ಕೊಪ್ಪಳ: ನಗರದ ತಾಲೂಕು ಕ್ರೀಡಾಂಗಣದಲ್ಲಿ ಗುರುವಾರ “ನನ್ನ ಮಣ್ಣು, ನನ್ನ ದೇಶ” ಕಾರ್ಯಕ್ರಮವು (My Soil My Country program) ಗುರುವಾರ ಕೊಪ್ಪಳದಲ್ಲಿ (Koppala) ಅರ್ಥಪೂರ್ಣವಾಗಿ ಜರುಗಿತು.
ತಾಲೂಕು ಪಂಚಾಯಿತಿ ಕೊಪ್ಪಳ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗ್ರಾಮ ಪಂಚಾಯತಿಗಳು, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ನೆಹರು ಯುವ ಕೇಂದ್ರ ಕೊಪ್ಪಳ ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ನಮ್ಮ ದೇಶವು ಉತ್ತಮ ಪರಿಸರ, ಹವಾಗುಣ ಹೊಂದಿರಲು ಇಲ್ಲಿನ ಮಣ್ಣಿನ ಗುಣ ಮುಖ್ಯವಾಗಿದೆ. ಅನೇಕ ಮಹಾತ್ಮರ ಹೋರಾಟದಿಂದಾಗಿ ಮತ್ತು ತ್ಯಾಗದಿಂದಾಗಿ ನಮ್ಮ ದೇಶ ಸ್ವಾತಂತ್ರ್ಯ ಪಡೆದು ಅಭಿವೃದ್ದಿಯತ್ತ ಸಾಗುತ್ತಿದೆ. ಪ್ರತಿ ಗ್ರಾಮ ಪಂಚಾಯತಿಯಿಂದ ಮಣ್ಣು ಸಂಗ್ರಹಿಸುವ ಮೂಲಕ ಜನರಲ್ಲಿ ಮಣ್ಣು ಮತ್ತು ದೇಶದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ: Viral Video: ಮಹಿಳೆಯನ್ನು ನದಿಗೆ ಎಳೆದೊಯ್ದು, ಸಜೀವವಾಗಿ ತಿಂದ ಮೊಸಳೆ!
ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮ ಮುಖ್ಯ ಉದ್ದೇಶ ಕುರಿತು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ ಮಾತನಾಡಿ, ಗ್ರಾಪಂ ವ್ಯಾಪ್ತಿಯಲ್ಲಿ ಕಳೆದ ಅಗಸ್ಟ್ 09 ರಿಂದ ಈ ಕಾರ್ಯಕ್ರಮ ಜರುಗಿಸಿ ಜನರಲ್ಲಿ ದೇಶ, ಮಣ್ಣಿನ ಬಗ್ಗೆ ಜಾಗೃತಿ ಮೂಡಿಸಿದ್ದು ಪ್ರತಿ ಗ್ರಾಮ ಪಂಚಾಯಿತಿಯ ಒಂದು ಹಿಡಿ ಮಣ್ಣನ್ನು ದೆಹಲಿಗೆ ತಲುಪಿಸಲಾಗುತ್ತದೆ ಎಂದರು.
ಕೊಪ್ಪಳ ತಾಲೂಕಿನ 38 ಗ್ರಾಮ ಪಂಚಾಯತಿಗಳಿಂದ ತರಲಾಗಿದ್ದ ಮಣ್ಣನ್ನು ವಿವಿಧ ಹೂಗಳಿಂದ ಅಲಂಕರಿಸಿದ್ದ ಮಣ್ಣಿನ ಮಡಿಕೆಗಳಿಂದ ತಾಲೂಕು ಕೇಂದ್ರಕ್ಕೆ ತರಲಾಗಿತ್ತು. ಇದೆ ವೇಳೆಯಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಎಂಬ ಘೋಷಣೆಗಳು ಮೊಳಗಿದವು.
ಕನ್ನಡ, ಇಂಗ್ಲಿಷ್, ಹಿಂದಿ ತ್ರಿಭಾಷೆಯಲ್ಲಿ ಹಾಗೂ ಕೇಸರಿ, ಬಿಳಿ, ಹಸಿರು ಬಣ್ಣದಿಂದ ಬರೆದ “ನನ್ನ ಮಣ್ಣು ನನ್ನ ದೇಶ”, “ಮೇರಿ ಮಾಟಿ ಮೇರಾ ದೇಶ” ಎನ್ನುವ ಅಕ್ಷರಗಳು ಗಮನ ಸೆಳೆದವು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಮಲ್ಲಪ್ಪ ತೊದಲಬಾಗಿ, ಎಲ್ಲರಿಗೂ ಪಂಚಪ್ರಾಣ ಶಪಥ ಬೋಧಿಸಿದರು. ನನ್ನ ಮಣ್ಣು, ನನ್ನ ದೇಶ ಕುರಿತು ಶಾಲಾ ವಿದ್ಯಾರ್ಥಿಗಳು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.
ಇದನ್ನೂ ಓದಿ: Virat Kohli: ರಜೆಯಲ್ಲಿದ್ದರೂ ಓಟ ಮಾತ್ರ ನಿರಂತರ; ಕೊಹ್ಲಿಯ ಈ ಮಾತಿನ ರಹಸ್ಯವೇನು?
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಟಿ.ಕೃಷ್ಣಮೂರ್ತಿ, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಮಹೇಶ್ ಎಚ್, ಕ್ಷೇತ್ರ ಶಿಕ್ಷಣಾಧಿಕಾರಿ ಶಂಕ್ರಯ್ಯ, ತಾಲೂಕು ಯೋಜನಾಧಿಕಾರಿ ರಾಜೇಸಾಬ ನದಾಫ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಹನಮಂತಪ್ಪ, ಸಹಾಯಕ ಲೆಕ್ಕಾಧಿಕಾರಿ ರವಿಕುಮಾರ, ನರೇಗಾ ಸಹಾಯಕ ನಿರ್ದೇಶಕಿ ಸೌಮ್ಯ ಕೆ., ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ದ್ವಿತೀಯ ದರ್ಜೆ ಲೆಕ್ಕಸಹಾಯಕರು, ಕಾರ್ಯದರ್ಶಿಗಳು ಸೇರಿದಂತೆ ಇತರರು ಉಪಸ್ಥಿತದ್ದರು.