ಕಾರಟಗಿ: ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಪಾರಂಪರಿಕ ಸ್ಮಾರಕಗಳ (Monuments) ಸಂರಕ್ಷಣೆ ಮತ್ತು ಸ್ವಚ್ಚತಾ ಅಭಿಯಾನ ಅಂಗವಾಗಿ ಗ್ರಾಮದ ಐತಿಹಾಸಿಕ ಕಲ್ಯಾಣಿ (ಸೊಸೆಯಂದಿರ ಬಾವಿ) ಸ್ಥಳದಲ್ಲಿ ಶ್ರಮದಾನ ಮಾಡಲಾಯಿತು.
ಪುರಾತತ್ವ ಸರ್ವೇಕ್ಷಣ ಇಲಾಖೆ, ರಾಜ್ಯ ಪುರಾತತ್ವ ವಸ್ತು ಸಂಗ್ರಹಾಲಯಗಳು ಹಾಗೂ ಪಾರಂಪರಿಕ ಇಲಾಖೆ ಮೈಸೂರು, ಜಿಲ್ಲಾಡಳಿತ, ತಾ.ಪಂ ಕಾರಟಗಿ ಹಾಗೂ ಗ್ರಾಮ ಪಂಚಾಯಿತಿ ಸಿದ್ದಾಪುರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರಮದಾನ ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷೆ ಹಸೀನಾ ಬೇಗಂ ಮಾತನಾಡಿ, ಸ್ಮಾರಕಗಳ ಸಂರಕ್ಷಣೆ ಮಾಡುವ ಉದ್ದೇಶದಿಂದ ನಮ್ಮ ನಡಿಗೆ ಪರಂಪರೆಯ ಕಡೆಗೆ ಎಂಬ ಘೋಷವಾಕ್ಯದೊಂದಿಗೆ ಗಿಡ-ಗಂಟೆಗಳಿಂದ ಮುಚ್ಚಿ ಹೋಗುತ್ತಿದ್ದ ಸ್ಮಾರಕಗಳ ಸ್ವಚ್ಛತೆ, ಸಂರಕ್ಷಣಾ ಅಭಿಯಾನವನ್ನು ಹಮ್ಮಿಕೊಂಡಿದ್ದು ಇದೊಂದು ಉತ್ತಮ ಕಾರ್ಯವಾಗಿದೆ.
ಸ್ಥಳೀಯ ಜನರಿಗೆ ಹಾಗೂ ಯುವ ಪೀಳಿಗೆಗೆ ಸ್ಮಾರಕಗಳು, ದೇವಾಲಯಗಳ ಬಗ್ಗೆ ಅರಿವು ಮೂಡಿಸುವುದು ಅತ್ಯವಶ್ಯಕವಾಗಿದೆ. ಅದಕ್ಕಾಗಿ ನಾವೆಲ್ಲರೂ ಕೈಜೋಡಿಸಿ, ಸ್ಮಾರಕಗಳು, ದೇವಾಲಯಗಳ ಸಂರಕ್ಷಣೆ ಮಾಡಲು ಸಹಕಾರ ನೀಡಬೇಕಾಗಿದೆ ಎಂದರು.
ಇದನ್ನೂ ಓದಿ: ಕೇಂದ್ರದ ಪಿಎಂ ಗರೀಬ್ ಕಲ್ಯಾಣ್ ಅನ್ನ ಸ್ಕೀಂ 5 ವರ್ಷದವರೆಗೆ ವಿಸ್ತರಣೆ!
ಸ್ವಚ್ಚತಾ ಕಾರ್ಯದಲ್ಲಿ ಕಂದಾಯ ಇಲಾಖೆ, ತಾಲೂಕು ಪಂಚಾಯಿತಿ, ಆರೋಗ್ಯ ಇಲಾಖೆ, ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ ಸೇರಿದಂತೆ ಇನ್ನಿತರೆ ಇಲಾಖೆಯವರು ಸಹ ಭಾಗಿಯಾಗಿದ್ದರು.
ಇದನ್ನೂ ಓದಿ: Pneumonia Outbreak: ಕರ್ನಾಟಕ ಸೇರಿ 6 ರಾಜ್ಯಗಳಲ್ಲಿ ಅಲರ್ಟ್
ಈ ಸಂದರ್ಭಗಳಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಹಿರೇಮಠ, ಕಾರ್ಯದರ್ಶಿ ಮಹೆಬೂಬ್ ಸಾಬ್, ಐಇಸಿ ಸಂಯೋಜಕ ಸೋಮನಾಥ ಗೌಡರ, ಸದಸ್ಯರಾದ ಪ್ರಿಯಾಂಕಾ ಪವಾರ್, ಹೊನ್ನೂರಪ್ಪ, ಸುಂಕದ ಗಂಗಪ್ಪ, ಖಾದರಸಾಬ್, ಚನ್ನಬಸವನಗೌಡ, ದೊಡ್ದ ಹನುಮೇಶ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸ್ವಸಹಾಯ ಗುಂಪಿನ ಸದಸ್ಯರು, ಶಾಲಾ ಮಕ್ಕಳು ಪಾಲ್ಗೊಂಡಿದ್ದರು.