Site icon Vistara News

ಬಿ.ಎಸ್‌. ಯಡಿಯೂರಪ್ಪ ಹಾಗೂ ನಮ್ಮದು ತಂದೆ ಮಕ್ಕಳ ಸಂಬಂಧ: ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

Bommai

ಕೊಪ್ಪಳ: ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಅವರ ಜತೆಗೆ ತಮ್ಮದು ತಂದೆ ಮಕ್ಕಳ ಸಂಬಂಧ ಎಂದಿರುವ ಸಿಎಂ ಬಸವರಾಜ ಬೊಮ್ಮಾಯಿ, ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ಕಾರ್ಯಾಲಯಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಗಿಣಿಗೇರಾ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ ಸರ್ವೋಚ್ಚ ನಾಯಕರು. ಅವರನ್ನು ಮುಂದಿಟ್ಟುಕೊಂಡೇ ಎಲ್ಲ ಕಾರ್ಯಕ್ರಮ ಮಾಡುತ್ತಿದ್ದೇವೆ. ಅವರ ಆಶೀರ್ವಾದ ನಮಗಿದೆ. ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಕಾರ್ಯಕ್ರಮಕ್ಕೆ ಯಡಿಯೂರಪ್ಪ ಅವರು ಆಗಮಿಸಿದ್ದಾರೆ.

ನಮ್ಮದು ತಂದೆ ಮಕ್ಕಳ ಸಂಬಂಧ. ತಮ್ಮ ಹಾಗೂ ಯಡಿಯೂರಪ್ಪ ಅವರ ನಡುವೆ ಭಿನ್ನಾಭಿಪ್ರಾಯ ಇಲ್ಲ. ಯಾವುದೇ ಕಾರಣಕ್ಕೂ ಯಾವುದೇ ಸಂದರ್ಭದಲ್ಲಿಯೂ ಅದು ಬರುವುದಿಲ್ಲ. ನಿರೀಕ್ಷೆ ಮಾಡುವವರಿಗೆ ನಿರಾಸೆಯಾಗುತ್ತದೆ. ಯಡಿಯೂರಪ್ಪ ಅವರಿಗೆ ಯಾವುದೇ ಆಹ್ವಾನ ನೀಡಿಲ್ಲವೆಂಬ ಕಾರಣಕ್ಕೆ ಅವರು ಮುನಿಸಿಕೊಂಡಿರುವುದು ಶುದ್ಧ ಸುಳ್ಳು ಎಂದು ಸ್ಪಷ್ಟಪಡಿಸಿದರು.

ಬಿಜೆಪಿ ಮನೆಯೊಂದು ಮೂರು ಬಾಗಿಲು ಎಂಬ ಶಾಸಕ ಪ್ರಿಯಾಂಕ ಖರ್ಗೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಕಾಂಗ್ರೆಸ್ ಮನೆಗೆ ಬಾಗಿಲು, ಕಿಟಕಿ ಏನಿಲ್ಲ, ಬಟಾಬಯಲು ಎಂದರು.

ಇದನ್ನೂ ಓದಿ | ಬಿ.ಎಸ್‌. ಯಡಿಯೂರಪ್ಪ ಕೋಪ ಶಮನಗೊಳಿಸಿದ ಬಿಜೆಪಿ; ಕೊಪ್ಪಳಕ್ಕೆ ಆಗಮಿಸಲು ಕೊನೆಗೂ ಒಪ್ಪಿಗೆ

Exit mobile version