Site icon Vistara News

Koppala News: ಗಂಗಾವತಿಯಲ್ಲಿ ಸರ್ಕಾರಿ ಶಾಲೆಗಳಿಗೆ ಉಚಿತ ಸ್ಮಾರ್ಟ್‌ ಟಿವಿ ವಿತರಣೆ

Free Smart TV distribution programme for government schools in Gangavathi

ಗಂಗಾವತಿ: ಸರ್ಕಾರಿ ಶಾಲೆಯ ಶೈಕ್ಷಣಿಕ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶಕ್ಕೆ ಗಂಗಾವತಿ ವಿಧಾನಸಭಾ ಕ್ಷೇತ್ರದ 224 ಸರ್ಕಾರಿ ಶಾಲೆಗಳಿಗೆ (Government Schools) ಸ್ಮಾರ್ಟ್‌ ಟಿವಿಗಳನ್ನು ಉಚಿತವಾಗಿ ವಿತರಿಸುವ (Free Smart TV distribution) ಕಾರ್ಯಕ್ರಮಕ್ಕೆ ಶಾಸಕ ಜಿ. ಜನಾರ್ದನ ರೆಡ್ಡಿ ಶುಕ್ರವಾರ ಚಾಲನೆ ನೀಡಿದರು.

ತಾಲೂಕಿನ ಪ್ರತಿಷ್ಠಿತ ವಿದ್ಯಾನಿಕೇತನ ಶಿಕ್ಷಣ ಸಂಸ್ಥೆಯ ಪ್ರಾಯೋಜಿತ ಈ ಕಾರ್ಯಕ್ರಮಕ್ಕೆ ವಡ್ಡರಹಟ್ಟಿ ಗ್ರಾಮದಲ್ಲಿರುವ ವಿದ್ಯಾನಿಕೇತನ ಪದವಿ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸಾಂಕೇತಿಕವಾಗಿ ನೂರು ಶಾಲೆಯ ಮುಖ್ಯಶಿಕ್ಷಕರು ಹಾಗೂ ಬಿಇಒ ಗೆ ಟಿವಿಗಳನ್ನು ಹಸ್ತಾಂತರ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಬಳಿಕ ಮಾತನಾಡಿದ ಶಾಸಕ ಜನಾರ್ದನ ರೆಡ್ಡಿ, ಯಾವುದೇ ಸ್ವಾರ್ಥವಿಲ್ಲದೇ ಮಕ್ಕಳ ಏಳ್ಗೆಯನ್ನು ಬಯಸುವ ಏಕೈಕ ವ್ಯಕ್ತಿ ಎಂದರೆ ಅದು ಶಿಕ್ಷಕ ಮಾತ್ರ. ಹೀಗಾಗಿ ಶಿಕ್ಷಕರ ಬಗ್ಗೆ ಮತ್ತು ಶಿಕ್ಷಣ ನೀಡಿದ ಸಂಸ್ಥೆಯ ಬಗ್ಗೆ ಮಕ್ಕಳು ಸದಾ ಅಭಿಮಾನ ಇರಿಸಿಕೊಳ್ಳಬೇಕು.

ಇದನ್ನೂ ಓದಿ: Atal Setu: ಅಟಲ್ ಸೇತು ಲೋಕಾರ್ಪಣೆ; ಇದು ದೇಶದ ಅತಿ ಉದ್ದದ ಸಮುದ್ರ ಸೇತುವೆ

ಉತ್ತಮ ಶಿಕ್ಷಣದ ಜತೆಗೆ ಸಾಮಾಜಿಕ ಜವಾಬ್ದಾರಿ ಮೆರೆಯುತ್ತಿರುವ ಈ ಶಿಕ್ಷಣ ಸಂಸ್ಥೆ ದೇಶ-ವಿದೇಶದಲ್ಲಿ ಹೆಸರು ಮಾಡುತ್ತದೆ ಎಂದು ತಿಳಿಸಿದರು.

ಇದೇ ವೇಳೆ ಕಳೆದ ವರ್ಷ ದ್ವಿತೀಯ ಪಿಯುಸಿಯಲ್ಲಿ 590 ಅಂಕ ಗಳಿಸಿದ ವಿದ್ಯಾರ್ಥಿನಿಗೆ ಒಂದು ಲಕ್ಷ ರೂ ನಗದು ಹಾಗೂ 580 ಅಂಕಗಳಿಸಿದ 18 ಮಕ್ಕಳಿಗೆ ತಲಾ ಐವ್ವತ್ತು ಸಾವಿರ ನಗದು ಪುರಸ್ಕಾರ, ಸರ್ಕಾರಿ ಕೋಟಾದಡಿ ಪ್ರವೇಶ ಪಡೆದ ಮಕ್ಕಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ವಿದ್ಯಾನಿಕೇತನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎನ್.ಸೂರಿಬಾಬು, ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶ ಪಡೆಯುವ ಮಗು ನರ್ಸರಿಯಿಂದ ತನ್ನ ಶೈಕ್ಷಣಿಕ ಕರಿಯರ್ ಆರಂಭಿಸಿ, ನೌಕರಿ ಪಡೆಯುವ ಮೂಲಕ ಕ್ಯಾಂಪಸ್‌ನಿಂದ ಆಚೆ ಹೋಗಬೇಕು ಎಂಬ ಕಲ್ಪನೆಯಲ್ಲಿ ಶಿಕ್ಷಣ ನೀತಿಯನ್ನು ಅಳವಡಿಸಿಕೊಂಡಿದ್ದೇವೆ.

ಜವಾಬ್ದಾರಿ ವಿದ್ಯಾರ್ಥಿ-ಸ್ವಾವಲಂಬಿ ಶಿಕ್ಷಣ ಎಂಬ ಧ್ಯೇಯದೊಂದಿಗೆ 2006 ರಲ್ಲಿ ಸಿಬಿಎಸ್ಇ ಇಂಗ್ಲೀಷ್ ಮೀಡಿಯಂ ಪಬ್ಲಿಕ್ ಶಾಲೆಯನ್ನಾಗಿ ಆರಂಭಿಸಲಾಗಿದ್ದು, ಇದೀಗ ಶಿಕ್ಷಣ ಸಂಸ್ಥೆಯಲ್ಲಿ ಆರು ಸಾವಿರ ಮಕ್ಕಳು ಓದುತ್ತಿದ್ದಾರೆ. 800ಕ್ಕೂ ಹೆಚ್ಚು ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಕಳೆದ ಐದು ವರ್ಷದಿಂದ ಸತತವಾಗಿ 50ಕ್ಕೂ ಹೆಚ್ಚು ಮೆಡಿಕಲ್, ಎಂಜಿನಿಯರಿಂಗ್ ಸೇರಿದಂತೆ ಸರ್ಕಾರಿ ಕೋಟಾದಡಿ ಮಕ್ಕಳು ಪ್ರವೇಶ ಪಡೆಯುತ್ತಿದ್ದಾರೆ. ಪಿಯುಸಿಯಲ್ಲಿ 580ಕ್ಕೂ ಹೆಚ್ಚು ಅಂಕಗಳಿಸುವ ಮಕ್ಕಳಿಗೆ ತಲಾ ಐವ್ವತ್ತು ಸಾವಿರ ನಗದು ನೀಡಿ ಅವರ ಮುಂದಿನ ಶಿಕ್ಷಣಕ್ಕೆ ಉಪಯೊಗವಾಗಲಿ ಎಂದು ಪ್ರೇರೇಪಿಸುತ್ತಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: Bengaluru News: ಶೇಂಗಾ, ಸೋಯಾಬೀನ್ ಬೆಳೆಗಾರರಿಗೆ ಮಧ್ಯಂತರ ಬೆಳೆ ವಿಮೆ ಬಿಡುಗಡೆಗೆ ಕ್ರಮ: ಸಚಿವ ಪ್ರಹ್ಲಾದ್‌ ಜೋಶಿ

ಈ ಸಂದರ್ಭದಲ್ಲಿ ಮಾಜಿ ಶಾಸಕ ಎಚ್.ಆರ್. ಶ್ರೀನಾಥ್, ಉದ್ಯಮಿಗಳಾದ ಸಿಂಗನಾಳ ವಿರೂಪಾಕ್ಷಪ್ಪ, ಎನ್.ಆರ್. ಶ್ರೀನಿವಾಸ, ಬಿಇಒ ವೆಂಕಟೇಶ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ, ಕಾಲೇಜಿನ ಶೈಕ್ಷಣಿಕ ನಿರ್ದೇಶಕರು, ಆಡಳಿತ ಮಂಡಳಿಯ ಸದಸ್ಯರು ಇದ್ದರು.

Exit mobile version