ಕೊಪ್ಪಳ: ಹುಲಿಗೆಮ್ಮ ದೇವಿ ಜಾತ್ರೆ (Huligemma Temple) ನಿಮಿತ್ತ ಪಾದಯಾತ್ರೆ ಕೈಗೊಂಡಿದ್ದ ಭಕ್ತರ ಮೇಲೆ ಲಾರಿಯೊಂದು (Lorry Hit) ಹರಿದಿದೆ. ಪಾದಯಾತ್ರೆ ಹೊರಟಿದ್ದವರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ (Road Accident) ಹೊಡೆದಿದೆ. ಡಿಕ್ಕಿ ರಭಸಕ್ಕೆ ಓರ್ವ ಭಕ್ತ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ.
ಕೊಪ್ಪಳ ತಾಲೂಕಿನ ಕೆರಳ್ಳಿ ಫ್ಲೈಓವರ್ ಬಳಿ ಘಟನೆ ನಡೆದಿದೆ. ಯಮನೂರಪ್ಪ ಸಣ್ಣಮನಿ (34) ಮೃತ ದುರ್ದೈವಿ. ಯಮನೂರಪ್ಪ ಬಾಗಲಕೋಟಯ ಹುನಗುಂದ ತಾಲೂಕಿನ ರಕ್ಕಸಗಿ ಗ್ರಾಮದ ನಿವಾಸಿ ಆಗಿದ್ದಾರೆ. ಯಮನೂರಪ್ಪ ಹಾಗೂ ಮಹಾಂತೇಶ್ ಹುಲಿಗೆಮ್ಮ ದೇವಿ ಜಾತ್ರೆ ಹಿನ್ನೆಲೆಯಲ್ಲಿ ಪಾದಯಾತ್ರೆ ಮೂಲಕ ದೇವಸ್ಥಾನಕ್ಕೆ ಹೊರಟ್ಟಿದ್ದರು.
ಈ ವೇಳೆ ಹಿಂಬದಿಯಿಂದ ಬಂದ ಲಾರಿಯು ಪಾದಯಾತ್ರಿಗಳಿಗೆ ಡಿಕ್ಕಿ ಹೊಡೆದಿದೆ. ಯಮನೂರಪ್ಪ ಮೇಲೆ ಲಾರಿ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟರೆ, ಮಹಾಂತೇಶ್ ಫ್ಲೈಓವರ್ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಬಿದ್ದ ರಭಸಕ್ಕೆ ಅವರ ಕಾಲಿನ ಪಾದವೇ ತುಂಡಾಗಿ ಬಿದ್ದಿತ್ತು. ಸದ್ಯ ಸಾವು- ಬದುಕಿನ ಮಧ್ಯೆ ಹೋರಾಡುತ್ತಿರುವ ಗಾಯಾಳು ಮಹಾಂತೇಶ್‌ನನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ಸಂಬಂಧ ದೂರು ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.
ಇದನ್ನೂ ಓದಿ: Viral Video: ಬೆಂಕಿ ದುರಂತ ಸ್ಥಳದಲ್ಲಿ ಜಮಾಯಿಸಿದ್ದ ಜನ; ಆಮೇಲೆ ನಡೆದಿದ್ದೇ ಬೇರೆ- ವಿಡಿಯೋ ನೋಡಿ
ಬಿಸಿ ಗಾಳಿ ಶಾಖಕ್ಕೆ ತತ್ತರಿಸಿದ ಬಿಹಾರ; ಎರಡೇ ಗಂಟೆಗಳಲ್ಲಿ 16 ಮಂದಿ ಸಾವು
ಪಾಟ್ನಾ: ಬಿಹಾರ(Bihar)ದಲ್ಲಿ ಬಿಸಿ ಗಾಳಿ(Heat Wave) ಶಾಖಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಇದೀಗ ಇದರ ಪರಿಣಾಮವಾಗಿ ಕೇವಲ ಎರಡೇ ಗಂಟೆಗಳಲ್ಲಿ ಬಿಸಿಗಾಳಿ ಶಾಖಕ್ಕೆ ಬರೋಬ್ಬರಿ 16 ಜನ ಬಲಿಯಾಗಿದ್ದಾರೆ. ಔರಂಗಾಬಾದ್ ಜಿಲ್ಲಾಸ್ಪತ್ರೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ನಗರದ ಉಷ್ಣಾಂಶ 48.2 ಡಿಗ್ರಿಗೆ ಏರಿಕೆ ಆಗಿದೆ. ಇದು ಬಿಹಾರದಲ್ಲೇ ಅತಿ ಹೆಚ್ಚ ಉಷ್ಣಾಂಶ ಹೊಂದಿರುವ ನಗರವಾಗಿದೆ.
ಈ ಕುರಿತು ಔರಂಗಾಬಾದ್ ಜಿಲ್ಲಾಸ್ಪತ್ರೆ ವೈದ್ಯರು ಪ್ರತಿಕ್ರಿಯಿಸಿದ್ದು, ತೀವ್ರ ಬಿಸಿ ಗಾಳಿಗೆ ತುತ್ತಾಗಿ ಅಸ್ವಸ್ಥಗೊಂಡಿರುವ 35 ಕ್ಕೂ ಅಧಿಕ ಮಂದಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ದುರಾದೃಷ್ಟವಶಾತ್ 16ಕ್ಕೂ ಅಧಿಕ ಜನ ಬಿಸಿಗಾಳಿ ಶಾಖಕ್ಕೆ ಬಲಿಯಾಗಿದ್ದಾರೆ. ಉಳಿದವರಿಗೆ ಚಿಕಿತ್ಸೆ ಮುಂದುವರೆದಿದೆ. ನಮ್ಮ ಸಾಕಷ್ಟು ತಜ್ಞ ವೈದ್ಯರಿದ್ದಾರೆ. ಔಷಧ, ಐಸ್ ಪ್ಯಾಕ್ ಮತ್ತು ಅನೇಕ ಕೂಲರ್‌ಗಳ ಸೌಲಭ್ಯ ಒದಗಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
KK Pathak while sitting in his AC Office wants teachers in Bihar to come to school between 6 am to 1 pm in such heatwaves weather without any students present in the campus.
— Bruce Wayne (@_Bruce__007) May 30, 2024
So there is no value of the lives of teachers in Bihar? 💔
Nitish Kumar govt. is 🤡#TeachersLivesMatter pic.twitter.com/QJ8Fdv2dg5
ಬಿಸಿಗಾಳಿ ಸಮಸ್ಯೆಯಿಂದಾಗಿ ಮುಂಜಾಗೃತಾ ಕ್ರಮವಾಗಿ ಬಿಹಾರ ಸರ್ಕಾರ ಎಲ್ಲಾ ಶಾಲಾ ಕಾಲೇಜುಗಳನ್ನು ಜೂ.8ರವರೆಗೆ ತಾತ್ಕಾಲಿಕವಾಗಿ ಮುಚ್ಚಿದೆ. ಕೆಲವು ದಿನಗಳಿಂದ ಶಾಲೆಗಳಲ್ಲಿ ಬಿಸಿ ಗಾಳಿ ಶಾಖಕ್ಕೆ ವಿದ್ಯಾರ್ಥಿಗಳು ಪ್ರಜ್ಞೆ ತಪ್ಪಿ ಬೀಳುತ್ತಿರುವ ಘಟನೆ ವರದಿ ಆಗಿತ್ತು. ಇದರ ಬೆನ್ನಲ್ಲೇ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಬಿಹಾರದ ಶೇಖ್‌ಪುರದ ಹಲವಾರು ಶಾಲಾ ವಿದ್ಯಾರ್ಥಿಗಳು ಪ್ರಜ್ಞೆ ತಪ್ಪಿದ್ದು, ಅವರನ್ನು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳೀಯವಾಗಿ ಮಂಗಳವಾರ ಗರಿಷ್ಠ ತಾಪಮಾನ 42.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮಕ್ಕಳು ಪ್ರಜ್ಞೆ ತಪ್ಪಿರುವ ವೀಡಿಯೊಗಳು ವೈರಲ್ ಆಗಿದ್ದು, ಶಾಲೆಯ ವಿದ್ಯಾರ್ಥಿಗಳು ತುಂಬಾ ದಣಿದಿದ್ದಾರೆ ಎಂದು ಕಂಡುಬಂದಿದೆ. ಶಿಕ್ಷಕರು ಅವರಿಗೆ ನೀರು ಒದಗಿಸುವ ಮೂಲಕ ಮತ್ತು ಅವರಿಗೆ ಗಾಳಿ ಬೀಸುವ ಮೂಲಕ ಸಹಾಯ ಮಾಡಲು ಪ್ರಯತ್ನಿಸಿದರು. ನಂತರ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರಿಗೆ ಸಲೈನ್ ಚುಚ್ಚುಮದ್ದು ನೀಡಲಾಗಿದೆ. ಇನ್ನು ವಿದ್ಯಾರ್ಥಿಗಳು ಮಾತ್ರವಲ್ಲದೇ ಶಿಕ್ಷಕರೂ ಬಿಸಿಗಾಳಿಯ ತಾಪಮಾನಕ್ಕೆ ಪ್ರಜ್ಞೆ ತಪ್ಪಿ ಬೀಳುತ್ತಿರುವ ಘಟನೆಯೂ ವರದಿ ಆಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ