ಕನಕಗಿರಿ: ವಾಂತಿ-ಭೇದಿ (Vomiting-dysentery) ಹಾಗೂ ತೀವ್ರತರವಾದ ಹೊಟ್ಟೆನೋವಿನಿಂದ ಜೂ. 29ರಂದು ಮೃತಪಟ್ಟ ಕನಕಗಿರಿ (Kanakagiri) ತಾಲೂಕಿನ ಹುಲಸನಹಟ್ಟಿ ಗ್ರಾಮದ ಸುನೀಲ್ ಕುಮಾರ್ ಅವರ ನಿವಾಸಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆ ಅವರು ಶುಕ್ರವಾರ ಭೇಟಿ (Visit) ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಯುವಕನ ಮರಣಕ್ಕೆ ಸಂಬಂಧಿಸಿದಂತೆ ಕುಟುಂಬಸ್ಥರು, ಗ್ರಾಮಸ್ಥರು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಚಿಕಿತ್ಸೆಗಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾದ ಸಂದರ್ಭದಲ್ಲಿ ಯುವಕನಿಗೆ ನೀಡಲಾದ ಚಿಕಿತ್ಸೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಸ್ಥಳೀಯ ವೈದ್ಯಾಧಿಕಾರಿಗಳೊಂದಿಗೆ ಪಡೆದುಕೊಂಡರು.
ಇದನ್ನೂ ಓದಿ: IND vs WI : ಭಾರತ ವಿರುದ್ಧದ ಟೆಸ್ಟ್ ಸರಣಿಗೆ ವಿಂಡೀಸ್ನ ಪ್ರಮುಖ ಆಟಗಾರರು ಔಟ್?
ಹುಲಸನಹಟ್ಟಿ ಗ್ರಾಮದಲ್ಲಿ ವಾಂತಿ-ಭೇದಿ ಪ್ರಕರಣಗಳು ಜರುಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಗ್ರಾಮದ ಕುಡಿಯುವ ನೀರಿನ ಮೂಲಗಳನ್ನು ಪರಿಶೀಲಿಸಬೇಕು. ಕುಡಿಯುವ ನೀರಿನ ಪೈಪ್‌ಲೈನ್‌ಗಳ ಪರಿಶೀಲನೆ, ಚರಂಡಿ ಮತ್ತು ಅವುಗಳ ಸ್ವಚ್ಛತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ: Viral News : ವಿಶ್ವದಲ್ಲೇ ಅತಿ ಉದ್ದದ ನಾಲಿಗೆ ಹೊಂದಿರುವ ನಾಯಿ ಇದೇ ನೋಡಿ; ಅಬ್ಬಬ್ಬಾ ಎಷ್ಟೊಂದು ಉದ್ದವಿದೆ ಇದರ ನಾಲಿಗೆ!
ಈ ಸಂದರ್ಭದಲ್ಲಿ ಕನಕಗಿರಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಕಂದಕೂರು, ತಾಲೂಕು ಆರೋಗ್ಯಾಧಿಕಾರಿ ಶರಣಪ್ಪ ಚಕೋತಿ, ಮುಸಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸಹನಾ, ಗ್ರಾ.ಪಂ ಪಿಡಿಓ ಯು.ಮಲ್ಲಿಕಾರ್ಜುನ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.