ಕನಕಗಿರಿ: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವ-ಸಹಾಯ ಗುಂಪಿನ ಸದಸ್ಯರಿಗೆ ಹಮ್ಮಿಕೊಳ್ಳಲಾಗಿದ್ದ ಆರು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭ (Koppala News) ನಡೆಯಿತು.
ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಬೆಂಗಳೂರು, ಸಂಜೀವಿನಿ-ಕೆ.ಎಸ್.ಆರ್.ಎಲ್.ಪಿ.ಎಸ್ ಬೆಂಗಳೂರು, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಕೊಪ್ಪಳ ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಜಶೇಖರ್ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.
ಇದನ್ನೂ ಓದಿ: Karnataka Rain : ಭಾರಿ ಮಳೆ ಎಫೆಕ್ಟ್-ಮಲಗಿದ್ದ ವ್ಯಕ್ತಿ ಮೇಲೆ ಬಿದ್ದ ಗೋಡೆ; ಮರ ಬಿದ್ದು ಕಾರು ಜಖಂ, ಚಾಲಕ ಜಸ್ಟ್ ಮಿಸ್
ಈ ಸಂಧರ್ಭದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಭಾರಿ ಪ್ರಾಂಶುಪಾಲ ಮಾರೆಪ್ಪ ಎನ್., ತಾಲೂಕಿನ ವಲಯ ಮೇಲ್ವೀಚಾರಕಿ ರೇಣುಕಾ ಕೆ ದೇವರಮನಿ, ಸಿಡಾಕ್ ಸಂಸ್ಥೆಯ ತರಬೇತಿ ಸಂಯೋಜಕರಾದ ಅಕ್ಷತಾ ಮತ್ತು ಶೋಭಾ, ಸಂಜೀವಿನಿ ಯೋಜನೆಯ ಬಿಆರ್‌ಪಿ ಇಪಿ ಮತ್ತು ಉದ್ಯಮಶೀಲತಾ ತರಬೇತಿಗೆ ಹಾಜರಾದ ಸ್ವ ಸಹಾಯ ಗುಂಪಿನ ಮಹಿಳಾ ಸದಸ್ಯರು ಪಾಲ್ಗೊಂಡಿದ್ದರು.