ಗಂಗಾವತಿ: ಹನುಮ ಜಯಂತಿ (Hanuma Jayanti) ಅಂಗವಾಗಿ ತಾಲೂಕಿನ ಚಿಕ್ಕರಾಂಪುರದ ಬಳಿ ಇರುವ ಪ್ರಸಿದ್ಧ ಅಂಜನಾದ್ರಿಯಲ್ಲಿ (Anjanadri) ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿದ್ದು, ಹನುಮ ಮಾಲೆ ವಿಸರ್ಜನೆಗೆ ಕ್ಷಣಗಣನೆ ಆರಂಭವಾಗಿದೆ.
ಜಿಲ್ಲಾಧಿಕಾರಿ ನಲಿನ್ ಅತುಲ್, ಕಳೆದ ಎರಡು ದಿನಗಳಿಂದ ಸ್ಥಳದಲ್ಲಿ ಬಿಡಾರ ಹೂಡಿದ್ದು, ಅಧಿಕಾರಿಗಳಿಗೆ ನಿರ್ದೇಶನ ನೀಡುತ್ತಿದ್ದಾರೆ. ಶಾಸಕ ಜಿ. ಜನಾರ್ದನರೆಡ್ಡಿ ಉಸ್ತುವಾರಿ ವಹಿಸಿಕೊಂಡಿದ್ದು, ಅಂತಿಮ ಹಂತದ ಸಿದ್ಧತೆಗಳನ್ನು ಶನಿವಾರ ಪರಿಶೀಲಿಸಿದರು.
ಇದನ್ನೂ ಓದಿ: Rohit Sharma : ಟೆಸ್ಟ್ ಕ್ರಿಕೆಟ್ನ ಪ್ರಾಮುಖ್ಯತೆ ಕುರಿತು ಕೊಹ್ಲಿ, ರೋಹಿತ್ ಮಾತನಾಡಿದ ವಿಡಿಯೊ ಇಲ್ಲಿದೆ
ಭಾನುವಾರ ನಡೆಯುವ ಹನುಮಾಲೆ ವಿಸರ್ಜನೆಗೆ ರಾಜ್ಯದ ನಾನಾ ಜಿಲ್ಲೆಗಳಿಂದ ಸುಮಾರು 50 ಸಾವಿರಕ್ಕೂ ಅಧಿಕ ಭಕ್ತರು ಭಾಗಿಯಾಗುವ ನಿರೀಕ್ಷೆಯಿದ್ದು, ಇದಕ್ಕಾಗಿ ಜಿಲ್ಲಾಡಳಿತ ಕುಡಿಯುವ ನೀರು, ಪಾರ್ಕಿಂಗ್ ವ್ಯವಸ್ಥೆ, ಊಟ, ವಸತಿ, ಶೌಚಾಲಯದಂತಹ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿದೆ.
ಭಕ್ತರ ಅನುಕೂಲಕ್ಕಾಗಿ ಇದೇ ಮೊದಲ ಬಾರಿಗೆ ಜಿಲ್ಲಾಡಳಿತ ಹಲವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಭಕ್ತರು ತಮ್ಮ ಮೊಬೈಲ್‌ನಲ್ಲಿ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಅಂಜನಾದ್ರಿಯಲ್ಲಿ ಕಲ್ಪಿಸಿರುವ ಸೌಲಭ್ಯಗಳ ಮಾಹಿತಿ ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಓದಿ: Year Ender 2023: ಈ ವರ್ಷ ಹೆಚ್ಚು ಜನಪ್ರಿಯವಾದ ಆಹಾರ ಪದ್ಧತಿಗಳಿವು
ಸಂಜೆಯ ವೇಳೆ ಅಂಜನಾದ್ರಿ ಆಕರ್ಷಕವಾಗಿ ಕಾಣುವಂತೆ ಮಾಡಲು ಇಡೀ ಬೆಟ್ಟಕ್ಕೆ ಝಗಮಗಿಸುವ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಆಂಜನೇಯ ದೇವರ ಪಾದಗಟ್ಟೆಯಲ್ಲಿ ಆಕರ್ಷಕ ಹೂವಿನ ಅಲಂಕಾರ ಮಾಡಲಾಗಿದೆ. ಭಕ್ತಾಧಿಗಳಿಗೆ ಮಾಹಿತಿ ನೀಡುವ ಉದ್ದೇಶಕ್ಕೆ ಅಲ್ಲಲ್ಲಿ ಬ್ಯಾನರ್ ಅಳವಡಿಸಿ ಮಾಹಿತಿ ನೀಡಲಾಗಿದೆ.