ಕೊಪ್ಪಳ: ಜಿಲ್ಲೆಯ ಕನಕಗಿರಿ ತಾಲೂಕಿನ ಕಲಕೇರಿ ಗ್ರಾಮದಲ್ಲಿ ರೈತರೊಬ್ಬರು ಸಾಲ ಬಾಧೆ ತಾಳಲಾರದೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಸವರಾಜ ನಾಯಕ್(45) ಆತ್ಮಹತ್ಯೆಗೆ(Farmer Suicide) ಶರಣಾದ ರೈತ.
ಬಸವರಾಜ ನಾಯಕ್ ಬ್ಯಾಂಕಿನಲ್ಲಿ 2.15 ಲಕ್ಷ ರೂ. ಸಾಲ ಮಾಡಿದ್ದರು. ಆದರೆ, ಸಾಲ ಮರುಪಾವತಿಸಲಾಗದೆ ಮನನೊಂದು ಗ್ರಾಮದ ಹೊರವಲಯದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಕನಕಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | Road accident | ಶಾಲಾ ವಾಹನ – ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು