Site icon Vistara News

Koppala News: ಜಾನಪದ ಲೋಕಕ್ಕೆ ಹೆಚ್ಚುವರಿ 1.5 ಕೋಟಿ ರೂ. ಅನುದಾನ: ಸಚಿವ ಶಿವರಾಜ್ ತಂಗಡಗಿ

Koppala Incharge Minister Shivraj Thangadagi Pressmeet

ಕೊಪ್ಪಳ: ಜಾನಪದ ಲೋಕಕ್ಕೆ (Janapada loka) ಬಜೆಟ್‌ನಲ್ಲಿ (Budget) 2 ಕೋಟಿ ರೂಪಾಯಿ ಜತೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಒಂದೂವರೆ ಕೋಟಿ ಹೆಚ್ಚಿನ ಅನುದಾನ ಒದಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.

ಮಂಗಳವಾರ ಧ್ವಜಾರೋಹಣದ ಬಳಿಕ ಮಾಧ್ಯಮ ಪ್ರತಿನಿಧಿಗೊಂದಿಗೆ ಮಾತನಾಡಿದ ಅವರು, ಜಾನಪದ ಲೋಕಕ್ಕೆ ಜಿಲ್ಲಾಡಳಿತ ಸ್ಥಳ ಗುರುತಿಸಿದ್ದು, ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಿ ಶೀಘ್ರವೇ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: Asia Cup: ಏಷ್ಯಾ ಕಪ್​ಗೆ ಇಂದು ಭಾರತ ತಂಡ ಪ್ರಕಟ; ಸ್ಟಾರ್​ ಆಟಗಾರರ ಕಮ್​ಬ್ಯಾಕ್​

ಜಿಲ್ಲೆಯಲ್ಲಿ ನೆನಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳಿಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯ ನೀರಾವರಿ ಯೋಜನೆಗಳ ಬಗ್ಗೆ ಜಲಸಂಪನ್ಮೂಲ ಖಾತೆ ಹೊಂದಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಗಮನಕ್ಕೆ ತಂದಿದ್ದೇನೆ. ಅಗತ್ಯವಿರುವ ಕಾಮಗಾರಿಗಳನ್ನು ತುರ್ತಾಗಿ ಕೈಗೆತ್ತಿಕೊಳ್ಳಲಾಗುವುದು. ನೀರಾವರಿ ಹಾಗೂ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದರು.

ಈ ಹಿಂದೆ ಇದ್ದ ಸರ್ಕಾರ ಹೆಸರಿಗೆ ಮಾತ್ರ ಜಿಲ್ಲೆಯಲ್ಲಿ ತೋಟಗಾರಿಕೆ ಪಾರ್ಕ್ ಮಾಡುವುದಾಗಿ ಘೋಷಣೆ ಮಾಡಿದೆ. ಪಾರ್ಕ್ ನಿರ್ಮಿಸಲು ಅಗತ್ಯವಿರುವ ಹಣವನ್ನು ತೋಟಗಾರಿಕೆ ಇಲಾಖೆ ಒದಗಿಸಬೇಕಿದ್ದು, ಈ ಬಗ್ಗೆ ಆ ಇಲಾಖೆಯ ಕಾರ್ಯದರ್ಶಿ ಅವರೊಂದಿಗೂ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Independence Day 2023; ಸಚಿನ್​ರಿಂದ ​ ಕೊಹ್ಲಿವರೆಗೆ ಸ್ವಾತಂತ್ರ್ಯ ಸಂಭ್ರಮ ಹೇಗಿತ್ತು!

ಆಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ 120 ಕೋಟಿ ರೂ.ಅನುದಾನ ಒದಗಿಸಲಾಗಿದೆ ಎಂದು ಹಿಂದಿನ ಬಿಜೆಪಿ ಸರ್ಕಾರ ಹೇಳಿತ್ತು. ಆದರೆ ಕೇವಲ 20 ಕೋಟಿ ರೂ.ಹಣವನ್ನು ಮಾತ್ರ ನೀಡಲಾಗಿದೆ ಎಂಬ ಮಾಹಿತಿಯನ್ನು ಜಿಲ್ಲಾಧಿಕಾರಿಯಿಂದ ಪಡೆದುಕೊಂಡಿದ್ದೇನೆ. ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ್ ಅವರೊಂದಿಗೆ ಚರ್ಚೆ ನಡೆಸಿ, ಬೆಟ್ಟದಲ್ಲಿ ಮೂಲಸೌಲಭ್ಯ ಕಲ್ಪಿಸುವುದು ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

Exit mobile version