ಕೊಪ್ಪಳ: ಜಿಲ್ಲೆಯ ಐತಿಹಾಸಿಕ ಕನಕಗಿರಿ ಉತ್ಸವವನ್ನು (Kanakagiri Utsav) ಮಾರ್ಚ್ 2 ಮತ್ತು 3 ರಂದು ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು (Koppala News) ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದರು.
ಕನಕಗಿರಿ ಉತ್ಸವ ನಡೆಸುವ ಕುರಿತು ಕನಕಗಿರಿಯ ಕನಕಾಚಲಪತಿ ದೇವಸ್ಥಾನದ ಆವರಣದಲ್ಲಿ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳೊಂದಿಗೆ ಶನಿವಾರ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಇದನ್ನೂ ಓದಿ: Karnataka Weather : ರಾಜ್ಯದಲ್ಲಿ ಕಡಿಮೆ ಆಯ್ತಾ ಚಳಿ ಅಬ್ಬರ? ಏರಲಿದ್ಯಾ ಬಿಸಿಲ ತಾಪ
ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಎಲ್ಲರ ಅಭಿಪ್ರಾಯ ಪಡೆದು ಮಾರ್ಚ್ ತಿಂಗಳಿನಲ್ಲಿ ಉತ್ಸವ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿಯೊಂದಿಗೆ ಚರ್ಚಿಸಿ ಅದೇ ದಿನಾಂಕವನ್ನು ಅಂತಿಮಗೊಳಿಸಲಾಗುತ್ತದೆ. ಅದ್ಧೂರಿಯಾಗಿ ಜನ ಮೆಚ್ಚುವ ಹಾಗೆ ಉತ್ಸವ ಇರಲಿದೆ ಎಂದು ತಿಳಿಸಿದರು.
ಇದನ್ನೂ ಓದಿ: Cervical Cancer: ಗರ್ಭಕಂಠದ ಕ್ಯಾನ್ಸರ್ ತಡೆ ಲಸಿಕೆ; ಪ್ಯಾಪ್ ಟೆಸ್ಟ್ ಬಗ್ಗೆ ತಿಳಿದಿರಲಿ
ಈಗಾಗಲೇ ಉತ್ಸವ ಆಚರಣೆಗೆ ರೂ. 2.5 ಕೋಟಿ ಅನುದಾನ ಮಂಜೂರು ಮಾಡಲಾಗಿದೆ. ಎರಡು ದಿನ ನಡೆಯುವ ಉತ್ಸವದಲ್ಲಿ ಫಲಪುಷ್ಪ ಪ್ರದರ್ಶನ, ಕವಿಗೋಷ್ಠಿ, ಸ್ತಬ್ಧ ಚಿತ್ರ, ಕುಸ್ತಿ ಪಂದ್ಯಾವಳಿ ಸೇರಿದಂತೆ ವಿವಿಧ ಕ್ರೀಡಾ ಚಟುವಟಿಕೆ, ಮನರಂಜನೆ ಕಾರ್ಯಕ್ರಮ ಸೇರಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆ ಚಿಂತನೆ ಇದೆ. ಈ ಬಗ್ಗೆ ಅಧಿಕಾರಿಗಳು ಹಾಗೂ ಸಮಿತಿಯೊಂದಿಗೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.