Love Case : ಪ್ರೀತಿಸಿದ ಹುಡುಗಿಗೆ ಅಬಾರ್ಷನ್‌ ಮಾಡಿಸಿ ಕೈಕೊಟ್ಟು ಪರಾರಿಯಾದ ಪ್ರೇಮಿ - Vistara News

ಕೊಪ್ಪಳ

Love Case : ಪ್ರೀತಿಸಿದ ಹುಡುಗಿಗೆ ಅಬಾರ್ಷನ್‌ ಮಾಡಿಸಿ ಕೈಕೊಟ್ಟು ಪರಾರಿಯಾದ ಪ್ರೇಮಿ

Love Case : ಯುವಕನೊಬ್ಬ ಪ್ರೀತಿಸುವ ನೆಪದಲ್ಲಿ ಯುವತಿಯೊಂದಿಗೆ ದೈಹಿಕ ಸಂರ್ಪಕ ಬೆಳೆಸಿದ್ದ. ಆಕೆ ಗರ್ಭಿಣಿ ಎಂದು ತಿಳಿದಾಕ್ಷಣ ಅಬಾರ್ಷನ್‌ ಮಾಡಿಸಿ ನಂತರ ಕೈ ಕೊಟ್ಟು ಓಡಿ ಹೋಗಿದ್ದಾನೆ.

VISTARANEWS.COM


on

Man abandons girl after aborting her
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಪ್ಪಳ: ಪ್ರೀತಿಸಿದ ಹುಡುಗಿಗೆ (Love Case) ಮದುವೆ ಆಗುವುದಾಗಿ ನಂಬಿಸಿ, ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ. ಆಕೆ ಗರ್ಭಿಣಿಯೆಂದು ತಿಳಿದಾಕ್ಷಣ ಅಬಾರ್ಷನ್‌ ಮಾಡಿಸಿ ಅರ್ಧ ದಾರಿಯಲ್ಲೇ ಬಿಟ್ಟು ಹೋಗಿದ್ದಾನೆ. ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ವರನಖೇಡದಲ್ಲಿ ಘಟನೆ ನಡೆದಿದೆ.

ವರನಖೇಡ ಗ್ರಾಮದ ಮಂಜುನಾಥ ಎಂಬಾತ ಆತನ ಅಣ್ಣ ಹನುಮೇಶ ನಾಯಕ ಸೇರಿ ಯುವತಿಗೆ ಗರ್ಭಪಾತ ಮಾಡಿಸಿದ್ದಾರೆ. ಅದೇ ಗ್ರಾಮದ ಯುವತಿಯನ್ನು ಮಂಜುನಾಥ ಎರಡು ವರ್ಷದಿಂದ ಪ್ರೀತಿಸುತ್ತಿದ್ದ. ಯುವತಿಯನ್ನು ಪುಸಲಾಯಿಸಿ ಕಳೆದ ಎರಡು ತಿಂಗಳ ಹಿಂದೆ ಮನೆ ಬಿಟ್ಟು ಪರಾರಿಯಾಗಿದ್ದ.

ಇದನ್ನೂ ಓದಿ:Water Crisis: ಬೆಂಕಿ ನಂದಿಸಲು ಅಪಾರ್ಟ್‌ಮೆಂಟ್‌ಗಳಿಂದ ನೀರಿಗಾಗಿ ಬೇಡಿದ ಅಗ್ನಿಶಾಮಕ ದಳ ಸಿಬ್ಬಂದಿ

ಈ ಕುರಿತು ಕನಕಗಿರಿ ಪೊಲೀಸ್ ಠಾಣೆಯಲ್ಲಿ ಯುವತಿಯ ತಂದೆಯಿಂದ ಮಿಸ್ಸಿಂಗ್ ಕೇಸ್ ದಾಖಲಿಸಿದ್ದರು. ಈ ನಡುವೆ ಮೂರು ದಿನಗಳ ಹಿಂದೆ ಮಂಜುನಾಥ ವಾಪಸ್‌ ಯುವತಿಯನ್ನು ಕರೆದುಕೊಂಡು ಬಂದಿದ್ದ. ಯುವತಿಗೆ ಹಿರೇವಂಕಲಕುಂಟಿ ವೈದ್ಯರೊಬ್ಬರಿಂದ ಅಬಾರ್ಷನ್ ಮಾಡಿಸಿ ಮಾದಿನಾಳ ಕ್ರಾಸ್ ಬಳಿ ಬಿಟ್ಟು ಹೋಗಿದ್ದಾನೆ.

ಸದ್ಯ ಕನಕಗಿರಿ ಪೊಲೀಸ್‌ ಠಾಣೆಯಲ್ಲಿದ್ದ ಯುವತಿಗೆ ರಕ್ತಸ್ರಾವ ಹೆಚ್ಚಾದ ಹಿನ್ನೆಲೆಯಲ್ಲಿ ಮಹಿಳಾ ಸಾಂತ್ವಾನ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಅಲ್ಲಿಂದ ಆಕೆಯನ್ನು ಗಂಗಾವತಿ ಆಸ್ಪತ್ರೆಗೆ ಸೇರಿಸಲಾಗಿದೆ. ಈ ಕುರಿತು ಕನಕಗಿರಿ ಪೊಲೀಸ್ ಠಾಣೆಯಲ್ಲಿ ಮಂಜುನಾಥ, ಹನುಮೇಶ ಹಾಗೂ ವೈದ್ಯರ ವಿರುದ್ಧ ದೂರು ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಮದುವೆ ಆಗದಿದ್ದರೆ ಬಿಲ್ಡಿಂಗ್ ಮೇಲಿಂದ ಬಿದ್ದು ಸಾಯ್ತೀನಿ ಎಂದಳು ಇನ್ಸ್ಟಾಗ್ರಾಮ್ ಚೆಲುವೆ

ಮೈಸೂರು: ಪ್ರೇಮ ವೈಫಲ್ಯಕ್ಕೆ (Love Failure) ಬೇಸತ್ತ ವಿವಾಹಿತ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ನಂಜನಗೂಡಿನಲ್ಲಿ ನಡೆದಿದೆ. ಬಿಹಾರ ಮೂಲದ ನಾಸಿಂ ಬೇಗಂ(31) ಆತ್ಮಹತ್ಯೆಗೆ ಯತ್ನಿಸಿದವಳು.

ಖಾಸಗಿ ಹೋಟೆಲ್‌ನ ಕಟ್ಟಡದ ಮೇಲ್ಭಾಗದಲ್ಲಿ ನಿಂತು ಮದುವೆ ಆಗದಿದ್ದರೆ ಬಿಲ್ಡಿಂಗ್ ಮೇಲಿಂದ ಬಿದ್ದು ಸಾಯುವುದಾಗಿ ಹೇಳಿ ರಂಪಾಟ ಮಾಡಿದ್ದಾಳೆ. ಕಟ್ಟಡದ ತುದಿಯಲ್ಲಿ ನಿಂತು ಆತ್ಮಹತ್ಯೆಗೆ ಯತ್ನಿಸುವುದಾಗಿ ಬೆದರಿಕೆ ಹಾಕಿದ್ದಾಳೆ.

ಈಗಾಗಲೇ ಮದುವೆ ಆಗಿದ್ದ ಬಿಹಾರ ಮೂಲದ ನಾಸಿಂ ಬೇಗಂ, ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿದ್ದ ವಯಸ್ಸಿನಲ್ಲಿ ಚಿಕ್ಕವನ್ನಾಗಿದ್ದ ಆಸಿಬೂರ್ ರೆಹಮಾನ್ ಎಂಬಾತನನ್ನು ಪ್ರೀತಿಸಿದ್ದಳು. ನಂಜನಗೂಡಿನ ಹಿಮ್ಮಾವು ಗ್ರಾಮದಲ್ಲಿ ವಾಸವಾಗಿದ್ದ ಆಸಿಬೂರ್ ರೆಹಮಾನ್ ಏಷಿಯನ್ ಪೈಂಟ್ಸ್‌ನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಕಳೆದ ಒಂದು ವರ್ಷದಿಂದ ಆಸಿಬೂರ್ ರೆಹಮಾನ್ ಹಾಗೂ ನಾಸಿಂ ಬೇಗಂ ಪರಿಚಯವು ಪ್ರೀತಿಗೆ ತಿರುಗಿತ್ತು.

ಇದನ್ನೂ ಓದಿ: Orry With Radhika Merchant: ರಾಧಿಕಾ ಮರ್ಚಂಟ್‌ ಜತೆ ಪೋಸ್‌ ಕೊಟ್ಟ ಓರಿ!

ಈ ನಡುವೆ ಆಸಿಬೂರನನ್ನು ನೋಡಲು ನಾಸಿಂ ಬೇಗಂ ಬಿಹಾರದಿಂದ ನಂಜನಗೂಡಿಗೆ ಬಂದಿದ್ದಳು. ಆಕೆಯನ್ನು ಕಾಣಲು ಕಾತುರನಾಗಿದ್ದ ಆಸಿಬೂರ ಮಹಿಳೆಯನ್ನು ಕಂಡ ಮೇಲೆ ಮನಸ್ಸು ಬದಲಾಗಿತ್ತು. ಯಾಕೆಂದರೆ ನಾಸಿಂ ಬೇಗಂಗೆ ಈಗಾಗಲೇ ಮದುವೆ ಆಗಿತ್ತು. ಜತೆಗೆ ವಯಸ್ಸಿನ ಅಂತರ ಹೆಚ್ಚಿದೆ ಎಂದು ಮದುವೆಗೆ ಒಲ್ಲೆ ಎಂದಿದ್ದ.

ಯುವಕನ ಮಾತಿನಿಂದ ಸಿಟ್ಟಿಗೆದ್ದ ವಿವಾಹಿತೆ ಮದುವೆ ಮಾಡಿಕೊಳ್ಳುವಂತೆ ಒತ್ತಾಯ ಮಾಡಿದ್ದಾಳೆ. ಯುವಕ ಮದುವೆಯನ್ನು ನಿರಾಕರಿಸಿದ್ದಕ್ಕೆ ಕೋಪಗೊಂಡ ನಾಸಿಂ ಬೇಗಂ ತಾನು ತಂಗಿದ್ದ ಹೋಟೆಲ್‌ನ ಕಟ್ಟಡ ಏರಿ ಹೈಡ್ರಾಮಾವನ್ನೇ ಮಾಡಿದ್ದಳು. ಇತ್ತ ವಿಷಯ ತಿಳಿಯುತ್ತಿದ್ದಂತೆ ನಂಜನಗೂಡು ಪಟ್ಟಣ ಪೊಲೀಸರು ಸ್ಥಳಕ್ಕಾಗಮಿಸಿ, ನಾಸಿಂ ಬೇಗಂನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನಂಜನಗೂಡು ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಮಳೆಗಾಗಿ ಕಪ್ಪೆಗಳಿಗೆ ಮದುವೆ; ಶಾಖದ ಹೊಡೆತಕ್ಕೆ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka weather Forecast : ಮಳೆಗಾಗಿ (Rain News) ಕಸರತ್ತು ಶುರುವಾಗಿದ್ದು ಮೈಸೂರಲ್ಲಿ ಕಪ್ಪೆಗಳಿಗೆ ಮದುವೆ ಮಾಡಲಾಗಿದೆ. ತೊಪ್ಪೆಯಾಗುವಂತೆ ಮಳೆ ಹೊಯ್ಯಲೆಂದು ಕಪ್ಪೆಗಳ ಕಟ್ಟಿಕೊಂಡು ಬಂದು ಗ್ರಾಮಸ್ಥರು ತಾಳಿ ಕಟ್ಟಿಸಿದ್ದಾರೆ. ಇತ್ತ 6 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಪ್ಪಳಿಸಲಿದ್ದು, ಹವಾಮಾನ ಇಲಾಖೆಯು ರೆಡ್‌ ಅಲರ್ಟ್‌ ಘೋಷಿಸಿದೆ.

VISTARANEWS.COM


on

By

karnataka weather Forecast
Koo

ಮೈಸೂರು/ಬೆಂಗಳೂರು: ಮಳೆ ಆಗದೆ ನೀರಿಗಾಗಿ ಎಲ್ಲಿಲ್ಲದ ಸಂಕಷ್ಟ ಎದುರಾಗುತ್ತಿದ್ದು, ಜನರು ಮಳೆಗಾಗಿ ದೇವರಲ್ಲಿ ಮೊರೆ ಹೋಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಒಂದೊಂದು ಕಡೆ ಒಂದೊಂದು ಸಂಪ್ರದಾಯಗಳೂ ಚಾಲ್ತಿಯಲ್ಲಿವೆ. ಈಗ ಮೈಸೂರಿನ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಮಳೆಗಾಗಿ ಕಪ್ಪೆಗಳಿಗೆ ಮದುವೆ ಮಾಡಿದ್ದಾರೆ. ಮಳೆ ಬಾರದಿರುವ ಸಂಕಟದ (Karnataka Weather Forecast) ಮಧ್ಯೆ ಮಳೆ ಬರಲಿ (Rain News), ವರುಣ ದೇವ ಸಂತುಷ್ಟಗೊಳ್ಳಲಿ, ದಿನವೂ ಮೈ ತೊಪ್ಪೆಯಾಗುವಷ್ಟು ಮಳೆ ಸುರಿಯಲಿ, ಕೃಷಿ ಚಟುವಟಿಕೆಗೆ ತೊಂದರೆಯಾಗದಿರಲಿ, ಭೂತಾಯಿಗೆ ಬೇಕಾಗುವಷ್ಟು ಮಳೆ ಸುರಿಯಲಿ, ಅಂತರ್ಜಲ ಪೂರ್ಣಗೊಳ್ಳಲಿ, ನದಿ, ಹಳ್ಳಕೊಳ್ಳಗಳು ತುಂಬಿಕೊಳ್ಳಲಿ ಎಂದು ಪ್ರಾರ್ಥನೆ ಮಾಡಿದ್ದಾರೆ. ಬಿಸಿಲಿನ ಬೇಗೆಗೆ ತತ್ತರಿಸಿದ ಜನರು ಮಳೆ ಸುರಿಯುವಂತೆ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದರು. ಗ್ರಾಮದ ಬೀದಿ ಬೀದಿಗಳಲ್ಲಿ ಕಪ್ಪೆಗಳ ಮೆರವಣಿಗೆ ಮಾಡಿ ತಮಟೆ ಬಾರಿಸಿದ್ದಾರೆ. ಹುಯ್ಯೋ ಹುಯ್ಯೋ ಮಳೆರಾಯ ಬಾಳೆ ತೋಟಕ್ಕೆ ನೀರಿಲ್ಲ ಎಂದು ಘೋಷಣೆ ಕೂಗಿದರು.

ಇದನ್ನೂ ಓದಿ: Prajwal Revanna Case: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

ಮುಂದುವರಿಯಲಿದೆ ಒಣಹವೆ

ರಾಜ್ಯಾದ್ಯಂತ ಇನ್ನೆರಡು ದಿನಗಳು ಒಣಹವೆ ಇರುವ ಸಾಧ್ಯತೆ ಇದೆ. ಏ.2-3ರಂದು ಶುಷ್ಕ ವಾತಾವರಣ ಇದ್ದರೆ, ಏಪ್ರಿಲ್‌ 4ರಂದು ಚಾಮರಾಜನಗರದಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಶಾಖದ ಅಲೆಯ ಎಚ್ಚರಿಕೆ

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ತೀವ್ರ ಬಿಸಿಗಾಳಿ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿರುತ್ತದೆ.

ರಾತ್ರಿ ಬೆಚ್ಚನೆಯ ವಾತಾವರಣ

ಮುಂದಿನ 5 ದಿನಗಳವರೆಗೆ ಕರ್ನಾಟಕದ ಉತ್ತರ ಒಳಭಾಗದಲ್ಲಿ ಬೆಚ್ಚನೆಯ ರಾತ್ರಿಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮೇ 5ರಂದು ಉತ್ತರ ಕನ್ನಡ ಬಿಸಿ ಮತ್ತು ಆರ್ದ್ರತೆಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ರಾಜ್ಯಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ.

6 ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕೊಪ್ಪಳ

Medical Negligence : ಸಕಾಲಕ್ಕೆ ಸಿಗದ ಚಿಕಿತ್ಸೆ; ಹೆರಿಗೆಗೂ ಮೊದಲೇ ತಾಯಿ-ಮಗು ಸಾವು

Medical Negligence : ವೈದ್ಯರ ನಿರ್ಲಕ್ಷ್ಯಕ್ಕೆ ಪ್ರಪಂಚ ನೋಡುವ ಮೊದಲೇ ಮಗುವೊಂದು ತಾಯಿ ಗರ್ಭದಲ್ಲೇ ಅಸುನೀಗಿದೆ. 9 ತಿಂಗಳ ಕಾಲ ಹೊತ್ತ ತಾಯಿಯು ಹೆರಿಗೆಗೂ ಮುನ್ನವೇ ಕಣ್ಮುಂಚಿದ್ದಾಳೆ. ಸಕಾಲಕ್ಕೆ ಚಿಕಿತ್ಸೆ ಸಿಗದೆ ತಾಯಿ-ಮಗು ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಹೀಗಾಗಿ ತಪ್ಪಿತಸ್ಥ ವೈದ್ಯರನ್ನು ಅಮಾನತು ಮಾಡಿ ಎಂದು ಒತ್ತಾಯಿಸಿದರು.

VISTARANEWS.COM


on

By

Medical Negligence
Koo

ಕೊಪ್ಪಳ: ವೈದ್ಯರ ನಿರ್ಲಕ್ಷ್ಯಕ್ಕೆ (Medical Negligence) ಹೆರಿಗೆ ಸಮಯದಲ್ಲಿ ಗರ್ಭಿಣಿ ಮತ್ತು ಶಿಶು ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಕುಷ್ಟಗಿ ತಾಲೂಕಿನ ವಿಠಲಾಪುರ ಗ್ರಾಮದ ನಿವಾಸಿ ಲಕ್ಷ್ಮೀ (20) ಮೃತ ದುರ್ದೈವಿ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಿಯಲ್ಲಿ ಈ ಘಟನೆ ನಡೆದಿದೆ.

ಮೊದಲ ಹೆರಿಗೆ ಹಿನ್ನೆಲೆಯಲ್ಲಿ ಲಕ್ಷ್ಮೀಯನ್ನು ಮಂಗಳವಾರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. ಆದರೆ ಹೆರಿಗೆ ಆಗುವ ಮೊದಲೇ ಲಕ್ಷ್ಮಿ ಹಾಗೂ ಹೊಟ್ಟೆಯಲ್ಲಿದ್ದ ಶಿಶು ಕೂಡಾ ಮೃತಪಟ್ಟಿದ್ದಾರೆ.

ವೈದ್ಯರು ಸಕಾಲಕ್ಕೆ ಚಿಕಿತ್ಸೆ ನೀಡಿಲ್ಲ ಅವರ ನಿರ್ಲಕ್ಷ್ಯಕ್ಕೆ ಸಾವಾಗಿದೆ ಎಂದು ಲಕ್ಷ್ಮೀ ಮೃತ ಕುಟುಂಬಸ್ಥರು ಮತ್ತು ಗ್ರಾಮಸ್ಥರು ತಾವರಗೇರಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ರಾತ್ರಿಯಿಂದ ಧರಣಿ ನಡೆಸಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ತಪ್ಪಿತಸ್ಥ ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರಾತ್ರಿಯಿಂದಲೇ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.

ಸಮುದಾಯ ಆರೋಗ್ಯ ಕೇಂದ್ರದ ಡಾ.ಕಾವೇರಿ ಸರಿಯಾದ ಚಿಕಿತ್ಸೆ ಕೊಡಲಿಲ್ಲ. ಹೀಗಾಗಿ ವೈದ್ಯರ ಅಮಾನತ್ತಿಗೆ ಆಗ್ರಹಿಸಿ ಬುಧವಾರವು ಪ್ರತಿಭಟನೆ ಮುಂದುವರಿಸಿದ್ದಾರೆ. ಸಮುದಾಯ ಕೇಂದ್ರದ ಮುಂದೆ 200ಕ್ಕೂ ಹೆಚ್ಚು ಜನರು ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕೊಪ್ಪಳ

Koppala News: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸಿಗುವಂತೆ ಕ್ರಮ ಕೈಗೊಳ್ಳಲು ಜಿ.ಪಂ ಸಿಇಒ ಸೂಚನೆ

Koppala News: ಕನಕಗಿರಿ ಪಟ್ಟಣದ ಶರಣಪ್ಪ ಪಂಪಣ್ಣ ಗುಗ್ಗಳಶೆಟ್ರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಜಿ.ಪಂ ಸಿಇಒ ರಾಹುಲ್ ರತ್ನಂ ಪಾಂಡೆಯ, ಕನಕಗಿರಿ ಮತ್ತು ಕಾರಟಗಿ ತಾಲೂಕು ಪಂಚಾಯಿತಿಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

VISTARANEWS.COM


on

Koppala ZP CEO Rahul Ratnam Pandeya Spoke in Progress review meeting at kanakagiri
Koo

ಕನಕಗಿರಿ: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಗೆ (Drinking Water) ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳಿಗೆ ಜಿ.ಪಂ ಸಿಇಒ ರಾಹುಲ್ ರತ್ನಂ ಪಾಂಡೆ ಸೂಚನೆ (Koppala News) ನೀಡಿದರು.

ಪಟ್ಟಣದ ಶರಣಪ್ಪ ಪಂಪಣ್ಣ ಗುಗ್ಗಳಶೆಟ್ರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಕನಕಗಿರಿ ಮತ್ತು ಕಾರಟಗಿ ತಾಲೂಕು ಪಂಚಾಯಿತಿಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿ, ಅವರು ಮಾತನಾಡಿದರು.

ಇದನ್ನೂ ಓದಿ: Karnataka Weather: ರಾಜ್ಯದಲ್ಲಿ ಕಳೆದ 7 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು!

ಇದೇ ವೇಳೆ ಎರಡು ತಾಲೂಕಿನಲ್ಲಿ ಜೆಜೆಎಂ ಯೋಜನೆಯ ಪ್ರಥಮ ಹಾಗೂ ದ್ವಿತೀಯ ಹಂತದ ಕಾಮಗಾರಿಗಳನ್ನು ಕೂಡಲೇ ಮುಕ್ತಾಯಗೊಳಿಸಲು ಪಿಆರ್‌ ಇಡಿ ಎಇಇ ಯವರಿಗೆ ಸೂಚಿಸಿ ಸಂಬಂಧಿಸಿದ ಗುತ್ತಿಗೆದಾರರಿಗೆ ನೋಟಿಸ್ ಜಾರಿ ಮಾಡಲು ಸೂಚಿಸಿದರು. ನಂತರ ನರೇಗಾ, ವಸತಿ ಸೇರಿದಂತೆ ಸ್ವಚ್ಛ ಭಾರತ ಮಿಷನ್ ಯೋಜನೆಯ ಪ್ರಗತಿಯನ್ನು ಪರಿಶೀಲನೆ ಮಾಡಿ, ಕಡಿಮೆ ಪ್ರಗತಿ ಹೊಂದಿದ ಗ್ರಾ.ಪಂಗಳು ಪ್ರಗತಿ ಸಾಧಿಸಲು ತಿಳಿಸಿದರು.

ಇದನ್ನೂ ಓದಿ: Fortis Hospital: ಪಾರ್ಕಿನ್ಸನ್‌ ಕಾಯಿಲೆ ಚಿಕಿತ್ಸೆಗೆ ಪ್ರತ್ಯೇಕ ಕ್ಲಿನಿಕ್‌ ಆರಂಭಿಸಿದ ಫೋರ್ಟಿಸ್‌ ಆಸ್ಪತ್ರೆ

ಈ ವೇಳೆ ಕನಕಗಿರಿ ತಾ. ಪಂ ಇಒ ಎಲ್. ವಿರೇಂದ್ರ ಕುಮಾರ್, ಕಾರಟಗಿ ತಾ.ಪಂ ಇಒ ಲಕ್ಷ್ಮೀದೇವಿ, ಎಇಇ ವಿಜಯಕುಮಾರ್, ತಾ.ಪಂ ಸಹಾಯಕ ನಿರ್ದೇಶಕರಾದ ಚಂದ್ರಶೇಖರ ಬಿ. ಕಂದಕೂರ್, ವೈ.ವನಜಾ, ವೀರಣ್ಣ ನಕ್ರಳ್ಳಿ ಸೇರಿದಂತೆ ಕನಕಗಿರಿ, ಕಾರಟಗಿ ತಾಲೂಕಿನ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಕೊಪ್ಪಳ

Lok Sabha Election 2024: ನಾಯಕತ್ವ ಕೊರತೆ ಇರುವುದು ಬಿಜೆಪಿಗೆ ಎಂದ ಸಿದ್ದರಾಮಯ್ಯ

Lok Sabha Election 2024: ಹಿಂದಿನ ಬಿಜೆಪಿ ಸರ್ಕಾರದ 40 % ಕಮಿಷನ್ ಬಗ್ಗೆ ತನಿಖೆ ನಡೆಯುತ್ತಿದ್ದು, ಒಂದು ವೇಳೆ ಕಮಿಷನ್ ಪಡೆದ ಆರೋಪ ಸಾಬೀತಾದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

CM Siddaramaiah inaugurated by prajadhwani lok sabha election campaign meeting at kushtagi
Koo

ಕೊಪ್ಪಳ: ಇಂಡಿಯಾ ಮೈತ್ರಿಕೂಟದಲ್ಲಿ ಪ್ರಧಾನಿ ಅಭ್ಯರ್ಥಿಗಳಿಗೆ ಮತ್ತು ನಾಯಕರಿಗೆ ಕೊರತೆಯಿಲ್ಲ. ಬಿಜೆಪಿಯಲ್ಲಿ ಮೋದಿ ಬಿಟ್ಟರೆ ಪ್ರಧಾನಿ ಯಾರಾಗ್ತಾರೇ? ನಿಜವಾಗಿಯೂ ನಾಯಕತ್ವ ಕೊರತೆ ಬಿಜೆಪಿಗಿದೆ ಎಂದು ಸಿಎಂ ಸಿದ್ದರಾಮಯ್ಯ (Lok Sabha Election 2024) ಹೇಳಿದ್ದಾರೆ.

ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ನಡೆದ ಪ್ರಜಾಧ್ವನಿ ಲೋಕಸಭಾ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂಡಿಯಾ ಮೈತ್ರಿಕೂಟದಲ್ಲಿ ಪ್ರಧಾನಿ ಅಭ್ಯರ್ಥಿಗಳಿಗೆ ಮತ್ತು ನಾಯಕರಿಗೆ ಕೊರತೆಯಿಲ್ಲ. ಬಿಜೆಪಿಯಲ್ಲಿ ಮೋದಿ ಬಿಟ್ಟರೇ ಪ್ರಧಾನಿ ಯಾರಾಗ್ತಾರೇ, ನಿಜವಾಗಿಯೂ ನಾಯಕತ್ವ ಕೊರತೆ ಬಿಜೆಪಿಗಿದೆ. ಹೀಗಾಗಿ ಸೋಲಿನ ಹತಾಶೆಯಿಂದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಟೀಕಿಸಿದರು.

ಹಿಂದಿನ ಬಿಜೆಪಿ ಸರ್ಕಾರದ 40% ಕಮಿಷನ್ ಬಗ್ಗೆ ತನಿಖೆ ನಡೆಯುತ್ತಿದ್ದು, ಒಂದು ವೇಳೆ ಕಮಿಷನ್ ಪಡೆದ ಆರೋಪ ಸಾಬೀತಾದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ತಿಳಿಸಿದರು.

ಇದನ್ನೂ ಓದಿ: Karnataka Weather: ರಾಯಚೂರಿನಲ್ಲಿ ರಾಜ್ಯದಲ್ಲೇ ಗರಿಷ್ಠ ಉಷ್ಣಾಂಶ ದಾಖಲು; ಇನ್ನೂ 4 ದಿನ ಶಾಖದ ಅಲೆ ಎಚ್ಚರಿಕೆ

ಮೋದಿ ಕಳೆದ ಹತ್ತು ವರ್ಷದಲ್ಲಿ ಪ್ರಮಾಣಿಕ ಆಡಳಿತ ನಡೆಸಲಿಲ್ಲ. ರೈತರಿಗೆ ಜನಪರ ಕಾರ್ಯಕ್ರಮ ಜಾರಿ ಮಾಡಲಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಆಶ್ವಾಸನೆ ನೀಡಿದ ಐದು ಗ್ಯಾರಂಟಿ ಜಾರಿಗೊಳಿಸಿದ್ದೇವೆ. ಈವರೆಗೂ ಶಕ್ತಿ ಯೋಜನೆಯಡಿ 200 ಕೋಟಿ ಜನ ಸೌಲಭ್ಯ ಪಡೆದಿದ್ದಾರೆ. ಬಡವರೆಲ್ಲಾ ಕಾಂಗ್ರೆಸ್ ಪರ ಆಗ್ತಾರೆ ಅಂತ ಮೋದಿಯವರು ಅಕ್ಕಿ ನೀಡದೇ ರಾಜ್ಯದ ಜನತೆಗೆ ದ್ರೋಹ ಮಾಡಿದ್ರು. ಹೀಗಾಗಿ ಅಕ್ಕಿ ಬದಲಾಗಿ ಐದು ಕೆಜಿ ಅಕ್ಕಿಯ ಹಣ ಫಲಾನುಭವಿ ಅಕೌಂಟ್‌ಗೆ ಹಾಕುತ್ತಿದ್ದೇವೆ ಎಂದರು.

ದೇಶದಲ್ಲಿ ಹಿಂದುಳಿದ, ದಲಿತ, ಎಸ್‌ಟಿ, ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಕೊಟ್ಟಿದ್ದು ಕಾಂಗ್ರೆಸ್. ಆದರೆ, ಮೋದಿಯವರು ಮೀಸಲಾತಿ ವಿರುದ್ಧ ಇದ್ದಾರೆ. ಜಾತಿ ಜಾತಿಗಳ ವಿರುದ್ಧ ಎತ್ತಿಕಟ್ಟುವ ಮೋದಿ ಸ್ಕೆಚ್ ವಿಫಲಗೊಳಿಸಿ. ಸುಳ್ಳು ಹೇಳಿ ಜನರನ್ನು ದಾರಿತಪ್ಪಿಸುವ ಬಿಜೆಪಿಗರಿಗೆ ಈ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಿ ಎಂದರು.

ಕಾಂಗ್ರೆಸ್‌ನ ಮನಮೋಹನ್ ಸಿಂಗ್ ಪ್ರಧಾನಮಂತ್ರಿಯಾಗಿದ್ದಾಗ ಇಡೀ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಆದರೆ ಮೋದಿ ಅಂಬಾನಿ, ಅದಾನಿಯಂತಹ ಬಂಡವಾಳಶಾಹಿ ಶ್ರೀಮಂತರ 16 ಲಕ್ಷ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದರು. ರೈತರ ಸಾಲ ಮನ್ನಾ ಮಾಡಲು ಒಪ್ಪದ ಮೋದಿ ಯಾರ ಪರ ಎನ್ನುವುದನ್ನು ದೇಶದ ಜನರಿಗೆ ಮನವರಿಕೆಯಾಗಿದೆ‌ ಎಂದು ಆರೋಪಿಸಿದರು‌‌.

ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ, ಪ್ರಧಾನಿ ಮೋದಿ ಹತ್ತು ವರ್ಷದ ಅವಧಿಯಲ್ಲಿ ರಾಜ್ಯಕ್ಕೆ ಎಷ್ಟು ಅನುದಾನ ನೀಡಿದ್ದಾರೆ ? ಎಷ್ಟು ಅಭಿವೃದ್ಧಿ ಮಾಡಿದರು? ರೈತರ ಬದುಕಿನಲ್ಲಿ ಬದಲಾವಣೆ ಆಯ್ತಾ? ಅಚ್ಛೇದಿನ ಬಂತಾ? ನಿಮ್ಮ ಖಾತೆಗೆ 15 ಲಕ್ಷ ಬಂತಾ? ಬಿಜೆಪಿ ನುಡಿದಂತೆ ನಡೆದಿದ್ದಾರಾ? ಎಂದು ಆಲೋಚಿಸಿ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲ ಗ್ಯಾರಂಟಿ ಅನುಷ್ಠಾನಗೊಳಿಸಿ, ರಾಜ್ಯದ ಬಡವರ ಹಿತ ಕಾಪಾಡಿದ್ದೇವೆ ಎಂದರು.

ಇಲ್ಲಿನ ತುಂಗಭದ್ರಾ ಜಲಾಶಯದಲ್ಲಿ ಹೂಳು ತುಂಬಿದ್ದರಿಂದ ನವಲಿಯಲ್ಲಿ ಅಣೆಕಟ್ಟು ಕಟ್ಟಲು ನಾವು ಮುಂದಾಗಿದ್ದೇವೆ. ಇದಕ್ಕಾಗಿ ನಮ್ಮ ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಅನುದಾನ ಮೀಸಲಿಟ್ಟಿದ್ದು, ಚುನಾವಣೆ ನಂತರ ಆಂಧ್ರ ಪ್ರದೇಶ ಹಾಗೂ ತೆಲಂಗಾಣದ ಜತೆ ಚರ್ಚೆ ಮಾಡಿ, ರೈತರ ಬದುಕು ರಕ್ಷಿಸುತ್ತೇವೆ ಎಂದರು.

ಇದನ್ನೂ ಓದಿ: Toyota Kirloskar Motor: ಕಾರ್‌ ಕೇರ್‌ಗೆ ʼಟಿಗ್ಲೊಸ್ʼ ಆರಂಭಿಸಿದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್

ಬಡವರಿಗಾಗಿ ಕಾರ್ಯಕ್ರಮ ರೂಪಿಸಿದ್ದರೆ ಅದು ಕಾಂಗ್ರೆಸ್ ಪಕ್ಷ. ಮೋದಿ ಗ್ಯಾರಂಟಿ ಎಂದು ಪ್ರಚಾರ ಮಾಡುತ್ತಿದ್ದಾರೆ. ಮೋದಿ ಗ್ಯಾರಂಟಿಯಿಂದ ನಿಮ್ಮ ಹೊಟ್ಟೆ ತುಂಬುತ್ತಿದೆಯೇ? ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನವೇ ನಮ್ಮ ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ಅನುಮೋದನೆ ನೀಡಿದೆವು ಎಂದು ತಿಳಿಸಿದರು.

ಸಚಿವರಾದ ಶಿವರಾಜ ತಂಗಡಗಿ, ಭೈರತಿ ಸುರೇಶ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಮತ್ತು ಕಾಡಾ ಅಧ್ಯಕ್ಷ ಹಾಗೂ ಮಾಜಿ ಶಾಸಕ ಹಸನಸಾಬ್ ದೋಟಿಹಾಳ ಮಾತನಾಡಿದರು.

ಇದನ್ನೂ ಓದಿ: Labour Day 2024: ಮೇ 1ರ ಕಾರ್ಮಿಕ ದಿನಾಚರಣೆಯ ಹಿನ್ನೆಲೆ ಏನು? ಏನಿದರ ಸಂದೇಶ?

ಈ ಸಂದರ್ಭದಲ್ಲಿ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ, ಮಸ್ಕಿ ಶಾಸಕ ಬಸವನಗೌಡ ತುರವಿಹಾಳ, ಮಾಜಿ ವಿಪ ಸಭಾಪತಿ ವಿ.ಆರ್.ಸುದರ್ಶನ, ವೆಂಕಟರಾಮಯ್ಯ, ವಿಪ ಸದಸ್ಯ ಶರಣೇಗೌಡ ಪಾಟೀಲ್ ಬಯ್ಯಾಪುರ, ಎಎಪಿ ಜಿಲ್ಲಾಧ್ಯಕ್ಷ ಕನಕಪ್ಪ, ರಾಜ್ಯ ಕಾರ್ಯದರ್ಶಿ ಸಿದ್ದನಗೌಡ, ಮಹಿಳಾ ಜಿಲ್ಲಾಧ್ಯಕ್ಷೆ ಮಾಲತಿ ನಾಯಕ, ಮುಖಂಡರಾದ ಬಸವರಾಜಸ್ವಾಮಿ ಮಳೇಮಠ, ಅಮರೇಶ ಕರಡಿ, ಕೃಷ್ಣ ಎಂ. ಇಟ್ಟಂಗಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Continue Reading
Advertisement
Veena kashappanavar
ಕರ್ನಾಟಕ33 seconds ago

Veena Kashappanavar: ರಾಜಕೀಯದಿಂದ ದೂರ ಸರಿದ್ರಾ ವೀಣಾ ಕಾಶಪ್ಪನವರ್‌;‌ ಭಾವನಾತ್ಮಕ ಪೋಸ್ಟ್‌ ಹಾಕಿದ ಕೈ ನಾಯಕಿ!

Mayank Yadav
ಕ್ರೀಡೆ12 mins ago

Mayank Yadav: ಗಾಯಾಳು ಮಾಯಾಂಕ್‌ ಯಾದವ್‌ ಐಪಿಎಲ್​ನಿಂದ ಔಟ್​?

Bomb threat
ದೇಶ30 mins ago

Bomb Threat: ದೆಹಲಿ ಶಾಲೆಗಳಿಗೆ ಬಾಂಬ್‌ ಬೆದರಿಕೆ; ಇ-ಮೇಲ್‌ ಮಾಡಿದವ 16 ವರ್ಷದ ಪೋರ?

Saree Fashion
ಫ್ಯಾಷನ್36 mins ago

Saree Fashion: ಸೀರೆಯ ಹೊಸ ಟ್ರೆಂಡ್‌ ಬಗ್ಗೆ ರ‍್ಯಾಪರ್‌ ಇಶಾನಿಯ ವ್ಯಾಖ್ಯಾನ ಇದು!

karnataka weather Forecast
ಮಳೆ44 mins ago

Karnataka Weather : ಮಳೆಗಾಗಿ ಕಪ್ಪೆಗಳಿಗೆ ಮದುವೆ; ಶಾಖದ ಹೊಡೆತಕ್ಕೆ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Lottery
ವೈರಲ್ ನ್ಯೂಸ್45 mins ago

Lottery: ಕೋಟಿ ರೂ. ಲಾಟರಿ ಗೆದ್ದಿದ್ದೀರಿ ಎಂದರೆ, ಸ್ಕ್ಯಾಮ್‌ ಎಂದು ಫೋನಿಟ್ಟ ಮಹಿಳೆ; ಕೊನೆಗೆ ದುಡ್ಡು ಸಿಕ್ತಾ?

Prajwal Revanna Case What is diplomatic passport
ಹಾಸನ59 mins ago

Prajwal Revanna Case: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

Money Guide
ಮನಿ-ಗೈಡ್1 hour ago

Money Guide: ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವ ಯೋಜನೆಗಳಿವು

T20 World Cup 2024
ಕ್ರೀಡೆ1 hour ago

T20 World Cup 2024: ಡ್ರಾಪ್ -ಇನ್ ಪಿಚ್ ಅಳವಡಿಕೆ ಕಾರ್ಯ ಆರಂಭಿಸಿದ ಐಸಿಸಿ

Blackmail Case
ಬೆಂಗಳೂರು1 hour ago

Blackmail Case: ಸಹಪಾಠಿಯಿಂದ 35 ಲಕ್ಷ ರೂ. ಚಿನ್ನಾಭರಣ ದೋಚಿದ ಇಬ್ಬರು ವಿದ್ಯಾರ್ಥಿಗಳು ಸೇರಿ ನಾಲ್ವರ ಬಂಧನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌