ಗಂಗಾವತಿ: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಖಂಡಿಸಿ, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ, ಏ.24 ರಂದು ಗಂಗಾವತಿ ನಾಗರಿಕ ಸಮಿತಿಯಿಂದ ಗಂಗಾವತಿ ಬಂದ್‌ಗೆ ಕರೆ (Koppala News) ನೀಡಲಾಗಿದೆ.
ಇದನ್ನೂ ಓದಿ: IPL 2024: ಟಿ20 ಕ್ರಿಕೆಟ್ನಲ್ಲೇ ನೂತನ ದಾಖಲೆ ಬರೆದ ಸನ್ರೈರ್ಸ್ ಹೈದರಾಬಾದ್
ಈ ಕುರಿತು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಂಗಮ ಸಮಾಜ ಹಿರಿಯ ಮುಖಂಡ ತಿಪ್ಪೇರುದ್ರಸ್ವಾಮಿ, ವಿದ್ಯಾರ್ಥಿನಿಯ ಕೊಲೆ ಪ್ರಕರಣವನ್ನು ಖಂಡಿಸಿ ಸಭ್ಯ, ಪ್ರಜ್ಞಾವಂತ ನಾಗರಿಕ ಸಮಾಜ ಗಂಗಾವತಿ ಬಂದ್ ಹಮ್ಮಿಕೊಂಡಿದೆ. ಈ ಬಂದ್ ಪ್ರತಿಭಟನೆಯಲ್ಲಿ ಪಕ್ಷಾತೀತ, ಜಾತ್ಯಾತೀತವಾಗಿ ಎಲ್ಲರೂ ಭಾಗಿಯಾಗಬಹುದು. ಮುಖ್ಯವಾಗಿ ವಿದ್ಯಾರ್ಥಿನಿಯರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಬೇಕು ಎಂದ ಅವರು, ಬೆಳಗ್ಗೆ 8 ಗಂಟೆಯಿಂದ ನಗರದ ಎಲ್ಲಾ ಅಂಗಡಿ ಮುಂಗಟ್ಟುಗಳು ಬಂದ್ ಮಾಡಿ, ವ್ಯಾಪಾರಿಗಳು ಬಂದ್‌ಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.
ಗಂಗಾವತಿ ನಾಗರಿಕ ಸಮಿತಿಯ ಸಂಚಾಲಕ ಸಂತೋಷ್ ಕೇಲೋಜಿ ಮಾತನಾಡಿ, ಸಭ್ಯ, ನಾಗರಿಕ ಸಮಾಜ ತಲೆ ತಗ್ಗಿಸುವಂತ ಕೃತ್ಯ ನಡೆದಿದೆ. ಸಿಸಿ ಟಿವಿಯ ಫುಟೇಜ್ ಸಾಕ್ಷ್ಯವಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಯಾವುದೇ ರಾಜಕೀಯ ಮಾಡದೇ ಕೂಡಲೇ ಆರೋಪಿಗೆ ತ್ವರಿತಗತಿಯಲ್ಲಿ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ: Road Accident: ಹೊಳಲ್ಕೆರೆ ಬಳಿ ಕಾರು ಪಲ್ಟಿ; ಶಿವಮೊಗ್ಗ ಮೂಲದ ವ್ಯಕ್ತಿ ಸಾವು, ಇನ್ನಿಬ್ಬರಿಗೆ ಗಾಯ
ಈ ಸಂದರ್ಭದಲ್ಲಿ ವಕೀಲ ನಾಗರಾಜ್ ಗುತ್ತೇದಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.