Site icon Vistara News

Koppala News: ನ.10ರಂದು ಗಂಗಾವತಿಯಲ್ಲಿ ಬಸವೇಶ್ವರ ಪುತ್ಥಳಿ ಅನಾವರಣ

Sri Basaveshwara statue unveiling programme Invitation card released

ಗಂಗಾವತಿ: ನಗರದ ಕೇಂದ್ರ ಬಸ್ ನಿಲ್ದಾಣದ ಮುಂಭಾಗದ ನೆಹರು ಉದ್ಯಾನವನದಲ್ಲಿ ನ.10ರಂದು ಶ್ರೀ ಜಗಜ್ಯೋತಿ ಬಸವೇಶ್ವರ ಕಂಚಿನ ಪುತ್ಥಳಿ (Sri Basaveshwara Statue) ಅನಾವರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಗಜ್ಯೋತಿ ಬಸವೇಶ್ವರ ಟ್ರಸ್ಟ್‌ನ ಅಧ್ಯಕ್ಷ ಮಹಾಲಿಂಗಪ್ಪ ಬನ್ನಿಕೊಪ್ಪ ತಿಳಿಸಿದರು.

ನಗರದ ಚನ್ನಬಸವಸ್ವಾಮಿ ಕಲ್ಯಾಣ ಮಂಟಪದಲ್ಲಿ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನ.10 ರಂದು ಶುಕ್ರವಾರ ಬಸವೇಶ್ವರರ ಕಂಚಿನ ಪುತ್ಥಳಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ ಎಂದು ತಿಳಿಸಿದ ಅವರು, ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ.

ಇದನ್ನೂ ಓದಿ: ICC World Cup 2023 : ವಿಶ್ವ ಕಪ್​ ಸೆಮಿ, ಫೈನಲ್ ಪಂದ್ಯದ ಟಿಕೆಟ್​ ಮಾರಾಟ ಶುರು

ಗಂಗಾವತಿ ಕ್ಷೇತ್ರದ ಶಾಸಕ ಜಿ. ಜನಾರ್ದನರೆಡ್ಡಿ, ಮಾಜಿ ಸಂಸದ ಎಚ್‌.ಜಿ. ರಾಮುಲು, ಸಚಿವ ಶಿವರಾಜ ತಂಗಡಗಿ, ಸಂಸದ ಕರಡಿ ಸಂಗಣ್ಣ, ಮಾಜಿ ಶಾಸಕ ಪರಣ್ಣ ಮುನವಳ್ಳಿ, ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Swadesh Store: ಹೈದ್ರಾಬಾದ್‌ನಲ್ಲಿ ರಿಲಯನ್ಸ್ ರೀಟೆಲ್‌ನ ಮೊದಲ ಸ್ವದೇಶ್ ಸ್ಟೋರ್‌ ಆರಂಭ

ಈ ಸಂದರ್ಭದಲ್ಲಿ ಮುಖಂಡರಾದ ಸಿಂಗನಾಳ ಉಮೇಶ, ರಾಚಪ್ಪ ಸಿದ್ದಾಪುರ, ನವೀನ್ ಮಾಲಿಪಾಟಿಲ್, ಹೊಸಳ್ಳಿ ಶಂಕರಗೌಡ, ಶಿವಪ್ಪ ಯಲಬುರಗಿ, ಅರಳಿ ಶೇಖರಪ್ಪ, ಎ.ಕೆ. ಮಹೇಶ ಕುಮಾರ್‌, ಆನಂದ್ ಅಕ್ಕಿ, ಶಿವಕುಮಾರ ಮಾಲಿಪಾಟೀಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Exit mobile version