ಕನಕಗಿರಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ (Police Station) ಕನಕಗಿರಿ ಪೊಲೀಸ್ ಠಾಣೆಗೆ ಔಪಚಾರಿಕ ಭೇಟಿ ನೀಡಿದರು.
ಮೊದಲ ಬಾರಿಗೆ ಆಗಮಿಸಿದ ಎಸ್‌ಪಿ ಅವರನ್ನು ಪಿ.ಐ ಜಗದೀಶ ಕೆ.ಜಿ ಹಾಗೂ ಸಿಬ್ಬಂದಿ ಸ್ವಾಗತಿಸಿದರು. ನಂತರ ಸಿಬ್ಬಂದಿಯಿಂದ ಗೌರವ ಸ್ವೀಕರಿಸಿದ ಅವರು ಕನಕಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾನೂನು ಸುವ್ಯವಸ್ಥೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಕಾನೂನು ಸುವ್ಯವಸ್ಥೆ ಕಾಪಾಡಿ
ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಕನಕಗಿರಿ ಕ್ಷೇತ್ರವು ಸೂಕ್ಷ್ಮ ಕೇಂದ್ರವಾಗಿದ್ದು ಈ ಸಮಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಇಲಾಖೆಯ ಪಾತ್ರ ಮಹತ್ವದ್ದಾಗಿದೆ. ಹೀಗಾಗಿ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸುವಂತೆ ಸಿಬ್ಬಂದಿಗೆ ಎಸ್‌ಪಿ ಸೂಚಿಸಿದರು.
ಇದನ್ನೂ ಓದಿ: DRDO Missile: ಖಂಡಾಂತರ ಕ್ಷಿಪಣಿ ನಿಗ್ರಹ ಮಿಸೈಲ್ ಪರೀಕ್ಷೆ ಯಶಸ್ವಿ, ಮತ್ತೊಂದು ಮೈಲುಗಲ್ಲು
ಲಕ್ಷ್ಮೀ ನರಸಿಂಹಸ್ವಾಮಿಗೆ ಪೂಜೆ ಸಲ್ಲಿಕೆ
ನಂತರ ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಕನಕಾಚಲ ಲಕ್ಷ್ಮೀ ನರಸಿಂಹ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಐತಿಹಾಸಿಕ ವೆಂಕಟಾಚಲಪತಿ ಭಾವಿಗೆ ಭೇಟಿ ನೀಡಿ ಕಲಾತ್ಮಕ ಶಿಲಾಕೆತ್ತನೆಯ ಸೌಂದರ್ಯ ಮತ್ತು ವಿಶೇಷ ವಾಸ್ತುಶಿಲ್ಪವನ್ನು ಕಣ್ತುಂಬಿಕೊಂಡು ಬಣ್ಣಿಸಿದರು.