Site icon Vistara News

Koppala News: ಕನ್ನಡ ಜ್ಯೋತಿ ರಥಯಾತ್ರೆಗೆ ಸೋಮನಾಳ ಗ್ರಾಮದಲ್ಲಿ ಅದ್ಧೂರಿ ಸ್ವಾಗತ

Welcome to Kannada Jyoti Rath Yatra at Somanala village

ಕಾರಟಗಿ: ತಾಲೂಕಿನ ಸೋಮನಾಳ ಗ್ರಾಮಕ್ಕೆ ಆಗಮಿಸಿದ ಕರ್ನಾಟಕ ಸಂಭ್ರಮ-50 ರ ಜ್ಯೋತಿ ರಥಯಾತ್ರೆಯನ್ನು (Kannada Jyoti Rathayatra) ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ವತಿಯಿಂದ ಅದ್ಧೂರಿಯಾಗಿ ಸ್ವಾಗತಿಸಿ, ಮೆರವಣಿಗೆ ನಡೆಸಲಾಯಿತು.

ನಾಡದೇವಿ ಭುವನೇಶ್ವರಿ ದೇವಿಗೆ ತಹಸೀಲ್ದಾರ್ ಎಂ.ಕುಮಾರಸ್ವಾಮಿ, ಪೂಜೆ ಸಲ್ಲಿಸಿ ರಥಯಾತ್ರೆಗೆ ಸ್ವಾಗತಿಸಿ, ಮೆರವಣಿಗೆಗೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಕರ್ನಾಟಕ ಎಂದು ನಾಮಕರಣಗೊಂಡ 50 ವರ್ಷಗಳ ಈ ಸವಿನೆನಪಿಗಾಗಿ ರಾಜ್ಯ ಸರ್ಕಾರವು ಕನ್ನಡ ಭುವನೇಶ್ವರಿ ತಾಯಿಯ ಜ್ಯೋತಿ ರಥಯಾತ್ರೆಯ ಮೂಲಕ ಕನ್ನಡ ನಾಡಿನ ಹಿರಿಮೆಯನ್ನು ಪ್ರತಿ ಹಳ್ಳಿಗೂ ತಲುಪಿಸುವ ಮಹತ್ ಕಾರ್ಯವನ್ನು ಮಾಡುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.

ಇದನ್ನೂ ಓದಿ: Winter Home Remedies: ಚಳಿಗಾಲಕ್ಕೆ ಈ ಮನೆಮದ್ದುಗಳಿರಲಿ ನಿಮ್ಮ ಬತ್ತಳಿಕೆಯಲ್ಲಿ!

ನಂತರ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀ ದೇವಿ ಮಾತನಾಡಿದರು.

ಕನ್ನಡ ಜ್ಯೋತಿ ರಥಯಾತ್ರೆಯ ಮೆರವಣಿಗೆಯಲ್ಲಿ ಕನ್ನಡನಾಡಿನ ಪ್ರಸಿದ್ಧ ಕಲೆಯಾದ ವೀರಗಾಸೆ ಕುಣಿತ ನೆರೆದಿದ್ದ ಎಲ್ಲರ ಗಮನ ಸೆಳೆಯಿತು.

ಇದನ್ನೂ ಓದಿ: Job Alert: ಬ್ಯಾಂಕ್‌ ಆಫ್‌ ಬರೋಡಾದ 250 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಈ ಸಂದರ್ಭದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು, ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು, ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ಕನ್ನಡ ಪರ, ರೈತ ಪರ ಸಂಘಟನೆಗಳ ಮುಖಂಡರು, ಜನಪ್ರತಿನಿಧಿಗಳು, ಆರೋಗ್ಯ ಇಲಾಖೆ, ಅಂಗನವಾಡಿ-ಆಶಾ ಕಾರ್ಯಕರ್ತರು, ಶಾಲಾ, ಕಾಲೇಜು ವಿದ್ಯಾರ್ಥಿಗಳು, ಗ್ರಾಮಸ್ಥರು, ಗ್ರಾ.ಪಂ ಸಿಬ್ಬಂದಿ ಪಾಲ್ಗೊಂಡಿದ್ದರು.

Exit mobile version