Site icon Vistara News

Accident Case : ಹಿಟ್ ಆ್ಯಂಡ್ ರನ್‌ಗೆ ಛಿದ್ರವಾದ ಸವಾರರಿಬ್ಬರ ತಲೆ; ಬೆಂಕಿಗಾಹುತಿಯಾದ ಫಿಶ್‌ಮಿಲ್

Accident news

ಕೊಪ್ಪಳ: ಭೀಕರ ರಸ್ತೆ ಅಪಘಾತದಲ್ಲಿ (Accident Case) ಮಹಿಳೆ ಹಾಗೂ ಬಾಲಕನೊರ್ವ ಮೃತಪಟ್ಟಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೇಕೊಪ್ಪ ಗ್ರಾಮದ ಬಳಿಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ.

ರುಕ್ಮಿಣಿ ಕಡೇಕೊಪ್ಪದ ಬಳಿ ಡಾಬಾ ನಡೆಸುತ್ತಿದ್ದರು. ಇಲಕಲ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ಮಗಳಿಗೆ ಬುತ್ತಿ ಕೊಡಲು ದ್ವಿಚಕ್ರ ವಾಹನದಲ್ಲಿ ರುಕ್ಮಿಣಿ (36), ಬಾಲಕನೊಟ್ಟಿಗೆ ತೆರಳುತ್ತಿದ್ದರು.

ಈ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ರುಕ್ಮಿಣಿ ತಲೆಯ ಚಿಪ್ಪು ಎಗರಿ ಹೋಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಾಲಕನ ತಲೆಗೂ ಗಂಭೀರ ಪೆಟ್ಟಾಗಿದ್ದು, ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ.

ಅಪಘಾತದ ಬಳಿಕ ವಾಹನ ಚಾಲಕ ಕಾಲ್ಕಿತ್ತಿದ್ದಾನೆ. ಮೃತರಿಬ್ಬರು ಕಡೇಕೊಪ್ಪದ ನಿವಾಸಿಗಳೆಂದು ತಿಳಿದು ಬಂದಿದೆ. ಸ್ಥಳಕ್ಕೆ ಕುಷ್ಟಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಹಿಟ್ ಆ್ಯಂಡ್ ರನ್‌ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಚಾಲಕನಿಗಾಗಿ ಹುಡುಕಾಟ ನಡೆದಿದೆ.

ಇದನ್ನೂ ಓದಿ: Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

Accident case

ಮಂಗಳೂರಲ್ಲಿ ಬೆಂಕಿ ತಗುಲಿ ಹೊತ್ತಿ ಉರಿದ ಫಿಶ್‌ಮಿಲ್

ಮಂಗಳೂರಿನ ಹೊರ ವಲಯದ ಸುರತ್ಕಲ್‌ನ SEZ ವ್ಯಾಪ್ತಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅಥೆಂಟಿಕ್ ಓಷನ್ ಟ್ರೆಷರ್ ಮೀನು ಸಂಸ್ಕರಣಾ ಘಟಕವೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿದೆ. ದಟ್ಟ ಹೊಗೆ ಆವರಿಸುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಲಕ್ಷಾಂತರ ಮೌಲ್ಯದ ಸ್ವತ್ತುಗಳು ಬೆಂಕಿಗೆ ಆಹುತಿಯಾಗಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version