Koppala News: 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು; ಗಂಗಾವತಿಯಲ್ಲಿ ಸಂಭ್ರಮಾಚರಣೆ - Vistara News

ಕೊಪ್ಪಳ

Koppala News: 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು; ಗಂಗಾವತಿಯಲ್ಲಿ ಸಂಭ್ರಮಾಚರಣೆ

Koppala News: 3 ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದ ಹಿನ್ನಲೆಯಲ್ಲಿ ಗಂಗಾವತಿಯ ಮಹಾತ್ಮಗಾಂಧಿ ವೃತ್ತದಲ್ಲಿ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಸಾರ್ವಜನಿಕರಿಗೆ ಸಿಹಿ ಹಂಚಿ, ಪಟಾಕಿ ಸಿಡಿಸಿ, ಸಂಭ್ರಮಾಚರಣೆ ಮಾಡಿದರು.

VISTARANEWS.COM


on

BJP wins in 3 states Celebration in Gangavathi
3 ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದ ಹಿನ್ನಲೆಯಲ್ಲಿ ಗಂಗಾವತಿಯ ಗಾಂಧಿವೃತ್ತದಲ್ಲಿ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗಂಗಾವತಿ: ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ (Assembly Election) ಬಿಜೆಪಿ (BJP) ಭರ್ಜರಿ ಜಯ ಸಾಧಿಸಿದ ಹಿನ್ನಲೆಯಲ್ಲಿ ಇಲ್ಲಿನ ಮಹಾತ್ಮಗಾಂಧಿ ವೃತ್ತದಲ್ಲಿ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಸಾರ್ವಜನಿಕರಿಗೆ ಸಿಹಿ ಹಂಚಿ, ಪಟಾಕಿ ಸಿಡಿಸಿ, ಸಂಭ್ರಮಾಚರಣೆ ಮಾಡಿದರು.

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಡ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಸ್ಪಷ್ಟ ಬಹುಮತ ಪಡೆದು ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಗಂಗಾವತಿ ಮಾಜಿ ಶಾಸಕ ಪರಣ್ಣ ಮುನವಳ್ಳಿ ನೇತೃತ್ವದಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಪಕ್ಷದ ವಿವಿಧ ಘಟಕದ ಪದಾಧಿಕಾರಿಗಳು, ಮಹಿಳಾ ಮೋರ್ಚಾದ ಪ್ರಮುಖರು, ಪಕ್ಷದ ಕಾರ್ಯಕರ್ತರು, ಪ್ರಮುಖರು ಪಾಲ್ಗೊಂಡಿದ್ದರು.

ಇದನ್ನೂ ಓದಿ: Masala Tea: ಚಳಿಗಾಲವೆಂದು ಅತಿಯಾಗಿ ಮಸಾಲೆ ಚಹಾ ಕುಡಿಯುತ್ತೀರಾ? ಹಾಗಾದರೆ ಎಚ್ಚರ!

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಪರಣ್ಣ ಮುನವಳ್ಳಿ, ಜನರಿಗೆ ಕಾಂಗ್ರೆಸ್ ಪಕ್ಷದ ಬಿಟ್ಟಿ ಭಾಗ್ಯಗಳು ಬೇಕಿಲ್ಲ. ಅವರಿಗೆ ಬೇಕಿರುವುದು ಮೋದಿ ಎಂಬ ಒಂದೇ ಒಂದು ಗ್ಯಾರಂಟಿ ಎಂಬುವುದು ಈ ಚುನಾವಣಾ ಫಲಿತಾಂಶದಿಂದ ಗೊತ್ತಾಗಿದೆ ಎಂದು ತಿಳಿಸಿದರು.

ಯುವ ಮುಖಂಡ ಸಂಗಮೇಶ ಸುಗ್ರೀವಾ, ಕಾಡಾದ ಮಾಜಿ ಅಧ್ಯಕ್ಷ ಎಚ್.ಗಿರೇಗೌಡ, ಎಚ್.ಎಂ. ತಿಪ್ಪೇರುದ್ರಸ್ವಾಮಿ, ಬಿಜೆಪಿ ನಗರ ಘಟಕದ ಅಧ್ಯಕ್ಷ ಕಾಶಿನಾಥ ಚಿತ್ರಗಾರ ಮಾತನಾಡಿದರು.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆ ದಿಢೀರನೆ 40 ರೂ. ಏರಿಕೆ; ಇಷ್ಟಿದೆ ಇಂದಿನ ದರ

ಈ ಸಂದರ್ಭದಲ್ಲಿ ಮುಖಂಡರಾದ ಶೋಭಾ ರಾಯ್ಕರ್, ಗಿರಿಜಮ್ಮ, ಶೈಲಜಾ, ಸರಸ್ವತಿ ರಾಯಭಾಗಿ, ರೂಪಾ, ಸರಸ್ವತಿ ಕಾಟ್ವಾ, ಅಕ್ಕಮ್ಮ ಹಾಗೂ ಇತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಈ ನಾಲ್ಕು ಜಿಲ್ಲೆಗಳಲ್ಲಿ 35 ಡಿಗ್ರಿ ಸೆಲ್ಸಿಯಸ್‌ಗೂ ಹೆಚ್ಚು ತಾಪಮಾನ! ಹೀಗುಂಟು ಬೆಂಗಳೂರು ಹವಾಮಾನ

Karnataka Weather : ಬೆಂಗಳೂರು ನಗರದ ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಫೆಬ್ರವರಿ 22ರಿಂದ 26ರವರೆಗೆ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್‌ ಇರಲಿದ್ದರೆ, ಗರಿಷ್ಠ ಉಷ್ಣಾಂಶ 32 – 33 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಹೀಗಾಗಿ ಬೆಂಗಳೂರಿನಲ್ಲಿ ತಂಪಿನ ವಾತಾವರಣ ಈಗ ಮರೀಚಿಕೆಯಾಗಿದೆ.

VISTARANEWS.COM


on

Sun Stroke with girls
Koo

ಬೆಂಗಳೂರು: ರಾಜ್ಯದಲ್ಲಿ ನಿಧಾನವಾಗಿ ಬಿಸಿಲು ತನ್ನ ಪ್ರಭಾವವನ್ನು ಹೆಚ್ಚಳ ಮಾಡಿಕೊಳ್ಳುತ್ತಿದೆ. ಗುರುವಾರ ಮತ್ತು ಶುಕ್ರವಾರ ಗರಿಷ್ಠ ತಾಪಮಾನದಲ್ಲಿ ಏರಿಕೆ ಇರಲಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮತ್ತು ಹೊನ್ನಾವರ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹಾಗೂ ಕಲಬುರಗಿ, ಬೆಳಗಾವಿಯಲ್ಲಿ 35 ಡಿಗ್ರಿ ಸೆಲ್ಸಿಯಸ್‌ಗೂ ಹೆಚ್ಚು ತಾಪಮಾನ ಇರಲಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Karnataka Weather Forecast) ಉಲ್ಲೇಖಿಸಿದೆ.

ಹೀಗಾಗಿ ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಒಣ ಹವೆ (Dry Weather) ಇರಲಿದೆ. ಜತೆಗೆ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ 2 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರಲ್ಲಿ ಬಿಸಿಲು ಜಾಸ್ತಿ

ಬೆಂಗಳೂರು ನಗರದ ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಫೆಬ್ರವರಿ 22ರಿಂದ 26ರವರೆಗೆ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್‌ ಇರಲಿದ್ದರೆ, ಗರಿಷ್ಠ ಉಷ್ಣಾಂಶ 32 – 33 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಹೀಗಾಗಿ ಬೆಂಗಳೂರಿನಲ್ಲಿ ತಂಪಿನ ವಾತಾವರಣ ಈಗ ಮರೀಚಿಕೆಯಾಗಿದೆ.

ಮಲೆನಾಡಲ್ಲಿ ಭಾರಿ ಸೆಕೆ

ಮಲೆನಾಡು ಜಿಲ್ಲೆಗಳಲ್ಲಿ ಬಿಸಿಲಿನ ತೀವ್ರತೆ ಇರಲಿದೆ. ಶಿವಮೊಗ್ಗದಲ್ಲಿ ಫೆ. 21ರಿಂದ 28ರವರೆಗಿನ ವಾತಾವರಣವನ್ನು ನೋಡುವುದಾದರೆ, ಗರಿಷ್ಠ ಉಷ್ಣಾಂಶದಲ್ಲಿ ಏರಿಕೆ ಕಾಣಲಿದೆ. ಅಲ್ಲಿ 33 ಡಿಗ್ರಿ ಸೆಲ್ಸಿಯಸ್‌ನಿಂದ 36 ಡಿಗ್ರಿ ಸೆಲ್ಸಿಯಸ್‌ವರೆಗೆ ಇರಲಿದೆ, ಚಿಕ್ಕಮಗಳೂರು, ಹಾಸನ, ಕೊಡುಗು ಜಿಲ್ಲೆಯಲ್ಲಿ ಉಷ್ಣಾಂಶದಲ್ಲಿ ಏರಿಕೆಯಾಗಲಿದೆ ಎಂದು ಅಂದಾಜಿಸಲಾಗಿದೆ. ‌

ಕರಾವಳಿಗೆ ಬಿಸಿಲಿನ ಬಳುವಳಿ

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆಕೆ ಹೆಚ್ಚಾಗಿ ಇರಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚು ಇರಲಿದೆ.

ದಕ್ಷಿಣ ಒಳನಾಡಿನ ವಾತಾವರಣ ಹೇಗಿರಲಿದೆ?

ದಕ್ಷಿಣ ಒಳನಾಡಿನಲ್ಲಿಯೂ ಬಿಸಿಲಿನ ಪ್ರಮಾಣ ಹೆಚ್ಚಾಗಿ ಇರಲಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ಮೈಸೂರು, ಮಂಡ್ಯ, ಕೋಲಾರ, ರಾಮನಗರ, ವಿಜಯನಗರ, ಚಾಮರಾಜನಗರ, ತುಮಕೂರು, ಚಿತ್ರದುರ್ಗದ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಿರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹೀಗಾಗಿ ಇಲ್ಲೆಲ್ಲ ಮೈಸುಡುವ ಬಿಸಿಲು ಇರಲಿದ್ದು, ಮನೆಯಲ್ಲಿದ್ದರೂ ಜನ ಬೆವರು ಸುರಿಸುವ ಪರಿಸ್ಥಿತಿ ತಲೆದೋರಲಿದೆ.

ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನ 2 ಡಿಗ್ರಿ ಸೆಲ್ಸಿಯಸ್‌ ಹೆಚ್ಚಳ

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ: Love marriage : ಅಂತರ್ಜಾತಿ ವಿವಾಹಕ್ಕೆ ಅಡ್ಡಿ; ಮಗಳನ್ನು ಧರಧರನೇ ಎಳೆದೊಯ್ದ ಪೋಷಕರು

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 33 ಡಿ.ಸೆ -19 ಡಿ.ಸೆ
ಮಂಗಳೂರು: 35 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 34 ಡಿ.ಸೆ – 20 ಡಿ.ಸೆ
ಗದಗ: 34 ಡಿ.ಸೆ – 18 ಡಿ.ಸೆ
ಹೊನ್ನಾವರ: 33 ಡಿ.ಸೆ- 21 ಡಿ.ಸೆ
ಕಲಬುರಗಿ: 37 ಡಿ.ಸೆ – 22 ಡಿ.ಸೆ
ಬೆಳಗಾವಿ: 35 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 21 ಡಿ.ಸೆ

Continue Reading

ಕೊಪ್ಪಳ

Koppala News: ಶೀಘ್ರ ಅಗಳಕೇರ-ಬನ್ನಿಕೊಪ್ಪ ಮೇಲ್ಸೇತುವೆ ನಿರ್ಮಾಣ: ಸಂಸದ ಕರಡಿ ಸಂಗಣ್ಣ

Koppala News: ಕೊಪ್ಪಳ ಲೋಕಸಭಾ ವ್ಯಾಪ್ತಿಯ ರೈಲ್ವೆ ಅಭಿವೃದ್ಧಿ ಕಾಮಗಾರಿಗಳು, ಲೋಕಾರ್ಪಣೆಗೆ ಸಂಬಂಧಿಸಿದ ವಿಷಯಗಳ ಕುರಿತು ಕೊಪ್ಪಳ ಸಂಸದ ಕರಡಿ ಸಂಗಣ್ಣ, ರೇಲ್ವೆ ಇಲಾಖೆಯ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್ ಅವರನ್ನು ಭೇಟಿ ಮಾಡಿ, ಚರ್ಚೆ ನಡೆಸಿದರು.

VISTARANEWS.COM


on

Soon construction of Agalakera Bannikoppa flyover says MP Karadi Sanganna
Koo

ಕೊಪ್ಪಳ: ಕೊಪ್ಪಳ ಲೋಕಸಭಾ ವ್ಯಾಪ್ತಿಯ ಅಗಳಕೇರ ಮತ್ತು ಬನ್ನಿಕೊಪ್ಪ ಬಳಿ ಶೀಘ್ರ ಮೇಲ್ಸೇತುವೆ ನಿರ್ಮಾಣ ಮಾಡಲಾಗುವುದು ಎಂದು ಸಂಸದ ಕರಡಿ ಸಂಗಣ್ಣ ಭರವಸೆ (Koppala News) ನೀಡಿದರು.

ಕೊಪ್ಪಳ ಲೋಕಸಭಾ ವ್ಯಾಪ್ತಿಯ ರೈಲ್ವೆ ಅಭಿವೃದ್ಧಿ ಕಾಮಗಾರಿಗಳು, ಲೋಕಾರ್ಪಣೆಗೆ ಸಂಬಂಧಿಸಿದ ವಿಷಯಗಳ ಕುರಿತು ರೇಲ್ವೆ ಇಲಾಖೆಯ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್ ಅವರನ್ನು ಭೇಟಿ ಮಾಡಿ, ಚರ್ಚೆ ನಡೆಸಿದರು.

ಇದನ್ನೂ ಓದಿ: Job Fair : ಫೆ.26-27ರಂದು ಬೃಹತ್ ಉದ್ಯೋಗ ಮೇಳ, 500 ಕಂಪನಿಗಳು ಭಾಗಿ, 1 ಲಕ್ಷ ಜಾಬ್‌!

ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕಳೆದ 10 ವರ್ಷದಲ್ಲಿ ರೈಲ್ವೆ ಕ್ರಾಂತಿಯಾಗಿದೆ. ತಾಲೂಕುಗಳಿಗೆ ರೈಲು ಸಂಚಾರ ನಡೆಸಲಾಗುತ್ತಿದೆ. ರೈಲ್ವೆ ಗೇಟ್ ಬಳಿ ಮೇಲ್ಸೇತುವೆ ಆಗುತ್ತಿವೆ. ಇಂದೆಂದೂ ಕಾಣದಂತ ಅಭಿವೃದ್ಧಿ ಕಳೆದ ಹತ್ತು ವರ್ಷದಲ್ಲಿ ಆಗಿದೆ. ಗಿಣಿಗೇರಾ – ಮಹೆಬೂಬ್ ನಗರ ರೈಲ್ವೆ ಯೋಜನೆಗೆ ಪ್ರಸ್ತುತ ಸಾಲಿನಲ್ಲಿ 300 ಕೋಟಿ ರೂ. ಹಾಗೂ ಗದಗ- ವಾಡಿ ಗೆ 350 ಕೋಟಿ ರೂ. ಮೀಸಲಿಡಲಾಗಿದೆ. ನಮ್ಮ ಬದ್ಧತೆಯಂತೆ ರೈಲ್ವೆ ಯೋಜನೆ ಪೂರ್ಣಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: Health Benefits Of Strawberries: ಸ್ಟ್ರಾಬೆರಿ ತಿಂದರೆ ಲಾಭಗಳು ಒಂದೆರಡಲ್ಲ!

ಲೋಕಸಭಾ ಚುನಾವಣೆಯಲ್ಲಿ 8 ವಿಧಾನಸಭಾ ಕ್ಷೇತ್ರಕ್ಕೆ ನೀಡಿದ ಭಾಗಶಃ ಭರವಸೆಗಳನ್ನು ಈಡೇರಿಸಿದ್ದೇವೆ. ಅಭಿವೃದ್ಧಿ ಕೆಲಸಗಳಿಂದ ಹಾಗೂ ಜನರ ಆಶೀರ್ವಾದದಿಂದ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸತತವಾಗಿ ಗೆಲುವು ಸಾಧಿಸಿದೆ ಎಂದು ಹೇಳಿದರು.

Continue Reading

ಮಳೆ

Karnataka Weather: 34 – 35 ಡಿಗ್ರಿ ಸೆಲ್ಸಿಯಸ್‌ ತಲುಪಿದ ತಾಪಮಾನ; ಈ ಜಿಲ್ಲೆಗಳು ಸೆಕೆಯ ತಾಣ!

Karnataka Weather: ಚಿತ್ರದುರ್ಗದಲ್ಲಿ ಮುಂದಿನ ಆರು ದಿನಗಳ ಕಾಲ 33-34 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ಇರಲಿದೆ. ಇದು ಸಹ ಒಂದೆರಡು ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಲೂಬಹುದು ಎಂದು ಅಂದಾಜಿಸಲಾಗಿದೆ. ಕನಿಷ್ಠ ತಾಪಮಾನವು 17 ಡಿಗ್ರಿ ಇರಲಿದೆ. ಅದೇ ಗದಗ ಜಿಲ್ಲೆಯಲ್ಲಿ 34-35 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ಇರಲಿದೆ ಎನ್ನಲಾಗಿದ್ದು, ಕನಿಷ್ಠ ತಾಪಮಾನವು 16-17 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

VISTARANEWS.COM


on

Temperature reached 34 to 35 degrees Celsius Karnataka Weather
Koo

ಬೆಂಗಳೂರು: ರಾಜ್ಯದಲ್ಲಿ ಮುಂದಿನ 48 ಗಂಟೆಯಲ್ಲಿ (ಗುರುವಾರ ಮತ್ತು ಶುಕ್ರವಾರ) ಸೆಕೆಯ ವಾತಾವರಣ ಮುಂದುವರಿಯಲಿದೆ. ಬಿಸಿಲು ಹೆಚ್ಚಾಗಿ ಇರುವುದರಿಂದ ಭಾರಿ ಪ್ರಮಾಣದಲ್ಲಿ ಸೆಕೆ ಉಂಟಾಗಲಿದೆ. ಅದರಲ್ಲೂ ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣಕನ್ನಡ, ಗದಗ, ಚಿತ್ರದುರ್ಗ ಸೇರಿದಂತೆ ಹಲವು ಕಡೆ ಈಗಾಗಲೇ ಗರಿಷ್ಠ ತಾಪಮಾನವು 34 – 35 ಡಿಗ್ರಿ ಸೆಲ್ಸಿಯಸ್‌ ತಲುಪಿದ್ದು, ಇನ್ನೂ ಒಂದೆರಡು ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಬಹುದು ಎಂದು ಅಂದಾಜಿಸಲಾಗಿದೆ. ರಾಜ್ಯ ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿ (Karnataka Weather Forecast) ಪ್ರಕಾರ, ಗರಿಷ್ಠ ತಾಪಮಾನದಲ್ಲಿ (Maximum Temperature) ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಉತ್ತರ ಕನ್ನಡ, ಶಿವಮೊಗ್ಗದ ಹವಾಮಾನ ಹೀಗಿದೆ

ಹವಾಮಾನ ಇಲಾಖೆಯ ವರದಿಯನ್ವಯ, ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಮುಂದಿನ ಆರು ದಿನಗಳ ಕಾಲ 34 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ಇರಲಿದೆ. ಇದು ಒಂದೆರಡು ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಲೂಬಹುದು ಎಂದು ಅಂದಾಜಿಸಲಾಗಿದೆ. ಅಂದರೆ ಫೆಬ್ರವರಿ 20ರವರೆಗೆ ಈ ವಾತಾವರಣ ಇರಲಿದೆ. ಅದೇ ಕನಿಷ್ಠ ತಾಪಮಾನವು 21-22 ಡಿಗ್ರಿ ಆಸುಪಾಸಿನಲ್ಲಿರಲಿದೆ ಎಂದು ಅಂದಾಜಿಸಿದೆ. ಮಲೆನಾಡು ಶಿವಮೊಗ್ಗದಲ್ಲಿಯೂ ಇನ್ನೊಂದು ವಾರ 34-35 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎನ್ನಲಾಗಿದೆ.

ಈ ಜಿಲ್ಲೆಗಳಲ್ಲಿ ಹೆಚ್ಚಿನ ತಾಪಮಾನ

ಚಿತ್ರದುರ್ಗದಲ್ಲಿ ಮುಂದಿನ ಆರು ದಿನಗಳ ಕಾಲ 33-34 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ಇರಲಿದೆ. ಇದು ಸಹ ಒಂದೆರಡು ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಲೂಬಹುದು ಎಂದು ಅಂದಾಜಿಸಲಾಗಿದೆ. ಕನಿಷ್ಠ ತಾಪಮಾನವು 17 ಡಿಗ್ರಿ ಇರಲಿದೆ. ಅದೇ ಗದಗ ಜಿಲ್ಲೆಯಲ್ಲಿ 34-35 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ಇರಲಿದೆ ಎನ್ನಲಾಗಿದ್ದು, ಕನಿಷ್ಠ ತಾಪಮಾನವು 16-17 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಇನ್ನು ಕಲಬುರಗಿಯಲ್ಲಿ ಇನ್ನೊಂದು ವಾರ 35 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ಇರಲಿದೆ. ಇದು ಹೆಚ್ಚಾಗಲೂ ಬಹುದು ಎಂದು ಅಂದಾಜಿಸಲಾಗಿದೆ. ಹೀಗಾಗಿ ಈ ಎಲ್ಲ ಕಡೆ ಹೆಚ್ಚಿನ ಸಮಯದಲ್ಲಿ ಬಿಸಿಲು ಹಾಗೂ ಸೆಕೆ ಹೆಚ್ಚಿನ ಪಾಲನ್ನು ತೆಗೆದುಕೊಳ್ಳಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚು

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈಗಾಗಲೇ ಬಿಸಿಲು ಹೆಚ್ಚಾಗಿದೆ. ಕನಿಷ್ಠ ಹಾಗೂ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 1.5 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲೂ ಏರಿಕೆ

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ ಮತ್ತು ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗದಲ್ಲಿ ಶುಷ್ಕ ವಾತಾವರಣ ಇರಲಿದೆ.

ಬೆಂಗಳೂರಲ್ಲಿ ಇನ್ನೊಂದು ವಾರ ಹೇಗೆ?

ಬೆಂಗಳೂರಿನಲ್ಲಿ ಈಗಾಗಲೇ ಸೆಕೆ ಹೆಚ್ಚಿದ್ದು, ಇನ್ನೂ ಒಂದು ವಾರ ಇದರಲ್ಲಿ ಯಾವುದೇ ಬದಲಾವಣೆ ಆಗುವ ಸೂಚನೆಗಳು ಇಲ್ಲ. ಏಕೆಂದರೆ ಇನ್ನೊಂದು ವಾರ 31ರಿಂದ 32 ಡಿಗ್ರಿ ಸೆಲ್ಸಿಯಸ್‌ನಲ್ಲಿ ರಾಜಧಾನಿಯ ವಾತಾವರಣ ಇರಲಿದೆ. ಗುರುವಾರದಂದು ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್‌ ಇರಲಿದ್ದರೆ, ಗರಿಷ್ಠ ಉಷ್ಣಾಂಶವು 31 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ ಹೇಳಿದೆ.

ಇದು ಉತ್ತರ ಒಳನಾಡಿನ ಸ್ಥಿತಿ

ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಉಷ್ಣಾಂಶವು ಸಾಮಾನ್ಯಕ್ಕಿಂತ ಒಂದೆರಡು ಡಿಗ್ರಿ ಸೆಲ್ಸಿಯಸ್‌ ಹೆಚ್ಚಿರಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಿಸಿಲು ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: HSRP Number Plate ಅವಧಿ ಮತ್ತೆ 3 ತಿಂಗಳು ವಿಸ್ತರಣೆ; ವಿಧಾನ ಪರಿಷತ್‌ನಲ್ಲಿ ಸರ್ಕಾರ ಘೋಷಣೆ

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 32 ಡಿ.ಸೆ -17 ಡಿ.ಸೆ
ಮಂಗಳೂರು: 35 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 34 ಡಿ.ಸೆ – 18 ಡಿ.ಸೆ
ಗದಗ: 35 ಡಿ.ಸೆ – 17 ಡಿ.ಸೆ
ಹೊನ್ನಾವರ: 34 ಡಿ.ಸೆ- 23 ಡಿ.ಸೆ
ಕಲಬುರಗಿ: 35 ಡಿ.ಸೆ – 21 ಡಿ.ಸೆ
ಬೆಳಗಾವಿ: 34 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ

Continue Reading

ಕೊಪ್ಪಳ

Koppala News: ದೆಹಲಿ ಪ್ರತಿಭಟನೆಯಲ್ಲಿ ರೈತರಿಲ್ಲ, ಚೀನಾ ಪ್ರೇರಿತ ಕಾಂಗ್ರೆಸ್‌ ಟೂಲ್‌ಕಿಟ್‌ ಪಿತೂರಿ: ಹರಿಪ್ರಕಾಶ್ ಕೋಣೆಮನೆ

Koppala News: ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ರೈತರಿಲ್ಲ. ಅವರೆಲ್ಲಾ ಚೀನಾ ಪ್ರೇರಿತ ಕಾಂಗ್ರೆಸ್‌ನ ಟೂಲ್‌ಕಿಟ್‌ನ ರೂಪವಷ್ಟೆ. ಇದೆಲ್ಲಾ ಭಾರತದ ವಿರೋಧಿ ವಿದೇಶಿ ಶಕ್ತಿಗಳ ಕೈವಾಡದಿಂದ ಆಗುತ್ತಿರುವ ಪ್ರತಿಭಟನೆ ಎಂದು ರಾಜ್ಯ ಬಿಜೆಪಿ ವಕ್ತಾರ ಹರಿಪ್ರಕಾಶ್ ಕೋಣೆಮನೆ ಆರೋಪಿಸಿದ್ದಾರೆ.

VISTARANEWS.COM


on

hariprakash konemane
Koo

ಗಂಗಾವತಿ: ದೆಹಲಿಯಲ್ಲಿ (Delhi) ನಡೆಯುತ್ತಿರುವ ಪ್ರತಿಭಟನೆಯಲ್ಲಿ ರೈತರಿಲ್ಲ. ಅವರೆಲ್ಲಾ ಚೀನಾ (China) ಪ್ರೇರಿತ ಕಾಂಗ್ರೆಸ್‌ನ ಟೂಲ್‌ಕಿಟ್‌ನ ಒಂದು ರೂಪವಷ್ಟೆ. ಇದೆಲ್ಲಾ ಭಾರತದ ವಿರೋಧಿ ವಿದೇಶಿಗಳ ಕೈವಾಡದಿಂದ ಆಗುತ್ತಿರುವ ಪ್ರತಿಭಟನೆ ಎಂದು ರಾಜ್ಯ ಬಿಜೆಪಿ ವಕ್ತಾರ ಹರಿಪ್ರಕಾಶ್ ಕೋಣೆಮನೆ (Koppala News) ಆರೋಪಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಬಹುತೇಕ ರೈತರು 50 ಲಕ್ಷ ರೂಪಾಯಿ ಬೆಲೆ ಬಾಳುವ ಕಾರು, ಐಷಾರಾಮಿ ವಾಹನಗಳಲ್ಲಿ ದೆಹಲಿಯ ಜಂತರ್‌ಮಂತರ್‌ನತ್ತ ಬರುತ್ತಿದ್ದಾರೆ. ಇವರು ನಿಜವಾದ ರೈತರು ಹೌದೋ ಅಲ್ಲವೋ ಎನ್ನುವುದನ್ನು ಇದು ಸೂಚಿಸುತ್ತದೆ ಎಂದರು.

ಐಷಾರಾಮಿ ಕಾರಿನಲ್ಲಿ ಬರುವ ರೈತರು ತಮ್ಮ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಕೇಳಲು ಆರು ತಿಂಗಳಿಗೆ ಆಗುವಷ್ಟು ಆಹಾರ ಧಾನ್ಯಗಳ ಸಮೇತ ದೆಹಲಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತಾರೆಯೇ ಎಂದು ಪ್ರಶ್ನಿಸಿದ ಅವರು, ಇದರ ಹಿಂದೆ ಚೀನಾ ಪ್ರೇರಿತ ಕಾಂಗ್ರೆಸ್‌ನ ಷಡ್ಯಂತ್ರವಿದೆ ಎಂದು ಆಪಾದಿಸಿದರು.

ಇದನ್ನೂ ಓದಿ: Child Artists : ಸೀರಿಯಲ್‌, ರಿಯಾಲಿಟಿ ಶೋದಲ್ಲಿ ಮಕ್ಕಳ ಅಭಿನಯ; ಡಿಸಿ ಅನುಮತಿ ಸಹಿತ ಹಲವು ಕಂಡಿಷನ್ಸ್‌

ರೈತರ ಹೆಸರಲ್ಲಿರುವ ಪ್ರತಿಭಟನಾಕಾರರು ಸರ್ಕಾರದೊಂದಿಗೆ ಮಾತುಕತೆಗೂ ಸಿದ್ಧವಿಲ್ಲ. ಪ್ರತಿಭಟನೆ ನಡೆಸಿ ಆರು ತಿಂಗಳ ಬಳಿಕ ಚುನಾವಣೆ ಮುಗಿಯುತ್ತಿದ್ದಂತೆಯೆ ನಿರ್ಗಮಿಸುವುದು ಈ ಪ್ರತಿಭಟನೆಯ ಸ್ವರೂಪವಾಗಿದೆ ಎಂದರು.

ರೈತರ ವೇಷದಲ್ಲಿ ಈ ದೇಶದ ವಿರುದ್ಧ ಕೆಲಸ ಮಾಡುತ್ತಿರುವವರೇ ಅಲ್ಲಿ ಅಧಿಕವಾಗಿದ್ದಾರೆ. ಬಜೆಟ್‌ನಲ್ಲಿ ಮೋದಿ ಸರ್ಕಾರ ಕೃಷಿಗೆ ಗರಿಷ್ಠ ಆದ್ಯತೆ ನೀಡಿದೆ. ರಾಜ್ಯದಲ್ಲಿ ಬೆಳೆದ 40 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಕೇಂದ್ರ ಖರೀದಿಸಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: IPL 2024: ಭಾರತದಲ್ಲೇ ಐಪಿಎಲ್​; ಖಚಿತಪಡಿಸಿದ ಅಧ್ಯಕ್ಷ ಅರುಣ್ ಧುಮಾಲ್

ಇಂದು ಕೇಂದ್ರ ಸರ್ಕಾರ ಜಾರಿಗೆ ತಂದಿರುವ 29 ರೂಪಾಯಿಗೆ ಕೆಜಿ ಅಕ್ಕಿ ಕೂಡ ರೈತರಿಂದಲೇ ಖರೀದಿಸಿರುವುದು. ಈ ಮೂಲಕ ಅಕ್ಕಿ ಬೆಳೆಗಾರರಿಗೆ, ರೈತರಿಗೆ ಅನುಕೂಲ ಕಲ್ಪಿಸುವಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ತಿಳಿಸಿದರು.

ಕ್ಯಾಂಟೀನ್‌ಗಳಲ್ಲಿ ರಾಹುಲ್‌ ಗಾಂಧಿ ಭಾಷಣ

ಇಲ್ಲಿನ ಜನರನ್ನು ಸರ್ಕಾರದ ವಿರುದ್ಧ ಎತ್ತಿಕಟ್ಟುವಂತಹ ಕಾರ್ಯ ಇದೇ ಮೊದಲಲ್ಲ. ಈ ಹಿಂದೆ ಅಮೆರಿಕಾದ ಅಧ್ಯಕ್ಷರು ಭಾರತಕ್ಕೆ ಬಂದಾಗಲೂ ಪ್ರತಿಭಟನೆ ಮಾಡಿಸಲಾಗಿತ್ತು. ವಿದೇಶಿ ವಿಶ್ವವಿದ್ಯಾಲಯಗಳಿಗೆ ಹೋಗುತ್ತಿರುವ ರಾಹುಲ್ ಗಾಂಧಿ ಅಲ್ಲಿನ ಕ್ಯಾಂಟೀನ್‌ಗಳಲ್ಲಿ ಭಾಷಣ ಮಾಡಿ ಬರುತ್ತಿದ್ದಾರೆ. ವಿದೇಶಿ ವಿಶ್ವವಿದ್ಯಾಲಯಗಳು ಇವರಿಗೆ ಆಹ್ವಾನ ನೀಡದೇ ಹೋದರೂ ಅಲ್ಲಿನ ಕ್ಯಾಂಟೀನ್‌ಗಳಲ್ಲಿ ಕುಳಿತು ಭಾರತದ ವಿರುದ್ಧ ರಾಹುಲ್ ಗಾಂಧಿ ಅವರು ಮಾತನಾಡಿ ಬರುತ್ತಿದ್ದಾರೆ. ಅರುಣಾಚಲದಲ್ಲಿ ಚೀನಾ ಅತಿಕ್ರಮಣ ಮಾಡಿದೆ ಎಂದು ರಾಹುಲ್‌ ಗಾಂಧಿ ಆರೋಪಿಸಿದ ಮಾರನೇ ದಿನ ಚೀನಾ ನಕಲಿ ನಕಾಶೆ ಬಿಡುಗಡೆ ಮಾಡುತ್ತದೆ. ಇದೆಲ್ಲ ಮೋದಿ ಸರ್ಕಾರದ ವಿರುದ್ಧದ ಸಂಘಟಿತ ಪಿತೂರಿ ಎಂದು ಕೋಣೆಮನೆ ಆಪಾದಿಸಿದರು.

ಇದೆಲ್ಲವನ್ನೂ ಗಮನಿಸಿದರೆ ರಾಹುಲ್‌ ಗಾಂಧಿಗೂ ಚೀನಾ ಸರ್ಕಾರಕ್ಕೂ ಸಂಬಂಧ ಇಲ್ಲ ಎಂದು ಹೇಳಲು ಸಾಧ್ಯವಿಲ್ಲ. ಹೀಗಾಗಿ ರಾಹುಲ್ ಗಾಂಧಿ ಮಾಡುವ ಪ್ರತಿಯೊಂದು ಕೆಲಸದ ಹಿಂದೆ ಚೀನಾ, ಪಾಕಿಸ್ತಾನ ಸೇರಿದಂತೆ ಭಾರತದ ಶತ್ರು ರಾಷ್ಟ್ರಗಳ ಹಸ್ತಕ್ಷೇಪವಿದೆ ಎಂದು ಅವರು ಆರೋಪಿಸಿದರು.

ಇದನ್ನೂ ಓದಿ: Karnataka Weather: ಅಬ್ಬಬ್ಬಾ.. ಕರುನಾಡಲ್ಲಿ ಸೆಕೆ ನೋಡು! ಹೊರಗೆ ಬಂದರೆ ಮಂಡೆ ಬಿಸಿ

ಈ ವೇಳೆ ಬಿಜೆಪಿ ಮುಖಂಡ ಎನ್. ಸೂರಿಬಾಬು ಇದ್ದರು.

Continue Reading
Advertisement
INDIA Alliance partners Congress and AAP Seal seat deal for Goa, Haryana, Gujarat
ದೇಶ7 mins ago

INDIA Alliance: ದಿಲ್ಲಿ ಬಳಿಕ ಗೋವಾ, ಹರ್ಯಾಣ, ಗುಜರಾತ್‌ನಲ್ಲೂ ಕಾಂಗ್ರೆಸ್-ಆಪ್ ಸೀಟು ಹಂಚಿಕೆ ಫೈನಲ್!

Aryaman Ashok Shankar
ಚಾಮರಾಜನಗರ8 mins ago

Social Sevice : ಶ್ರವಣದೋಷವುಳ್ಳ ಮಕ್ಕಳ ಕೇಂದ್ರಕ್ಕೆ ಕ್ರೀಡಾಪರಿಕರಗಳ ವಿತರಣೆ

ರಾಜಕೀಯ14 mins ago

Karnataka Budget Session 2024: ಈ ಸರ್ಕಾರದಿಂದ ಹಿಂದೂಗಳಿಗೆ ದ್ರೋಹ: ಆರ್‌. ಅಶೋಕ್‌

Mudda Hanumegowda joins Congress
ತುಮಕೂರು14 mins ago

Mudda hanumegowda : ಕೆಲವರ ಅತೃಪ್ತಿ ನಡುವೆ ಮತ್ತೆ ಕೈ ಸೇರಿದ ಮುದ್ದಹನುಮೇಗೌಡ

D. hiremath foundation
ಉತ್ತರ ಕನ್ನಡ33 mins ago

Arun Yogiraj : ರಾಮಲಲ್ಲಾ ವಿಗ್ರಹ ಕೆತ್ತಿದ ಅರುಣ್​ ಯೋಗಿರಾಜ್​ಗೆ ‘ಅಭಿನವ ಅಮರ ಶಿಲ್ಪಿ’ ಪುರಸ್ಕಾರ

For Registration Movie Telugu Dubbing Rights sold for huge amount
ಸಿನಿಮಾ39 mins ago

For Registration Movie: ರಿಲೀಸ್‌ಗೂ ಮೊದ್ಲೇ ’ಫಾರ್ ರಿಜಿಸ್ಟ್ರೇಷನ್’ಗೆ ಡಿಮ್ಯಾಂಡ್! ತೆಲುಗಿಗೂ ಹೊರಟ ಪೃಥ್ವಿ-ಮಿಲನಾ

Uttara Kannada ZP CEO eshwar Kandu visited Dayanilaya specially abled School in Kumta
ಉತ್ತರ ಕನ್ನಡ48 mins ago

Uttara Kannada News: ಸಾಧಿಸುವ ಛಲವಿದ್ದರೆ ಸಾಧನೆಯ ಹಾದಿ ಕಷ್ಟವಲ್ಲ: ಜಿ.ಪಂ ಸಿಇಒ ಈಶ್ವರ ಕಾಂದೂ

Chakravarthi sulibele spoke in Namo Bharat programme at Kudligi
ವಿಜಯನಗರ50 mins ago

Vijayanagara News: ಸರ್ವ ಶ್ರೇಷ್ಠ ಭಾರತಕ್ಕಾಗಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು: ಚಕ್ರವರ್ತಿ ಸೂಲಿಬೆಲೆ

DY Chandrachud
ಪ್ರಮುಖ ಸುದ್ದಿ60 mins ago

C J Chandrachud : ಯೋಗ, ಸಸ್ಯಾಹಾರ; ಒತ್ತಡ ನಿವಾರಣೆ ತಂತ್ರ ವಿವರಿಸಿದ ಸುಪ್ರಿಂ ಕೋರ್ಟ್​​ ಮುಖ್ಯ​ ನ್ಯಾಯಮೂರ್ತಿ

Belagavi Airport recorded the lowest minimum temperature and Dry weather likely to prevail
ಮಳೆ1 hour ago

Karnataka Weather : ಬೆಂಗಳೂರಲ್ಲಿ ಸೂರ್ಯ ಮರೆಯಾದರೂ ಏರಲಿದೆ ತಾಪಮಾನ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ4 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ4 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Catton Candy contain cancer Will there be a ban in Karnataka
ಬೆಂಗಳೂರು3 hours ago

cotton candy Ban : ಕರ್ನಾಟಕದಲ್ಲಿ ಬ್ಯಾನ್‌ ಆಗುತ್ತಾ ಬಾಂಬೆ ಮಿಠಾಯಿ; ಕ್ಯಾನ್ಸರ್​​ ಕಾರಕ ವಿಷ ಪತ್ತೆ!

Swarnavalli Mutt appoints successor ceremony
ಕರ್ನಾಟಕ6 hours ago

Swarnavalli Mutt: ಸ್ವರ್ಣವಲ್ಲೀ ಶ್ರೀಗಳ ಶಿಷ್ಯ ಸ್ವೀಕಾರ ಸಂಪನ್ನ; ಇಲ್ಲಿದೆ ಲೈವ್‌ ವಿಡಿಯೊ

read your daily horoscope predictions for february 21 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಸಂಗಾತಿಯ ವರ್ತನೆಯು ಕೋಪ, ಮುಜುಗರವನ್ನುಂಟು ಮಾಡುತ್ತೆ!

read your daily horoscope predictions for february 20 2024
ಭವಿಷ್ಯ3 days ago

Dina Bhavishya : ಈ ದಿನ ಆತುರದಲ್ಲಿ ಈ ರಾಶಿಯವರು ಯಾವ ತೀರ್ಮಾನವನ್ನು ಮಾಡ್ಬೇಡಿ!

read your daily horoscope predictions for february 19 2024
ಭವಿಷ್ಯ4 days ago

Dina Bhavishya : ನಿಮ್ಮನ್ನು ದ್ವೇಷಿಸುವವರೇ ಸ್ನೇಹಿತರಾಗಿ ಬದಲಾಗುತ್ತಾರೆ

read your daily horoscope predictions for february 18 2024
ಭವಿಷ್ಯ5 days ago

Dina Bhavishya : ಈ ರಾಶಿಯವರು ಇಂದು ನೀರಿನಂತೆ ಹಣವನ್ನು ಖರ್ಚು ಮಾಡ್ತಾರೆ

Challenging Darsha
ಪ್ರಮುಖ ಸುದ್ದಿ5 days ago

Actor Darshan : ಚಾಲೆಂಜಿಂಗ್ ಸ್ಟಾರ್​ ದರ್ಶನ್​ ‘ಬೆಳ್ಳಿ ಪರ್ವ’ ಕಾರ್ಯಕ್ರಮದ ಲೈವ್​ ಇಲ್ಲಿ ವೀಕ್ಷಿಸಿ

Children lock up their mother for property
ಕರ್ನಾಟಕ5 days ago

Inhuman Behaviour : ಆಸ್ತಿಗಾಗಿ ಹೆತ್ತ ತಾಯಿಯನ್ನೇ ಗೃಹ ಬಂಧನದಲ್ಲಿಟ್ಟರು ಮಕ್ಕಳು!

read your daily horoscope predictions for february 17 2024
ಭವಿಷ್ಯ6 days ago

Dina Bhavishya : ಈ ರಾಶಿಯವರು ಸೀಕ್ರೆಟ್‌ ವಿಷ್ಯವನ್ನು ರಿವೀಲ್‌ ಮಾಡಿದ್ರೆ ಅಪಾಯ ಗ್ಯಾರಂಟಿ!

Karnataka Budget Session 2024 siddaramaiah use cinema Lines
ಸಿನಿಮಾ6 days ago

Karnataka Budget Session 2024: ಡಾಲಿ ಧನಂಜಯ್‌ ಬರೆದ ಸಾಲುಗಳು ಬಜೆಟ್‌ನಲ್ಲಿ ಹೈಲೈಟ್‌!

ಟ್ರೆಂಡಿಂಗ್‌