ಗಂಗಾವತಿ: ನಿರ್ಮಾಣ ಹಂತದಲ್ಲಿದ್ದ ಮನೆಗೆ ಗೋಡೆಗಳಿಗೆ (Walls) ಕ್ಯೂರಿಂಗ್ ಮಾಡಲು ಹೋಗಿದ್ದ ಯುವಕನೊಬ್ಬ (Youth) ಆಕಸ್ಮಿಕ ವಿದ್ಯುತ್ ತಗುಲಿ ಗಾಯಗೊಂಡು ಸಾವನ್ನಪ್ಪಿದ ಘಟನೆ ನಗರದ 23ನೇ ವಾರ್ಡ್ನ ಚಲುವಾದಿ ವಾಡಾದಲ್ಲಿ ಜರುಗಿದೆ.
ಕುಮಾರ ಭಜಂತ್ರಿ (21) ಮೃತ ಯುವಕ ಎಂದು ಗುರುತಿಸಲಾಗಿದೆ. ಈತನು ದ್ವಿತಿಯ ಪಿಯುಸಿ ವಿದ್ಯಾರ್ಥಿಯಾಗಿದ್ದು, ನಿರ್ಮಾಣ ಹಂತದಲ್ಲಿದ್ದ ತಮ್ಮದೇ ಮನೆಗೆ ಕ್ಯೂರಿಂಗ್ ಮಾಡುವ ಉದ್ದೇಶಕ್ಕೆ ತೆರಳಿದ್ದ ವೇಳೆ ನೀರಿನ ಮೊಟರ್ ಆನ್ ಮಾಡಲು ಸ್ವಿಚ್ ಹಾಕಲು ಮುಂದಾದಾಗ ವಿದ್ಯುತ್ ಪ್ರವಹಿಸಿ ತೀವ್ರಗಾಯಗೊಂಡಿದ್ದಾನೆ ಎನ್ನಲಾಗಿದೆ.
ತೀವ್ರಗಾಯಗೊಂಡ ಯುವಕನನ್ನು ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸುವ ಸಂದರ್ಭದಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಗಂಗಾವತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.