ಕಾರಟಗಿ: ಜಿಲ್ಲೆಯಲ್ಲಿ ವಾಂತಿ ಭೇದಿ ಪ್ರಕರಣಗಳು (Vomiting and dysentery cases) ಹೆಚ್ಚಾಗದಂತೆ ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು (Precautionary measures) ಕೈಗೊಳ್ಳಬೇಕು ಎಂದು ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಕೆ.ವಿ ಕಾವ್ಯರಾಣಿ ಸೂಚನೆ ನೀಡಿದರು.
ಪಟ್ಟಣದ ಎಪಿಎಂಸಿಯ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.
ಜನರಿಗೆ ಸರಬರಾಜು ಮಾಡುವ ನೀರಿನ ಬೋರ್‌ವೆಲ್ ಹಾಗೂ ಪೈಪ್ ಲೈನ್ ಮೂಲಕ ಮನೆಗೆ ಪೂರೈಕೆಯಾಗುವ ನೀರಿನ ಪರೀಕ್ಷೆ ನಡೆಸಿ ಕುಡಿಯಲು ಯೋಗ್ಯ ಇದೆಯೋ ಇಲ್ಲ ಎಂಬುದನ್ನು ಪತ್ತೆ ಹಚ್ಚಬೇಕು ಎಂದು ಸೂಚಿಸಿದರು.
ಪ್ರತಿನಿತ್ಯ ಕುಡಿಯಲು ಬಳಸುವ ನೀರನ್ನು ಕುದಿಸಿ ಆರಿಸಿ ಕುಡಿಯುವಂತೆ ಪಟ್ಟಣ ಸೇರಿ ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಕ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಇದನ್ನೂ ಓದಿ: Nikhil Siddharth: ಇದೇ 29ಕ್ಕೆ ನಿಖಿಲ್ ಸಿದ್ದಾರ್ಥ್ ಸಿನಿಮಾ ರಿಲೀಸ್; ಸ್ಪೆಷಲ್ ರೋಲ್‌ನಲ್ಲಿ ರಾಣಾ ದಗ್ಗುಭಾಟಿ!
ಎಲ್ಲಾ ವಸತಿ ನಿಲಯಗಳಲ್ಲಿ ಮಕ್ಕಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಿ, ಮಕ್ಕಳಿಗೆ ಸ್ವಚ್ಛತೆ ಬಗ್ಗೆ ಮಾಹಿತಿ ನೀಡಬೇಕು. ವಸತಿ ನಿಲಯಗಳನ್ನು ಆದಷ್ಟು ಸುಸಜ್ಜಿತವಾಗಿಟ್ಟುಕೊಳ್ಳಲು ಮುಂದಾಗಬೇಕು ಎಂದರು.
ರೈತರಿಗೆ ಹೆಚ್ಚಾಗಿ ರಾಸಾಯನಿಕ ರಸಗೊಬ್ಬರಗಳ ಬಳಸದಂತೆ ಜಾಗೃತಿ ಮೂಡಿಸಿ, ಸಾವಯವ ರಸಗೊಬ್ಬರಗಳ ಬಳಕೆಗೆ ಕುರಿತು ಮಾಹಿತಿ ನೀಡಿ, ರೈತರಿಗೆ ರಸಗೊಬ್ಬರಗಳ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮವಹಿಸಬೇಕು ಎಂದು ತಿಳಿಸಿದರು.
ಶಿಶು ಅಭಿವೃದ್ಧಿ ಇಲಾಖೆಯಡಿ ಗ್ರಾಮೀಣ ಮತ್ತು ಪಟ್ಟಣದಲ್ಲಿ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡವನ್ನು ನಿರ್ಮಾಣ ಮಾಡಲು ಸ್ಥಳಾವಕಾಶ ಇದ್ದರೆ ಅಂತಹ ಕಟ್ಟಡವನ್ನು ಪ್ರಾರಂಭಿಸಲು ಮುಂದಾಗಬೇಕು ಎಂದು ಹೇಳಿದರು.
ಇದನ್ನೂ ಓದಿ: Kedarnath Temple: ಕೇದಾರನಾಥ ದೇಗುಲ ಚಿನ್ನದ ಹಗರಣ; ಉನ್ನತ ಸಮಿತಿ ರಚನೆಗೆ ಸರ್ಕಾರ ನಿರ್ಧಾರ
ತಹಸೀಲ್ದಾರ್ ಎಂ ಬಸವರಾಜ್ ಮಾತನಾಡಿ, ಜಿಲ್ಲೆಯಲ್ಲಿ ಕೆಲವು ಕಡೆ ವಾಂತಿ ಭೇದಿ ಪ್ರಕರಣಗಳಿದ್ದು, ಅದರಂತೆ ನಮ್ಮ ತಾಲೂಕಿನಲ್ಲಿ ಈಗಾಗಲೇ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ತಾ.ಪಂ ಇಒ ನರಸಪ್ಪ ಎನ್. ಮಾತನಾಡಿ, ಗ್ರಾಮದಲ್ಲಿ ನೀರಿನ ತಪಾಸಣೆ, ಪೈಪ್‌ಲೈನ್ ದುರಸ್ತಿಯಾಗಿ ಕಲುಷಿತ ನೀರು ಸರಬರಾಜು ಕಂಡು ಬಂದರೆ ತ್ವರಿತವಾಗಿ ಗಮನಹರಿಸಿ ದುರಸ್ತಿಗೊಳಿಸಬೇಕು. ಗ್ರಾಮಸ್ಥರು ಕುಡಿಯುವ ನೀರಿನಲ್ಲಿ ಯಾವುದೇ ರಾಸಾಯನಿಕ ಮತ್ತು ಇತರೆ ಹಾನಿಕಾರಕ ವಸ್ತುಗಳು ಮಿಶ್ರಣ ಗೊಂಡಿರುವ ನೀರನ್ನು ಸಾರ್ವಜನಿಕ ಬಳಸದಂತೆ ಹಾಗೂ ಕುದಿಸಿದ ನೀರನ್ನು ಬಳಸುವಂತೆ ಜಾಗೃತಿ ಮೂಡಿಸಬೇಕು ಎಂದರು.
ಇದನ್ನೂ ಓದಿ: Amruthadhare Kannada Serial: ಹೆಣ್ಮಕ್ಕಳ ಮೂಕ ವೇದನೆಗೆ ದನಿಯಾದ ಭೂಮಿಕಾ: ನಟಿಯ ಅಭಿನಯಕ್ಕೆ ಮನಸೋತ ಪ್ರೇಕ್ಷಕರು!
ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅನುಷ್ಠಾನ ಅಧಿಕಾರಿಗಳು, ಪುರಸಭಾ ಅಧಿಕಾರಿಗಳು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾ.ಪಂ ಸಿಬ್ಬಂದಿಗಳು ಸೇರಿದಂತೆ ಇತರರು ಪಾಲ್ಗೊಂಡಿದ್ದರು.