ಕೊಪ್ಪಳ: ಕೊಪ್ಪಳದಲ್ಲಿ ನೀರಾವರಿ ಇಲಾಖೆಗೆ ಸೇರಿದ ಭೂಮಿಯಲ್ಲಿ ಅಕ್ರಮ ಮಣ್ಣು ಮತ್ತು ಮೊರಂ ಗಣಿಗಾರಿಕೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು (Illegal Mining) ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಹಾಲಪ್ಪ ಆಚಾರ್ ನೀಡಿದ್ದಾರೆ.
ಕೊಪ್ಪಳ ತಾಲೂಕಿನ ಕಿನ್ನಾಳ ಬಳಿ ಇರುವ ನೀರಾವರಿ ಇಲಾಖೆಗೆ ಸೇರಿದ ಭೂಮಿಯಲ್ಲಿ ಅಕ್ರಮ ಮಣ್ಣು ಮತ್ತು ಮೊರಂ ಗಣಿಗಾರಿಕೆ ನಡೆದಿದೆ. ಈ ಕುರಿತು ವಿಸ್ತಾರ ನ್ಯೂಸ್ ವಿಸ್ತೃತ ವರದಿ ಪ್ರಸಾರ ಮಾಡಿತ್ತು
ಅಕ್ರಮ ಗಣಿಗಾರಿಕೆ ಕುರಿತು ಸಚಿವರ ಗಮನ ಸೆಳೆದಿತ್ತು. ಅಲ್ಲಿ ಅಕ್ರಮ ಮಣ್ಣು ಮತ್ತು ಮೊರಂ ಗಣಿಗಾರಿಕೆ ತಡೆಯಲು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸುವುದಾಗಿ ಗಣಿ ಇಲಾಖೆ ಸಚಿವ ಹಾಲಪ್ಪ ಆಚಾರ್ ಭರವಸೆ ನೀಡಿದ್ದಾರೆ.
ನೀರಾವರಿ ಇಲಾಖೆಗೆ ಸೇರಿದ ಒಟ್ಟು 186 ಎಕರೆ ಪ್ರದೇಶಕ್ಕೆ ಫೆನ್ಸಿಂಗ್ ಹಾಕಿಸುವುದಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಬರುವ ನೀರಾವರಿ ಇಲಾಖೆಗೆ ಸೇರಿದ ಭೂಮಿ ಇದಾಗಿದೆ.