ಕನಕಗಿರಿ: ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಕಲುಷಿತ ನೀರು (Contaminated water) ಸೇವಿಸಿ, ಮೃತಪಟ್ಟಿದ್ದವರ ಕುಟುಂಬಸ್ಥರಿಗೆ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ, ಪರಿಹಾರದ ಚೆಕ್ (Compensation Check) ವಿತರಿಸಿದರು. ಬಸರಿಹಾಳ ಗ್ರಾಮದ ಹೊನ್ನಮ್ಮ (60) ಹಾಗೂ ಒಂಬತ್ತು ವರ್ಷದ ಬಾಲಕಿ ಶ್ರುತಿ ಪೋಷಕರಿಗೆ ಸಚಿವರು ತಲಾ ಎರಡು ಲಕ್ಷ ರೂ.ಗಳ ಪರಿಹಾರದ ಚೆಕ್ ವಿತರಿಸಿದರು.
ಇನ್ನು ಇತ್ತೀಚೆಗೆ ಕರಡಿಗುಡ್ಡ ಗ್ರಾಮದಲ್ಲಿ ವಿದ್ಯುತ್ ತಗುಲಿ 14 ಕುರಿ, 2 ಎತ್ತು ಮೃತಪಟ್ಟಿದ್ದ ಘಟನೆಗೆ ಸಂಬಂಧಿಸಿದಂತೆ ಸರ್ಕಾರದ ವತಿಯಿಂದ 2.14 ಲಕ್ಷ ರೂಗಳ ಪರಿಹಾರದ ಚೆಕ್ ವಿತರಿಸಲಾಯಿತು.
ಇದನ್ನೂ ಓದಿ: Weather Report : ನಾಳೆ ಇಡೀ ದಿನ ಈ ಜಿಲ್ಲೆಯಲ್ಲಿ ತುಂತುರು ಮಳೆ ಜತೆಗೆ ಥಂಡಿ ಹವಾ!
ಬಳಿಕ ಮಾತನಾಡಿದ ಸಚಿವರು, ಜಿಲ್ಲೆಯಲ್ಲಿ ಕಳೆದ ಮೇ ತಿಂಗಳಿನಲ್ಲಿ ಕಲುಷಿತ ನೀರು ಸೇವಿಸಿ ಒಂದು ಮಗು ಸೇರಿ ಮೂವರು ಮೃತಪಟ್ಟಿದ್ದರು. ಈಗಾಗಲೇ ಒಂದು ಕುಟುಂಬಕ್ಕೆ ಪರಿಹಾರದ ಚೆಕ್ ನೀಡಲಾಗಿತ್ತು. ಇದೀಗ ಇನ್ನುಳಿದ ಎರಡು ಕುಟುಂಬಗಳಿಗೆ ಚೆಕ್ ವಿತರಿಸಲಾಗಿದೆ.
ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯತನ ತೋರಿದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗಿದೆ. ಇನ್ನು ಮುಂದೆ ಈ ರೀತಿಯಾದ ತಪ್ಪುಗಳಾಗದಂತೆ ಅತ್ಯಂತ ಜವಾಬ್ದಾರಿಯುತವಾಗಿ ಸಮಸ್ಯೆಗಳನ್ನು ಪರಿಹರಿಸಲು ಕಾರ್ಯನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಸಚಿವರು, ಸ್ಥಳೀಯ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಕೆಲವೊಂದು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿದರು.
ಇದನ್ನೂ ಓದಿ: Australian Open: ಫೈನಲ್ ಪ್ರವೇಶಿಸಿ ಭಾರತಕ್ಕೆ ಪದಕ ಖಾತ್ರಿಪಡಿಸಿದ ಪ್ರಣಯ್
ಈ ಸಂದರ್ಭದಲ್ಲಿ ತಹಸೀಲ್ದಾರ್ ವಿಶ್ವನಾಥ್ ಮುರುಡಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.