Lok Sabha Election 2024: ಬಿಜೆಪಿಯವರು 10 ವರ್ಷದಲ್ಲಿ ಏನು ಮಾಡಿದ್ದೀರಿ ಹೇಳಿ ಎಂದ ಬಿ.ಕೆ. ಹರಿಪ್ರಸಾದ್ - Vistara News

ಕೊಪ್ಪಳ

Lok Sabha Election 2024: ಬಿಜೆಪಿಯವರು 10 ವರ್ಷದಲ್ಲಿ ಏನು ಮಾಡಿದ್ದೀರಿ ಹೇಳಿ ಎಂದ ಬಿ.ಕೆ. ಹರಿಪ್ರಸಾದ್

Lok Sabha Election 2024: ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಳೆದ ಹತ್ತು ವರ್ಷದ ಅವಧಿಯಲ್ಲಿ ಏನು ಮಾಡಿದ್ದಾರೆ ಎಂಬುವುದನ್ನು ಜನರ ಮುಂದಿಡಲಿ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.

VISTARANEWS.COM


on

Congress leader B K Hariprasad latest statement In Gangavathi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗಂಗಾವತಿ: ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಳೆದ ಹತ್ತು ವರ್ಷದ ಅವಧಿಯಲ್ಲಿ ಏನು ಮಾಡಿದ್ದಾರೆ ಎಂಬುವುದನ್ನು ಜನರ ಮುಂದಿಡಲಿ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಬಿ.ಕೆ. ಹರಿಪ್ರಸಾದ್ (Lok Sabha Election 2024) ಹೇಳಿದ್ದಾರೆ. ನಗರದ ಆನೆಗೊಂದಿ ರಸ್ತೆಯಲ್ಲಿರುವ ಮಾಜಿ ಸಂಸದ ಎಚ್.ಜಿ. ರಾಮುಲು ನಿವಾಸದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

60 ವರ್ಷದಲ್ಲಿ ಕಾಂಗ್ರೆಸ್‌ನವರು ಏನು ಮಾಡಿದ್ದಾರೆ ಎಂದು ಮೋದಿಯಾದಿಯಾಗಿ ಬಿಜೆಪಿಗರು ಸಾರ್ವಜನಿಕ ವೇದಿಕೆಯಲ್ಲಿ ಮಾತನಾಡುತ್ತಾರೆ. ಆಯ್ತು ನಮಗೆ ಗಣಿತದ ಲೆಕ್ಕಾಚಾರ ಬರಲ್ಲ ಎಂದೇ ಭಾವಿಸಿ. ಆದರೆ ಕಳೆದ ಹತ್ತು ವರ್ಷದಲ್ಲಿ ನೀವೇನು ಮಾಡಿದ್ದೀರಿ ಎಂಬುವುದನ್ನು ಜನರ ಮುಂದಿಡಬೇಕಲ್ಲ ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ: Job Alert: 506 ಹುದ್ದೆಗಳ ಭರ್ತಿಗೆ ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಮೇ 14ರೊಳಗೆ ಆನ್‌ಲೈನ್‌ನಲ್ಲಿ ಅಪ್ಲೈ ಮಾಡಿ

ಚುನಾವಣೆ ಸಂದರ್ಭದಲ್ಲಿ ತಾವು ನೀಡಿದ ಆಡಳಿತ, ಅಭಿವೃದ್ಧಿಯನ್ನು ಮುಂದಿಟ್ಟುಕೊಂಡು ಮತ ಕೇಳಬೇಕು. ಆದರೆ ಬಿಜೆಪಿಗರಿಗೆ ಇದ್ಯಾವುದೂ ಬೇಡ. ಕೇವಲ ಧರ್ಮ, ಜಾತಿ ಆಧಾರದ ಮೇಲೆ ಸಮಾಜವನ್ನು ಇಬ್ಭಾಗವಾಗಿಸುವ ಹೇಳಿಕೆಗಳಿಂದ ಚುನಾವಣೆಗೆ ಹೋಗುತ್ತಾರೆ. ಜನರಲ್ಲಿ ಕೋಮು ಭಾವನೆ ಕೆರಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಚುನಾವಣೆಯ ಸಂದರ್ಭದಲ್ಲಿ ಮಾಡಿದ ಕಾರ್ಯಸಾಧನೆ ಏನು, ಮುಂದಿನ ಅವಧಿಯಲ್ಲಿ ಏನು ಮಾಡುತ್ತೇವೆ ಎಂಬುವುದನ್ನು ಪ್ರಣಾಳಿಕೆ ಮೂಲಕ ಜನರಿಗೆ ಹೇಳಬೇಕು ಎಂದು ಅವರು ತಿಳಿಸಿದರು.

ಕಳೆದ ಹತ್ತು ವರ್ಷದಲ್ಲಿ ಈ ದೇಶಕ್ಕೆ ಉಪಯುಕ್ತವಾಗುವ ಒಂದೇ ಒಂದು ಸ್ಪಷ್ಟ ಯೋಜನೆ ಜಾರಿಗೆ ತರಲು ಸಾಧ್ಯವಾಗಿಲ್ಲ ಎಂದು ಟೀಕಿಸಿದ ಅವರು, ರಾಹುಲ್‌ ಗಾಂಧಿ ಅವರು ಭಾರತ್‌ ಜೋಡೋ ಯಾತ್ರೆ ಮೂಲಕ ದೇಶದುದ್ದಗಲಕ್ಕೂ ಇರುವ ಸಮಸ್ಯೆಗಳನ್ನು ಅರಿತು ಅವುಗಳ ಪರಿಹಾರಕ್ಕಾಗಿ ಪ್ರಣಾಳಿಕೆಯನ್ನು ತಯಾರಿಸಿದ್ದಾರೆ. ಆದರೆ ಬಿಜೆಪಿಯ ಪ್ರಣಾಳಿಕೆಯಲ್ಲಿ ಏನೂ ಇಲ್ಲ ಎಂದು ಆರೋಪಿಸಿದರು.

ಇದನ್ನೂ ಓದಿ: Road Accident: ಅಮೆರಿಕದಲ್ಲಿ ಭೀಕರ ಅಪಘಾತ, 20 ಅಡಿ ಎತ್ತರ ಜಿಗಿದ ಕಾರು; 3 ಭಾರತೀಯ ಮಹಿಳೆಯರ ಸಾವು

ಈ ಸಂದರ್ಭದಲ್ಲಿ ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ, ಮಾಜಿ ಶಾಸಕ ಎಚ್.ಆರ್. ಶ್ರೀನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ; ಗುಡುಗು ಸಹಿತ ಭಾರಿ ಮಳೆಗೆ ಯೆಲ್ಲೋ ಅಲರ್ಟ್‌ ಘೋಷಣೆ

Karnataka Weather Forecast : ರಾಜ್ಯಾದ್ಯಂತ ಬಿರುಗಾಳಿ ಸಹಿತ ಗುಡುಗು ಮಿಂಚಿನ ಭಾರಿ ಮಳೆಯಾಗುವ (Heavy Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಆರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಜೋರಾಗಿ ಗಾಳಿ ಬೀಸುವುದರಿಂದ ಮರದಡಿ ನಿಲ್ಲದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ದಕ್ಷಿಣ ಒಳನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಇನ್ನೂ ಕರಾವಳಿಐಲ್ಲಿ ಮಧ್ಯಮ ಮಳೆಯಾಗುವ (Rain News) ನಿರೀಕ್ಷೆ ಇದೆ. ಜತೆಗೆ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಿಂಚು ಮತ್ತು ಗಾಳಿಯು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಳ್ಳಾರಿ ಮತ್ತು ರಾಯಚೂರು ಹಾಗೂ ಕಲಬುರಗಿ, ಯಾದಗಿರಿ, ಕೊಪ್ಪಳ, ವಿಜಯನಗರ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಹಗುರವಾದ ಮಳೆಯಾಗುವ ನಿರೀಕ್ಷೆ ಇದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿರಲಿದೆ.

ಇದನ್ನೂ ಓದಿ: Akshaya Tritiya Fashion: ಅಕ್ಷಯ ತೃತೀಯಕ್ಕೆ ಬಂತು ಬಂಗಾರದ ಆಕರ್ಷಕ ಮೂಗಿನ ಸ್ಟಡ್ಸ್

ಬೆಂಗಳೂರಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌

ಭಾರೀ ಮಳೆಯೊಂದಿಗೆ ಗುಡುಗು ಸಹಿತ ಬಿರುಗಾಳಿ (ಗಂಟೆಗೆ 40-50 ಕಿ.ಮೀ) ಬೀಸಲಿದೆ. ಹೀಗಾಗಿ ಐಎಂಡಿ ಹಳದಿ ಎಚ್ಚರಿಕೆಯನ್ನು ನೀಡಿದೆ. ಮುಖ್ಯವಾಗಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕೊಡಗು, ಕೊಪ್ಪಳ ಸೇರಿ ಹಲವೆಡೆ ಅಬ್ಬರಿಸುತ್ತಿರುವ ಗಾಳಿ- ಮಳೆ; ನಾಳೆಗೂ ವಾರ್ನಿಂಗ್‌

Karnataka Weather Forecast : ವಿವಿಧೆಡೆ ಭಾರಿ ಗಾಳಿ-ಮಳೆಗೆ (Rain News) ಅನಾಹುತಗಳು ಸಂಭವಿಸಿದೆ. ಮಡಿಕೇರಿಯಲ್ಲಿ ಮಳೆ-ಗಾಳಿಗೆ ಕಾರಿನ ಮೇಲೆ ಮರ ಬಿದ್ದು ಜಖಂಗೊಂಡಿದೆ. ಶುಕ್ರವಾರವು ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇತ್ತ ಮಳೆಗಾಗಿ ಮಕ್ಕಳಿಗೆ ಮದುವೆ ಮಾಡಿಸಿದ ಪ್ರಸಂಗವು ನಡೆದಿದೆ.

VISTARANEWS.COM


on

By

karnataka weather Forecast
Koo

ಕೊಡಗು/ಕೊಪ್ಪಳ/ಬೆಂಗಳೂರು: ರಾಜ್ಯದ ಹಲವೆಡೆ ಗಾಳಿ ಸಹಿತ ಮಳೆಯು (Rain News) ಅಬ್ಬರಿಸುತ್ತಿದೆ. ಗುರುವಾರದಂದು ಕೊಡಗು‌ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ (Karnataka Weather Forecast) ಮಳೆಯಾಗಿದೆ. ಕಳೆದೆರಡು ದಿನಗಳಿಂದ ಸಂಜೆಯಾಗುತ್ತಿದ್ದಂತೆ ಮಳೆಯ ಸಿಂಚನವಾಗುತ್ತಿದೆ. ಮುಂಜಾನೆ ಮೋಡ‌ ಕವಿದ ವಾತಾವರಣವಿದ್ದು, ಸಂಜೆ‌ ಅಬ್ಬರದೊಂದಿಗೆ ಮಳೆ ಸುರಿಯುತ್ತಿದೆ. ಮಳೆಯಿಂದ ಕೊಡಗಿನ‌ ರೈತರು ಹಾಗೂ ಸಾರ್ವಜನಿಕರ ಮೊಗದಲ್ಲಿ ಮಂದಹಾಸ ಮೂಡಿದೆ. ಮಡಿಕೇರಿ ಸಮೀಪ ನಿಲ್ಲಿಸಿದ್ದ ಕಾರಿನ ಮೇಲೆ ಭಾರಿ ಗಾಳಿ‌ಗೆ ಮರವು ಧರೆಗುರುಳಿದೆ. ಮಡಿಕೇರಿಯ ಸುದರ್ಶನ ಅಥಿತಿಗೃಹದ ಬಳಿ ಘಟನೆ ನಡೆದಿದೆ. ಅದೃಷ್ಟವಶಾತ್‌ ಕಾರಿನೊಳಗೆ ಯಾರು ಇರಲಿಲ್ಲ.

ಇತ್ತ ಕೊಪ್ಪಳ ಜಿಲ್ಲೆಯ ಕೆಲವೆಡೆ ಮಳೆಯಾಗಿದೆ. ಬಿಸಿಲನಿಂದ ಕಂಗೆಟ್ಟ ಜನರಿಗೆ ಗಾಳಿ ಸಹಿತ ಮಳೆಯು ಅಬ್ಬರಿಸಿದೆ. ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನಲ್ಲಿ ಜೋರಾಗಿ ಮಳೆಯಾಗಿದೆ. ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಏರ್‌ಪೋರ್ಟ್‌ನಲ್ಲೂ ಉತ್ತಮ ಮಳೆಯಾಗಿದೆ. ಬೆಳಗ್ಗೆನಿಂದ ಬಿಸಿಲಿಗೆ ಕಂಗೆಟ್ಟಿದ್ದ ಏರ್‌ಪೋರ್ಟ್‌ ಪ್ರಯಾಣಿಕರು, ಟ್ಯಾಕ್ಸಿ ಚಾಲಕರು ಮಳೆ ಆಗಮನದಿಂದ ಖುಷಿಯಾದರು. ಮಳೆಗೆ ವಾತಾವರಣವು ಕೂಲ್‌ ಆಗಿತ್ತು.

ವಿಜಯನಗರದಲ್ಲಿ ಮಳೆಗೆ ಉರುಳಿದ ಬಾಳೆ ಬೆಳೆ

ಹಂಪಿ ಪರಿಸರದಲ್ಲಿ ಸುರಿದ ಮಳೆಗೆ ಬಾಳೆ ಬೆಳೆ ಉರುಳಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ನಡೆದಿದೆ. ಗಾಳಿ, ಮಳೆಗೆ ಸಾವಿರಾರು ಬಾಳೆಗಿಡಗಳು ನೆಲಕ್ಕುರುಳಿವೆ. ರೈತಾಪಿ ವರ್ಗ ವರ್ಷದ ಮೊದಲ ದೊಡ್ಡ ಮಳೆ ಎಂದೇ ಕೊಂಡಾಡಿದ್ದಾರೆ. ವೆಂಕಟಾಪುರ ಮಾಗಣೆ, ನಿಂಬಾಪುರ, ಬುಕ್ಕಸಾಗರ ಮಾಗಣೆ ಗ್ರಾಮಗಳಲ್ಲಿ ಬಾಳೆ ಬೆಳೆ ನೆಲಕ್ಕೆ ಬಿದ್ದಿದೆ.

ರೈತರು ಹೆಚ್ಚಾಗಿ ಸುಗಂದಿ, ಏಲಕ್ಕಿ, ಸಕ್ಕರೆ ಬಾಳೆಯನ್ನು ಬೆಳೆದಿದ್ದರು. ವೆಂಕಟಾಪುರ ಮಾಗಣೆಯಲ್ಲಿ ಗ್ರಾಮದಲ್ಲಿ ಬಾಳೆಗಿಡಗಳಿಗೆ ಹೆಚ್ಚಿನ ಹಾನಿಯಾಗಿದೆ. ಎಕರೆಗೆ 900 ಗಿಡಗಳು ನೆಟ್ಟಿದರೆ ಕೆಲವೆಡೆ 300 ರಿಂದ 400 ಬಾಳೆ ಗಿಡ ನೆಲಸಮವಾಗಿವೆ. ಕೆಲವೆಡೆ ಎಕೆರೆಗಟ್ಟಲೇ ಗಿಡಗಳು ನೆಲಕ್ಕುರುಳಿವೆ ಎಂದು ಕೃಷಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಾಳೆ ಬೆಳೆ ಹಾನಿಗೊಳಗಾದ ರೈತರಿಗೆ ಸೂಕ್ತ ಪರಿಹಾರದ ಭರವಸೆಯನ್ನು ಜಿಲ್ಲಾಡಳಿತ ನೀಡಿದೆ. ಇನ್ನೂ ಹಲವು ತಿಂಗಳಿಂದ ತುರ್ತಾ, ಬಸವಣ್ಣ, ರಾಯ ಕಾಲುವೆಗಳಲ್ಲಿ ನೀರಿಲ್ಲದೇ ಬರಿದಾಗಿತ್ತು. ಇದೀಗ ಮಳೆಗೆ ಕಾಲುವೆಗಳಲ್ಲೂ ನೀರು ಹರಿದಿದ್ದು, ರೈತರಲ್ಲೂ ಕೊಂಚ ಸಂತಸಗೊಂಡಿದ್ದಾರೆ.

ತುಮಕೂರಲ್ಲಿ ಮಳೆಗಾಗಿ ಮಕ್ಕಳಿಗೆ ಮದುವೆ

ಕೆಲವೆಡೆ ಮಳೆಯು ಅಬ್ಬರಿಸುತ್ತಿದ್ದರೆ ಇತ್ತ ಮಳೆಗಾಗಿ ವಿಶೇಷ ಪೂಜೆ-ಪುನಸ್ಕಾರಗಳು ನಡೆಯುತ್ತಿವೆ. ಮಳೆಗಾಗಿ ತುಮಕೂರಿನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ. ತೀವ್ರ ಬರ ಹಿನ್ನೆಲೆಯಲ್ಲಿ ಬೆಳದಿಂಗಳು ಹಬ್ಬ ಆಚರಣೆ ಮಾಡಿ ಮಳೆಗಾಗಿ ಪ್ರಾರ್ಥಿಸಿದ್ದಾರೆ. ಚಿಕ್ಕ ಮಕ್ಕಳಿಗೆ ವಧು-ವರರಂತೆ ಸಿಂಗಾರಿಸಿ, ಅಲಂಕಾರಿಸಿ ಮದುವೆ ಮಾಡಿ ವಿಶೇಷ ಆಚರಣೆ ಮಾಡಿದ್ದಾರೆ. ತುಮಕೂರಿನ ಜಯಪುರ ಬಡಾವಣೆಯಲ್ಲಿ ಘಟನೆ ನಡೆದಿದೆ. ಮಳೆಗಾಗಿ ಜನರು ಹಲವು ಆಚರಣೆಗಳ ಮೊರೆ ಹೋಗಿದ್ದಾರೆ.

ಇದನ್ನೂ ಓದಿ: SSLC Result 2024: ಪಾಸ್ ಆಗಿದ್ದರೂ ಫೇಲ್ ಎಂದು ತಿಳಿದು ನೇಣಿಗೆ ಶರಣಾದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ

ಭಾರಿ ಮಳೆಯೊಂದಿಗೆ ರಭಸವಾಗಿ ಬೀಸಲಿದೆ ಗಾಳಿ

ಮೇ 10ರಂದು ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಕೆಲವು ಸ್ಥಳಗಳಲ್ಲಿ ಗಾಳಿಯು 40-50 ಕಿ.ಮೀ ವೇಗದಲ್ಲಿ ಬೀಸಲಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ದಕ್ಷಿಣ ಒಳನಾಡಿನಲ್ಲಿ ತುಮಕೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಕೆಲವೆಡೆ ಬಿರುಸಿನ ಗಾಳಿಯೊಂದಿಗೆ ಗುಡುಗು ಸಹಿತ ಮಧ್ಯಮ ಮಳೆಯಾಗಲಿದೆ. ರಾಯಚೂರು, ಕೊಪ್ಪಳ, ಬಾಗಲಕೋಟೆ, ವಿಜಯಪುರದಲ್ಲೂ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ಗರಿಷ್ಠ ತಾಪಮಾನವು 2-4 ಡಿ.ಸೆ ಕಡಿಮೆಯಾಗುವ ಸಾಧ್ಯತೆ ಇದೆ.

ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿಗೆ ಗುಡುಗು ಸಹಿತ ಮಳೆಯಾಗಲಿದೆ. ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶವು ಕ್ರಮವಾಗಿ 34-22 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Heavy Rain: ಗಂಗಾವತಿಯಲ್ಲಿ ಭಾರೀ ಬಿರುಗಾಳಿ ಮಳೆಗೆ ಬಾಳೆ, ಮಾವು, ಮನೆಗಳಿಗೆ ಹಾನಿ

Heavy Rain: ಗಂಗಾವತಿ ತಾಲೂಕಿನಲ್ಲಿ ಬುಧವಾರ ರಾತ್ರಿ ಬೀಸಿದ ಭಾರೀ ಬಿರುಗಾಳಿ ಮತ್ತು ಮಳೆಗೆ ಅಪಾರ ಪ್ರಮಾಣದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿರುವ ಘಟನೆ ಜರುಗಿದೆ. ತಾಲೂಕಿನ ಸಣಾಪುರ, ಆನೆಗೊಂದಿ, ಮಲ್ಲಾಪುರ ಸೀಮೆಯಲ್ಲಿ ಬೆಳೆಯಲಾಗಿದ್ದ ನೂರಾರು ಹೆಕ್ಟೇರ್‌ ಪ್ರದೇಶದಲ್ಲಿನ ಬಾಳೆ ಬೆಳೆಗೆ ಹಾನಿಯಾಗಿದ್ದು, ವೆಂಕಟಗಿರಿ ಹೋಬಳಿಯ ಬಸವಪಟ್ಟಣ, ವಡ್ಡರಹಟ್ಟಿ, ಬೆಣಕಲ್ ಸೇರಿದಂತೆ ನಾನಾ ಗ್ರಾಮಗಳಲ್ಲಿನ ನೂರಾರು ಹೆಕ್ಟೇರು ಪ್ರದೇಶದಲ್ಲಿನ ಮಾವು ಬೆಳೆಗೆ ಹಾನಿಯಾಗಿದೆ.

VISTARANEWS.COM


on

Bananas mangoes crops and houses damaged due to heavy rain in Gangavathi
Koo

ಗಂಗಾವತಿ: ಬುಧವಾರ ರಾತ್ರಿ ಬೀಸಿದ ಭಾರೀ ಬಿರುಗಾಳಿ ಮತ್ತು ಮಳೆಗೆ (Heavy Rain) ತಾಲೂಕಿನಲ್ಲಿ ಅಪಾರ ಪ್ರಮಾಣದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿರುವ ಘಟನೆ ಜರುಗಿದೆ. ತಾಲೂಕಿನ ಸಣಾಪುರ, ಆನೆಗೊಂದಿ, ಮಲ್ಲಾಪುರ ಸೀಮೆಯಲ್ಲಿ ಬೆಳೆಯಲಾಗಿದ್ದ ನೂರಾರು ಹೆಕ್ಟೇರ್‌ ಪ್ರದೇಶದಲ್ಲಿನ ಬಾಳೆ ಬೆಳೆಗೆ ಹಾನಿಯಾಗಿದೆ. ವೆಂಕಟಗಿರಿ ಹೋಬಳಿಯ ಬಸವಪಟ್ಟಣ, ವಡ್ಡರಹಟ್ಟಿ, ಬೆಣಕಲ್ ಸೇರಿದಂತೆ ನಾನಾ ಗ್ರಾಮಗಳಲ್ಲಿನ ನೂರಾರು ಹೆಕ್ಟೇರ್‌ ಪ್ರದೇಶದಲ್ಲಿನ ಮಾವು ಬೆಳೆಗೆ ಹಾನಿಯಾಗಿದೆ.

ಬಾಳೆ- ಮಾವು ಹಾನಿ

ತಡರಾತ್ರಿ ಬೀಸಿದ ಭಾರೀ ಪ್ರಮಾಣದ ಬಿರುಗಾಳಿಗೆ ಆನೆಗೊಂದಿ ಭಾಗದಲ್ಲಿ ಬಾಳೆ ಗಿಡಗಳಿಗೆ ಭಾರೀ ಪ್ರಮಾಣದ ಹಾನಿಯಾಗಿದೆ. ಸಣಾಪುರ, ಆನೆಗೊಂದಿ, ಮಲ್ಲಾಪುರ ಸೀಮೆಯಲ್ಲಿ ಬೆಳೆಯಲಾಗಿದ್ದ ನೂರಾರು ಹೆಕ್ಟೇರ್‌ ಪ್ರದೇಶದಲ್ಲಿನ ಬಾಳೆಗೆ ಹಾನಿ ಉಂಟಾಗಿದೆ.

ಇದನ್ನೂ ಓದಿ: Pejawar Swamiji: ದೇವಾಲಯಗಳ ಆಡಳಿತ ಸಂಪೂರ್ಣವಾಗಿ ಹಿಂದೂಗಳಿಗೆ ಒಪ್ಪಿಸಬೇಕು: ಪೇಜಾವರ ಶ್ರೀ

ವೆಂಕಟಗಿರಿ ಹೋಬಳಿಯ ಬಸವಪಟ್ಟಣ, ವಡ್ಡರಹಟ್ಟಿ, ಬೆಣಕಲ್ ಸೇರಿದಂತೆ ನಾನಾ ಗ್ರಾಮಗಳಲ್ಲಿನ ನೂರಾರು ಹೆಕ್ಟೇರು ಪ್ರದೇಶದಲ್ಲಿನ ಮಾವು ಬೆಳೆಗೆ ಹಾನಿಯಾಗಿದೆ. ಭಾರೀ ಬಿರುಗಾಳಿಗೆ ಗಿಡದಲ್ಲಿನ ಮಾವುಗಳು ಉದುರು ಬಿದ್ದಿದ್ದು ಲಕ್ಷಾಂತರ ರೂಪಾಯಿ ಮೊತ್ತದ ಹಾನಿ ಸಂಭವಿಸಿದೆ ಎಂದು ತಿಳಿದುಬಂದಿದೆ.

ಬುಧವಾರ ರಾತ್ರಿ ಬೀಸಿದ ಭಾರೀ ಬಿರುಗಾಳಿ ಸಮೇತ ಮಳೆಗೆ ಗಂಗಾವತಿ ನಗರದ ವಿವಿಧೆಡೆ ದೊಡ್ಡ ಮರಗಳ ಕೊಂಬೆಗಳು ತುಂಡಾಗಿ ರಸ್ತೆಗೆ ಬಿದ್ದ ಪರಿಣಾಮ ಕೆಲಕಾಲ ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗಿತ್ತು.

ನಗರದ ಅಂಗಡಿ ಸಂಗಣ್ಣ ಕ್ಯಾಂಪ್, ಮಹೆಬೂಬನಗರ, ಗೌಸಿಯಾ ಕಾಲೋನಿ, ಎಚ್.ಆರ್.ಎಸ್. ಕ್ಯಾಂಪ್, ಅಣ್ಣೂರು ಗೌರಮ್ಮಕ್ಯಾಂಪ್, ಲಿಂಗರಾಜ ಕ್ಯಾಂಪ್ ಮತ್ತು ಶರಣಬಸವೇಶ್ವರ ನಗರದಲ್ಲಿ ಕೆಲ ತಗಡಿನ ಮನೆಗಳಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Gold Rate Today: ಚಿನ್ನದ ಮಾರುಕಟ್ಟೆ ಇಳಿಮುಖ; 22 ಮತ್ತು 24 ಕ್ಯಾರಟ್‌ ಬಂಗಾರದ ದರಗಳಲ್ಲಿ ಇಳಿಕೆ

ಜಂಟಿ ಸಮೀಕ್ಷೆ

ಬುಧವಾರ ರಾತ್ರಿ ಬೀಸಿದ ಭಾರೀ ಬಿರುಗಾಳಿ, ಮಳೆಗೆ ಆನೆಗೊಂದಿ ಭಾಗದಲ್ಲಿ ಬಾಳೆ ನಾಶವಾಗಿರುವ ಬಗ್ಗೆ ಮಾಹಿತಿ ಲಭಿಸುತ್ತಿದ್ದಂತೆಯೇ ಕಂದಾಯ ಮತ್ತು ತೋಟಗಾರಿಕಾ ಇಲಾಖೆಯ ಜಂಟಿ ಸಮೀಕ್ಷೆ ನಡೆಸಲಾಗುತ್ತಿದೆ. ಹಾನಿಯ ವರದಿಯನ್ನು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಹಸೀಲ್ದಾರ್ ಯು. ನಾಗರಾಜ್ ತಿಳಿಸಿದ್ದಾರೆ.

Continue Reading

ಕರ್ನಾಟಕ

Pejawar Swamiji: ದೇವಾಲಯಗಳ ಆಡಳಿತ ಸಂಪೂರ್ಣವಾಗಿ ಹಿಂದೂಗಳಿಗೆ ಒಪ್ಪಿಸಬೇಕು: ಪೇಜಾವರ ಶ್ರೀ

Pejawar Swamiji: ಧಾರ್ಮಿಕ ಮತ್ತು ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಎಲ್ಲಾ ಹಿಂದೂ ದೇವಾಲಯಗಳನ್ನು ಆಯಾ ಪ್ರದೇಶದ ಹಿಂದೂಗಳ ಆಡಳಿತಕ್ಕೆ ನೀಡಬೇಕು ಎಂದು ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ. ದೇಶದ ಬಹುತೇಕ ಅನ್ಯಧರ್ಮಿಯರ ಪ್ರಾರ್ಥನಾ ಮಂದಿರಗಳನ್ನು ಆಯಾ ಸಮುದಾಯಕ್ಕೆ ಬಿಟ್ಟುಕೊಡಲಾಗಿದೆ. ಆದರೆ ಹಿಂದೂ ದೇವಾಲಯಗಳ ಆಡಳಿತ ಮಾತ್ರ ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಸರ್ಕಾರ ನಿಯಂತ್ರಿಸುತ್ತಿದೆ. ಇದು ಸರಿಯಲ್ಲ ಎಂದು ಶ್ರೀಗಳು ತಿಳಿಸಿದ್ದಾರೆ.

VISTARANEWS.COM


on

Administration of Hindu temples should be handed over to Hindus says Pejawara Shri
Koo

ಗಂಗಾವತಿ: ಧಾರ್ಮಿಕ ಮತ್ತು ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಎಲ್ಲಾ ಹಿಂದೂ ದೇವಾಲಯಗಳನ್ನು ಆಯಾ ಪ್ರದೇಶದ ಹಿಂದೂಗಳ ಆಡಳಿತಕ್ಕೆ ನೀಡಬೇಕು ಎಂದು ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ (Pejawar Swamiji) ಹೇಳಿದರು.

ನಗರದಲ್ಲಿ ಈ ಕುರಿತು ಮಾತನಾಡಿ, ದೇಶದ ಬಹುತೇಕ ಅನ್ಯ ಧರ್ಮಿಯರ ಪ್ರಾರ್ಥನಾ ಮಂದಿರಗಳನ್ನು ಆಯಾ ಸಮುದಾಯಕ್ಕೆ ಬಿಟ್ಟುಕೊಡಲಾಗಿದೆ. ಆದರೆ ಹಿಂದೂ ದೇವಾಲಯಗಳ ಆಡಳಿತ ಮಾತ್ರ ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಸರ್ಕಾರ ನಿಯಂತ್ರಿಸುತ್ತಿದೆ. ಇದು ಸರಿಯಲ್ಲ. ಆಯಾ ಧರ್ಮದ ವ್ಯಾಪ್ತಿಗೆ ಆಯಾ ದೇಗುಲಗಳ ಆಡಳಿತ ನೀಡುವಂತೆ ಸರ್ವೋಚ್ಛ ನ್ಯಾಯಾಲಯ ಆದೇಶ ಇದೆ. ಆದರೆ ಸರ್ಕಾರಗಳು ಎಲ್ಲಿಯೂ ಈ ಆದೇಶವನ್ನು ಜಾರಿಗೆ ತರುತ್ತಿಲ್ಲ. ಈ ಕಾರ್ಯ ತಕ್ಷಣದಿಂದ ಆಗಬೇಕು ಎಂದು ತಿಳಿಸಿದರು.

ಇದನ್ನೂ ಓದಿ: SSLC 2 Exam Time Table : ಎಸ್‌ಎಸ್‌ಎಲ್‌ಸಿ ಪರೀಕ್ಷೆ- 2ರ ಡೇಟ್‌ ಫಿಕ್ಸ್‌; ವೇಳಾಪಟ್ಟಿ ಹೀಗಿದೆ

ಐಎಎಸ್‌ನಂತ ಪರೀಕ್ಷೆಯಲ್ಲಿ ದಲಿತರು ಹಿಂದುಳಿಯಲು ಅಥವಾ ಆಯಕಟ್ಟಿನ ಹುದ್ದೆಗೆ ಆಯ್ಕೆ ಹೊಂದದಿರಲು ಮುಖ್ಯ ಕಾರಣ ಮೇಲ್ವರ್ಗದವರು ಎಂಬ ರಾಹುಲ್ ಗಾಂಧಿ ಅವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಶ್ರೀಗಳು, ಇದೊಂದು ಆಧಾರ ರಹಿತ ಆರೋಪ. ಪರೀಕ್ಷೆಗಳು ಎಲ್ಲರಿಗೂ ಒಂದೇ ಇರುತ್ತದೆ. ಎಲ್ಲರಿಗೂ ನೂರು ಅಂಕ ಇರುತ್ತದೆ. ಅಭ್ಯರ್ಥಿಗಳು ಗ್ರಹಿಸುವ ಸಾಮರ್ಥ್ಯದ ಮೇಲೆ ಅಂಕಗಳು ಸಿಗುತ್ತವೆಯೇ ವಿನಃ, ಮೇಲ್ವರ್ಗ ಮತ್ತು ಕೆಳವರ್ಗ ಎಂಬ ತಾರತಮ್ಯ ನೀತಿಯಿಂದಲ್ಲ ಎಂದರು.

ದೇಶದಲ್ಲಿ ಹಿಂದೂಗಳ ಸಂಖ್ಯೆ ಕುಸಿಯುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಶ್ರೀಗಳು, ದೇಶದಲ್ಲಿ ಸಮಾನ ನಾಗರಿಕ ಕಾಯ್ದೆ ಜಾರಿಯಾದರೆ ಇಂತಹ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆದಷ್ಟು ತ್ವರಿತವಾಗಿ ಮಸೂದೆ ಮಂಡನೆಯಾಗಿ ಕಾಯ್ದೆ ಜಾರಿಯಾಗಬೇಕು ಎಂದರು.

ಐದಾರು ಶತಮಾನಗಳ ರಾಮಮಂದಿರ ನಿರ್ಮಾಣ ಕನಸು ಇಂದು ನನಸಾಗಿದೆ. ಇಲ್ಲಿಗೆ ನಮ್ಮ ಕಾರ್ಯ ಮುಗೀತು ಎಂದು ಸುಮ್ಮನೆ ಕೂರುವ ಹಾಗಿಲ್ಲ. ಆ ಮಂದಿರವನ್ನು ಸೂರ್ಯ-ಚಂದ್ರರು ಇರೋವರೆಗೂ ಉಳಿಸಿಕೊಂಡು ಹೋಗುವುದು ಸವಾಲಿನ ಕೆಲಸವಾಗಿದೆ.

ಇದನ್ನೂ ಓದಿ: Gold Rate Today: ಚಿನ್ನದ ಮಾರುಕಟ್ಟೆ ಇಳಿಮುಖ; 22 ಮತ್ತು 24 ಕ್ಯಾರಟ್‌ ಬಂಗಾರದ ದರಗಳಲ್ಲಿ ಇಳಿಕೆ

ಮಂದಿರದ ಮೇಲೆ ಯಾವುದೇ ದಾಳಿಯಾಗದಂತೆ, ಧಕ್ಕೆಯಾಗದಂತೆ ಸಂರಕ್ಷಣೆ ಮಾಡಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ ಭಾರತೀಯ ಅದರಲ್ಲೂ ಮುಖ್ಯವಾಗಿ ಪ್ರತಿಯೊಬ್ಬ ಹಿಂದೂ ಈ ಕೆಲಸ ಮಾಡಬೇಕು. ಹಿಂದೂಗಳು ಹಿಂದೂಗಳಾಗಿ ಉಳಿದರೆ ಮಾತ್ರ ಈ ಕೆಲಸ ಸಾಧ್ಯ ಎಂದು ತಿಳಿಸಿದರು.

Continue Reading
Advertisement
hd revanna jailed 2
ಕ್ರೈಂ10 mins ago

HD Revanna Jailed: ಇನ್ನು ಮೂರು ದಿನ ಎಚ್‌ಡಿ ರೇವಣ್ಣ ಭೇಟಿ ಯಾರಿಗೂ ಇಲ್ಲ

Aravind Kejriwal
ದೇಶ42 mins ago

Arvind Kejriwal: ಕೇಜ್ರಿವಾಲ್‌ ಜಾಮೀನು ಅರ್ಜಿ ಇಂದು ವಿಚಾರಣೆ; ದಿಲ್ಲಿ ಸಿಎಂಗೆ ಜೈಲಾ…? ಬೇಲಾ?

drowned in tank jindal bellary
ಕ್ರೈಂ52 mins ago

Drowned in Tank: ಜಿಂದಾಲ್‌ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳ ಸಾವು

IPL 2024
ಐಪಿಎಲ್ 202454 mins ago

IPL 2024: ಆರ್‌ಸಿಬಿಯ ಪ್ಲೇ ಆಫ್ ಕನಸು ಜೀವಂತ; ಸೋಲಿನೊಂದಿಗೆ ರೇಸ್‌ನಿಂದ ಹೊರಬಿದ್ದ ಪಂಜಾಬ್‌: ಹೀಗಿದೆ ಹೊಸ ಅಂಕಪಟ್ಟಿ

Virat Kohli
ಐಪಿಎಲ್ 20241 hour ago

Virat Kohli: ಮೈದಾನದಲ್ಲೇ ರುಸ್ಸೊ AK 47ಗೆ ಕಲಾಶ್‌ನಿಕಾವೋ ಗನ್ ತೆಗೆದ ಕೊಹ್ಲಿ; ವಿಡಿಯೊ ನೋಡಿ

Akshaya Tritiya 2024
ಪ್ರಮುಖ ಸುದ್ದಿ1 hour ago

Akshaya Tritiya 2024: ಇಂದು ಏನೇನು ಖರೀದಿಸಬಹುದು? ಚಿನ್ನ- ಬೆಳ್ಳಿ ಏಕೆ ಖರೀದಿಸಬೇಕು?

Akshaya Tritiya 2024
ಧಾರ್ಮಿಕ1 hour ago

Akshaya Tritiya 2024: ದೇಹ ಮತ್ತು ಮನಸ್ಸು ಪರಿಪೂರ್ಣತೆಯನ್ನು ಪಡೆಯುವ ದಿನ ಅಕ್ಷಯ ತೃತೀಯ

America v/s Russia
ವಿದೇಶ2 hours ago

America v/s Russia:ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪಕ್ಕೆ ಅಮೆರಿಕ ಹೇಳಿದ್ದೇನು?

Actor Prabhas
ಸಿನಿಮಾ2 hours ago

Actor Prabhas: ʼಕಣ್ಣಪ್ಪʼ ಚಿತ್ರಕ್ಕೆ ಎಂಟ್ರಿಕೊಟ್ಟ ಪ್ರಭಾಸ್‌; ಹೊಸ ಪೋಸ್ಟರ್‌ ರಿಲೀಸ್‌

Prajwal Revanna Case
ಕ್ರೈಂ2 hours ago

Prajwal Revanna case: ಪ್ರಜ್ವಲ್‌ ರೇವಣ್ಣ ಮೇಲೆ ಸುಳ್ಳು ಆರೋಪ ನೀಡಲು ಒತ್ತಡ: ಮಹಿಳೆ ದೂರು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ4 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ11 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ13 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ13 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ20 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ20 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ20 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು21 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ21 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು23 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

ಟ್ರೆಂಡಿಂಗ್‌