ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ದೇವದಾಸಿ ಪದ್ಧತಿ ಇನ್ನೂ ಜೀವಂತವಾಗಿದ್ದು, ಯುವತಿಗೆ ಮುತ್ತು ಕಟ್ಟಿಸಿದ ಪ್ರಕರಣ ಬೆಳಕಿಗೆ ಬಂದಿದೆ.
ಕೊಪ್ಪಳ ತಾಲೂಕಿನಲ್ಲಿ ಗ್ರಾಮವೊಂದರಲ್ಲಿ ಘಟನೆ ನಡೆದಿದೆ. ಕಳೆದ ಮೇ ತಿಂಗಳಲ್ಲಿ ಕುಟುಂಬಸ್ಥರು ಯುವತಿಗೆ ಮುತ್ತು ಕಟ್ಟಿಸಿದ್ದು, ಆರು ತಿಂಗಳ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಕೊಪ್ಪಳ ತಾಲೂಕಿನ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಸ್ಥಾನದಲ್ಲಿ ಮುತ್ತು ಕಟ್ಟಿಸಲಾಗಿತ್ತು. ಮುತ್ತು ಕಟ್ಟಿಸಿದ ತಂದೆ, ತಾಯಿ, ಅಕ್ಕ ಹಾಗೂ ಅಕ್ಕನ ಗಂಡನ ವಿರುದ್ಧ ದೂರು ದಾಖಲಿಸಲಾಗಿದೆ. ದೇವದಾಸಿ ಪುರ್ನವಸತಿ ಯೋಜನೆಯ ಅಧಿಕಾರಿ ಪೂರ್ಣಿಮಾರಿಂದ ಕೊಪ್ಪಳ ತಾಲೂಕಿನ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನ ಹಿನ್ನೆಲೆಯಲ್ಲಿ ಯುವತಿಯ ತಾಯಿ, ತಂದೆ ಹಾಗೂ ಅಕ್ಕನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ದೇವದಾಸಿ ಹೆಸರಿನಲ್ಲಿ ಅಪ್ರಾಪ್ತ ವಯಸ್ಸಿನ ಹುಡುಗಿಯರನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದ್ದ ಈ ಪದ್ಧತಿಯನ್ನು ಭಾರತ ಸರ್ಕಾರ ೧೯೮೮ರಲ್ಲಿ ನಿಷೇಧಿಸಿತ್ತು. ಆದರೂ ಇಂದಿಗೂ ಅಲ್ಲಲ್ಲಿ ಕಾನೂನಿನ ಕಣ್ಣು ತಪ್ಪಿಸಿ ಇದು ನಡೆಯುತ್ತಿದೆ.
ಇದನ್ನೂ ಓದಿ | Ex-Devadasi children | ಮಾಜಿ ದೇವದಾಸಿ ಮಕ್ಕಳಿಗೆ ಶೈಕ್ಷಣಿಕ, ಇತರೆ ಅರ್ಜಿಯಲ್ಲಿ ತಂದೆ ಹೆಸರು ಉಲ್ಲೇಖ ಕಡ್ಡಾಯವಿಲ್ಲ