ಗಂಗಾವತಿ: ತಾಲೂಕಿನ ಸಂಗಾಪುರ ಗ್ರಾಮದಲ್ಲಿ ಬಿಸಿಯೂಟ ಸೇವಿಸಿ 32ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯು, ಶಾಲೆಯ ಮುಖ್ಯ ಶಿಕ್ಷಕಿ ಹಾಗೂ ಸಹಶಿಕ್ಷಕ ಇಬ್ಬರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ (Koppala News) ಹೊರಡಿಸಿದೆ.
ಸಂಗಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪುಷ್ಪಾವತಿ ಹಾಗೂ ಸಹ ಶಿಕ್ಷಕ ಶರಣಬಸವರಾಜ ಅವರನ್ನು ಕರ್ತವ್ಯ ಲೋಪದ ಆರೋಪದ ಮೇರೆಗೆ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶ್ರೀಶೈಲ ಬಿರಾದಾರ, ಅಮಾನತು ಮಾಡಿ ಆದೇಶ ಮಾಡಿದ್ದಾರೆ.
ಇದನ್ನೂ ಓದಿ: IPL 2024 : ಐಪಿಎಲ್ ಪಂದ್ಯಕ್ಕೆ ನೀರು ಎಲ್ಲಿಂದ? ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ನೋಟಿಸ್
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಡಿಪಿಐ ಶ್ರೀಶೈಲ ಬಿರಾದಾರ, ಅಶುದ್ಧ ಕುಡಿಯುವ ನೀರು, ಶಾಲಾ ಆವರಣದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳದಿರುವ ಹಿನ್ನಲೆ ಘಟನೆ ನಡೆದಿರುವುದು ಮೇಲ್ನೋಟಕ್ಕೆ ಸಾಬೀತಾದ ಹಿನ್ನಲೆಯಲ್ಲಿ ಮುಂದಿನ ಆದೇಶದವರೆಗೂ ಈ ಇಬ್ಬರನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.