ಗಂಗಾವತಿ: ರಾಜ್ಯದಲ್ಲಿ ನಿಧಾನವಾಗಿ ಕೊರೊನಾದ ಜೆಎನ್-1 (COVID JN1) ತಳಿಯ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ (Anjanadri Hill) ಬರುವ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಿದೆ. ಅಲ್ಲದೇ ಜ್ವರ, ನೆಗಡಿ, ಶೀತದಂತ ಸಾಮಾನ್ಯ ಲಕ್ಷಣ ಹೊಂದಿರುವ ವ್ಯಕ್ತಿಗಳಿಗೂ ಮಾಸ್ಕ್ (Mask) ಕಡ್ಡಾಯಗೊಳಿಸಲಾಗಿದೆ.
ಹನುಮ ಜಯಂತಿ ಅಂಗವಾಗಿ ಅಂಜನಾದ್ರಿಯಲ್ಲಿ ಡಿ.23 ಮತ್ತು 24ರಂದು ನಡೆಯುವ ಹನುಮಮಾಲೆ ವಿಸರ್ಜನೆಗೆ ರಾಜ್ಯದ ನಾನಾ ಜಿಲ್ಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದು, ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತವು, ಅಂಜನಾದ್ರಿಗೆ ಬರುವ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಿದೆ. ಅಲ್ಲದೇ ಜ್ವರ, ನೆಗಡಿ, ಶೀತದಂತ ಸಾಮಾನ್ಯ ಲಕ್ಷಣ ಹೊಂದಿರುವ ವ್ಯಕ್ತಿಗಳಿಗೂ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.
ಇದನ್ನೂ ಓದಿ: Covid 19 Cases: ರಾಜ್ಯದಲ್ಲಿಂದು 104 ಮಂದಿಗೆ ಕೊರೊನಾ ಪಾಸಿಟಿವ್; 8 ಜನ ಡಿಸ್ಚಾರ್ಜ್
ಅಂಜನಾದ್ರಿ ಬೆಟ್ಟದಲ್ಲಿ ಹನುಮಮಾಲೆ ವಿಸರ್ಜನೆ ಸಿದ್ಧತೆಗೆ ನಿಯೋಜನೆಯಾಗಿರುವ ಪೊಲೀಸ್ ಸಿಬ್ಬಂದಿ ಸೇರಿದಂತೆ ನಾನಾ ಇಲಾಖೆಯ ಸುಮಾರು ಎರಡೂವರೆ ಸಾವಿರ ಜನರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದ್ದು, ಎಲ್ಲರೂ ಮಾಸ್ಕ್ ಧರಿಸಿ ಕರ್ತವ್ಯದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಮುಖ್ಯವಾಗಿ ಪ್ರಸಾದದ ಕೌಂಟರ್‌ನಲ್ಲಿರುವ ಸಿಬ್ಬಂದಿ, ಅಡುಗೆ ಮನೆಯಲ್ಲಿರುವ, ಊಟದ ಕೌಂಟರ್‌ನಲ್ಲಿರವ, ದೇಗುಲದ ಪ್ರಾಂಗಣದಲ್ಲಿರುವವರು ಸೇರಿದಂತೆ ಎಲ್ಲಾ ಸಿಬ್ಬಂದಿಗಳಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ನಲಿನ್ ಅತುಲ್ , ಜ್ವರ, ಕೆಮ್ಮು, ಶೀತ, ನೆಗಡಿಯಂತಹ ಲಕ್ಷಣಗಳಿರುವ ವ್ಯಕ್ತಿಗಳಿಗೆ ಮಾಸ್ಕ್ ಕಡ್ಡಾಯ ಎಂದು ಈಗಾಗಲೇ ರಾಜ್ಯ ಸರ್ಕಾರದಿಂದ ನಿರ್ದೇಶನ ಬಂದಿದೆ. ಸರ್ಕಾರದ ಆದೇಶದ ಪ್ರಕಾರ ಮಾಸ್ಕ್ ಕಡ್ಡಾಯ ಮಾಡಲಾಗಿದೆ.
ಇದನ್ನೂ ಓದಿ: Rohit Sharma : ಟೆಸ್ಟ್ ಕ್ರಿಕೆಟ್ನ ಪ್ರಾಮುಖ್ಯತೆ ಕುರಿತು ಕೊಹ್ಲಿ, ರೋಹಿತ್ ಮಾತನಾಡಿದ ವಿಡಿಯೊ ಇಲ್ಲಿದೆ
ಅಲ್ಲದೇ ಜಿಲ್ಲೆಯಲ್ಲಿ ಕೊರೊನಾದ ಪ್ರಕರಣಗಳು ಕಂಡು ಬಂದಲ್ಲಿ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಲು ಎಲ್ಲಾ ಸಿದ್ಧತೆ ಕೈಗೊಳ್ಳಲಾಗಿದೆ. ಆಕ್ಸಿಜನ್, ಬೆಡ್, ವೆಂಟಿಲೇಷನ್ ಸೇರಿದಂತೆ ಎಲ್ಲಾ ಪೂರ್ವ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ.