ಗಂಗಾವತಿ: ಮದುವೆಯಾದ ಬಳಿಕ ತಾಯ್ತನದ ಕನಸು ಪ್ರತಿಯೊಬ್ಬ ಮಹಿಳೆಯರಿಗೆ ಇರುತ್ತದೆ. ಇಂತಹ ಅಮೂಲ್ಯ ಕ್ಷಣ, ಗರ್ಭಿಣಿ ಮತ್ತು ಮಗುವಿನ ಬಗ್ಗೆ ಮಹತ್ವ ತಿಳಿಸುವ ಉದ್ದೇಶ ಸರ್ಕಾರದಿಂದಲೇ ಸೀಮಂತ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಗಂಗಾವತಿ ಶಾಸಕ ಜಿ. ಜನಾರ್ದನರೆಡ್ಡಿ ಹೇಳಿದರು.
ಆನೆಗೊಂದಿ ರಸ್ತೆಯಲ್ಲಿರುವ ಸರ್ಕಾರಿ ಉಪ ವಿಭಾಗ ಮಹಿಳಾ ಮತ್ತು ಮಕ್ಕಳ ಉಪ ವಿಭಾಗ ಆಸ್ಪತ್ರೆಯಲ್ಲಿ ಗುರುವಾರ ಪ್ರಧಾನಮಂತ್ರಿ ಮಾತೃತ್ವ ಸುರಕ್ಷತಾ ಅಭಿಯಾನ ಯೋಜನೆಯಡಿ ಆಯೋಜಿಸಿದ್ದ ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.
ಗರ್ಭಿಣಿ ಆದಾಗ ನಿಗಾವಹಿಸಬೇಕಾದ ಎಚ್ಚರಿಕೆ ಕ್ರಮ, ಆಹಾರ, ವಿಹಾರ, ಶಿಶುವಿನ ಬೆಳವಣಿಗೆ ಗಮನಿಸುವ ಬಗ್ಗೆ ಸಲಹೆ ಸೂಚನೆ ನೀಡಲು ಗರ್ಭಿಣಿ ಮಹಿಳೆಯರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಸೀಮಂತ ಮಾಡಿ ಅವರಿಗೆ ಮಾರ್ಗದರ್ಶನ ನೀಡುತ್ತಿರುವುದು ಇದೊಂದು ಮಹತ್ವದ ಕಾರ್ಯಕ್ರಮ ಎಂದರು.
ಇದನ್ನೂ ಓದಿ: Vijayanagara News: ಹಂಪಿ ಕನ್ನಡ ವಿವಿ ನುಡಿಹಬ್ಬ; ಮೂವರಿಗೆ ನಾಡೋಜ ಗೌರವ ಪ್ರದಾನ
ಸೀಮಂತ ಎಂಬ ಸಂಪ್ರದಾಯಿಕ ಕಾರ್ಯಕ್ರಮ ಗರ್ಭಿಣಿಯರಲ್ಲಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ. ಆಗಾಗ್ಗೆ ವೈದ್ಯರ ಮಾರ್ಗದರ್ಶನ, ಸಲಹೆ ಪಡೆದು, ಪಾಲನೆ ಮಾಡಿದರೆ ತಾಯಿ ಹಾಗೂ ಜನಿಸುವ ಮಗು ಆರೋಗ್ಯ ಸುರಕ್ಷಿತವಾಗಿರುತ್ತದೆ.
ರಕ್ತದೊತ್ತಡ, ಸಕ್ಕರೆ ಕಾಯಿಲೆ ಸೇರಿದಂತೆ ಇತರ ಸೋಂಕು ತಡೆಯಲು ವೈದ್ಯರ ಸಲಹೆಯಂತೆ ಔಷಧಿ ತೆಗೆದುಕೊಂಡರೆ ಸುರಕ್ಷಿತ ಹೆರಿಗೆಗೆ ಅನುಕೂಲವಾಗುತ್ತದೆ. ಉಚಿತವಾಗಿ ಎಲ್ಲಾ ಪರೀಕ್ಷೆಗಳನ್ನು ಮಾಡಲಾಗುತ್ತದೆ. ಇದರಿಂದ ತಾಯಿ ಮತ್ತು ಶಿಶುವಿನ ಮರಣದ ಪ್ರಮಾಣ ಕಡಿಮೆಯಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ: Tumkur News: ಶಿರಾದ ತಿಪ್ಪನಹಳ್ಳಿ ಗ್ರಾಮದ ಬಳಿ ಚಿರತೆ ಪ್ರತ್ಯಕ್ಷ!
ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಈಶ್ವರ ಸವಡಿ ಮಾತನಾಡಿ, ಗರ್ಭಿಣಿಯರಿಗೆ ಸಲಹೆ ನೀಡಿದರು. 250ಕ್ಕೂ ಹೆಚ್ಚು ಗರ್ಭಿಣಿ ಮಹಿಳೆಯರಿಗೆ ಸೀಮಂತ ಮಾಡಲಾಯಿತು.