ಕೊಪ್ಪಳ : ಪಠ್ಯದಲ್ಲಿ ಇತಿಹಾಸ ಮತ್ತು ರಾಷ್ಟ್ರೀಯತೆ ಇದೆ. ಆರೋಪ ಮಾಡಲು ಏನೂ ಇಲ್ಲದವರು ಏನೇನೋ ಮಾತನಾಡುತ್ತಾರೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೊಪ್ಪಳಕ್ಕೆ ಆಗಮಿಸಿದ ಸಚಿವ ಬಿ.ಸಿ. ನಾಗೇಶ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಪಠ್ಯದಲ್ಲಿ ಬ್ರಾಹ್ಮಣೀಕರಣ ಮಾಡಲಾಗುತ್ತಿದೆ ಎಂಬ ಆರೋಪ ಕುರಿತಂತೆ ಪ್ರತಿಕ್ರಿಯಿಸಿ, ಆರೋಪ ಮಾಡಲು ಏನು ಇಲ್ಲದವರು ಈ ರೀತಿ ಮಾತನಾಡುತ್ತಾರೆ. ಈಗಾಗಲೇ ಪಠ್ಯ ಪುಸ್ತಕಗಳು ಮುದ್ರಣಗೊಂಡು ಹೊರ ಬಂದಿವೆ. ಈ ಮೊದಲು ಟಿಪ್ಪು, ಭಗತ್ ಸಿಂಗ್, ಬಸವಣ್ಣ ಪಠ್ಯ ತೆಗೆದಿದ್ದಾರೆ ಎಂದು ವಿದ್ಯಾರ್ಥಿಗಳಲ್ಲಿ ಗೊಂದಲ ಮೂಡಿಸುವ ಪ್ರಯತ್ನ ನಡೆಸಲಾಗಿತ್ತು ಎಂದರು.
ಇದನ್ನೂ ಓದಿ | ಯಾರೆಷ್ಟೇ ವಿರೋಧಿಸಿದರೂ ಹೆಡಗೇವಾರ್ ಪಾಠ ಸೇರ್ಪಡೆ ಖಚಿತ ಎಂದ ಬಿ.ಸಿ. ನಾಗೇಶ್
ಹಿಜಾಬ್ ವಿವಾದ ಕುರಿತು ಮಾತನಾಡಿ, ನ್ಯಾಯಾಲಯದ ತೀರ್ಪನ್ನು ಎಲ್ಲರೂ ಪಾಲಿಸಬೇಕು. ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರಕ್ಕೆ ಮಾತ್ರ ಅವಕಾಶವಿದೆ. ಇದರಲ್ಲಿ ಕಾಂಗ್ರೆಸ್ ಗೊಂದಲ ಮೂಡಿಸುತ್ತಿದೆ ಎಂದು ಆರೋಪಿಸಿದರು.
ಸಿದ್ದರಾಮಯ್ಯ ಇಟಲೀಕರಣ ಮಾಡಹೊರಟವರು: ಸಿದ್ದರಾಮಯ್ಯ ಆರ್‌ಎಸ್‌ಎಸ್ ಬಗ್ಗೆ ಮಾತನಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ದೇಶದಲ್ಲಿ ಇಟಲೀಕರಣ ಮಾಡಲು ಹೋಗುತ್ತಿಲ್ಲ. ಇಟಲೀಕರಣ ಮಾಡಲು ಹೊರಟವರು ಈಗ ಮಾತನಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಸಿಎಂ ಬೊಮ್ಮಾಯಿ ಗ್ರಾಮ ಪಂಚಾಯತಿಗೊಂದು ಮಾದರಿ ಕನ್ನಡ ಶಾಲೆ ಆರಂಭಿಸಿದ್ದಾರೆ ಎಂದು ಸಚಿವ ಬಿ.ಸಿ ನಾಗೇಶ್ ಇದೇ ಸಂದರ್ಭದಲ್ಲಿ ಹೇಳಿದರು.
ಇದನ್ನೂ ಓದಿ | ಪಠ್ಯಪುಸ್ತಕ ಕುರಿತು ಪ್ರಶ್ನಿಸಲು ಸಿದ್ದರಾಮಯ್ಯ ಅವರಿಗೆ ನೈತಿಕತೆ ಇಲ್ಲ: ಸಚಿವ ನಾಗೇಶ್