ಕೊಪ್ಪಳ
ಕೊಪ್ಪಳದ ಗವಿಮಠದ ಕೆರೆಯಲ್ಲಿ ಅಪರಿಚಿತ ಶವ ಪತ್ತೆ!
ಗವಿಮಠದ ಕೆರೆಯಲ್ಲಿ ಇಂದು ಅಚಾನಕ್ ಒಂದು ಅಪರಿಚಿತ ಶವ ಪತ್ತೆಯಾಗಿದೆ. ವಿಕಾರಗೊಂಡಿರುವ ಸ್ಥಿತಿಯಲ್ಲಿ ಶವ ಕಂಡಿದ್ದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.
ಕೊಪ್ಪಳ: ಕೊಪ್ಪಳ ನಗರದಲ್ಲಿರುವ ಪ್ರಸಿದ್ದ ಗವಿಮಠದ ಕೆರೆಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸುಮಾರು 30 ವರ್ಷದ ಯುವಕನ ಶವ ಪತ್ತೆಯಾಗಿದ್ದು ಎರಡು ಮೂರು ದಿನಗಳ ಹಿಂದೆ ಕೆರೆಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇಂದು ಬೆಳಿಗ್ಗೆ ಕೆರೆಯಲ್ಲಿ ಶವ ತೇಲುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಸ್ಥಳೀಯರು ಕೂಡಲೇ ನಗರದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಕೊಪ್ಪಳ ನಗರ ಪೊಲೀಸರು ಶವವನ್ನು ಹೊರತೆಗೆದು ಪಂಚನಾಮೆ ಮಾಡಿದ್ದಾರೆ. ವಿಕಾರಗೊಂಡ ಶವವನ್ನು ನೋಡಿ ಸ್ಥಳೀಯರು ಆತಂಕಗೊಂಡಿದ್ದಾರೆ. ಎರಡು ಮೂರು ದಿನಗಳ ಹಿಂದೆಯೇ ವ್ಯಕ್ತಿ ಕೆರೆಗೆ ಬಿದ್ದಿರುವ ಸಾಧ್ಯತೆ ಇರುವುದರಿಂದ ಕಣ್ಣು, ಮುಖವನ್ನು ಜಲಚರಗಳು ತಿಂದಿದ್ದು, ಶವ ವಿಕಾರಗೊಂಡಿದೆ.
ಶವದ ಶರ್ಟ್ ಜೇಬಿನಲ್ಲಿ ಬೈಕ್ ಕೀಲಿಕೈ ಪತ್ತೆಯಾಗಿದ್ದು ಕೊಪ್ಪಳ ನಗರ ಪೊಲೀಸರು ತನಿಖೆ ನಡೆಸಿದ್ದಾರೆ.
ಹೆಚ್ಚಿನ ಓದಿಗಾಗಿ: ಗ್ರಾಮ ಕಲಹ ಎಂದುಕೊಂಡಿದ್ದ ಪೊಲೀಸರು: ಸಿಮ್ ಕಸಿದುಕೊಂಡಿದ್ದಕ್ಕೆ ಪತ್ನಿಯಿಂದಲೇ ಕೊಲೆ
ಕರ್ನಾಟಕ
Koppala News: ಅನಧಿಕೃತ ಕೀಟನಾಶಕ ಮಾರಾಟ; 1.98 ಲಕ್ಷ ರೂ. ಮೌಲ್ಯದ 232 ಲೀಟರ್ ಕ್ರಿಮಿನಾಶಕ ಜಪ್ತಿ
Koppala News: ಗಂಗಾವತಿ ನಗರದ ಸಿಬಿಎಸ್ ಗಂಜ್ ಪ್ರದೇಶದಲ್ಲಿರುವ ಮಹೇಶ ಏಜನ್ಸಿ ಎಂಬ ಅಂಗಡಿಯಲ್ಲಿ ಅನಧಿಕೃತ ಕೀಟನಾಶಕ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕೃಷಿ ಇಲಾಖೆಯ ಜಾರಿ ದಳ ವಿಭಾಗದ ಸಹಾಯಕ ನಿರ್ದೇಶಕ ನಿಂಗಪ್ಪ ನೇತೃತ್ವದಲ್ಲಿ ಸಿಬ್ಬಂದಿ ದಾಳಿ ಮಾಡಿ, 1.98 ಲಕ್ಷ ರೂಪಾಯಿ ಮೌಲ್ಯದ 232 ಲೀಟರ್ ಕೀಟನಾಶಕವನ್ನು ವಶಪಡಿಸಿಕೊಂಡಿದ್ದಾರೆ.
ಗಂಗಾವತಿ: ಒಂದು ಕಡೆ ಪರವಾನಗಿ ಪಡೆದು ಮತ್ತೊಂದು ಕಡೆ ಕ್ರಿಮಿನಾಶಕ (Pesticides) ವನ್ನು ಮಾರಾಟ ಮಾಡುವ ಮೂಲಕ ಕೃಷಿ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿದ ಪ್ರಕರಣವನ್ನು ಪತ್ತೆ ಹಚ್ಚಿದ ಕೃಷಿ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ ಕೀಟನಾಶಕ ಔಷಧಿಗಳನ್ನು ಜಪ್ತಿ ಮಾಡಿಕೊಂಡಿರುವ ಘಟನೆ ಗಂಗಾವತಿ ನಗರದಲ್ಲಿ ಜರುಗಿದೆ.
ನಗರದ ಸಿಬಿಎಸ್ ಗಂಜ್ ಪ್ರದೇಶದಲ್ಲಿರುವ ಮಹೇಶ ಏಜೆನ್ಸಿ ಎಂಬ ಅಂಗಡಿಯಲ್ಲಿ ಅನಧಿಕೃತ ಕೀಟನಾಶಕ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕೃಷಿ ಇಲಾಖೆಯ ಜಾರಿ ದಳ ವಿಭಾಗದ ಸಹಾಯಕ ನಿರ್ದೇಶಕ ನಿಂಗಪ್ಪ ನೇತೃತ್ವದಲ್ಲಿ ಸಿಬ್ಬಂದಿ ದಾಳಿ ಮಾಡಿದ್ದಾರೆ.
ಇದನ್ನೂ ಓದಿ: IPL 2023: ಮುಂಬೈ,ಗುಜರಾತ್ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಅಡ್ಡಿ; ಟಾಸ್ ವಿಳಂಬ; ಪಂದ್ಯ ರದ್ದಾದರೆ ಯಾರು ಫೈನಲ್ಗೆ?
ಈ ಸಂದರ್ಭದಲ್ಲಿ ಅಂಗಡಿಯಲ್ಲಿ 1.98 ಲಕ್ಷ ರೂಪಾಯಿ ಮೌಲ್ಯದ 232 ಲೀಟರ್ ಕೀಟನಾಶಕವನ್ನು ಜಪ್ತಿ ಮಾಡಿದ ಅಧಿಕಾರಿಗಳು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಿಂಗಪ್ಪ, ಕೀಟನಾಶಕ ಮಾರಾಟ ಮಾಡಲು ಜಂಗಮರ ಕಲ್ಗುಡಿಯಲ್ಲಿ ಅನುಮತಿ ನೀಡಲಾಗಿತ್ತು. ಆದರೆ ಗಂಗಾವತಿಯಲ್ಲಿ ಮಾರಾಟ ಮಾಡಲಾಗುತ್ತಿದೆ. ಇದು ಕೀಟನಾಶಕ ಕಾಯ್ದೆ 1986 ನಿಯಮ ಉಲ್ಲಂಘನೆಯಾಗಿದ್ದು, ದೂರು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: 7th Pay Commission : ವೇತನ ಆಯೋಗದ ಮಹತ್ವದ ಸಭೆ; ನೌಕರರ ಬೇಡಿಕೆ ಮಂಡಿಸಿದ ರಾಜ್ಯ ಸರ್ಕಾರಿ ನೌಕರರ ಸಂಘ
ದಾಳಿಯಲ್ಲಿ ಕೃಷಿ ಇಲಾಖೆಯ ಜಾರಿ ದಳ ವಿಭಾಗದ ಅಧಿಕಾರಿ ಕುಮಾರಸ್ವಾಮಿ ಪಾಲ್ಗೊಂಡಿದ್ದರು.
ಕರ್ನಾಟಕ
Koppala News: ಬೇಸಿಗೆ ಶಿಬಿರ ಕೇಂದ್ರದಲ್ಲಿ ಶಾಲಾ ಮಕ್ಕಳೊಂದಿಗೆ ಬೆರೆತು ಆಟವಾಡಿದ ಜಿ.ಪಂ. ಸಿಇಒ
Koppala News: ಕುಕನೂರು ತಾಲೂಕಿನ ಭಾನಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಬೇಸಿಗೆ ಶಿಬಿರ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿದ್ದ ಕೊಪ್ಪಳ ಜಿ.ಪಂ.ಸಿಇಒ ರಾಹುಲ್ ರತ್ನಂ ಪಾಂಡೇಯ ಅವರು ಪ್ರತಿಯೊಂದು ಮಗುವಿನ ಕೈಕುಲಕಿ ಮಕ್ಕಳಲ್ಲಿದ್ದ ಭಯವನ್ನು ದೂರ ಮಾಡಿ, ಕೆಲಕಾಲ ಅವರೊಂದಿಗೆ ಆಟವಾಡುವ ಮೂಲಕ ಸಮಯ ಕಳೆದರು.
ಕುಕನೂರು: ತಾಲೂಕಿನ ಭಾನಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಬೇಸಿಗೆ ಶಿಬಿರ (Summer camp) ಕೇಂದ್ರಕ್ಕೆ ಗುರುವಾರ ಭೇಟಿ ನೀಡಿದ್ದ ಕೊಪ್ಪಳ ಜಿ.ಪಂ. ಸಿಇಒ (CEO) ರಾಹುಲ್ ರತ್ನಂ ಪಾಂಡೇಯ ಅವರು ಕೆಲಕಾಲ ಶಾಲಾ ಮಕ್ಕಳೊಂದಿಗೆ (School children’s) ಆಟವಾಡುವ ಮೂಲಕ ಸಮಯ ಕಳೆದರು.
ಜಿಲ್ಲಾ ಪಂಚಾಯಿತಿಯ ಸಹಯೋಗದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಓದುವ ಬೆಳಕು ಕಾರ್ಯಕ್ರಮದಡಿ ತಾಲೂಕಿನ ಭಾನಾಪೂರ ಮತ್ತು ತಳಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಈಗಾಗಲೇ ಪ್ರಾರಂಭವಾಗಿರುವ ಬೇಸಿಗೆ ಶಿಬಿರದಲ್ಲಿ ಶಾಲಾ ಮಕ್ಕಳಿಗೆ ಆಟ ಪಾಠಗಳೊಂದಿಗೆ ಕಚ್ಚಾ ವಸ್ತುಗಳಿಂದ ಅಲಂಕಾರಿಕ ವಸ್ತುಗಳನ್ನು ತಯಾರಿಸುವ ಬಗೆಗೆ ತರಬೇತಿಯನ್ನು ನೀಡಲಾಗುತ್ತಿದೆ.
ಇದನ್ನೂ ಓದಿ: ನಾನು ಮಂತ್ರಿಯಾಗಿದ್ದರೆ ಒಂದು ಇಲಾಖೆಗೆ ಮಾತ್ರ; ಈಗ ಎಲ್ಲ ಮಂತ್ರಿಗಳೂ ನನ್ನ ವ್ಯಾಪ್ತಿಗೆ ಬರುತ್ತಾರೆ: ಯು.ಟಿ. ಖಾದರ್
ಪ್ರತಿಯೊಂದು ಮಗುವಿನ ಕೈಕುಲುಕಿ ಮಕ್ಕಳಲ್ಲಿದ್ದ ಭಯವನ್ನು ದೂರ ಮಾಡಿ, ಅವರೊಂದಿಗೆ ಬೆರೆತು ಮಕ್ಕಳ ಚಟುವಟಿಕೆಗಳನ್ನು ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೇಯ ಅವರು ಸೂಕ್ಷ್ಮವಾಗಿ ಗಮಸಿದರು. ಇದೇ ವೇಳೆ ಮಕ್ಕಳೊಂದಿಗೆ ಕೆಲಕಾಲ ಲಗೋರಿ, ಖೋಖೋ, ಕಬಡ್ಡಿ, ಕೇರಂ, ಕೆರೆ ದಡ, ಹಾವು ಏಣಿ ಆಟಗಳನ್ನು ಆಡಿ, ಖುಷಿಪಟ್ಟರು.
ಬಳಿಕ ಮಾತನಾಡಿದ ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೇಯ, ಬೇಸಿಗೆ ಶಿಬಿರ ವೀಕ್ಷಣೆಯೊಂದಿಗೆ ಗ್ರಾಮದ ಆರೋಗ್ಯ ಕೇಂದ್ರ, ಪೋಸ್ಟ್ ಆಫೀಸ್, ಗ್ರಾಮ ಪಂಚಾಯತಿ, ಕುಡಿಯುವ ನೀರಿನ ನಿರ್ವಹಣೆ, ಸ್ವ ಸಹಾಯ ಸಂಘಗಳ ಕಾರ್ಯವೈಖರಿಗಳನ್ನು ತಿಳಿದುಕೊಳ್ಳಲು ಈ ಶಿಬಿರ ಸಹಕಾರಿಯಾಗಿದೆ ಎಂದು ತಿಳಿಸಿದರು.
ಮಕ್ಕಳು ಬೇಸಿಗೆ ಶಿಬಿರದ ದೈನಂದಿನ ಚಟುವಟಿಕೆಯಲ್ಲಿ ಮಾಡಿದ ಕ್ರಾಫ್ಟ್‌ಗಳನ್ನು ವೀಕ್ಷಿಸಿ, ಮಕ್ಕಳ ಕಲಿಕಾ ಆಸಕ್ತಿಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
ಇದನ್ನೂ ಓದಿ: New Parliament Building: ಸಂಸತ್ ಭವನದ ಉದ್ಘಾಟನೆ; ರಾಷ್ಟ್ರಪತಿಗೆ ಆಹ್ವಾನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ
ನಂತರ ತಳಕಲ್ ಗ್ರಾಮದಲ್ಲಿ ನಿರ್ಮಾಣವಾದ ಉದ್ಯಾನವನ ಹಾಗೂ ಸ್ವ-ಸಹಾಯ ಸಂಘದಿಂದ ಮಹಿಳೆಯರು ನಡೆಸುತ್ತಿರುವ ಮೊಬೈಲ್ ಕ್ಯಾಂಟೀನ್ ಅನ್ನು ವೀಕ್ಷಿಸಿದರು.
ಕರ್ನಾಟಕ
Road Accident: ಬೈಕ್ ಸ್ಕಿಡ್ ಆಗಿ ಬಿದ್ದು ಸ್ಥಳದಲ್ಲೇ ಸವಾರ ಸಾವು
Road Accident: ಬೈಕ್ ಸ್ಕಿಡ್ ಆಗಿ ಬಿದ್ದು, ಸ್ಥಳದಲ್ಲಿಯೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಕನಕಗಿರಿ ಪಟ್ಟಣದ ನವಲಿ ರಸ್ತೆಯಲ್ಲಿ ಜರುಗಿದೆ.
ಕನಕಗಿರಿ: ಬೈಕ್ ಸ್ಕಿಡ್ (Bike skid) ಆಗಿ ಬಿದ್ದು, ಸ್ಥಳದಲ್ಲಿಯೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಕನಕಗಿರಿ ಪಟ್ಟಣದ ನವಲಿ ರಸ್ತೆಯಲ್ಲಿ ಜರುಗಿದೆ.
ರಮೇಶ ದಮ್ಮೂರು (35) ಮೃತಪಟ್ಟ ಯುವಕ. ಯಲಬುರ್ಗಾ ತಾಲೂಕಿನ ಮಕ್ಕಳ್ಳಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ.
ಮೃತನು, ಕಾರಟಗಿ ತಾಲೂಕಿನ ಸೋಮನಾಳ ಗ್ರಾಮಕ್ಕೆ ನೆಂಟರ ಮನೆಯ ಕಾರ್ಯಕ್ರಮಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದನು, ಬೈಕ್ ಸ್ಕಿಡ್ ಆಗಿ ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ ಎಂದು ಶಂಕಿಸಲಾಗಿದೆ.
ಘಟನೆ ಹಿನ್ನೆಲೆಯಲ್ಲಿ ಕನಕಗಿರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕರ್ನಾಟಕ
Bagalkot News: ಓವರ್‌ಟೇಕ್ ಮಾಡುವಾಗ ಬಸ್‌ನಡಿ ಸಿಲುಕಿ ಬೈಕ್ ಸವಾರ ಸಾವು, ಮತ್ತೊಬ್ಬರಿಗೆ ಗಾಯ
Bagalkot News: ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕುಟುಕನಕೇರಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಓವರ್‌ಟೇಕ್ ಮಾಡುವಾಗ ಬಸ್ ಕೆಳಗೆ ಸಿಲುಕಿ ಬೈಕ್ ಸವಾರ ಮೃತಪಟ್ಟಿದ್ದಾನೆ.
ಬಾಗಲಕೋಟೆ: ಬೈಕ್‌ನಲ್ಲಿ ಓವರ್ ಟೇಕ್ ಮಾಡಲು ಹೋಗಿ ಬಸ್ ಚಕ್ರಕ್ಕೆ ಸಿಲುಕಿ ಯುವಕ ಮೃತಪಟ್ಟು, ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ (Bagalkot News) ಜಿಲ್ಲೆಯ ಬಾದಾಮಿ ತಾಲೂಕಿನ ಕುಟುಕನಕೇರಿ ಗ್ರಾಮದ ಬಳಿ ನಡೆದಿದೆ.
ಗುಳೇದಗುಡ್ಡ ತಾಲೂಕಿನ ತೆಗ್ಗಿ ಗ್ರಾಮ ಮಂಜಯ್ಯ ಹಿರೆಮಠ (30) ಮೃತ ಯುವಕ. ಈತ ಬೈಕ್‌ನಲ್ಲಿ ತೆರಳುತ್ತಿದ್ದಾಗ ಓವರ್‌ಟೇಕ್ ಮಾಡುತ್ತಿದ್ದಾಗ ನಿಯಂತ್ರಣ ತಪ್ಪಿ ಹುಬ್ಬಳ್ಳಿ ಮಾರ್ಗದಿಂದ ಬರುತ್ತಿದ್ದ ಬಸ್ ಚಕ್ರದಡಿ ಸಿಲುಕಿದ್ದಾನೆ. ಈ ವೇಳೆ ಆತನ ತಲೆಯ ಮೇಲೆ ಬಸ್ ಹರಿದಿದೆ. ಹೀಗಾಗಿ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಇದೇ ವೇಳೆ ಮತ್ತೊಬ್ಬ ಯುವಕನಿಗೂ ಗಂಭೀರ ಗಾಯಗಳಾಗಿವೆ.
ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಸಾವು
ಕೊಪ್ಪಳ: ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಕನಕಗಿರಿ ಪಟ್ಟಣದ ನವಲಿ ರಸ್ತೆಯಲ್ಲಿ ಮಂಗಳವಾರ ನಡೆದಿದೆ. ಯಲಬುರ್ಗಾ ತಾಲೂಕಿನ ರಮೇಶ ದಮ್ಮೂರು (35) ಮೃತ. ಈತ ಸೋಮಸಾಗರಕ್ಕೆ ತೆರಳುತ್ತಿದ್ದಾಗ ಅಪಘಾತ ನಡೆದಿದೆ. ಕನಕಗಿರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ | Murder case: ಡಾನ್ ಆಗೋ ಗೀಳಿನಿಂದ ಅಮಾಯಕನನ್ನು ಇರಿದು ಕೊಂದ ಮಾಜಿ ಶಾಸಕನ ಪುತ್ರ!
ಹುಬ್ಬಳ್ಳಿಯಲ್ಲಿ ಜಿಮ್ ತರಬೇತುದಾರ ಆತ್ಮಹತ್ಯೆ
ಹುಬ್ಬಳ್ಳಿ: ಜಿಮ್ ತರಬೇತುದಾರರೊಬ್ಬರು ಮನೆಯಲ್ಲಿ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ನಗರದ ವಿದ್ಯಾನಗರದ ಶಿರೂರು ಪಾರ್ಕ್ ಬಳಿ ಬೆಳಕಿಗೆ ಬಂದಿದೆ.
ಆರೆಂಜ್ ಜಿಮ್ ಮಾಲೀಕ ಹಾಗೂ ತರಬೇತುದಾರ ಜಿತೇಂದ್ರ ಶೀಗಿಹಳ್ಳಿ (48) ಮೃತ ವ್ಯಕ್ತಿ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಜಿತೇಂದ್ರ ಶೀಗಿಹಳ್ಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೀಗಾಗಿ ಕುಟುಂಬಸ್ಥರು ಬಾಗಿಲು ಮುರಿದು ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ಸಾಗಿಸಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
ಕರ್ನಾಟಕ15 hours ago
ವಿಸ್ತಾರ ಯುಗಾದಿ ಕಥಾ ಸ್ಪರ್ಧೆ ಬಹುಮಾನ: ಚಂದ್ರಶೇಖರ್ ಡಿ.ಆರ್ ಪ್ರಥಮ, ದಾದಾಪೀರ್ ಜೈಮನ್ ದ್ವಿತೀಯ, ಪೂರ್ಣಿಮಾ ಮಾಳಗಿಮನಿ ತೃತೀಯ
-
ಕರ್ನಾಟಕ18 hours ago
Karnataka Cabinet Expansion Live : 34 ಸಚಿವರಿಗೆ ಖಾತೆ ಹಂಚಿಕೆ; ಬಯಸಿದ ಖಾತೆ ಪಡೆದ ಡಿ ಕೆ ಶಿವಕುಮಾರ್
-
ಕರ್ನಾಟಕ15 hours ago
Karnataka Cabinet Expansion: ಪ್ರಮಾಣ ವಚನ ಸಮಾರಂಭ ಬಹಿಷ್ಕಾರ; ಊರಿಗೆ ಹೊರಟ ಒಂದೇ ಜಿಲ್ಲೆಯ 5 ಶಾಸಕರು!
-
ಕಿರುತೆರೆ14 hours ago
Deepak Gowda: ‘ಶ್ರೀರಸ್ತು ಶುಭಮಸ್ತು’ಧಾರಾವಾಹಿಯಿಂದ ಹೊರನಡೆದ ದೀಪಕ್ ಗೌಡ; ಪಾತ್ರಕ್ಕೆ ಬಂದವರು ಕಿರುತೆರೆಗೆ ಹೊಸಬರಲ್ಲ!
-
ಕರ್ನಾಟಕ9 hours ago
Karnataka Cabinet: ತಾತನನ್ನು ಮಿನಿಸ್ಟರ್ ಮಾಡಿ ಪ್ಲೀಸ್: ರಾಹುಲ್ ಗಾಂಧಿಗೆ ಪತ್ರ ಬರೆದ ಟಿ.ಬಿ. ಜಯಚಂದ್ರ ಮೊಮ್ಮಗಳು
-
ಕಿರುತೆರೆ16 hours ago
Weekend With Ramesh: ಈ ವಾರದ ವೀಕೆಂಡ್ ವಿತ್ ರಮೇಶ್ ಅತಿಥಿಗಳು ಇವರು!
-
ಕ್ರಿಕೆಟ್18 hours ago
IPL 2023: ಶತಕ ಬಾರಿಸಿ ಸೆಹವಾಗ್ ದಾಖಲೆ ಮುರಿದ ಶುಭಮನ್ ಗಿಲ್
-
ಕರ್ನಾಟಕ13 hours ago
Karnataka Cabinet: ಸಂಪುಟದಲ್ಲಿ ಸೋತರೂ ಖಾತೆಯಲ್ಲಿ ಗೆದ್ದ ಡಿ.ಕೆ. ಶಿವಕುಮಾರ್: ಇಲ್ಲಿದೆ ಎಲ್ಲ ಸಚಿವರ ಖಾತೆಗಳ ಪಟ್ಟಿ