕ್‌ಗಳು ಅರ್ಧದಷ್ಟು ಮುಳುಗಿತ್ತು. ಎನ್ಆರ್‌ ಪುರ ತಾಲೂಕಿನ ಬಾಳೆಹೊನ್ನೂರಿನಲ್ಲೂ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಯಾದಗಿರಿ

Yadgiri News: ಶ್ರೀಶೈಲಂನಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ

Yadgiri News: ಯಾದಗಿರಿಗೆ ಸಮೀಪದ ಆಂಧ್ರಪ್ರದೇಶದ ಶ್ರೀಶೈಲಂನ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ಸಹಸ್ರಾರು ಭಕ್ತರ ಮಧ್ಯೆ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ ಅವರ 602ನೇ ಜಯಂತಿಯನ್ನು ಶ್ರದ್ದಾ ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

VISTARANEWS.COM


on

Shivasharane Hemaraddi Mallamma Jayanti celebration in Srisailam
Koo

ಯಾದಗಿರಿ: ಇಲ್ಲಿಗೆ ಸಮೀಪದ ಆಂಧ್ರಪ್ರದೇಶದ ಶ್ರೀಶೈಲಂನ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ಸಹಸ್ರಾರು ಭಕ್ತರ ಮಧ್ಯೆ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ ಅವರ 602ನೇ ಜಯಂತಿಯನ್ನು ಶ್ರದ್ದಾ ಭಕ್ತಿ ಹಾಗೂ ಸಂಭ್ರಮದಿಂದ (Yadgiri News) ಆಚರಿಸಲಾಯಿತು.

ಸಮಾರಂಭದಲ್ಲಿ ಮಾತನಾಡಿದ ಶ್ರೀಶೈಲಂ ಮಲ್ಲಿಕಾರ್ಜುನ ದೇವಸ್ಥಾನ ಆಡಳಿತ ಮಂಡಳಿಯ ಟ್ರಸ್ಟ್‌ನ ಕಾರ್ಯನಿರ್ವಾಹಕ ಅಧಿಕಾರಿ ಪೆದ್ದುರಾಜು ಮಾತನಾಡಿ, 14ನೇ ಶತಮಾನದಲ್ಲಿ ಮಲ್ಲಮ್ಮ ತನ್ನ ಕೌಟುಂಬಿಕ ಜೀವನದ ಜತೆಗೆ ಆಧ್ಯಾತ್ಮಿಕ ಸಾಧನೆ ಮೂಲಕ ಪರಶಿವ ಮಲ್ಲಿಕಾರ್ಜುನನ ಕೃಪೆಗೆ ಪಾತ್ರಳಾಗಿ ಮನುಕುಲಕ್ಕೆ ಮಾನವೀಯ ಸಂದೇಶಗಳನ್ನು ನೀಡಿದ್ದಾಳೆ ಎಂದು ತಿಳಿಸಿದರು.

ಇದನ್ನೂ ಓದಿ: Aadhaar Card Fact Check: 10 ವರ್ಷಗಳ ಹಿಂದಿನ ಆಧಾರ್ ಕಾರ್ಡ್‌ ಜೂ. 14ರ ಬಳಿಕ ರದ್ದಾಗುತ್ತದೆಯೆ?

ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಅವರ ಕರ್ಮಭೂಮಿಯಾದ ಶ್ರೀಶೈಲಂನಲ್ಲಿ ಕರ್ನಾಟಕದ ವೀರಶೈವ ಲಿಂಗಾಯತ ರಡ್ಡಿ ಸಮಾಜದವರು ಭವ್ಯ ಮಲ್ಲಮ್ಮ ದೇವಸ್ಥಾನ ನಿರ್ಮಾಣ ಮಾಡಿದ್ದಲ್ಲದೇ ಕ್ಷೇತ್ರದ ಪ್ರಗತಿಗೆ ಮಹತ್ವದ ಕೊಡುಗೆ ನೀಡಿಕೊಂಡು ಬಂದಿದ್ದಾರೆ, ಅವರ ಶ್ರಮದಿಂದ ಆಂದ್ರಪ್ರದೇಶ, ತೆಲಂಗಾಣ ಹಾಗೂ ಕರ್ನಾಟಕ ಭಕ್ತರ ಮದ್ಯೆ ಸಾಮರಸ್ಯ ವಾತಾವರಣ ಮೂಡಿದೆ ಎಂದು ಅಭಿಪ್ರಾಯಪಟ್ಟರು.

ದೇವಸ್ಥಾನಕ್ಕೆ ಆಗಮಿಸುವ ಸಕಲ ಭಕ್ತಾದಿಗಳಿಗೆ ಟ್ರಸ್ಟ್ ವತಿಯಿಂದ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.

ಶಿವಶರಣೆ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಮುಖ್ಯ ಅರ್ಚಕ ಗುರುಪಾದಯ್ಯಸ್ವಾಮಿ ಮಾತನಾಡಿ, ಹಲವಾರು ವರ್ಷಗಳಿಂದ ಹೇಮರಡ್ಡಿ ಮಲ್ಲಮ್ಮ ಭಕ್ತರ ಸಹಕಾರದಿಂದ ಇಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜತೆಗೆ ಸಾಮಾಜಿಕ ಕಾರ್ಯಗಳನ್ನು ನಡೆಸಿಕೊಂಡು ಅವರ ಸಾಧನೆಯನ್ನು ಎಲ್ಲರಿಗೂ ತಿಳಿಸುವ ಕೆಲಸ ಮಾಡಿಕೊಂಡು ಬಂದಿದ್ದೇವೆ ಎಂದು ತಿಳಿಸಿದರು.

ಇದಕ್ಕೂ ಮೊದಲು ದೇವಸ್ಥಾನದಲ್ಲಿ ಮಲ್ಲಮ್ಮನ ಮೂರ್ತಿಗೆ ಪಂಚಾಮೃತ ಅಭಿಷೇಕ, ಮುತೈದೆಯರಿಗೆ ಉಡಿ ತುಂಬುವ, ತೊಟ್ಟಿಲ ಉತ್ಸವ ಕಾರ್ಯಕ್ರಮ, ಮಹಾ ಮಂಗಳಾರತಿ ಸೇರಿದಂತೆ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು.

ಇದನ್ನೂ ಓದಿ: Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ 54 ಹುದ್ದೆ; ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

ಸಮಾರಂಭದಲ್ಲಿ ಉಪ ಕಾರ್ಯನಿರ್ವಾಹಕ ಅಧಿಕಾರಿ ಹರಿದಾಸರು, ಶಂಕ್ರಯ್ಯಸ್ವಾಮಿ, ಅರ್ಚಕರಾದ ಓಂಕಾರಯ್ಯಸ್ವಾಮಿ, ಮಲ್ಲಮ್ಮ ತಾಳಿಕೋಟಿ, ವೆಂಕಟರಡ್ಡಿ ಮಾಲಿ ಪಾಟೀಲ್ ಹತ್ತಿಕುಣಿ, ಗದಗ ಜಿಲ್ಲೆಯ ನ್ಯಾಯವಾದಿ ವಿರೇಂದ್ರ ಶಿರೋಳ, ಶಿವಪ್ಪಗೌಡ, ಸಿದ್ದಣ್ಣ ಸೇರಿದಂತೆ ಕನ್ನಡಿಗ ಭಕ್ತರು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Pralhad Joshi: ಅಮಾಯಕ ಹೆಣ್ಣುಮಕ್ಕಳ ಹತ್ಯೆಯಾದರೂ ಪೊಲೀಸರ ಮೌನ; ಪ್ರಲ್ಹಾದ ಜೋಶಿ ಆರೋಪ

Pralhad Joshi: ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ವ್ಯವಸ್ಥೆ ತೀರಾ ಹದಗೆಟ್ಟಿದೆ. ಅಮಾಯಕ ಹೆಣ್ಣುಮಕ್ಕಳ ಜೀವ ಬಲಿಯಾಗುತ್ತಿದ್ದರೂ ಸರ್ಕಾರ ಮತ್ತು ಪೊಲೀಸ್ ಇಲಾಖೆ ಕ್ಯಾರೆ ಎನ್ನುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

union minister Pralhad Joshi latest statement in bidar
Koo

ಬೀದರ್‌: ರಾಜ್ಯದಲ್ಲಿ ಅಮಾಯಕ ಹೆಣ್ಣು ಮಕ್ಕಳ ಹತ್ಯೆಯಾದರೂ ಈ ಕಾಂಗ್ರೆಸ್ ಸರ್ಕಾರದಲ್ಲಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಆರೋಪಿಸಿದರು.

ಬೀದರ್‌ನಲ್ಲಿ ಗುರುವಾರ ಕರ್ನಾಟಕ ವಿಧಾನ ಪರಿಷತ್ ಚುನಾವಣೆ 2024, ಈಶಾನ್ಯ ಪದವೀಧರ ಕ್ಷೇತ್ರ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ವ್ಯವಸ್ಥೆ ತೀರಾ ಹದಗೆಟ್ಟಿದೆ. ಅಮಾಯಕ ಹೆಣ್ಣುಮಕ್ಕಳ ಜೀವ ಬಲಿಯಾಗುತ್ತಿದ್ದರೂ ಸರ್ಕಾರ ಮತ್ತು ಪೊಲೀಸ್ ಇಲಾಖೆ ಕ್ಯಾರೆ ಎನ್ನುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ 54 ಹುದ್ದೆ; ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

ರಾಜ್ಯದೆಲ್ಲೆಡೆ ಮಹಿಳೆಯರಿಗೆ ಸುರಕ್ಷತಾ ಭಾವ ಇಲ್ಲದಾಗಿದೆ. ಜೀವಕ್ಕೆ ಗ್ಯಾರಂಟಿ ಇರದಂತಹ ಘಟನೆಗಳು ಘಟಿಸುತ್ತಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ ಅವರು, ಪೊಲೀಸರು ಬಹುಶಃ ಸರ್ಕಾರದ ಕೈಗೊಂಬೆ ಎಂಬಂತೆ ಕೆಲಸ ಮಾಡುತ್ತಿದ್ದರೇನೋ ಅನಿಸುತ್ತಿದೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಕೆಲ ಘಟನೆಗಳನ್ನು ನೋಡಿ ಸಾರ್ವಜನಿಕರೇ ಈ ರೀತಿ ಶಂಕೆ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿಸಿದರು.

ಮಾದಕ ವಸ್ತು ಮಾರಾಟ

ಕಾಲೇಜುಗಳ ಹತ್ತಿರ ರಾಜಾರೋಷವಾಗಿ ಮಾದಕ ವಸ್ತುಗಳ ಮಾರಾಟವಾಗುತ್ತಿದ್ದರೂ ಪೊಲೀಸರು ಕೈಕಟ್ಟಿ ಕುಳಿತಿದ್ದಾರೆ. ಹೀಗೇ ಕೆಲ ವರ್ಷಗಳು ಮುಂದುವರೆದರೆ, ಕರ್ನಾಟಕ ಪಂಜಾಬನ್ನೂ ಮೀರಿಸುವ ಸಾಧ್ಯತೆ ಇದೆ ಎಂದು ಸಚಿವ ಜೋಶಿ ತೀವ್ರ ಕಳವಳ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆ, ಶಾಂತಿ-ಸುವ್ಯವಸ್ಥೆ ಹಾಗೂ ಅಭಿವೃದ್ಧಿಗಾಗಿ ಈ ಬಾರಿ ಎಲ್ಲ ಚುನಾವಣೆಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಯಶಸ್ವಿಯಾಗಬೇಕು ಎಂದ ಅವರು, ಕರ್ನಾಟಕದ ಕನ್ನಡಿಗರ ಉಳಿವಿಗಾಗಿ, ಒಳ್ಳೆಯ ಭವಿಷ್ಯಕ್ಕಾಗಿ ನಾವೆಲ್ಲರೂ ಇಂದು ಶ್ರಮಿಸಬೇಕಾಗಿದೆ ಎಂದು ಎರಡು ಪಕ್ಷಗಳ ಕಾರ್ಯಕರ್ತರಿಗೆ ಸಚಿವರು ಕರೆ ನೀಡಿದರು.

ಇದನ್ನೂ ಓದಿ: Mouth Sleeping: ನಿದ್ದೆಯಲ್ಲಿದ್ದಾಗ ಬಾಯಿಯಿಂದ ಉಸಿರಾಡುತ್ತೀರಾ? ಹಾಗಾದರೆ ಮುಂದೆ ಸಮಸ್ಯೆಯಾಗಬಹುದು!

ಈ ಸಂದರ್ಭದಲ್ಲಿ ಸಂಸದ ಭಗವಂತ್ ಖೂಬ, ಬಸವ ಕಲ್ಯಾಣ ಕ್ಷೇತ್ರದ ಶಾಸಕ ಶರಣು ಸಲಗರ, ವಿಧಾನ ಪರಿಷತ್ತಿನ ಸದಸ್ಯರಾದ ರಘುನಾಥ ಮಲ್ಕಾಪುರೆ, ರವಿ ಕುಮಾರ್, ಜೆಡಿಎಸ್ ನಾಯಕರಾದ ಬಂಡೆಪ್ಪ ಕಾಶೆಂಪುರ ಉಪಸ್ಥಿತರಿದ್ದರು.

Continue Reading
Advertisement
IPL 2024
ಪ್ರಮುಖ ಸುದ್ದಿ6 mins ago

IPL 2024 : ಸಚಿನ್​, ಧೋನಿ, ರೋಹಿತ್​; ಒಂದೇ ಜಾಹೀರಾತಿನಲ್ಲಿ ಮೂರು ಪೀಳಿಗೆಯ ನಾಯಕರು; ಇಲ್ಲಿದೆ ವಿಡಿಯೊ

Share Market
ದೇಶ16 mins ago

Share Market: ಸೆನ್ಸೆಕ್ಸ್‌ ನೆಗೆತ, ನಿಫ್ಟಿ ಜಿಗಿತ; ಮೋದಿ ಭವಿಷ್ಯ ನಿಜವಾಗುತ್ತಾ? ಇಂದಿನ ಏರಿಕೆಗೆ ಕಾರಣಗಳು ಗೊತ್ತಾ?

IPL 2024
ಪ್ರಮುಖ ಸುದ್ದಿ35 mins ago

IPL 2024 : ಮಾಜಿ ನಾಯಕ ಶೇನ್​ ವಾರ್ನ್​ ದಾಖಲೆ ಸರಿಗಟ್ಟಿದ ಸಂಜು ಸ್ಯಾಮ್ಸನ್​

IPL 2024
ಕ್ರೀಡೆ57 mins ago

IPL 2024 : ಮುಂದಿನ ವರ್ಷವೂ ಧೋನಿ ಐಪಿಎಲ್​ ಆಡ್ತಾರೆ; ಸಿಎಸ್​ಕೆ ಸಿಇಒ ಸ್ಪಷ್ಟನೆ

Golden Star Ganesh Krishnam Pranaya Sakhi movie first song release on May 25 in Mysore
ಸಿನಿಮಾ1 hour ago

Golden Star Ganesh: ಮೈಸೂರಿನಲ್ಲಿ ಮೇ 25ರಂದು ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ಫಸ್ಟ್‌ ಸಾಂಗ್‌ ರಿಲೀಸ್‌

Prashant Kishor
ದೇಶ1 hour ago

Prashant Kishor: ಜೂನ್‌ 4ರಂದು ಪ್ರತಿಪಕ್ಷಗಳು ನೀರು ಕುಡಿಯಲಿವೆ; ಪ್ರಶಾಂತ್‌ ಕಿಶೋರ್‌ ಮಾತಿನ ಮರ್ಮವೇನು?

Virat Kohli
ಕ್ರೀಡೆ1 hour ago

Virat Kohli : ಕೊಹ್ಲಿಗೆ ಗೌರವ ಸಲ್ಲಿಸಲೇಬೇಕು ಎಂದು ಹೇಳಿದ ಆಸ್ಟ್ರೇಲಿಯಾದ ಮಾಜಿ ಬ್ಯಾಟರ್​​

Karnataka rain
ಮಳೆ2 hours ago

Karnataka Rain : ಮಳೆ ಅವಘಡಕ್ಕೆ ಜನರು ತತ್ತರ; ಧರೆಗುರುಳಿದ ಮರಗಳು, ಕುಸಿದು ಬಿದ್ದ ಮನೆಗಳು

Shivasharane Hemaraddi Mallamma Jayanti celebration in Srisailam
ಯಾದಗಿರಿ2 hours ago

Yadgiri News: ಶ್ರೀಶೈಲಂನಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ

union minister Pralhad Joshi latest statement in bidar
ಕರ್ನಾಟಕ2 hours ago

Pralhad Joshi: ಅಮಾಯಕ ಹೆಣ್ಣುಮಕ್ಕಳ ಹತ್ಯೆಯಾದರೂ ಪೊಲೀಸರ ಮೌನ; ಪ್ರಲ್ಹಾದ ಜೋಶಿ ಆರೋಪ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ16 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌