Atrocity case: ಜಮೀನಿಗೆ ಹಸು ನುಗ್ಗಿದ್ದಕ್ಕೆ ದಲಿತ ಮಹಿಳೆ ಮೇಲೆ ಹಲ್ಲೆ - Vistara News

ಕೊಪ್ಪಳ

Atrocity case: ಜಮೀನಿಗೆ ಹಸು ನುಗ್ಗಿದ್ದಕ್ಕೆ ದಲಿತ ಮಹಿಳೆ ಮೇಲೆ ಹಲ್ಲೆ

ಜಮೀನಿನೊಳಗೆ ಹಸು ನುಗ್ಗಿದ್ದಕ್ಕೆ ದಲಿತ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಘಟನೆ ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ.

VISTARANEWS.COM


on

atrocity case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಪ್ಪಳ: ಜಮೀನಿನೊಳಗೆ ಹಸು ನುಗ್ಗಿದ್ದಕ್ಕೆ ದಲಿತ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಘಟನೆ ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ.

ರಾಂಪುರದ ಅಮರೇಶಪ್ಪ ಎಂಬುವವರ ಹೊಲಕ್ಕೆ ಶೋಭಮ್ಮ ಹರಿಜನ ಎಂಬವರಿಗೆ ಸೇರಿದ ಹಸು ನುಗ್ಗಿತ್ತು. ಹೊಲಕ್ಕೆ ನುಗ್ಗಿದ ಹಸುವನ್ನು ಮನೆಯ ಮುಂದೆ ಕಟ್ಟಿ ಹಾಕಿದ್ದ ಅಮರೇಶಪ್ಪ, ಕೇಳಲು ಹೋದ ಶೋಭಮ್ಮನ ಮೇಲೆ ಹಲ್ಲೆ‌ ಮಾಡಿದ್ದಾನೆ. ಹಲ್ಲೆಗೊಳಗಾದ ಮಹಿಳೆಯನ್ನು ಗಂಗಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಮರೇಶಪ್ಪನ ವಿರುದ್ಧ ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಅಮರೇಶನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಲ್ಲೆ ಮಾಡಿರುವ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: Murder Case: ಕುಡಿದ ಮತ್ತಿನಲ್ಲಿದ್ದ ತಂದೆಯಿಂದ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಮೂವರು ಮಕ್ಕಳು ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ; ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Rain News: ರಾಜ್ಯದ ಹಲವೆಡೆ ಮಳೆಯು ಅಬ್ಬರಿಸುತ್ತಿದೆ. ಗುಡುಗು, ಸಿಡಿಲು ಸಹಿತ ಬಿರುಗಾಳಿ ಮಳೆಯಾಗುತ್ತಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ಶುಕ್ರವಾರವೂ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಜತೆಗೆ ವಿವಿಧೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ.

ಉತ್ತರ ಒಳನಾಡಿನ ಬೆಳಗಾವಿ ಮತ್ತು ಹಾವೇರಿ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗಲಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಚದುರಿದಂತೆ ಹಾಗೂ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: IPL‌ Betting: ಸಾಲಗಾರರ ಕಾಟ; ಹೆಂಡತಿ-ಮಕ್ಕಳಿಗೆ ವಿಷವಿಕ್ಕಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪಾಪಿ

ತಾಪಮಾನದ ಮುನ್ಸೂಚನೆ

ಏಪ್ರಿಲ್ 19 ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 2 ದಿನಗಳಲ್ಲಿ ಗರಿಷ್ಟ ಉಷ್ಣಾಂಶದಲ್ಲಿ ಹೆಚ್ಚಿನ ಬಡಲಾವಣೆ ಇರುವುದಿಲ್ಲ. ನಂತರದ 3 ದಿನಗಳವರೆಗೆ ಕ್ರಮೇಣ 2-3 ಡಿ.ಸೆ ಏರಿಕೆಯಾಗುತ್ತದೆ.

ಗುಡುಗು ಮುನ್ನೆಚ್ಚರಿಕೆ

ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಜತೆಗೆ ಮೇಲ್ಮೈ ಮಾರುತಗಳು ಬಲವಾದ ಮತ್ತು ರಭಸದಿಂದ ಕೂಡಿರುವ ಸಾಧ್ಯತೆಯಿದೆ.

ಮುಂದಿನ 48 ಗಂಟೆಯಲ್ಲಿ ಭಾಗಶಃ ಮೋಡ ಕವಿದ ಆಕಾಶವಿರುತ್ತದೆ. ಸಂಜೆ/ರಾತ್ರಿ ಸಮಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಗರಿಷ್ಠ ಉಷ್ಣಾಂಶ 37 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕೊಡಗು

Wild Animals Attack: ನಿಟ್ಟೂರು ಗ್ರಾಮದಲ್ಲಿ ಹುಲಿ ದಾಳಿಗೆ ವ್ಯಕ್ತಿ ಬಲಿ; ಕನಕಗಿರಿಯಲ್ಲಿ ಕರಡಿ ದಾಳಿಗೆ ವೃದ್ಧ ಸಾವು

Wild Animals Attack: ಕಾಡು ಪ್ರಾಣಿಗಳ ದಾಳಿಯು ಜನರನ್ನು ಚಿಂತೆಗೆ ದೂಡಿದ್ದು, ಹಗಲಿರುಳು ಆತಂಕದಲ್ಲೇ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೊಡಗಿನಲ್ಲಿ ಹುಲಿ ದಾಳಿಗೆ ವ್ಯಕ್ತಿಯೋರ್ವ ಬಲಿಯಾಗಿದ್ದು, ಕೊಪ್ಪಳದಲ್ಲಿ ಕರಡಿ ದಾಳಿಯಿಂದ ವೃದ್ಧನೊಬ್ಬ ಸಾವನ್ನಪ್ಪಿದ್ದಾನೆ.

VISTARANEWS.COM


on

Man death in tiger attack in Nittur village
Koo

ಕೊಡಗು: ಹುಲಿ ದಾಳಿಗೆ (Wild Animals Attack) ವ್ಯಕ್ತಿಯೊಬ್ಬ ಬಲಿಯಾಗಿದ್ದಾನೆ. ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ನಿಟ್ಟೂರು ಗ್ರಾಮದ ರಾಜಪುರ ರಸ್ತೆ ಸಮೀಪ ಗುರುವಾರ ಸಂಜೆ ಈ ಘಟನೆ ನಡೆದಿದೆ.

ಅಸ್ಸಾಂ ಮೂಲದ ಮೊಹಿಸೂರು ರೆಹಮಾನ್ (51) ಹುಲಿ ದಾಳಿಗೆ ಬಲಿಯಾದ ವ್ಯಕ್ತಿ. ಹಸುವಿನ ಮೇಲೆ ದಾಳಿ ಮಾಡಲು ಬಂದಂತಹ ಹುಲಿ, ಅಲ್ಲೇ ಇದ್ದ ಅಸ್ಸಾಂ ಮೂಲದ ಕಾರ್ಮಿಕ ಮೊಹಿಸೂರು ರೆಹಮಾನ್ ಮೇಲೆ ಎಗರಿ ಬಲಿ ತೆಗೆದುಕೊಂಡಿದೆ.

ಇದನ್ನೂ ಓದಿ: DRDO Test: ದೇಶೀಯ ತಂತ್ರಜ್ಞಾನದ ಕ್ರೂಸ್‌ ಕ್ಷಿಪಣಿಯ ಯಶಸ್ವಿ ಪರೀಕ್ಷೆ

ಘಟನೆಯ ಕುರಿತು ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಹುಲಿಯನ್ನು ಸೆರೆಹಿಡಿಯುವಂತೆ ಒತ್ತಾಯಿಸಿದ್ದಾರೆ. ಈ ಹುಲಿ ದಾಳಿಯಿಂದ ದಕ್ಷಿಣ ಕೊಡಗಿನ ಜನತೆ ಭಯ ಭೀತರಾಗಿದ್ದು, ಒಬ್ಬೋಬ್ಬರೆ ಓಡಾಡಲು ಹಾಗೂ ಕಾಫಿ ತೋಟದಲ್ಲಿ ಕೆಲಸ ಮಾಡಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಪೊನ್ನಂಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಕನಕಗಿರಿಯಲ್ಲಿ ಕರಡಿ ದಾಳಿಗೆ ವೃದ್ಧ ಬಲಿ

ಕರಡಿ ದಾಳಿಯಿಂದ ತೀವ್ರ ಗಾಯಗೊಂಡಿದ್ದ ವೃದ್ಧನೋರ್ವ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ರಾಂಪುರ ಗ್ರಾಮದಲ್ಲಿ ಗುರುವಾರ ನಡೆದಿದೆ.

ಕರಡಿ ದಾಳಿ ಹಿನ್ನಲೆ ಘಟನಾ ಸ್ಥಳಕ್ಕೆ ಆಗಮಿಸಿದ್ದ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಸ್ಥಳೀಯರು ತೀವ್ರ ತರಾಟೆಗೆ ತೆಗೆದುಕೊಂಡರು.

ಚೆನ್ನಪ್ಪ (74) ಮೃತಪಟ್ಟ ವೃದ್ಧ. ರಾಂಪುರ ಗ್ರಾಮದ ಹೊರವಲಯದ ಕೆರೆ ಬಳಿ ಇರುವ ಆಂಜನೇಯ ದೇವಸ್ಥಾನದ ಬಳಿ ದುರ್ಘಟನೆ ನಡೆದಿದೆ.

ಘಟನೆಯ ಹಿನ್ನೆಲೆ

ದೇವಸ್ಥಾನದಲ್ಲಿದ್ದ ಕರಡಿಯನ್ನು ಗಮನಿಸಿದ್ದ ಗ್ರಾಮಸ್ಥರು ಅದನ್ನು ಕೂಡಿಹಾಕಿದ್ದರು. ಆದರೆ ಅಲ್ಲಿಂದ ತಪ್ಪಿಸಿಕೊಂಡು ಹೊರ ಬಂದ ಕರಡಿಯು ವೃದ್ಧ ಚೆನ್ನಪ್ಪನ ಮೇಲೆ ದಾಳಿ ನಡೆಸಿದ್ದು, ತೀವ್ರ ಗಾಯಗೊಂಡಿದ್ದ ವೃದ್ಧನನ್ನು ಚಿಕಿತ್ಸೆಗಾಗಿ ಕೊಪ್ಪಳ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವೃದ್ಧ ಚೆನ್ನಪ್ಪ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ: CET 2024 exam: ದಾಖಲೆ ಸಂಖ್ಯೆಯಲ್ಲಿ ಸಿಇಟಿ ಬರೆದ ವಿದ್ಯಾರ್ಥಿಗಳು; ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ

ಘಟನೆಯ ಹಿನ್ನಲೆಯಲ್ಲಿ ಸ್ಥಳಕ್ಕೆ ಆಗಮಿಸಿದ್ದ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಸ್ಥಳೀಯರು ತೀವ್ರ ತರಾಟೆಗೆ ತೆಗೆದುಕೊಂಡರು. ಕರಡಿಯನ್ನು ಸೆರೆ ಹಿಡಿಯಲು ಬೇಕಾದ ಬೋನು ಮತ್ತು ಇತರೆ ಪರಿಕರಗಳನ್ನು ತರದೇ ಹಾಗೆ ಬರೀಗೈಯ್ಯಲ್ಲಿ ಬಂದಿದ್ದ ಅಧಿಕಾರಿ, ಸಿಬ್ಬಂದಿಯನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡು, ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಕರಡಿ ಉಪಟಳವನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಕನಕಗಿರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

Continue Reading

ಮಳೆ

Karnataka Weather : ಕೊಪ್ಪಳದಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು; ಹೊತ್ತಿ ಉರಿದ ತೆಂಗಿನ ಮರ, ಧರೆಗುರುಳಿದ ಮರಗಳು, ವಿದ್ಯುತ್‌ ಕಂಬ

Karnataka Weather : ಹಲವೆಡೆ ಗುಡುಗು ಸಿಡಿಲು ಸಹಿತ (Rain News) ಭಾರಿ ಮಳೆಯಾಗಿದ್ದು, ಸಾವು-ನೋವಿಗೆ ಕಾರಣವಾಗಿದೆ. ಸಿಡಿಲು ಬಡಿದು ಕೂಲಿ ಕಾರ್ಮಿಕ ದಾರುಣವಾಗಿ ಮೃತಪಟ್ಟರೆ, ಹಲವೆಡೆ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿವೆ.

VISTARANEWS.COM


on

By

Karnataka Weather
Koo

ಕೊಪ್ಪಳ: ಉತ್ತರ ಕರ್ನಾಟಕದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಸಿಡಿಲಿಗೆ ವ್ಯಕ್ತಿಯೊಬ್ಬರು (Rain News) ಬಲಿಯಾಗಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜೂಲಕಟ್ಟಿ ಬಳಿ ಘಟನೆ (Karnataka Weather Forecast) ನಡೆದಿದೆ. ಕೊರಡಕೇರಿಯ ಅಮೋಘಸಿದ್ದಯ್ಯ ಗುರುವಿನ (32) ಮೃತ ದುರ್ದೈವಿ.

ಅಮೋಘಸಿದ್ದಯ್ಯ ಕೊರಡಕೇರಿಯಿಂದ ಜೂಲಕಟ್ಟಿಯಲ್ಲಿ ಕಟ್ಟಿಗೆ ಕಡಿಯಲು ಕೂಲಿ ಕೆಲಸಕ್ಕೆ ಹೋಗಿದ್ದರು. ಗುರುವಾರ ಮಧ್ಯಾಹ್ನ ದಿಢೀರ್‌ ಶುರುವಾದ ಮಳೆ- ಗಾಳಿ ಜತೆಗೆ ಸಿಡಿಲಿ ಬಡಿದು ಮೃತಪಟ್ಟಿದ್ದಾರೆ. ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗದಗನಲ್ಲೂ ಬಿರುಗಾಳಿ ಸಹಿತ ಮಳೆ

ಮುಂಗಾರಿಗೂ ಮುನ್ನ ಗದಗ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆ ಅಬ್ಬರ ಜೋರಾಗಿದೆ. ಬಿರುಗಾಳಿ ಮಳೆಗೆ ಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ. ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿ‌‌ನ ಪರಸಾಪೂರ ಬಳಿ ಘಟನೆ ನಡೆದಿದೆ. ರಸ್ತೆ ಮೇಲೆ ಮರ ಹಾಗೂ ವಿದ್ಯುತ್‌ ಕಂಬ ಧರೆಗುರುಳಿದ ಕಾರಣದಿಂದ ಕೆಲಕಾಲ ವಾಹನ ಸಂಚಾರದಲ್ಲಿ ಅಸ್ತವ್ಯಸ್ತವಾಗಿತ್ತು. ಸ್ಥಳೀಯರ ಸಹಾಯದಿಂದ ಕೊಂಬೆಗಳನ್ನು ತೆರವುಗೊಳಿಸಿ ಸಂಚಾರಕ್ಕೆ‌ ಅನುಕೂಲ ಮಾಡಿಕೊಡಲಾಯಿತು.

ಇದನ್ನೂ ಓದಿ: Fraud Case : ಚಿಟ್‌ ಫಂಡ್‌ ಹೆಸರಿನಲ್ಲಿ ದಂಪತಿ ಕೋಟ್ಯಂತರ ರೂ. ವಂಚನೆ; ಬೀದಿಗೆ ಬಿದ್ದರು ಚೀಟಿದಾರರು

ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

ಧಾರವಾಡದ ಕಲಘಟಗಿಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಸಿಡಿಲು ಬಡಿದು ತೆಂಗಿನ ಮರ ಹೊತ್ತಿ ಉರಿದಿದೆ. ಕಲಘಟಗಿಯ ದೇವರಕೊಂಡ ಗ್ರಾಮದಲ್ಲಿ ಘಟನೆ ನಡೆದಿದೆ. ಫಕ್ಕಿರಗೌಡ ಶಿವನಗೌಡರ ಎಂಬುವರ ಮನೆಯ ಮುಂದಿದ್ದ ತೆಂಗಿನ ಮರಕ್ಕೆ ಸಿಡಿಲು ಬಡಿದು ಧಗಧಗನೆ ಹೊತ್ತಿ ಉರಿದಿದೆ. ಅದೃಷ್ಟವಶಾತ್‌ ಸಮಯದಲ್ಲಿ ಮನೆ ಮುಂದೆ ಅಕ್ಕ-ಪಕ್ಕ ಯಾರು ಇರಲಿಲ್ಲ. ಹೀಗಾಗಿ ಯಾವುದೇ ಅಪಾಯ ಸಂಭವಿಸಿಲ್ಲ.

ಮತ್ತೊಂದೆಡೆ ಧಾರವಾಡದ ಅಣ್ಣಿಗೇರಿಯ ರಾಜರಾಜೇಶ್ವರಿ ನಗರದಲ್ಲೂ ಮನೆಯ ಪಕ್ಕದಲ್ಲಿಯೇ ಇದ್ದ ಮರಕ್ಕೆ ಸಿಡಿಲು ಬಡಿದ ಪರಿಣಾಮ ಹೊತ್ತಿ ಉರಿದಿತ್ತು. ಮರಕ್ಕೆ ಬೆಂಕಿ ಆವರಿಸುತ್ತಿದಂತೆಯೇ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವ ಕೆಲಸ ಮಾಡಿದರು.

ಧಾರವಾಡದಲ್ಲಿ ಆಲಿಕಲ್ಲು ಮಳೆ

ಧಾರವಾಡ ಜಿಲ್ಲೆಯಾದ್ಯಂತ ಆಲಿಕಲ್ಲು ಮಳೆಯಾಗಿದೆ. ನಗರದಲ್ಲಿ ಮಧ್ಯಾಹ್ನದವರೆಗೆ ಉರಿ ಬಿಸಿಲು ಇತ್ತು, ನಂತರ ಸಂಪೂರ್ಣ ಮೋಡ ಕವಿದ ವಾತಾವರಣದೊಂದಿಗೆ ಮಳೆಯು ಅಬ್ಬರಿಸಿತ್ತು. ವಿಜಯನಗರದ ನಾನಾ ಕಡೆ ಮಳೆರಾಯ ಕೃಪೆ ತೋರಿದ್ದಾನೆ. ಹರಪನಹಳ್ಳಿ ತಾಲೂಕಿನ ಕಸಬಾ ಹೋಬಳಿ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ. ಹೊಸಪೇಟೆಯ ಮರಿಯಮ್ಮನಹಳ್ಳಿ, ದೇವಲಾಪುರ ಸೇರಿದಂತೆ ನಾನಾ ಕಡೆ ಉತ್ತಮ ಮಳೆಯಾಗಿದೆ. ಹರಪನಹಳ್ಳಿ ತಾಲೂಕಿನಲ್ಲಿ ಸಿಡಿಲು ಗುಡುಗು ಗಾಳಿ ಸಹಿತ ಭಾರೀ ಮಳೆಗೆ ಮರಗಳು ಉರುಳಿದವು. ಬಿರುಗಾಳಿಗೆ ಹಾಲಸ್ವಾಮಿ ಮಠದ ಬಳಿ, ಯಲ್ಲಾಪುರ ರಸ್ತೆ ಮೇಲೆ ಮರ ನೆಲಕ್ಕೆ ಉರುಳಿ ಕೆಲ ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ತಾಲೂಕು ಪಂ. ಆವರಣದಲ್ಲಿ ಎರಡು ಮರಗಳು ಕಳಚಿ ಬಿದ್ದಿತ್ತು. ಮಂಡ್ಯದ ಮಳವಳ್ಳಿಯ ಕೆಆರ್ ಪೇಟೆಯಲ್ಲಿ ಮೊದಲ ಮಳೆಯಾಗಿದೆ. ಸಿಡಿಲು ಬಡಿದ ಪರಿಣಾಮ ಬೃಹತ್ ಕಲ್ಲೊಂದು ಕಾರಿನ ಮೇಲೆ ಬಿದ್ದು, ಜಖಂಗೊಂಡಿರುವ ಘಟನೆ ವಿಜಯಪುರ ನಗರದ ಜೆಎಂ ರಸ್ತೆಯಲ್ಲಿ ನಡೆದಿದೆ.‌ ಮಹತ್ತರ ಮಹಲ್‌ನ ಗೋಡೆಯ ಬೃಹತ್ ಕಲ್ಲು ಕಾರಿನ ಮೇಲೆ ಬಿದ್ದಿದೆ. ಇದರಿಂದ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಯಾವುದೇ ಪ್ರಾಣ ಹಾನಿಯಾಗಿಲ್ಲ. ಭಾರಿ ಮಳೆ, ಗಾಳಿಯ ವೇಳೆ ಸಿಡಿಲು ಬಡಿದು ಈ ಅವಘಡ ಆಗಿದೆ. ಗೋಳಗುಮ್ಮಟ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

ಭಾರಿ ಮಳೆ ಮುನ್ಸೂಚನೆ

ಮುಂದಿನ 3 ಗಂಟೆಗಳಲ್ಲಿ ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಬಿಜಾಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಗದಗ, ಗುಲ್ಬರ್ಗ, ಹಾವೇರಿ, ಕೊಪ್ಪಳ, ರಾಯಚೂರು, ಶಿವಮೊಗ್ಗ, ಉತ್ತರ ಕನ್ನಡದಲ್ಲಿ ಒಂದು ಅಥವಾ ಎರಡು ಕಡೆಗಳಲ್ಲಿ ಭಾರಿ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Lok Sabha Election 2024: ಕಾಂಗ್ರೆಸ್‌ ಸೇರಿದ ಕರಡಿ ಸಂಗಣ್ಣ; ಪಕ್ಷ ಸೇರ್ಪಡೆಗೆ ಲಕ್ಷ್ಮಣ ಸವದಿ ಕಾರಣ!

Lok Sabha Election 2024: ನಾನು ಕಾಂಗ್ರೆಸ್ ಸೇರಲು ಲಕ್ಷ್ಮಣ ಸವದಿ ಕಾರಣರು. ಅಂದು ಬಿಜೆಪಿ ಸೇರುವುದಕ್ಕೂ ಅವರೇ ಕಾರಣರಾಗಿದ್ದರು. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಇಬ್ಬರು ನನಗೆ ಗೊತ್ತಿರುವವರು. ಎರಡು ಜಿಲ್ಲೆಗಳ ಅಭಿವೃದ್ಧಿಗಾಗಿ ನಾನು ಪಕ್ಷ ಸೇರ್ಪಡೆ ಆಗುತ್ತಿದ್ದೇನೆ. ರಾಜಶೇಖರ ಹಿಟ್ನಾಲ್ ಅವರನ್ನು ಗೆಲ್ಲಿಸಿಕೊಂಡು ಬರುವ ಹೊಣೆಯನ್ನು ಹೊತ್ತಿದ್ದೇನೆ ಎಂದು ಹೇಳಿದ್ದಾರೆ.

VISTARANEWS.COM


on

Lok Sabha Election 2024 Karadi Sanganna joins Congress
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹೊಸ್ತಿಲಲ್ಲಿ ಸಂಸದ ಸಂಗಣ್ಣ ಕರಡಿ (Sanganna Karadi) ಅವರು ಲೋಕಸಭಾ ಸದಸ್ಯತ್ವ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಂಗಳವಾರ (ಏಪ್ರಿಲ್‌ 16) ರಾಜಿನಾಮೆ ನೀಡಿದ ಬೆನ್ನಲ್ಲೇ, ಬುಧವಾರ (ಏಪ್ರಿಲ್‌ 17) ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌ ಸಮ್ಮುಖದಲ್ಲಿ ಕಾಂಗ್ರೆಸ್‌ (Congress Karnataka) ಸೇರ್ಪಡೆಯಾಗಿದ್ದಾರೆ.

ಸಂಗಣ್ಣ ಕರಡಿ ಅವರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಅವರು ಕಾಂಗ್ರೆಸ್‌ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಸಚಿವ ಶಿವರಾಜ್ ತಂಗಡಗಿ ಸೇರಿದಂತೆ ಮುಖಂಡರಾದ ಲಕ್ಷ್ಮಣ ಸವದಿ, ಹಂಪನಗೌಡ ಬಾದರ್ಲಿ, ಬಸವಗೌಡ ತುರವಿಹಾಳ್, ರಾಘವೇಂದ್ರ ಹಿಟ್ನಲ್ ಇತರರು ಉಪಸ್ಥಿತರಿದ್ದರು.

ಬಿಜೆಪಿಯಲ್ಲಿ ಎರಡು ಬಣ: ಸಿಎಂ ಸಿದ್ದರಾಮಯ್ಯ

ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಕರಡಿ ಸಂಗಣ್ಣ ಒಟ್ಟಿಗೆ ಕೆಲಸ ಮಾಡಿದ್ದೇವೆ. ಬೇರೆ ಪಕ್ಷದಲ್ಲಿ ಅವರು ಇದ್ದರೂ ನಮ್ಮ ನಡುವೆ ಸಂಬಂಧ ಚೆನ್ನಾಗಿದೆ. ಕ್ಷೇತ್ರದಲ್ಲಿ ಜನಾನುರಾಗಿ ಆಗಿದ್ದವರು. ಇವರಿಗೆ ಯಾಕೆ ಟಿಕೆಟ್ ತಪ್ಪಿಸಿದ್ದಾರೋ ಗೊತ್ತಿಲ್ಲ. ‌ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ಸಿಎಂ ಮಾಡುವ ಸಂಬಂಧ ಹಿರಿಯರಿಗೆ ಟಿಕೆಟ್ ತಪ್ಪಿಸಿದ್ದಾರೆ. ಅಲ್ಲಿ ಯಡಿಯೂರಪ್ಪ ಮತ್ತು ಬಿ.ಎಲ್. ಸಂತೋಷ್ ಬಣಗಳಿವೆ.‌ ಸಂತೋಷ್ ಜತೆ ಇದ್ದವರಿಗೆ ಟಿಕೆಟ್ ತಪ್ಪಿಸಿದ್ದಾರೆ ಎಂದು ಹೇಳಿದರು.

ಮತ್ತೆ ಎನ್‌ಡಿಎ ಅಧಿಕಾರಕ್ಕೆ ಬರುವುದಿಲ್ಲ

ರಾಜ್ಯದಲ್ಲಿ ಬಿಜೆಪಿ ವಿರುದ್ಧ ಅಲೆ ಇದೆ. ಕಾಂಗ್ರೆಸ್ ಐದು ಗ್ಯಾರಂಟಿಗಳ ಅಲೆ ಇದೆ. ಕಾಂಗ್ರೆಸ್ ಮೇಲೆ ಜನರಿಗೆ ನಂಬಿಕೆಯಿದೆ. ದೇಶದಲ್ಲಿ ಸುಳ್ಳು ಮತ್ತು ಸತ್ಯದ ನಡುವೆ ಚುನಾವಣೆ ನಡೆಯುತ್ತಿದೆ. ರಾಜ್ಯದಲ್ಲಿ ನಾವು 20 ಸ್ಥಾನ ಗೆಲ್ಲುತ್ತೇವೆ. 2014ರಲ್ಲಿ ನರೇಂದ್ರ ಮೋದಿ ಅವರು ನೀಡಿದ್ದ ಭರವಸೆಯಲ್ಲಿ ಒಂದನ್ನೂ ಈಡೇರಿಸಿಲ್ಲ. ಧಾರ್ಮಿಕ ಮತ್ತು ಭಾವನಾತ್ಮಕ ವಿಚಾರಗಳನ್ನು ಹೇಳಿ ಯಶಸ್ವಿಯಾಗಿದ್ದರು. ಈ ಬಾರಿ ಯಾವುದೇ ಕಾರಣಕ್ಕೂ ಅದು ವರ್ಕೌಟ್ ಆಗಲ್ಲ. ಬಿಜೆಪಿ ಸರ್ವೆಯಲ್ಲಿ 200 ಸ್ಥಾನ ಗೆಲ್ಲುವುದಾಗಿ ಬಂದಿದೆ. ಯಾವುದೇ ಕಾರಣಕ್ಕೂ ಮತ್ತೆ ಎನ್‌ಡಿಎ ಅಧಿಕಾರಕ್ಕೆ ಬರುವುದಿಲ್ಲ. ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗಲ್ಲ. ಅಂಡರ್ ಕರೆಂಟ್ ಕಾಂಗ್ರೆಸ್ ಪರ ಇದೆ. ಜನ ಬಹಿರಂಗವಾಗಿ ಬಂದು ಕಾಂಗ್ರೆಸ್‌ಗೆ ಮತ ಹಾಕುತ್ತೇವೆ ಎಂದು ಹೇಳುತ್ತಿದ್ದಾರೆ.

ಸಂಗಣ್ಣ ಕರಡಿಯವರನ್ನು ರಕ್ಷಣೆ ಮಾಡುವ ಕೆಲಸ ಮಾಡುತ್ತೇವೆ. ಅವರು ನಮ್ಮ ಪಕ್ಷಕ್ಕೆ ಬಂದಿರುವುದರಿಂದ ಕೊಪ್ಪಳದಲ್ಲಿ ಶಕ್ತಿ ಬಂದಿದೆ. ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Lok Sabha Election 2024 Karadi Sanganna and Herebagewadi ex MLA Malagi joins Congress

ಬಿಜೆಪಿಯನ್ನು ಕಸ ಗುಡಿಸಿದಂತೆ ಗುಡಿಸುತ್ತಾರೆ: ಡಿಕೆಶಿ

ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ, ಸಂಗಣ್ಣ ಕರಡಿಗೆ ಬಿಜೆಪಿಯವರು ಟಿಕೆಟ್ ತಪ್ಪಿಸಿದ್ದಾರೆ. ದೇಶದಲ್ಲಿ ಬಿಜೆಪಿ ವಿರೋಧ ಅಲೆಯಿದೆ. ಗ್ಯಾರಂಟಿ ಮುಂದುವರಿಸಲ್ಲ ಅಂತಿದ್ದಾರೆ. ಈ ಗ್ಯಾರಂಟಿಗಳನ್ನು ನೀವು ಮುಟ್ಟಲು ಸಾಧ್ಯವಿಲ್ಲ. ನಿಮ್ಮ ಹಣೆಬರಹದಲ್ಲಿ ಇದು ಸಾಧ್ಯವಿಲ್ಲ ಎಂದು ಆಕ್ರೋಶ ಹೊರಹಾಕಿದರು. ನಮ್ಮ ತಾಯಂದಿರ ಬಗ್ಗೆ ನೀವು ಮಾತನಾಡಿದ್ದೀರಿ. ನಿಮಗೆ ಜನ ಬುದ್ಧಿ ಕಲಿಸುತ್ತಾರೆ. ರಾಜ್ಯದಲ್ಲಿ ಬಿಜೆಪಿಯನ್ನು ಕಸ ಗುಡಿಸಿದಂತೆ ಗುಡಿಸುತ್ತಾರೆ. ವಿಧಾನಸಭಾ ಚುನಾವಣೆಗೂ ಮುನ್ನ ಬೆಳಗಾವಿಯಲ್ಲಿ ಕಸಗುಡಿಸದಂತೆ ಗುಡಿಸಿದ್ದೇವೆ. ಈ ಬಾರಿ ಬಿಜೆಪಿಯನ್ನು ರಾಜ್ಯದಿಂದ ಗುಡಿಸುತ್ತಾರೆ ಎಂದು ಹೇಳಿದರು.

ಐದು ಬೆರಳು ಸೇರಿದರೆ ಮುಷ್ಟಿ, ಐದು ಗ್ಯಾರಂಟಿಗಳು ಸೇರಿ ಕೈ ಗಟ್ಟಿ ಮಾಡಿವೆ. ಮೊನ್ನೆ ನಾಮಪತ್ರ ಸಲ್ಲಿಕೆ ಮಾಡುವಾಗ ಸೇರಿದ ಜನರೇ ಇದಕ್ಕೆ ಸಾಕ್ಷಿ. ಯಡಿಯೂರಪ್ಪ ಮತ್ತು ವಿಜಯೇಂದ್ರ ಇಬ್ಬರಿಗೂ ನಾನು ಹೇಳುವುದೆಂದರೆ ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿ.ವೈ. ರಾಘವೇಂದ್ರ ಗೆಲ್ಲುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: Lok Sabha Election 2024: ಬಿಜೆಪಿ ಸೇರಿದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ

ಮಾಜಿ ಸಂಸದ ಸಂಗಣ್ಣ ಕರಡಿ ಮಾತನಾಡಿ, ನಾನು ಕಾಂಗ್ರೆಸ್ ಸೇರಲು ಲಕ್ಷ್ಮಣ ಸವದಿ ಕಾರಣರು. ಅಂದು ಬಿಜೆಪಿ ಸೇರುವುದಕ್ಕೂ ಅವರೇ ಕಾರಣರಾಗಿದ್ದರು. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಇಬ್ಬರು ನನಗೆ ಗೊತ್ತಿರುವವರು. ಎರಡು ಜಿಲ್ಲೆಗಳ ಅಭಿವೃದ್ಧಿಗಾಗಿ ನಾನು ಪಕ್ಷ ಸೇರ್ಪಡೆ ಆಗುತ್ತಿದ್ದೇನೆ. ರಾಜಶೇಖರ ಹಿಟ್ನಾಲ್ ಅವರನ್ನು ಗೆಲ್ಲಿಸಿಕೊಂಡು ಬರುವ ಹೊಣೆಯನ್ನು ಹೊತ್ತಿದ್ದೇನೆ ಎಂದು ಹೇಳಿದರು.

Continue Reading
Advertisement
Rain in Karnataka
ಮಳೆ6 mins ago

Weather Report: ಬೆಂಗಳೂರಿನ ಜನ ಮಳೆಗಾಗಿ ಮೇವರೆಗೆ ಕಾಯಬೇಕು!

Tumkur Lok Sabha constituency BJP candidate Somanna election campaign in various places of Koratagare
ತುಮಕೂರು11 mins ago

Lok Sabha Election 2024: ಕೇಂದ್ರಿಯ ವಿದ್ಯಾಲಯ ಸ್ಥಾಪನೆಗೆ ನನ್ನನ್ನು ಬೆಂಬಲಿಸಿ: ವಿ. ಸೋಮಣ್ಣ

Lok Sabha Election 2024
Lok Sabha Election 202414 mins ago

Lok Sabha Election 2024: ಹಕ್ಕು ಚಲಾಯಿಸಿ ಮಾದರಿಯಾದ ವಿಶ್ವದ ಅತ್ಯಂತ ಕುಬ್ಜ ಮಹಿಳೆ ಜ್ಯೋತಿ ಆಮ್ಗೆ

Yuva Movie streaming ott yuva rajkumar
ಸ್ಯಾಂಡಲ್ ವುಡ್15 mins ago

Yuva Movie: ಒಟಿಟಿಗೆ ಬಂದಾಯ್ತು ʻಯುವʼ: ಸಿನಿಮಾ ನೋಡಬಹುದು, ಆದರೆ….

IPL 2024
ಕ್ರೀಡೆ31 mins ago

MS Dhoni: ಧೋನಿ ಅಭಿಮಾನಿಗಳಿಗೆ ನಿರಾಸೆ; ಇಂದಿನ ಪಂದ್ಯಕ್ಕೆ ಅನುಮಾನ

evm vvpat verification lok sbha election 2024
Lok Sabha Election 202437 mins ago

ವಿಸ್ತಾರ explainer: VVPAT Verification: ಇವಿಎಂನಲ್ಲಿ ನಿಮ್ಮ ಮತ ದಾಖಲಾಗುವುದು ಹೇಗೆ? ವಿವಿಪ್ಯಾಟ್‌ ಕೆಲಸ ಏನು? ಇಲ್ಲಿದೆ ಸಮಗ್ರ ವಿವರ

Neha Murder case JDS slams hands for defending love jihad to protect accused
ಕರ್ನಾಟಕ37 mins ago

Neha Murder Case: ಲವ್ ಜಿಹಾದ್ ಸಮರ್ಥಿಸಿಕೊಂಡಿದ್ದ ಕೈಗಳಿಂದಲೇ ಆರೋಪಿ ರಕ್ಷಣೆಗೆ ಹೊಂಚು: ಜೆಡಿಎಸ್‌ ಕಿಡಿ

Pro Pak Slogan
ಕರ್ನಾಟಕ39 mins ago

Pro Pak Slogan: ಮೋದಿ ಹಾಡು ಬರೆದಿದ್ದಕ್ಕೆ ಯುವಕನಿಗೆ ಥಳಿತ; ಪಾಕ್‌ ಪರ ಘೋಷಣೆ ಕೂಗಲು ಒತ್ತಾಯ

lok sabha Election
ದೇಶ41 mins ago

Lok Sabha Election : ಮಣಿಪುರದ ಮತಗಟ್ಟೆಯಲ್ಲಿ ಗುಂಡಿನ ಚಕಮಕಿ; ಇಲ್ಲಿದೆ ವಿಡಿಯೊ

Neha Murder Case
ಹುಬ್ಬಳ್ಳಿ1 hour ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ1 hour ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ12 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಟ್ರೆಂಡಿಂಗ್‌