ಕನಕಗಿರಿ: ತಾಲೂಕಿನ ಕನಕಾಪುರ ಗ್ರಾಮದಲ್ಲಿ ಕೆಲ ದಿನಗಳ ಹಿಂದೆ ವಿಷ ಸೇವಿಸಿ ಮೃತಪಟ್ಟಿದ್ದ ರೈತ (farmer) ಕರೇಗೌಡ (40) ಅವರ ಮನೆಗೆ, ಸಚಿವ ಶಿವರಾಜ ಎಸ್ ತಂಗಡಗಿ, ಸೋಮವಾರ ಭೇಟಿ (Visit) ನೀಡಿ, ಸಾಂತ್ವಾನ ಹೇಳಿದರು.
ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ ಮಾತನಾಡಿದ ಸಚಿವರು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆಯನ್ನು ಈ ವೇಳೆ ನೀಡಿದರು.
ಇದನ್ನೂ ಓದಿ: Namma Metro: ವರ್ಷಾಂತ್ಯಕ್ಕೆ ಜಯದೇವ ಜಂಕ್ಷನ್ ಇಂಟರ್‌ಚೇಂಜ್ ಮೆಟ್ರೋ ನಿಲ್ದಾಣ ಆರಂಭ
ಅನಂತರ ಗ್ರಾಮಸ್ಥರ ಕುಂದು ಕೊರತೆಗಳನ್ನು ಆಲಿಸಿ ಮಾತನಾಡಿದ ಸಚಿವರು, ಗ್ರಾಮದಲ್ಲಿ ಮೂಲಸೌಲಭ್ಯಕ್ಕೆ ಒತ್ತು ನೀಡಲಾಗುವುದು. ಇನ್ನು ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ಶೀಘ್ರವೇ ಗ್ರಾಮದಲ್ಲಿ ಕನಕಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಗ್ರಾಮದ ಮುಂಭಾಗದಲ್ಲಿ ನೀರಿನ ವ್ಯವಸ್ಥೆಗಾಗಿ ಕುರಿಗಾಹಿಗಳಿಗೆ ಕೊಳವೆ ಬಾವಿ ಅಗತ್ಯವಿದೆ ಎಂಬ ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಸಚಿವರು, ಎರಡ್ಮೂರು ದಿನದಲ್ಲಿ ಕೊಳವೆ ಬಾವಿ ಕೊರೆಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ: Diamond Cross 11: ಸದ್ಯದಲ್ಲೇ ತೆರೆಗೆ ಬರಲಿದೆ ಡೈಮಂಡ್ ಕ್ರಾಸ್ 11 ಸಿನಿಮಾ
ಈ ಸಂದರ್ಭದಲ್ಲಿ ತಹಸೀಲ್ದಾರ್ ಸಂಜಯ್ ಕಾಂಬ್ಳೆ, ತಾಲೂಕು ಪಂಚಾಯಿತಿ ಇಓ ಚಂದ್ರಶೇಖರ್ ಕಂದಕೂರು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ, ಸಿಪಿಐ ಜಗದೀಶ ಕೆಜಿ, ಪಪಂ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ, ಮುಖಂಡರಾದ ಗಂಗಾಧರ ಸ್ವಾಮಿ ಕಲುಬಾಗಿಲ ಮಠ, ವೀರೇಶ ಸಮಗಂಡಿ, ರಮೇಶ ನಾಯಕ, ಮಹ್ಮದ್ ರಫಿ ಹಾಗೂ ಇತರರು ಇದ್ದರು.