ಗಂಗಾವತಿ: ಭಾರತದ ಸಂವಿಧಾನವನ್ನು (Constitution of India) ಜನಸಾಮಾನ್ಯರಿಗೂ ಪರಿಚಯಿಸುವ ಮತ್ತು ಅದರ ಆಶಯಗಳನ್ನು ಗೊತ್ತುಪಡಿಸುವ ಉದ್ದೇಶಕ್ಕೆ ರಾಜ್ಯ ಸರ್ಕಾರ (State Government) ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಮ್ಮಿಕೊಂಡಿರುವುದು ಪ್ರಸ್ತುತ ದಿನಗಳಲ್ಲಿ ಹೆಚ್ಚು ಪ್ರಸ್ತುತವಾಗಿದೆ ಎಂದು ಶಾಸಕ ಜಿ. ಜನಾರ್ದನ ರೆಡ್ಡಿ ಹೇಳಿದರು.
ನಗರದ ಸರ್ಕಾರಿ ಬಾಲಕರ ಜೂನಿಯರ್ ಹಾಗೂ ಎಂಎನ್ಎಂ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಆವರಣದಲ್ಲಿ ಶುಕ್ರವಾರ ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ಭಾರತದ ಸಂವಿಧಾನ ಪೀಠಿಕೆಯ ವಾಚನ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.
ಇದನ್ನೂ ಓದಿ: SIIMA 2023: ದುಬೈನಲ್ಲಿ ಸೈಮಾ ಅವಾರ್ಡ್; ನಾಮಿನೇಟ್ ಆದ ಕನ್ನಡ ಸಿನಿಮಾಗಳ ಕಂಪ್ಲೀಟ್ ಲಿಸ್ಟ್!
ಸಂವಿಧಾನ ಕೇವಲ ವಾಚನಕ್ಕೆ ಮಾತ್ರ ಸೀಮಿತವಾಗಬಾರದು. ಅದನ್ನು ಪ್ರತಿಯೊಬ್ಬರು ಚಾಚೂ ತಪ್ಪದೇ ಪಾಲಿಸಿ ಅನುಷ್ಠಾನಕ್ಕೆ ತಂದಾಗ ಮಾತ್ರ ಸಂವಿಧಾನದ ಆಶಯ ಈಡೇರಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಪ್ರತಿಯೊಬ್ಬರು ಮುಂದಾಗಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಅಧ್ಯಕ್ಷರು, ತಹಸೀಲ್ದಾರ್ ಭೋಗಾವತಿ ಮಂಜುನಾಥ ಹಿರೇಮಠ, ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಿದೇವಿ ಸಂವಿಧಾನದ ಕುರಿತಾಗಿ ಮಾತನಾಡಿದರು.
ಇದನ್ನೂ ಓದಿ: ಕೊಹ್ಲಿ ಭೇಟಿಗಾಗಿ ಶಬರಿಯಂತೆ ಕಾದ ಲಂಕಾ ಯುವತಿ; 19 ವರ್ಷಗಳ ಬಳಿಕ ಕನಸು ನನಸು
ಕಾರ್ಯಕ್ರಮದಲ್ಲಿ ನಗರದ ನಾನಾ ಶಾಲಾ-ಕಾಲೇಜಿನ ಸುಮಾರು ಮೂರು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ತಾಲೂಕು ಹಂತದ ನಾನಾ ಇಲಾಖೆಯ ಅನುಷ್ಠಾನ ಅಧಿಕಾರಿಗಳು ಭಾಗಿಯಾಗಿದ್ದರು.