ಕೊಪ್ಪಳ: ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಒತ್ತಾಯಿಸಿ ಜುಲೈ 2ರಂದು ರಾಜ್ಯಾದ್ಯಂತ ಹೆದ್ದಾರಿ ತಡೆ ಹೋರಾಟ ನಡೆಯಲಿದೆ. ಇದರ ಭಾಗವಾಗಿ ಕೊಪ್ಪಳ ತಾಲೂಕಿನ ಹಿಟ್ನಾಳ್ ಟೋಲ್ ಗೇಟ್ ಬಳಿ ಹೆದ್ದಾರಿ ತಡೆ ನಡೆಸಲಾಗುವುದು ಮಾದಿಗ ದಂಡೋರ ಸಂಘಟನೆ ರಾಜ್ಯ ಕಾರ್ಯದರ್ಶಿ ಕೆ.ಎಸ್. ಮೈಲಾರಪ್ಪ ಹೇಳಿದ್ದಾರೆ. ಜುಲೈ 3 ರಂದು ಹೈದ್ರಾಬಾದ್ ಚಲೋ ಹಮ್ಮಿಕೊಳ್ಳಲಾಗಿದೆ.
ಕೊಪ್ಪಳದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್. ಮೈಲಾರಪ್ಪ, ಕಳೆದ ಹಲವು ವರ್ಷಗಳಿಂದ ಸದಾಶಿವ ಆಯೋಗದ ವರದಿಯನ್ನು ಜಾರಿ ಮಾಡುವಂತೆ ಹೋರಾಟ ಮಾಡಿದ್ದೇವೆ. ಈವರೆಗೂ ಯಾವುದೇ ಪಕ್ಷದ ಸರ್ಕಾರ ವರದಿಯನ್ನು ಜಾರಿ ಮಾಡಿಲ್ಲ. ಹೀಗಾಗಿ ರಾಜ್ಯಾದ್ಯಂತ ಏಕಕಾಲಕ್ಕೆ 31 ಜಿಲ್ಲೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗುತ್ತದೆ ಎಂದರು.
ನ್ಯಾಯಮೂರ್ತಿ ಏ.ಜೆ. ಸದಾಶಿವ ಆಯೋಗದ ವರದಿಯ ಬಗ್ಗೆ ಎಲ್ಲ ಪಕ್ಷಗಳು, ಸರಕಾರಗಳು ಮೌನವಾಗಿವೆ. ಸಮುದಾಯದ ಮೀಸಲಾತಿಯನ್ನು ಬಳಸಿಕೊಂಡು ಆಯ್ಕೆಯಾಗಿರುವ ಜನಪ್ರತಿನಿಧಿಗಳು ಕೂಡಾ ಚಕಾರವೆತ್ತುತ್ತಿಲ್ಲ. ಎಂದು ಆಕ್ಷೇಪಿಸಿದ ಅವರು ಕನಿಷ್ಠ ವರದಿಯಲ್ಲಿ ಏನಿದೆ ಎಂದಾದರೂ ಬಹಿರಂಗವಾಗಲಿ ಎಂದರು.
ಇದನ್ನೂ ಓದಿ| ಹೈವೇ ನಿರ್ಮಾಣದಲ್ಲಿ ಅದ್ಭುತ ಸಾಧನೆ; ಗಿನ್ನಿಸ್ ದಾಖಲೆ ಬರೆದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ