Site icon Vistara News

Koppala News: ಕಾರಟಗಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಶಿವರಾಜ ತಂಗಡಗಿ ಚಾಲನೆ

Minister Shivraj Thangadagi Meeting in Karatagi

ಕಾರಟಗಿ: ತಾಲೂಕಿನ ವಿವಿಧೆಡೆ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ (Development works) ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಚಾಲನೆ ನೀಡಿದರು.

ಸಿದ್ದಾಪುರ ಗ್ರಾಮದ ಮಲ್ಲಿಕಾರ್ಜುನ ನಗರದಲ್ಲಿ ನೂತನವಾಗಿ ನಿರ್ಮಾಣವಾದ ಹಾಸ್ಟೆಲ್ ಹತ್ತಿರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಕೊಠಡಿಗಳನ್ನು ಸಚಿವರು ಉದ್ಘಾಟಿಸಿದರು. ಬಳಿಕ ಗ್ರಾಮದ 1 ನೇ ವಾರ್ಡ್ ನಲ್ಲಿ ನರೇಗಾದಡಿ ಅನುಷ್ಠಾನವಾದ ಗ್ರಾಮೀಣ (ಹಳ್ಳಿ) ಸಂತೆ , ಸರ್ಕಾರಿ ಪ್ರೌಢ ಶಾಲಾ ಆವರಣದಲ್ಲಿ ನಿರ್ಮಾಣ ಭೋಜನಾಲಯದ ಕಾಮಗಾರಿಗಳನ್ನು ಉದ್ಘಾಟಿಸಿದರು.

ಜನ ಸಂಪರ್ಕ ಸಭೆ

ಸಭೆಯಲ್ಲಿ ಗ್ರಾಮದ ಸಾರ್ವಜನಿಕರಿಂದ ಚರಂಡಿ, ಸಿಸಿ ರಸ್ತೆ ನಿರ್ಮಾಣ ಮಾಡಿಕೊಡುವಂತೆ ಅಹವಾಲುಗಳನ್ನು ಸಲ್ಲಿಸಿದರು. ನಂತರ ಕಾಲುವೆ ಪಕ್ಕದ 32 ಕುಟುಂಬಗಳು, 342 ಗ್ರಾಮದಲ್ಲಿ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಕಲ್ಪಿಸುವ ನಿಟ್ಟಿನಲ್ಲಿ ಈಗಾಗಲೇ ಭೂಮಿ ಗುರುತಿಸಿದ್ದು. ತಾಲೂಕು ತಹಸೀಲ್ದಾರ್ ತ್ವರಿತವಾಗಿ ಇದರ ಬಗ್ಗೆ ಗಮನಹರಿಸಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಇದನ್ನೂ ಓದಿ: Mobile Addiction : ಮಕ್ಕಳಿಗಿನ್ನು ಮೊಬೈಲ್‌ ಮುಟ್ಟಿದರೆ ಮುನಿ; ಇದು ಹೊಸ APP ಕಹಾನಿ!

ನಂದಿಹಳ್ಳಿ, ಕಕ್ಕರಗೊಳ, ಶಾಲಿಗನೂರು, ಬೆನ್ನೂರು, ಉಳೇನೂರು, ಯರಡೋಣ, ಬೂದಗುಂಪಾ ಸಿದ್ದಾಪುರ ಮಾರ್ಗವಾಗಿ ಗಂಗಾವತಿಗೆ ತೆರಳುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಎರಡು ಬಸ್‌ಗಳನ್ನು ಬಿಡುವಂತೆ ಕೆಎಸ್ಆರ್‌ಟಿಸಿ ಅಧಿಕಾರಿಗಳಿಗೆ ಸೂಚಿಸಿದರು‌.

ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ವಾರದೊಳಗೆ 10 ಎಚ್‌ಪಿ ಮೋಟರ್‌ನಿಂದ‌ ಸಿದ್ದಾಪುರ ಗ್ರಾಮಕ್ಕೆ ಪ್ರತಿನಿತ್ಯ ನೀರಿನ ಸಂಪರ್ಕ ಮಾಡುವಂತೆ ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಿದ್ದಾಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಅಧಿಕಾರಿಗಳು ಸಾರ್ವಜನಿಕರ ಆರೋಗ್ಯ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸುವಲ್ಲಿ ಕಾರ್ಯನಿರ್ವಹಿಸಿ‌‌ ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ: Independence Day 2023: ಸ್ವಾತಂತ್ರ್ಯೋತ್ಸವ ದಿನ ನೋಡಲೇಬೇಕಾದ ಕನ್ನಡ ಚಿತ್ರಗಳಿವು

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹಸೀನಾ ಬೇಗಂ, ಉಪಾಧ್ಯಕ್ಷೆ ದ್ಯಾವಮ್ಮ ಕನಕಪ್ಪ, ತಾ.ಪಂ ಇಒ ನರಸಪ್ಪ.ಎನ್, ಉಪ ತಹಸೀಲ್ದಾರ್, ಮಾಜಿ‌ ಜಿ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ತಾ.ಪಂ ಮಾಜಿ ಅಧ್ಯಕ್ಷರು, ಗ್ರಾ.ಪಂ ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು, ಗ್ರಾಮದ ಪ್ರಮುಖರು, ಐಇಸಿ ಸಂಯೋಜಕರು, ಗ್ರಾ.ಪಂ ಸಿಬ್ಬಂದಿ ಸೇರಿದಂತೆ ಇತರರು ಇದ್ದರು.

Exit mobile version