ಗಂಗಾವತಿ: ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಆಡಳಿತಾತ್ಮಕವಾಗಿ ಅನುಕೂಲವಾಗುವ ಹಿನ್ನಲೆಯಲ್ಲಿ ಇದೇ ಶನಿವಾರ ಅಕ್ಟೋಬರ್ 21 ರಿಂದ ಗಂಗಾವತಿಯಲ್ಲಿ (Gangavathi) ಉಪ ವಿಭಾಗ ಅಧಿಕಾರಿಗಳ ಕಚೇರಿ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಇಲ್ಲಿನ ನಗರಸಭೆಯ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಲ್ಲಿನ ಜನರ ಬಹು ದಿನಗಳ ಬೇಡಿಕೆ ಮತ್ತು ವಕೀಲರ ಮನವಿ ಹಿನ್ನೆಲೆಯಲ್ಲಿ ಉಪ ವಿಭಾಗಾಧಿಕಾರಿಗಳ ಕಚೇರಿ ಆರಂಭಿಸಲಾಗುತ್ತಿದೆ.
ಈಗಾಗಲೇ ಕಾನೂನಾತ್ಮಕವಾಗಿ ಸರ್ಕಾರದಿಂದ ಮಂಜೂರಾತಿ ಸಿಕ್ಕಿದೆ. ಗಂಗಾವತಿಯಲ್ಲಿ ಉಪ ವಿಭಾಗಾಧಿಕಾರಿಗಳ ಕಚೇರಿ ಆರಂಭಿಸುವಂತೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹಾಗೂ ಗಂಗಾವತಿ ಶಾಸಕ ಜನಾರ್ದನರೆಡ್ಡಿ ಅವರು ಮನವಿ ಸಲ್ಲಿಸಿದ್ದರು. ಹೀಗಾಗಿ ಇದೇ ಶನಿವಾರದಿಂದ ಉಪ ವಿಭಾಗಾಧಿಕಾರಿಗಳ ಕಚೇರಿ ಆರಂಭವಾಗಲಿದೆ ಎಂದರು.
ಇದನ್ನೂ ಓದಿ: Navaratri: ಉದ್ಯಾನನಗರಿಯಲ್ಲಿ ಎಲ್ಲೆಡೆ ದಾಂಡಿಯಾ ಮೇನಿಯಾ!
ಜನರ ಸಮಸ್ಯೆಯನ್ನು ಆಲಿಸಿ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಉದ್ದೇಶಕ್ಕೆ ಮುಖ್ಯಮಂತ್ರಿಗಳ ಸೂಚನೆ ಮೆರೆಗೆ ಜನತಾ ದರ್ಶನ ಹಮ್ಮಿಕೊಳ್ಳಲಾಗಿದೆ. ಪ್ರತಿ ತಿಂಗಳಿಗೆ ಒಮ್ಮೆ ಜಿಲ್ಲಾ ಕೇಂದ್ರದಲ್ಲಿ ಹದಿನೈದು ದಿನಕ್ಕೊಮ್ಮೆಯಂತೆ ತಾಲೂಕು ಕೇಂದ್ರದಲ್ಲಿ ಜನತಾ ದರ್ಶನ ಹಮ್ಮಿಕೊಳ್ಳಲಾಗುವುದು ಎಂದರು.
ಇದನ್ನೂ ಓದಿ: Viral Video: ಕಾಳಿಂಗ ಸರ್ಪಕ್ಕೇ ಸ್ನಾನ ಮಾಡಿಸಿದ ರಣಧೀರ!
ಈ ವೇಳೆ ಶಾಸಕ ಜಿ. ಜನಾರ್ದನರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ರತ್ನಂಪಾಂಡೆಯ, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ, ಜಿಲ್ಲಾ ಎಸ್ಪಿ ಯಶೋಧಾ ಒಂಟಿಗೋಡೆ, ನಗರ ಯೋಜನಾ ಕೋಶಾಧಿಕಾರಿ ಕಾವ್ಯರಾಣಿ, ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ಹಾಗೂ ಇತರರು ಇದ್ದರು.