Site icon Vistara News

Koppala News: ಕಲೆ, ವಾಸ್ತುಶಿಲ್ಪಕ್ಕೆ ವಿಶ್ವಕರ್ಮರ ಕೊಡುಗೆ ಅಪಾರ: ಎಂಎಲ್‌ಸಿ ಹೇಮಲತಾ ನಾಯಕ

MLC Hemalatha Nayaka Spoke in Shri Vishwakarma Jayanti Celebration Programme at Koppala

ಕೊಪ್ಪಳ: ಕಲೆ (Art), ವಾಸ್ತುಶಿಲ್ಪಕ್ಕೆ (Architecture) ವಿಶ್ವಕರ್ಮರ (Vishwakarma) ಕೊಡುಗೆ ಅಪಾರವಾಗಿದೆ ಎಂದು ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ತಿಳಿಸಿದರು.

ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಶ್ರೀ ವಿಶ್ವಕರ್ಮ ಜಯಂತಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಸೌಲಭ್ಯಗಳು ದೊರೆಯಲಿವೆ. ಅಲ್ಲದೆ ಕರಕುಶಲ ವಸ್ತುಗಳು, ಕಲೆಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದ ಕೌಶಲ್ಯ ಯೋಜನೆಯಡಿ ಸೌಲಭ್ಯ ಪಡೆದುಕೊಳ್ಳಬಹುದು ಎಂದ ಅವರು, ಕುಲಕಸುಬುದಾರರಿಗೆ ತರಬೇತಿ ಕಾರ್ಯಕ್ರಮ, ತರಬೇತಿ ಭತ್ಯೆ, ಸಾಲ ಮತ್ತು ಸಹಾಯಧನ ಹೀಗೆ ಹಲವಾರು ಸೌಲಭ್ಯಗಳಿವೆ. ಇವುಗಳ ಸದುಪಯೋಗ ಪಡೆದುಕೊಂಡು, ಅಭಿವೃದ್ಧಿ ಹೊಂದಿ ಸಮಾಜದ ಮುನ್ನೆಲೆಗೆ ಬರಬೇಕು ಎಂದು ಹೇಳಿದರು.

ಇದನ್ನೂ ಓದಿ: NASA: ಚಂದ್ರನ ದಕ್ಷಿಣ ಧ್ರುವದ ಬೆರಗುಗೊಳಿಸುವ ಚಿತ್ರ ಕ್ಲಿಕ್ಕಿಸಿದ ನಾಸಾ, ಏನಿದೆ ಅದರಲ್ಲಿ?

ನಗರಸಭೆ ಅಧ್ಯಕ್ಷೆ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ ಮಾತನಾಡಿ, ವಿಶ್ವಕರ್ಮ ಸಮಾಜ ಜಗತ್ತಿಗೆ ಅದ್ಭುತ ಕಲೆ ನೀಡಿದ ಸಮಾಜವಾಗಿದೆ ಎಂದು ತಿಳಿಸಿದರು.

ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ವೀರೇಶ ಬಡಿಗೇರ, ಶ್ರೀ ವಿಶ್ವಕರ್ಮರ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಿರಸಪ್ಪಯ್ಯ ಮಹಾಸ್ವಾಮಿಗಳು, ದೇವೇಂದ್ರ ಮಹಾಸ್ವಾಮಿಗಳು, ಗುರುನಾಥ ಮಹಾಸ್ವಾಮಿಗಳು, ನಾಗರಮೂರ್ತಿ ಮಹಾಸ್ವಾಮಿಗಳು, ಸುಬ್ಬಣ್ಣಾಚಾರ ಹಾಗೂ ಕೊಪ್ಪಳ ತಹಶೀಲ್ದಾರ್‌ ವಿಠ್ಠಲ್ ಚೌಗಲಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಮುಖಂಡರಾದ ಮಂಜುಳಾ ಕರಡಿ, ಸಮಾಜದ ಜಿಲ್ಲಾಧ್ಯಕ್ಷ ಈಶಪ್ಪ ಬಡಿಗೇರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ: Ind vs Aus : ಭಾರತ ವಿರುದ್ಧ ಸರಣಿಗೆ ಮೊದಲು ಆಸ್ಟ್ರೇಲಿಯಾ ತಂಡಕ್ಕೆ ಬಿಗ್ ಶಾಕ್​

ಮೆರವಣಿಗೆ

ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಶ್ರೀ ವಿಶ್ವಕರ್ಮರ ಭಾವಚಿತ್ರದ ಮೆರವಣಿಗೆಯು ಶ್ರೀ ಸಿರಸಪ್ಪಯ್ಯನ ಮಠದಿಂದ ಪ್ರಾರಂಭಗೊಂಡು ಗಡಿಯಾರ ಕಂಬ, ಜವಾಹರ ರಸ್ತೆಯ ಮೂಲಕ ಸಾಹಿತ್ಯ ಭವನದವರೆಗೆ ಅದ್ದೂರಿಯಾಗಿ ಜರುಗಿತು.

Exit mobile version