ಕೊಪ್ಪಳ: ಕೊಪ್ಪಳ ಲೋಕಸಭಾ ವ್ಯಾಪ್ತಿಯ ಅಗಳಕೇರ ಮತ್ತು ಬನ್ನಿಕೊಪ್ಪ ಬಳಿ ಶೀಘ್ರ ಮೇಲ್ಸೇತುವೆ ನಿರ್ಮಾಣ ಮಾಡಲಾಗುವುದು ಎಂದು ಸಂಸದ ಕರಡಿ ಸಂಗಣ್ಣ ಭರವಸೆ (Koppala News) ನೀಡಿದರು.
ಕೊಪ್ಪಳ ಲೋಕಸಭಾ ವ್ಯಾಪ್ತಿಯ ರೈಲ್ವೆ ಅಭಿವೃದ್ಧಿ ಕಾಮಗಾರಿಗಳು, ಲೋಕಾರ್ಪಣೆಗೆ ಸಂಬಂಧಿಸಿದ ವಿಷಯಗಳ ಕುರಿತು ರೇಲ್ವೆ ಇಲಾಖೆಯ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್ ಅವರನ್ನು ಭೇಟಿ ಮಾಡಿ, ಚರ್ಚೆ ನಡೆಸಿದರು.
ಇದನ್ನೂ ಓದಿ: Job Fair : ಫೆ.26-27ರಂದು ಬೃಹತ್ ಉದ್ಯೋಗ ಮೇಳ, 500 ಕಂಪನಿಗಳು ಭಾಗಿ, 1 ಲಕ್ಷ ಜಾಬ್!
ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕಳೆದ 10 ವರ್ಷದಲ್ಲಿ ರೈಲ್ವೆ ಕ್ರಾಂತಿಯಾಗಿದೆ. ತಾಲೂಕುಗಳಿಗೆ ರೈಲು ಸಂಚಾರ ನಡೆಸಲಾಗುತ್ತಿದೆ. ರೈಲ್ವೆ ಗೇಟ್ ಬಳಿ ಮೇಲ್ಸೇತುವೆ ಆಗುತ್ತಿವೆ. ಇಂದೆಂದೂ ಕಾಣದಂತ ಅಭಿವೃದ್ಧಿ ಕಳೆದ ಹತ್ತು ವರ್ಷದಲ್ಲಿ ಆಗಿದೆ. ಗಿಣಿಗೇರಾ – ಮಹೆಬೂಬ್ ನಗರ ರೈಲ್ವೆ ಯೋಜನೆಗೆ ಪ್ರಸ್ತುತ ಸಾಲಿನಲ್ಲಿ 300 ಕೋಟಿ ರೂ. ಹಾಗೂ ಗದಗ- ವಾಡಿ ಗೆ 350 ಕೋಟಿ ರೂ. ಮೀಸಲಿಡಲಾಗಿದೆ. ನಮ್ಮ ಬದ್ಧತೆಯಂತೆ ರೈಲ್ವೆ ಯೋಜನೆ ಪೂರ್ಣಗೊಳಿಸಲಾಗುತ್ತಿದೆ ಎಂದು ತಿಳಿಸಿದರು.
ಇದನ್ನೂ ಓದಿ: Health Benefits Of Strawberries: ಸ್ಟ್ರಾಬೆರಿ ತಿಂದರೆ ಲಾಭಗಳು ಒಂದೆರಡಲ್ಲ!
ಲೋಕಸಭಾ ಚುನಾವಣೆಯಲ್ಲಿ 8 ವಿಧಾನಸಭಾ ಕ್ಷೇತ್ರಕ್ಕೆ ನೀಡಿದ ಭಾಗಶಃ ಭರವಸೆಗಳನ್ನು ಈಡೇರಿಸಿದ್ದೇವೆ. ಅಭಿವೃದ್ಧಿ ಕೆಲಸಗಳಿಂದ ಹಾಗೂ ಜನರ ಆಶೀರ್ವಾದದಿಂದ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸತತವಾಗಿ ಗೆಲುವು ಸಾಧಿಸಿದೆ ಎಂದು ಹೇಳಿದರು.