ಕೊಪ್ಪಳ: ವೈದ್ಯರ ನಿರ್ಲಕ್ಷ್ಯಕ್ಕೆ (Medical Negligence) ಹೆರಿಗೆ ಸಮಯದಲ್ಲಿ ಗರ್ಭಿಣಿ ಮತ್ತು ಶಿಶು ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಕುಷ್ಟಗಿ ತಾಲೂಕಿನ ವಿಠಲಾಪುರ ಗ್ರಾಮದ ನಿವಾಸಿ ಲಕ್ಷ್ಮೀ (20) ಮೃತ ದುರ್ದೈವಿ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಿಯಲ್ಲಿ ಈ ಘಟನೆ ನಡೆದಿದೆ.
ಮೊದಲ ಹೆರಿಗೆ ಹಿನ್ನೆಲೆಯಲ್ಲಿ ಲಕ್ಷ್ಮೀಯನ್ನು ಮಂಗಳವಾರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. ಆದರೆ ಹೆರಿಗೆ ಆಗುವ ಮೊದಲೇ ಲಕ್ಷ್ಮಿ ಹಾಗೂ ಹೊಟ್ಟೆಯಲ್ಲಿದ್ದ ಶಿಶು ಕೂಡಾ ಮೃತಪಟ್ಟಿದ್ದಾರೆ.
ವೈದ್ಯರು ಸಕಾಲಕ್ಕೆ ಚಿಕಿತ್ಸೆ ನೀಡಿಲ್ಲ ಅವರ ನಿರ್ಲಕ್ಷ್ಯಕ್ಕೆ ಸಾವಾಗಿದೆ ಎಂದು ಲಕ್ಷ್ಮೀ ಮೃತ ಕುಟುಂಬಸ್ಥರು ಮತ್ತು ಗ್ರಾಮಸ್ಥರು ತಾವರಗೇರಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ರಾತ್ರಿಯಿಂದ ಧರಣಿ ನಡೆಸಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ತಪ್ಪಿತಸ್ಥ ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರಾತ್ರಿಯಿಂದಲೇ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.
ಸಮುದಾಯ ಆರೋಗ್ಯ ಕೇಂದ್ರದ ಡಾ.ಕಾವೇರಿ ಸರಿಯಾದ ಚಿಕಿತ್ಸೆ ಕೊಡಲಿಲ್ಲ. ಹೀಗಾಗಿ ವೈದ್ಯರ ಅಮಾನತ್ತಿಗೆ ಆಗ್ರಹಿಸಿ ಬುಧವಾರವು ಪ್ರತಿಭಟನೆ ಮುಂದುವರಿಸಿದ್ದಾರೆ. ಸಮುದಾಯ ಕೇಂದ್ರದ ಮುಂದೆ 200ಕ್ಕೂ ಹೆಚ್ಚು ಜನರು ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ