ಕಾರಟಗಿ: ಯಾವುದೇ ಮಗುವು ಪೋಲಿಯೊ ಲಸಿಕೆಯಿಂದ (Polio Vaccine) ವಂಚಿತವಾಗಬಾರದು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವರಾಜ್ ಪಾಟೀಲ್ (Koppala News) ಹೇಳಿದರು.
ತಾಲೂಕಿನ ಈಳಿಗನೂರು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಇದನ್ನೂ ಓದಿ: Elephant Attack : ಆನೆ ಅಟ್ಯಾಕ್‌ಗೆ ಬಾಯಿಗೆ ಬಂತು ಜೀವ; ಜಸ್ಟ್ ಎಸ್ಕೇಪ್ ಆಗಿದ್ದು ಹೀಗೆ..
ಮಾರ್ಚ್ 6ವರೆಗೆ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ನಡೆಯಲಿದ್ದು, ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಪೋಲಿಯೊ ಲಸಿಕೆ ಹಾಕಿಸಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಅಧಿಕಾರಿಗಳು ಮತ್ತು ಅಂಗನವಾಡಿ ಕಾರ್ಯಕರ್ತರು ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡಬೇಕು, ಯಾವುದೇ ಮಗು ಲಸಿಕೆಯಿಂದ ವಂಚಿತವಾಗಬಾರದು ಎಂದು ತಿಳಿಸಿದರು.
ಇದನ್ನೂ ಓದಿ: Bomb Threat: ಬೆಂಗಳೂರು ಸ್ಫೋಟ ಬೆನ್ನಲ್ಲೇ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ
ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಸರಸ್ವತಿ, ಅಂಗನವಾಡಿ ಕಾರ್ಯಕರ್ತರಾದ ಹುಲಿಗೆಮ್ಮ, ವಿದ್ಯಾ, ಅಕ್ಕಮಹಾದೇವಿ, ಆಶಾ ಕಾರ್ಯಕರ್ತರಾದ ದ್ರಾಕ್ಷಾಯಣಿ, ಬಸಲಿಂಗಮ್ಮ ಹಾಗೂ ಮುಖಂಡರಾದ ಗಿಡ್ಡಪ್ಪ, ದೇವರಾಜ, ಮಾರುತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.