ಗಂಗಾವತಿ: ದೇಶದ ಅಭಿವೃದ್ಧಿ ವಿಚಾರ, ಸಮರ್ಥ ನಾಯಕ, ವಿಶ್ವವನ್ನೇ ಮುನ್ನಡೆಸುವ ಸಾಮರ್ಥ್ಯ ಇರುವ ಪ್ರಧಾನಿ ನರೇಂದ್ರ ಮೊದಿ (PM Narendra Modi) ಅವರ ವಿಚಾರ ಬಂದಾಗ ಹೊಂದಾಣಿಕೆ ಮಾಡಿಕೊಳ್ಳುವ ಅನಿವಾರ್ಯತೆ ಎದುರಾದರೆ ನನ್ನ ಮೊದಲ ಆಯ್ಕೆ ಬಿಜೆಪಿಯಾಗಿದೆ (BJP) ಎಂದು ಗಂಗಾವತಿ ಶಾಸಕ, ಕೆಆರ್‌ಪಿಪಿ ಪಕ್ಷದ (KRPP Party) ಸಂಸ್ಥಾಪಕ ಅಧ್ಯಕ್ಷ ಜಿ. ಜನಾರ್ದನ ರೆಡ್ಡಿ ಹೇಳಿದರು.
ಈ ಬಗ್ಗೆ ಶುಕ್ರವಾರ ಸುದ್ದಿಗಾರರರೊಂದಿಗೆ ಮಾತನಾಡಿ, ಇಡೀ ದೇಶದ ಜನ ಮತ್ತೊಮ್ಮೆ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗಬೇಕು ಎಂಬ ವಿಚಾರ ಹೊಂದಿದ್ದಾರೆ. ಹೀಗಾಗಿ ದೇಶದ ವಿಚಾರ ಬಂದಾಗ ಬಿಜೆಪಿಗರು ಮುಂದೆ ಬಂದು ಹೊಂದಾಣಿಕೆಯ ಪ್ರಸ್ತಾಪವಿಟ್ಟರೆ ಅದಕ್ಕೆ ನಾನು ಸ್ಪಂದಿಸುತ್ತೇನೆ. ಹೊಂದಾಣಿಕೆ ಎಂಬುವುದು ನನ್ನ ಮಾತೃಪಕ್ಷ ಬಿಜೆಪಿಯೊಂದಿಗೆ ಮಾತ್ರ ಎಂದು ತಿಳಿಸಿದರು.
ಇದನ್ನೂ ಓದಿ: Ind vs Eng : ಮೊದಲ ಪಂದ್ಯದ ಎರಡನೇ ದಿನದಾಟದಂತ್ಯಕ್ಕೆ ಭಾರತಕ್ಕೆ 127 ರನ್ ಮುನ್ನಡೆ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರದಲ್ಲಿ ನನ್ನ ಪಕ್ಷದಿಂದ ಅಭ್ಯರ್ಥಿ ಹಾಕುವಷ್ಟು ಶಕ್ತಿ ನನಗಿಲ್ಲ. ಅದಕ್ಕೆ ಸಮಯವೂ ಇಲ್ಲ. ಹೀಗಾಗಿ ನಾನು ಮೊದಲಿನಿಂದಲೂ ನನ್ನದು ಒಂದೇ ನಿಲುವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನನ್ನ ಪಕ್ಷದಿಂದ ಐದಾರು ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಹಾಕುತ್ತೇನೆ. ಆ ಕ್ಷೇತ್ರಗಳಲ್ಲಿ ನನ್ನ ಶಕ್ತಿ ಮೀರಿ ನನ್ನ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಲು ಯತ್ನ ಮಾಡುತ್ತೇನೆ ಎಂದರು.
ಇದನ್ನೂ ಓದಿ: Tea And Coffee With Meals: ಊಟ ತಿಂಡಿ ಜೊತೆಜೊತೆಗೆ ಚಹಾ ಕಾಫಿ ಹೀರುವ ಅಭ್ಯಾಸ ಒಳ್ಳೆಯದೇ, ಕೆಟ್ಟದ್ದೇ?
ದೇಶದಲ್ಲಿ ತಿರುಪತಿ ಮತ್ತು ಅಯೋಧ್ಯೆ ಹೇಗೆ ಪ್ರಮುಖ ಧಾರ್ಮಿಕ ತಾಣಗಳಾಗಿವೆಯೋ ಹಾಗೆ ಅಂಜನಾದ್ರಿಯೂ ಮೂರನೇ ಅತಿದೊಡ್ಡ ಪವಿತ್ರ ಧಾರ್ಮಿಕ ತಾಣವನ್ನಾಗಿಸುವ ಉದ್ದೇಶ ಇದೆ ಎಂದು ತಿಳಿಸಿದ್ದಾರೆ.