ಕನಕಗಿರಿ: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಗೆ (Drinking Water) ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳಿಗೆ ಜಿ.ಪಂ ಸಿಇಒ ರಾಹುಲ್ ರತ್ನಂ ಪಾಂಡೆ ಸೂಚನೆ (Koppala News) ನೀಡಿದರು.
ಪಟ್ಟಣದ ಶರಣಪ್ಪ ಪಂಪಣ್ಣ ಗುಗ್ಗಳಶೆಟ್ರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಕನಕಗಿರಿ ಮತ್ತು ಕಾರಟಗಿ ತಾಲೂಕು ಪಂಚಾಯಿತಿಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿ, ಅವರು ಮಾತನಾಡಿದರು.
ಇದನ್ನೂ ಓದಿ: Karnataka Weather: ರಾಜ್ಯದಲ್ಲಿ ಕಳೆದ 7 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು!
ಇದೇ ವೇಳೆ ಎರಡು ತಾಲೂಕಿನಲ್ಲಿ ಜೆಜೆಎಂ ಯೋಜನೆಯ ಪ್ರಥಮ ಹಾಗೂ ದ್ವಿತೀಯ ಹಂತದ ಕಾಮಗಾರಿಗಳನ್ನು ಕೂಡಲೇ ಮುಕ್ತಾಯಗೊಳಿಸಲು ಪಿಆರ್ ಇಡಿ ಎಇಇ ಯವರಿಗೆ ಸೂಚಿಸಿ ಸಂಬಂಧಿಸಿದ ಗುತ್ತಿಗೆದಾರರಿಗೆ ನೋಟಿಸ್ ಜಾರಿ ಮಾಡಲು ಸೂಚಿಸಿದರು. ನಂತರ ನರೇಗಾ, ವಸತಿ ಸೇರಿದಂತೆ ಸ್ವಚ್ಛ ಭಾರತ ಮಿಷನ್ ಯೋಜನೆಯ ಪ್ರಗತಿಯನ್ನು ಪರಿಶೀಲನೆ ಮಾಡಿ, ಕಡಿಮೆ ಪ್ರಗತಿ ಹೊಂದಿದ ಗ್ರಾ.ಪಂಗಳು ಪ್ರಗತಿ ಸಾಧಿಸಲು ತಿಳಿಸಿದರು.
ಇದನ್ನೂ ಓದಿ: Fortis Hospital: ಪಾರ್ಕಿನ್ಸನ್ ಕಾಯಿಲೆ ಚಿಕಿತ್ಸೆಗೆ ಪ್ರತ್ಯೇಕ ಕ್ಲಿನಿಕ್ ಆರಂಭಿಸಿದ ಫೋರ್ಟಿಸ್ ಆಸ್ಪತ್ರೆ
ಈ ವೇಳೆ ಕನಕಗಿರಿ ತಾ. ಪಂ ಇಒ ಎಲ್. ವಿರೇಂದ್ರ ಕುಮಾರ್, ಕಾರಟಗಿ ತಾ.ಪಂ ಇಒ ಲಕ್ಷ್ಮೀದೇವಿ, ಎಇಇ ವಿಜಯಕುಮಾರ್, ತಾ.ಪಂ ಸಹಾಯಕ ನಿರ್ದೇಶಕರಾದ ಚಂದ್ರಶೇಖರ ಬಿ. ಕಂದಕೂರ್, ವೈ.ವನಜಾ, ವೀರಣ್ಣ ನಕ್ರಳ್ಳಿ ಸೇರಿದಂತೆ ಕನಕಗಿರಿ, ಕಾರಟಗಿ ತಾಲೂಕಿನ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.