Crime News: ಹಾಡಹಗಲೇ ನಡುರಸ್ತೆಯಲ್ಲಿ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿದ ಗುಂಪು, ಗಾಯಾಳು ಚಿಂತಾಜನಕ - Vistara News

ಕೊಪ್ಪಳ

Crime News: ಹಾಡಹಗಲೇ ನಡುರಸ್ತೆಯಲ್ಲಿ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿದ ಗುಂಪು, ಗಾಯಾಳು ಚಿಂತಾಜನಕ

ಗಂಗಾವತಿ ನಗರದ ರಾಜ್ಯ ಹೆದ್ದಾರಿಯಲ್ಲಿಯೇ ಜನ ನೋಡನೋಡುತ್ತಿರುವಂತೆಯೇ ವ್ಯಕ್ತಿಯ ತಲೆ ಮೇಲೆ ಯುವಕರ ಗುಂಪು ಕಲ್ಲು ಎತ್ತಿ ಹಾಕಿ ಗಾಯಗೊಳಿಸಿದೆ. ಈ ಕೃತ್ಯ ಮೊಬೈಲ್‌ನಲ್ಲಿ ದಾಖಲಾಗಿದೆ.

VISTARANEWS.COM


on

attack on youth with stone
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಪ್ಪಳ: ಹಾಡಹಗಲೇ ನಡುರಸ್ತೆಯಲ್ಲಿ ವ್ಯಕ್ತಿಯ ಮೇಲೆ ಗುಂಪೊಂದು ಮಾರಕವಾದ ದಾಳಿ ನಡೆಸಿದ್ದು, ಆತನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲ್ಲಲು ಯತ್ನಿಸಿದೆ. ಗಾಯಾಳು ಚಿಂತಾಜನಕ ಸ್ಥಿತಿಯಲ್ಲಿದ್ದಾನೆ.

ಇದು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದ ಭಯಾನಕ ಘಟನೆ. ವ್ಯಕ್ತಿಯ ಮೇಲೆ ಗುಂಪು ಅಟ್ಯಾಕ್ ಮಾಡುವ ಭಯಾನಕ ದೃಶ್ಯ ಸಾರ್ವಜನಿಕರ ಮೊಬೈಲ್‌ನಲ್ಲೂ ಸೆರೆಯಾಗಿದೆ. ಸುಮಾರು 10ಕ್ಕೂ ಹೆಚ್ಚು ಯುವಕರ ಗುಂಪಿನಿಂದ ಮಾರುತಿ ಅಲಿಯಾಸ್ ಸಲಗ ಎನ್ನುವ ವ್ಯಕ್ತಿ ಮೇಲೆ ದಾಳಿ ನಡೆದಿದೆ.

ಗಂಗಾವತಿ ನಗರದ ರಾಜ್ಯ ಹೆದ್ದಾರಿಯಲ್ಲಿಯೇ ಮಾರುತಿಯ ತಲೆ ಮೇಲೆ ಈ ಗ್ಯಾಂಗ್‌ ಕಲ್ಲು ಎತ್ತಿ ಹಾಕಿದೆ. ಈ ಭಯಾನಕ ದೃಶ್ಯ ಕಂಡು ಗಂಗಾವತಿ ಜನತೆ ಬೆಚ್ಚಿಬಿದ್ದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆರು ಜನರನ್ನು ಗಂಗಾವತಿ ಪೊಲೀಸರು ಬಂಧಿಸಿದ್ದಾರೆ. ಇನ್ನುಳಿದವರಿಗಾಗಿ ಬಲೆ ಬೀಸಲಾಗಿದೆ. ಪೂರ್ವ ದ್ವೇಷ, ಗ್ಯಾಂಗ್‌ವಾರ್‌ ಈ ಕೃತ್ಯದ ಹಿಂದಿದೆ ಎಂದು ಶಂಕಿಸಲಾಗಿದೆ.

ಕೌಟುಂಬಿಕ ಕಲಹದಲ್ಲಿ ಪತ್ನಿಯ ಕೊಲೆ

ಚಾಮರಾಜನಗರ: ಕೌಟುಂಬಿಕ ಕಲಹದಿಂದ ಪತ್ನಿಯನ್ನು ಪತಿ ಕೊಲೆ ಮಾಡಿದ ಘಟನೆ ಚಾಮರಾಜನಗರ ತಾಲೂಕು ಕೊತ್ತಲವಾಡಿ ಗ್ರಾಮದಲ್ಲಿ ನಡೆದಿದೆ. ರತ್ನಮ್ಮ (30) ಕೊಲೆಯಾದ ಮಹಿಳೆ. ಆರೋಪಿ ಪತಿ ಮಹೇಶ್‌ನನ್ನು ಬಂಧಿಸಲಾಗಿದೆ. ಪತಿ ಪತ್ನಿಯ ನಡುವೆ ಸಣ್ಣಪುಟ್ಟ ವಿಚಾರಗಳಿಗೂ ಆಗಾಗ್ಗೆ ಜಗಳವಾಗುತ್ತಿದ್ದು, ಜಗಳ ತಾರಕಕ್ಕೇರಿ ಮಚ್ಚಿನಿಂದ ಹೊಡೆದು ಪತ್ನಿಯನ್ನು ಮಹೇಶ್‌ ಕೊಲೆ ಮಾಡಿದ್ದಾನೆ. ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೀರಿನಲ್ಲಿ ಮುಳುಗಿ ಬಾಲಕ ಸಾವು

ಮೈಸೂರು: ನದಿಯಲ್ಲಿ ಈಜಲು ಹೋಗಿ ಬಾಲಕ ಸಾವಿಗೀಡಾದ ಘಟನೆ ತಿ.ನರಸೀಪುರ ತಾಲೂಕಿನ ತಲಕಾಡಿನಲ್ಲಿ ನಡೆದಿದೆ. ತಲಕಾಡು ಗ್ರಾಮದ ದೀಕ್ಷಿತ್ (16) ಮೃತ ಬಾಲಕ.

ತಲಕಾಡಿನಲ್ಲಿ 10ನೇ ತರಗತಿ ಓದುತ್ತಿದ್ದ ದೀಕ್ಷಿತ್, ವೈಕುಂಠ ನಾರಾಯಣಸ್ವಾಮಿ ಬ್ರಹ್ಮ ರಥೋತ್ಸವ ಹಿನ್ನೆಲೆಯಲ್ಲಿ ಗೆಳೆಯರೊಂದಿಗೆ ಮಾಧವ ಮಂತ್ರಿ ಅಣೆಕಟ್ಟೆ ಬಳಿ ಸ್ನೇಹಿತರೊಂದಿಗೆ ತೆರಳಿದ್ದ. ಈ ವೇಳೆ ನದಿಯಲ್ಲಿ ಈಜಲು ಹೋಗಿ ಈಜು ಬಾರದೆ ಸಾವನ್ನಪ್ಪಿದ್ದಾನೆ. ದೀಕ್ಷಿತ್ ಮೃತ ದೇಹಕ್ಕಾಗಿ ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸಿದ್ದು, ತಡರಾತ್ರಿ ದೀಕ್ಷಿತ್ ಶವ ಪತ್ತೆಯಾಗಿದೆ. ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Crime news: ಹಳೆ ದ್ವೇಷ, ಹಾಡಹಗಲೇ ಯುವಕನ ಬರ್ಬರ ಹತ್ಯೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Lok Sabha Election 2024: ಮತ ಹಾಕಿಸಿಕೊಳ್ಳಲು ಚುನಾವಣಾಧಿಕಾರಿಗಳು ಮನೆಗೆ ಬಂದಾಗಲೇ 98ರ ವೃದ್ಧೆ ಸಾವು!

Lok Sabha Election 2024: ಪಾರ್ವತಮ್ಮ ಅವರಿಂದ ಮತ ಹಾಕಿಸಿಕೊಳ್ಳಲು ಚುನಾವಣಾ ಅಧಿಕಾರಿಗಳು ಮತಪೆಟ್ಟಿಗೆ ಸಹಿತ ಅವರ ನಿವಾಸಕ್ಕೆ ಧಾವಿಸಿದ್ದರು. ಈ ವೇಳೆ ಅಧಿಕಾರಿಗಳು ಮತ ಚಲಾವಣೆ ಮಾಡಿಸಲು ತಯಾರಿ ನಡೆಸಿಕೊಳ್ಳುತ್ತಿದ್ದರು. ಆದರೆ, ಅಷ್ಟರಲ್ಲಿ ಪಾರ್ವತಮ್ಮ ಅವರು ವಯೋಸಹಜವಾಗಿ ನಿಧನರಾಗಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ಮತ ಚಲಾವಣೆ ಮಾಡಬೇಕು ಎಂಬ ಅವರ ಕೊನೇ ಆಸೆ ಕೊನೆಗೂ ಈಡೇರಲೇ ಇಲ್ಲ.

VISTARANEWS.COM


on

Lok Sabha Election 2024 vote for better future and 98 year old woman dies when returning officer arrives at home to cast her vote
Koo

ಕೊಪ್ಪಳ: ಲೋಕಸಭಾ ಚುನಾವಣೆಯ (Lok Sabha Election 2024) ಮೊದಲ ಹಂತದ ಮತದಾನಕ್ಕೆ (First phase of polling) ಕರ್ನಾಟಕವು ಸಜ್ಜಾಗಿದೆ. ಮತದಾರರು ಸಹ ತಮ್ಮ ನೆಚ್ಚಿನ ಅಭ್ಯರ್ಥಿ, ಪಕ್ಷವನ್ನು ಆಯ್ಕೆ ಮಾಡಲು ನಿರ್ಧಾರ ಮಾಡಿದ್ದಾರೆ. ಇದೇ ರೀತಿ ಕೊಪ್ಪಳ ಜಿಲ್ಲೆಯಲ್ಲಿ ವೃದ್ಧೆಯೊಬ್ಬರು ಮತದಾನ ಮಾಡಲು ಕಾತರರಾಗಿದ್ದರು. ಈ ಸಂಬಂಧ ಮನೆಯಲ್ಲೇ ಮತದಾನ ಮಾಡಲು ನೋಂದಾಯಿಸಿಕೊಂಡಿದ್ದರು. ವಿಪರ್ಯಾಸವೆಂದರೆ ಚುನಾವಣಾಧಿಕಾರಿಗಳು ಮತ ಹಾಕಿಸಿಕೊಳ್ಳಲು ಮನೆಗೆ ಬಂದಾಗಲೇ ಅವರು ಅಸುನೀಗಿದ್ದಾರೆ.

ಕೊಪ್ಪಳ ತಾಲೂಕಿನ ಹಲಗೇರಿ ಗ್ರಾಮದ ಪಾರ್ವತಮ್ಮ ಸಜ್ಜನ (98) ಮೃತ ವೃದ್ಧೆಯಾಗಿದ್ದಾರೆ. ಇವರು ಪ್ರತಿ ಚುನಾವಣೆಗೂ ತಪ್ಪದೇ ಮತ ಚಲಾವಣೆ ಮಾಡುತ್ತಿದ್ದರು. ಈ ಬಾರಿಯೂ ಮತ ಚಲಾಯಿಸಬೇಕು ಎಂದು ಉತ್ಸಾಹವನ್ನು ತೋರಿದ್ದರು. ಇದಕ್ಕಾಗಿಯೇ ಅವರು ಮನೆಯಲ್ಲಿ ಮತದಾನ ಮಾಡಲು ನೋಂದಾಯಿಸಿಕೊಂಡಿದ್ದರು.

Lok Sabha Election 2024 98 year old woman dies when returning officer arrives at home to cast her vote

ಪಾರ್ವತಮ್ಮ ಅವರಿಂದ ಮತ ಹಾಕಿಸಿಕೊಳ್ಳಲು ಚುನಾವಣಾ ಅಧಿಕಾರಿಗಳು ಮತಪೆಟ್ಟಿಗೆ ಸಹಿತ ಅವರ ನಿವಾಸಕ್ಕೆ ಧಾವಿಸಿದ್ದರು. ಈ ವೇಳೆ ಅಧಿಕಾರಿಗಳು ಮತ ಚಲಾವಣೆ ಮಾಡಿಸಲು ತಯಾರಿ ನಡೆಸಿಕೊಳ್ಳುತ್ತಿದ್ದರು. ಆದರೆ, ಅಷ್ಟರಲ್ಲಿ ಪಾರ್ವತಮ್ಮ ಅವರು ವಯೋಸಹಜವಾಗಿ ನಿಧನರಾಗಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ಮತ ಚಲಾವಣೆ ಮಾಡಬೇಕು ಎಂಬ ಅವರ ಕೊನೇ ಆಸೆ ಕೊನೆಗೂ ಈಡೇರಲೇ ಇಲ್ಲ.

ಇವಿಎಂನಲ್ಲಿ ನಿಮ್ಮ ಮತ ದಾಖಲಾಗುವುದು ಹೇಗೆ? ವಿವಿಪ್ಯಾಟ್‌ ಕೆಲಸ ಏನು? ಇಲ್ಲಿದೆ ಸಮಗ್ರ ವಿವರ

ವಿದ್ಯುನ್ಮಾನ ಮತಯಂತ್ರಗಳ (EVM- ಇವಿಎಂ) ಕುರಿತು ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಕಾನೂನು ಹೋರಾಟದ ನಡುವೆಯೇ ಲೋಕಸಭೆ ಚುನಾವಣೆ (Lok Sabha Election 2024) ಮೊದಲ ಹಂತದ ಮತದಾನ (1st phase Voting) ನಡೆಯುತ್ತಿದೆ. ಇವಿಎಂಗಳಲ್ಲಿ ಚಲಾವಣೆಯಾದ 100% ಮತಗಳನ್ನೂ ವಿವಿಪ್ಯಾಟ್ (VVPAT) ವ್ಯವಸ್ಥೆಯ ಮೂಲಕ ಪರಿಶೀಲಿಸುವ ವ್ಯವಸ್ಥೆ ಜಾರಿ ಮಾಡಬೇಕು (VVPAT Verification) ಎಂದು ಅರ್ಜಿದಾರರು ಕೋರಿದ್ದಾರೆ. ಈ ಸಂದರ್ಭದಲ್ಲಿ, ಇವಿಎಂ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ, ವಿವಿಪ್ಯಾಟ್‌ ಮೂಲಕ ಅದರ ಪರಿಶೀಲನೆ ಹೇಗೆ, ಎಂಬುದನ್ನು ವಿವರವಾಗಿ ತಿಳಿಯೋಣ.

ಕೋರ್ಟ್‌ನಲ್ಲಿ ನಡೆಸದ ವಾದವಿವಾದಗಳ ಸಮಯದಲ್ಲಿ, ಬ್ಯಾಲೆಟ್ ವೋಟಿಂಗ್ ಸಿಸ್ಟಮ್‌ಗೆ ಹಿಂತಿರುಗಲು ಸಲಹೆಗಳು ಬಂದಿವೆ. ಅರ್ಜಿದಾರರು ಯುರೋಪಿಯನ್ ರಾಷ್ಟ್ರಗಳ ಉದಾಹರಣೆ ತೋರಿಸಿದ್ದಾರೆ. ಆದರೆ, “ಪಶ್ಚಿಮ ಬಂಗಾಳದ ಜನಸಂಖ್ಯೆಯೇ ಜರ್ಮನಿಗಿಂತ ಹೆಚ್ಚಿರುವುದನ್ನು ಗಮನಿಸಿ. ಇಂತಹ ಹೋಲಿಕೆಗಳನ್ನು ಮಾಡಬೇಡಿ” ಎಂದು ನ್ಯಾಯಾಲಯವು ಅರ್ಜಿದಾರರಿಗೆ ಹೇಳಿದೆ. ನಿನ್ನೆ, ಭಾರತೀಯ ಚುನಾವಣಾ ಆಯೋಗದ ವಕೀಲರು ಇವಿಎಂ ವ್ಯವಸ್ಥೆಯು ಹೇಗೆ ಕಾರ್ಯನಿರ್ವಹಿಸುತ್ತದೆ ಮತ್ತು ಯಾವುದೇ ರೀತಿಯ ಟ್ಯಾಂಪರಿಂಗ್ ವಿರುದ್ಧ ಹೇಗೆ ದೋಷರಹಿತವಾಗಿದೆ ಎಂಬುದನ್ನು ವಿವರಿಸಿದರು.

ಇವಿಎಂ ಕೆಲಸ ಮಾಡುವುದು ಹೇಗೆ?

EVM ಎರಡು ಘಟಕಗಳನ್ನು ಹೊಂದಿದೆ- ನಿಯಂತ್ರಣ ಘಟಕ ಮತ್ತು ಮತದಾನ ಘಟಕ. ಇವುಗಳನ್ನು ಕೇಬಲ್ ಮೂಲಕ ಸಂಪರ್ಕಿಸಲಾಗಿದೆ. ಇವಿಎಂ ನಿಯಂತ್ರಣ ಘಟಕವು ಪೋಲಿಂಗ್ ಆಫೀಸರ್‌ ಬಳಿ ಇರುತ್ತದೆ. ಮತಯಂತ್ರ ಸಾಮಾನ್ಯವಾಗಿ ಮತದಾರನ ಖಾಸಗಿತನಕ್ಕಾಗಿ ಮುಚ್ಚಿದ ಆವರಣದೊಳಗೆ ಇರುತ್ತದೆ.

ಮತಗಟ್ಟೆಯಲ್ಲಿ, ಮತಗಟ್ಟೆ ಅಧಿಕಾರಿಯು ನಿಮ್ಮ ಗುರುತನ್ನು ಪರಿಶೀಲಿಸುತ್ತಾರೆ. ನಂತರ ನೀವು ಮತ ​​ಚಲಾಯಿಸಲು ಅನುವು ಮಾಡಿಕೊಡುವ ಬ್ಯಾಲೆಟ್ ಬಟನ್ ಅನ್ನು ಒತ್ತುತ್ತಾರೆ. ಬ್ಯಾಲೆಟ್ ಯೂನಿಟ್‌ನಲ್ಲಿ ಅಭ್ಯರ್ಥಿಗಳ ಹೆಸರುಗಳು ಮತ್ತು ಚಿಹ್ನೆಗಳು ಅವುಗಳ ಪಕ್ಕದಲ್ಲಿ ನೀಲಿ ಬಟನ್‌ಗಳಿರುತ್ತವೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತಬೇಕು.

ಮತದಾನ ಪ್ರಕ್ರಿಯೆ

ಮತಗಟ್ಟೆ ಅಧಿಕಾರಿಯ ನಿಯಂತ್ರಣ ಘಟಕವು ಬಹು ಬಟನ್‌ಗಳನ್ನು ಹೊಂದಿದೆ. ಅವುಗಳಲ್ಲಿ ಒಂದು ʼballot’ ಎಂಬ ಶೀರ್ಷಿಕೆಯಿದು. ಒಮ್ಮೆ ಅಧಿಕಾರಿಯು ಈ ಗುಂಡಿಯನ್ನು ಒತ್ತಿದರೆ, ʼಬ್ಯುಸಿ’ ಎಂಬ ಶೀರ್ಷಿಕೆಯ ಕೆಂಪು ದೀಪವು ಬೆಳಗುತ್ತದೆ. ಒಂದು ಮತವನ್ನು ದಾಖಲಿಸಲು ನಿಯಂತ್ರಣ ಘಟಕ ಸಿದ್ಧವಾಗಿದೆ ಎಂದು ಇದು ಸೂಚಿಸುತ್ತದೆ. ಮತದಾರ ಇರುವ ಬ್ಯಾಲೆಟ್ ಯೂನಿಟ್‌ನಲ್ಲಿ ಹಸಿರು ದೀಪ ಆನ್ ಆಗಿದ್ದು, ಮತದಾನಕ್ಕೆ ಯಂತ್ರ ಸಿದ್ಧವಾಗಿದೆ ಎಂದು ಸಂಕೇತಿಸುತ್ತದೆ. ನಂತರ ಮತದಾರನು ತನ್ನ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತುತ್ತಾನೆ. ಬ್ಯಾಲೆಟ್ ಯೂನಿಟ್ ದೃಷ್ಟಿಹೀನ ಮತದಾರರಿಗೆ ಬ್ರೈಲ್ ಲಿಪಿಯನ್ನು ಸಹ ಹೊಂದಿದೆ.

ಮತದಾರರು ಮತದಾನ ಮಾಡಿದ ನಂತರ, ನಿಯಂತ್ರಣ ಘಟಕವು ಬೀಪ್ ಧ್ವನಿಯನ್ನು ಹೊರಸೂಸುತ್ತದೆ. ಇದು ಮತದಾನ ಪೂರ್ಣಗೊಂಡಿದೆ ಎಂದು ಸೂಚಿಸುತ್ತದೆ. ನಿಯಂತ್ರಣ ಘಟಕವು ಎಲ್‌ಇಡಿ ಪರದೆ ಮತ್ತು ಬಟನ್‌ಗಳನ್ನು ಹೊಂದಿದ್ದು, ಅದರಲ್ಲಿ ದಾಖಲಾಗಿರುವ ಒಟ್ಟು ಮತಗಳ ಸಂಖ್ಯೆಯನ್ನು ನೋಡಲು ಬಳಸಬಹುದು. ಎಲ್ಲಾ ಮತಗಳು ದಾಖಲಾದ ನಂತರ, ಮತಗಟ್ಟೆ ಅಧಿಕಾರಿಯು ನಿಯಂತ್ರಣ ಘಟಕದ ಬದಿಯಲ್ಲಿರುವ ಗುಂಡಿಯನ್ನು ಒತ್ತಿ, ಯಂತ್ರವನ್ನು ಮುಚ್ಚುತ್ತಾರೆ. ಎಣಿಕೆಯ ದಿನದಂದು, ಪ್ರತಿ ಅಭ್ಯರ್ಥಿ ಪಡೆದ ಒಟ್ಟು ಮತಗಳನ್ನು ನೋಡಲು ʼresult’ ಶೀರ್ಷಿಕೆಯ ಬಟನ್ ಅನ್ನು ಬಳಸಲಾಗುತ್ತದೆ. ನಿಯಂತ್ರಣ ಘಟಕದಿಂದ ಎಲ್ಲಾ ಡೇಟಾವನ್ನು ಅಳಿಸಲು ಬಳಸಬಹುದಾದ ʼclear’ ಬಟನ್ ಕೂಡ ಇದೆ.

VVPAT ಎಂದರೇನು?

VVPAT ಎಂದರೆ ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್. ಮತವನ್ನು ಸರಿಯಾಗಿ ಚಲಾಯಿಸಲಾಗಿದೆಯೇ ಮತ್ತು ಮತದಾರ ಚಲಾಯಿಸಿದ ಅಭ್ಯರ್ಥಿಗೇ ಆ ಮತ ಹೋಗಿದೆಯೇ ಎಂದು ನೋಡಲು ಅವಕಾಶವಿರುವ ಯಂತ್ರ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒಮ್ಮೆ ಒತ್ತಿದರೆ, ಕಂಟ್ರೋಲ್ ಯೂನಿಟ್ ಮತ್ತು ಬ್ಯಾಲೆಟ್ ಯೂನಿಟ್‌ಗೆ ಸಂಪರ್ಕಗೊಂಡಿರುವ VVPAT, ಏಳು ಸೆಕೆಂಡುಗಳ ಕಾಲ ಮತದಾರರಿಗೆ ಗೋಚರಿಸುವ ಕಾಗದದ ಸ್ಲಿಪ್ ಅನ್ನು ಉತ್ಪಾದಿಸುತ್ತದೆ. ಅದರ ನಂತರ, ಪೇಪರ್ ಸ್ಲಿಪ್ VVPAT ಯಂತ್ರದಲ್ಲಿರುವ ಡ್ರಾಪ್ ಬಾಕ್ಸ್‌ಗೆ ಬೀಳುತ್ತದೆ.

ಪ್ರಸ್ತುತ, ಪ್ರತಿ ಅಸೆಂಬ್ಲಿ ವಿಭಾಗದಲ್ಲಿಯೂ 5 ವಿವಿಪ್ಯಾಟ್ ಯಂತ್ರಗಳಲ್ಲಿ ದಾಖಲಾದ ಮತಗಳನ್ನು ಇವಿಎಂಗಳೊಂದಿಗೆ ಕ್ರಾಸ್-ಚೆಕ್ ಮಾಡಲಾಗುತ್ತದೆ. 100 ಶೇಕಡ ಇವಿಎಂಗಳಲ್ಲಿ ದಾಖಲಾದ ಮತಗಳೊಂದಿಗೆ ವಿವಿಪ್ಯಾಟ್ ಸ್ಲಿಪ್‌ಗಳನ್ನು ಕ್ರಾಸ್ ಚೆಕ್ ಮಾಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು ಬಯಸಿವೆ. ವಿವಿಪ್ಯಾಟ್‌ನಲ್ಲಿ ಏಳು ಸೆಕೆಂಡ್ ಲೈಟ್ ಆನ್ ಆಗಿದ್ದು, ಮತದಾರರು ತಮ್ಮ ಮತವನ್ನು ಸರಿಯಾಗಿ ದಾಖಲಿಸಲಾಗಿದೆಯೇ ಎಂದು ಪರಿಶೀಲಿಸಬಹುದು ಎಂದು ಅರ್ಜಿದಾರರು ಕೋರಿದ್ದಾರೆ. ಪೇಪರ್ ಸ್ಲಿಪ್ ಅನ್ನು ಮತದಾರರಿಗೆ ನೀಡುವುದು ಮತ್ತೊಂದು ಸಲಹೆಯಾಗಿದೆ. ಚುನಾವಣಾ ಆಯೋಗ ಇದನ್ನು ವಿರೋಧಿಸಿದೆ. ಇದು ಮತದಾನದ ಗೌಪ್ಯತೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ದುರ್ಬಳಕೆಯಾಗಬಹುದು ಎಂದು ಹೇಳಿದೆ.

ಇದನ್ನೂ ಓದಿ: Gold Rate Today: ಬಂಗಾರದ ಮಾರುಕಟ್ಟೆಯಲ್ಲಿ ದರ ಇಂದು ತುಸು ಇಳಿಕೆ; 24Kಗೆ ಎಷ್ಟಿದೆ ನೋಡಿ

ಸಮಯ ಉಳಿಕೆ

ಚುನಾವಣಾ ಆಯೋಗದ ಪ್ರಕಾರ ಇವಿಎಂ ವ್ಯವಸ್ಥೆ ಫೂಲ್ ಪ್ರೂಫ್ ಆಗಿದೆ. ಇದು ಮತ ಎಣಿಕೆ ಸಮಯವನ್ನು ಉಳಿಸುತ್ತದೆ, ಟ್ಯಾಂಪರ್ ಪ್ರೂಫ್ ಮತ್ತು ಬಳಕೆದಾರ ಸ್ನೇಹಿಯಾಗಿದೆ ಎಂದು ಚುನಾವಣಾ ಸಂಸ್ಥೆ ಹೇಳಿದೆ. ಇವಿಎಂಗಳು ಹಗುರವಾಗಿವೆ ಮತ್ತು ಸದೃಢವಾಗಿವೆ- ಮತಗಟ್ಟೆ ಅಧಿಕಾರಿಗಳು ದೂರದ ಕುಗ್ರಾಮಗಳು, ಗುಡ್ಡಗಾಡು ಪ್ರದೇಶಗಳನ್ನು ತಲುಪಲು ಟ್ರೆಕ್ಕಿಂಗ್‌ ಮಾಡಬೇಕಾದ ದೇಶದಲ್ಲಿ ಇದು ನಿರ್ಣಾಯಕವಾಗಿದೆ.

ಎಲ್ಲರ ಸಮ್ಮುಖದಲ್ಲಿ ಪರಿಶೀಲನೆ

ಇವಿಎಂಗಳಿಗೆ ವಿದ್ಯುತ್ ಅಗತ್ಯವಿಲ್ಲ ಮತ್ತು ಬ್ಯಾಟರಿ/ಪವರ್ ಪ್ಯಾಕ್‌ ಇದರೊಂದಿಗೆ ಬರುತ್ತದೆ. ಸ್ಥಿರವಾದ ವಿದ್ಯುತ್ ಸರಬರಾಜನ್ನು ಹೊಂದಿರದ ಪ್ರದೇಶಗಳಲ್ಲಿ ಮತದಾನವನ್ನು ಸಕ್ರಿಯಗೊಳಿಸಲು ಇದು ಮತ್ತೊಂದು ನಿರ್ಣಾಯಕ ವೈಶಿಷ್ಟ್ಯ. ಪ್ರತಿ ಚುನಾವಣೆಗೂ ಮುನ್ನ ಇವಿಎಂ ಮತ್ತು ವಿವಿಪ್ಯಾಟ್‌ಗಳ ಮೊದಲ ಹಂತದ ತಪಾಸಣೆ (ಎಫ್‌ಎಲ್‌ಸಿ) ನಡೆಸಲಾಗುತ್ತದೆ. ಈ ಪರಿಶೀಲನೆಯ ಸಮಯದಲ್ಲಿ, ಇವಿಎಂಗಳಲ್ಲಿನ ಡೇಟಾವನ್ನು ಅಳಿಸಲಾಗುತ್ತದೆ ಮತ್ತು ವಿವಿಧ ಘಟಕಗಳ ಕಾರ್ಯವನ್ನು ಪ್ರದರ್ಶಿಸಲಾಗುತ್ತದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಈ ಪರಿಶೀಲನೆ ನಡೆಸಲಾಗುತ್ತದೆ.

Continue Reading

ಕರ್ನಾಟಕ

Karnataka Weather: ಇಂದು ಮೈಸೂರು, ಕೊಡಗು ಸೇರಿ ವಿವಿಧೆಡೆ ಮಳೆ; ಮುಂದಿನ 5 ದಿನ ತಾಪಮಾನದಲ್ಲಿ ಭಾರಿ ಏರಿಕೆ!

Karnataka Weather: ಏ.26ರಿಂದ ಮೇ 1ರವರೆಗೆ ರಾಜ್ಯದಾದ್ಯಂತ ರಣ ಬಿಸಿಲಿನ ಹಿನ್ನೆಲೆ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.

VISTARANEWS.COM


on

Karnataka Weather
Koo

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ 25ರಂದು ಬೆಳಗಾವಿ, ಕೊಪ್ಪಳ, ವಿಜಯಪುರ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.‌

ಕಳೆದ ಒಂದು ವಾರದಿಂದ ರಾಜ್ಯದ ವಿವಿಧೆಡೆ ಅಬ್ಬರಿಸಿದ್ದ ವರುಣ ಇನ್ನೊಂದು ವಾರ ಕೊಂಚ ಬಿಡುವು ಪಡೆಯಲಿದ್ದಾನೆ. ಏ.26ರಿಂದ ಮೇ 1ರವರೆಗೆ ರಾಜ್ಯದಾದ್ಯಂತ ರಣ ಬಿಸಿಲಿನ ಹಿನ್ನೆಲೆ ಒಣಹವೆ ಇರುವ ಸಾಧ್ಯತೆ ಇದ್ದು, ಮುಂದಿನ 4 ದಿನ ಶಾಖದ ಅಲೆಯ ತೀವ್ರತೆ ಹೆಚ್ಚಾಗಲಿದೆ.

ಶಾಖದ ಅಲೆಯ ಎಚ್ಚರಿಕೆ

ಏ.24ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ ಮತ್ತು ತುಮಕೂರು ಜಿಲ್ಲೆಗಳಲ್ಲಿ ಶಾಖದ ಅಲೆ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ.

ಏ.25ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ.

ಏ.26ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ.

ಏ.27ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ.

ಏ.28ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಾಪಮಾನದ ಮುನ್ಸೂಚನೆ

ಏಪ್ರಿಲ್ 24 ರಿಂದ 28 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.

ಇನ್ನು ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಅಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37° C ಮತ್ತು 23 °C ಇರುವ ಸಾಧ್ಯತೆ ಇದೆ.

Continue Reading

ಕರ್ನಾಟಕ

Karnataka Weather: ನಾಳೆ ಬೆಳಗಾವಿ, ಕೊಪ್ಪಳ ಸೇರಿ ವಿವಿಧೆಡೆ ಮಳೆ; ಮುಂದಿನ 4 ದಿನ ಶಾಖದ ಅಲೆ ತೀವ್ರತೆ ಹೆಚ್ಚಳ!

Karnataka Weather: ರಾಜ್ಯದಲ್ಲಿ ಏಪ್ರಿಲ್ 28 ರವರೆಗೆ ಶಾಖದ ಅಲೆ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.‌ ಹೀಗಾಗಿ ಜನರು ಎಚ್ಚರಿಕೆಯಿಂದ ಇರಬೇಕು.

VISTARANEWS.COM


on

Karnataka Weather
Koo

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ 25ರಂದು ಬೆಳಗಾವಿ, ಕೊಪ್ಪಳ, ವಿಜಯಪುರ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಇನ್ನು ಏಪ್ರಿಲ್ 28 ರವರೆಗೆ ಶಾಖದ ಅಲೆ (Heat wave) ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.‌

ಇಂದು (ಏ.24) ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗು ಸಂಭವಿಸುವ ಸಾಧ್ಯತೆಯಿದೆ. ಏ.26ರಿಂದ ಮೇ 1ರವರೆಗೆ ರಾಜ್ಯದಾದ್ಯಂತ ರಣ ಬಿಸಿಲಿನ ಹಿನ್ನೆಲೆ ಒಣಹವೆ ಇರುವ ಸಾಧ್ಯತೆ ಇದ್ದು, ಮುಂದಿನ 4 ದಿನ ಶಾಖದ ಅಲೆಯ ತೀವ್ರತೆ ಹೆಚ್ಚಾಗಲಿದೆ ಎಂದು ಇಲಾಖೆ ತಿಳಿಸಿದೆ.

ಇದನ್ನೂ ಓದಿ | Char Dham Yatra 2024: ಈ ಬೇಸಿಗೆಯಲ್ಲಿ ಚಾರ್ ಧಾಮ್ ಯಾತ್ರೆಗೆ ಸಿದ್ಧರಾಗಿ! ನೋಂದಣಿ ಮಾಹಿತಿ ಇಲ್ಲಿದೆ

ಶಾಖದ ಅಲೆಯ ಎಚ್ಚರಿಕೆ

ಏ.24ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ ಮತ್ತು ತುಮಕೂರು ಜಿಲ್ಲೆಗಳಲ್ಲಿ ಶಾಖದ ಅಲೆ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ.

ಏ.25ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ.

ಏ.26ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ.

ಏ.27ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ.

ಏ.28ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಾಪಮಾನದ ಮುನ್ಸೂಚನೆ

ಏಪ್ರಿಲ್ 24 ರಿಂದ 28 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ | Karnataka Weather : ಸುಳಿಗಾಳಿ ಪ್ರಭಾವ; ರಭಸ ಗಾಳಿಯೊಂದಿಗೆ ಗುಡುಗು ಸಹಿತ ಮಳೆ ಎಚ್ಚರಿಕೆ

ಇನ್ನು ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಅಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37° C ಮತ್ತು 23 °C ಇರುವ ಸಾಧ್ಯತೆ ಇದೆ.

ಕೊಡಗಿನಲ್ಲಿ ಮನೆ ಮೇಲೆ ಮರ ಬಿದ್ದು ಮಹಿಳೆಗೆ ಗಾಯ

ಕೊಡಗು: ರಾಜ್ಯದಲ್ಲಿ ಬುಧವಾರ ಬೆಳಗ್ಗೆ ಬೆಳಗಾವಿ ಜಿಲ್ಲೆಯ ಸಂಕೇಶ್ವರ ಹಾಗೂ ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ಮಳೆ ಸುರಿದಿದೆ. ಇನ್ನು ಮಂಗಳವಾರ ಸಂಜೆ ಸುರಿದ ಬಿರುಗಾಳಿ ಸಹಿತ ಮಳೆಯು ಕೊಡಗಿನಲ್ಲಿ ಅವಾಂತರ ಸೃಷ್ಟಿಸಿದ್ದು, ಮನೆಯ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ.

ಪೊನ್ನಂಪೇಟೆ ತಾಲೂಕಿನ ಕಾರೆಕಂಡಿ ಹಾಡಿಯಲ್ಲಿ ಘಟನೆ ನಡೆದಿದೆ. ಗಾಳಿ ಮಳೆಗೆ ಮನೆಯ ಮೇಲೆ ಬೃಹತ್ ಮರ ಬಿದ್ದಿದ್ದರಿಂದ ಸೋಮ ಎಂಬುವವರ ಪತ್ನಿ ಭೋಜಮ್ಮ ಗಾಯಗೊಂಡಿದ್ದು, ಮನೆ ಬಳಿ ನಿಲ್ಲಿಸಿದ್ದ ಕಾರು, ಸ್ಕೂಟಿ, ಆಟೋರಿಕ್ಷಾ ಜಖಂಗೊಂಡಿವೆ. ಸ್ಥಳಕ್ಕೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಗಾಯಗೊಂಡ ಮಹಿಳೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

Continue Reading

ಕೊಪ್ಪಳ

Neha Murder Case: ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಗಂಗಾವತಿ ಬಂದ್; ಉತ್ತಮ ಪ್ರತಿಕ್ರಿಯೆ

Neha Murder Case: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್‌ ಹತೈ ಖಂಡಿಸಿ, ಗಂಗಾವತಿಯ ಸಾರ್ವಜನಿಕ ಹಿತರಕ್ಷಣಾ ವೇದಿಕೆ ಬುಧವಾರ ಕರೆ ನೀಡಿದ್ದ ಗಂಗಾವತಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

VISTARANEWS.COM


on

Condemns Neha murder case Gangavathi bandh
Koo

ಗಂಗಾವತಿ: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್‌ ಹತ್ಯೆ (Neha Murder Case) ಖಂಡಿಸಿ, ಇಲ್ಲಿನ ಸಾರ್ವಜನಿಕ ಹಿತರಕ್ಷಣಾ ವೇದಿಕೆ ಬುಧವಾರ ಕರೆ ನೀಡಿದ್ದ ಗಂಗಾವತಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ನಗರದ ಪ್ರಮುಖ ವೃತ್ತ, ರಸ್ತೆಗಳಲ್ಲಿರುವ ಅಂಗಡಿ-ಮುಂಗಟ್ಟುಗಳನ್ನು ಸ್ವಯಂ ಪ್ರೇರಣೆಯಿಂದ ಬಂದ್ ಮಾಡಿದ ವ್ಯಾಪಾರಿಗಳು ಬಂದ್‌ಗೆ ಸಹಕಾರ ನೀಡಿದರು. ಅತ್ಯವಶ್ಯಕ ಸೇವೆಗಳಾದ ಹಾಲಿನ ಕೇಂದ್ರ, ಆರೋಗ್ಯ ಸೇವೆ, ಮೆಡಿಕಲ್ ಶಾಪ್, ತರಕಾರಿ ಅಂಗಡಿಗಳು ಎಂದಿನಂತೆ ಕಾರ್ಯನಿರ್ವಹಿಸಿದವು.

ಬಂದ್ ಕರೆ ನೀಡಿದ್ದ ಸಂಘಟನೆಯವರು, ಸಾರ್ವಜನಿಕ ಹಿತದೃಷ್ಟಿಯಿಂದ ಸಂಚಾರಕ್ಕೆ ಅಡ್ಡಿಪಡಿಸದ ಹಿನ್ನೆಲೆ ಜನರ ಓಡಾಟ ಸಹಜವಾಗಿತ್ತು.

ಇದನ್ನೂ ಓದಿ: Summer Tour: ಬೇಸಿಗೆ ಪ್ರವಾಸಕ್ಕೆ ಸೂಕ್ತ ಈ 5 ಅದ್ಭುತ ಗಿರಿಧಾಮಗಳು!

ನಗರದ ಪ್ರಮುಖ ವೃತ್ತ, ರಸ್ತೆಗಳಲ್ಲಿ ಬಹುತೇಕ ಅಂಗಡಿ-ಮುಂಗಟ್ಟು ಬಂದ್ ಆಗಿದ್ದವು. ಬಂದ್ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಬಳ್ಳಾರಿ ವಲಯದ ಐಜಿಪಿ ಆರ್.ಎಸ್. ಲೋಕೇಶ್‌ ಕುಮಾರ್, ಎಸ್ಪಿ ಯಶೋಧಾ ವಂಟೆಗೋಡೆ ಸ್ಥಳದಲ್ಲಿ ಬಿಡಾರ ಹೂಡಿದ್ದರು.

ಬೃಹತ್ ಮೆರವಣಿಗೆ

ಇದಕ್ಕೂ ಮೊದಲು ವಿದ್ಯಾರ್ಥಿನಿ ನೇಹಾ ಹಿರೇಮಠ್‌ ಹತ್ಯೆ ಖಂಡಿಸಿ, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ, ಸಾರ್ವಜನಿಕ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ಎಪಿಎಂಸಿಯ ಮೊದಲ ಗೇಟ್‌ನಿಂದ ಮಹಾತ್ಮಗಾಂಧಿ ವೃತ್ತದವರೆಗೆ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು.

ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಕನ್ನಡಪರ ಸಂಘಟನೆ, ವಿವಿಧ ಪಕ್ಷಗಳ ಮುಖಂಡರು, ಮಹಿಳಾ ಸಂಘಟನೆಗಳು, ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಇದನ್ನೂ ಓದಿ: Namma Metro: ಏಪ್ರಿಲ್‌ 26ರಂದು ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ತಡರಾತ್ರಿವರೆಗೂ ಸೇವೆ ವಿಸ್ತರಣೆ

ಈ ಸಂದರ್ಭದಲ್ಲಿ ಮಾಜಿ ಸಂಸದ ಎಸ್. ಶಿವರಾಮಗೌಡ, ಮಾಜಿ ಶಾಸಕರಾದ ಪರಣ್ಣ ಮುನವಳ್ಳಿ, ಜಿ. ವೀರಪ್ಪ, ಕಾಡಾದ ಮಾಜಿ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ರಾಘವೇಂದ್ರ ಶೆಟ್ಟಿ, ಶಂಕರೇಗೌಡ ಹೊಸಳ್ಳಿ, ಅಶ್ವಿನಿ ದೇಸಾಯಿ, ಮನೋಹರಸ್ವಾಮಿ, ಕವಿತಾ ಗುರುಮೂರ್ತಿ ಸೇರಿದಂತೆ ನಾನಾ ಸಮಾಜದ ಮುಖಂಡರು ಭಾಗಿಯಾಗಿದ್ದರು.

Continue Reading
Advertisement
World Malaria Day
ಆರೋಗ್ಯ37 mins ago

World Malaria Day: ಮಲೇರಿಯಾ ಮತ್ತು ಡೆಂಗ್ಯು ನಡುವಿನ ವ್ಯತ್ಯಾಸ ಏನು? ಗುರುತಿಸುವುದು ಹೇಗೆ?

supreme court wealth redistribution
ಪ್ರಮುಖ ಸುದ್ದಿ43 mins ago

ವಿಸ್ತಾರ Explainer: Wealth redistribution: ನಿಮ್ಮ ಆಸ್ತಿಯನ್ನು ಸರ್ಕಾರ ವಶಪಡಿಸಿಕೊಳ್ಳಬಹುದಾ? ಸುಪ್ರೀಂ ಕೋರ್ಟ್ ಮುಂದಿದೆ ಕೇಸ್‌

Lok Sabha Election 2024 BJP rejects Sam Pitroda statement
Lok Sabha Election 202446 mins ago

Lok Sabha Election 2024: ಕಾಂಗ್ರೆಸ್‌ಗೆ ಅಧಿಕಾರ ಸಿಕ್ಕರೆ ಪಿತ್ರಾರ್ಜಿತ ಆಸ್ತಿಯಲ್ಲಿ ಸರ್ಕಾರಕ್ಕೆ ಪಾಲು; ‘ಕೈ’ಗೆ ಇಕ್ಕಟ್ಟು, ಬಿಜೆಪಿಗೆ ಅಸ್ತ್ರ

Anant-Radhika wedding
ವಾಣಿಜ್ಯ51 mins ago

Anant- Radhika  wedding: 1,500 ಕೋಟಿ ರೂ. ದಾಟಲಿದೆ ಅಂಬಾನಿ ಮಗನ ಮದುವೆ ಖರ್ಚು!

Ballari Lok Sabha constituency Congress candidate e Tukaram election campaign at apmc market
ಬಳ್ಳಾರಿ57 mins ago

Lok Sabha Election 2024: ತಾಯಿ ನಾನು ನಿಮ್ಮ ಮಗನಂತೆ, ಮತ ನೀಡಿ ಗೆಲ್ಲಿಸಿ ಎಂದ ಈ. ತುಕಾರಾಂ

Rahul Gandhi
ದೇಶ1 hour ago

Rahul Gandhi: ಅಮೇಥಿಯಲ್ಲಿ ರಾಹುಲ್‌ ಗಾಂಧಿ ಸ್ಪರ್ಧೆ ಖಚಿತ; ಸ್ಮೃತಿ ಇರಾನಿಗೆ ಕೈ ನಾಯಕ ಸವಾಲು!

DC vs GT
ಕ್ರೀಡೆ1 hour ago

DC vs GT: ಕೊಹ್ಲಿಯಂತೆ ಅದ್ಭುತ ಫೀಲ್ಡಿಂಗ್​ ನಡೆಸಿ ಡೆಲ್ಲಿಗೆ ಗೆಲುವು ತಂದ ಟ್ರಿಸ್ಟಾನ್ ಸ್ಟಬ್ಸ್

Heeramandi Premiere Farida Jalal rare public appearance
ಬಾಲಿವುಡ್1 hour ago

Heeramandi Premiere: ʻಹೀರಾಮಂಡಿʼ ಪ್ರೀಮಿಯರ್‌ನಲ್ಲಿ ಅಪರೂಪವಾಗಿ ಕಂಡ ʻಕಭಿ ಖುಷಿ ಕಭಿ ಗಮ್ʼ ಸಿನಿಮಾ ನಟಿ!

Murder case In davanagere
ದಾವಣಗೆರೆ1 hour ago

Murder Case : ಮನೆ ಹಾಳು ಮಾಡಿದ ಕುಡಿತ; ತಾಯಿ ಸಾವಿಗೆ, ತಂದೆಯ ಕೊಂದ ಮಗ!

Election Commission
ದೇಶ2 hours ago

ನೀತಿ ಸಂಹಿತೆ ಉಲ್ಲಂಘನೆ; ಮೋದಿ, ರಾಹುಲ್‌ ಗಾಂಧಿ ಪ್ರತಿಕ್ರಿಯೆ ಕೇಳಿದ ಚುನಾವಣೆ ಆಯೋಗ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder case CID Officer
ಹುಬ್ಬಳ್ಳಿ2 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20244 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

ಟ್ರೆಂಡಿಂಗ್‌