ಯಲಬುರ್ಗಾ: ಮಳೆಯಿಂದಾಗಿ ತಾಲೂಕಿನಲ್ಲಿ ಹಾನಿಗೀಡಾದ ವಿವಿಧ ಪ್ರದೇಶಗಳಿಗೆ ಸಚಿವ ಹಾಲಪ್ಪ ಆಚಾರ್ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕ್ಷೇತ್ರದಲ್ಲಿ ಆಗಿರುವ ಮಳೆಹಾನಿ ವೀಕ್ಷಣೆ ನಡೆಸಲಾಗಿದ್ದು, ಸರ್ಕಾರದಿಂದ ಸೂಕ್ತ ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಮಳೆಯಿಂದ ಕೆರೆಗಳು ತುಂಬಿದ್ದು, ಸಂತಸ ತಂದಿದೆ ಎಂದು ಸಚಿವರು ಹೇಳಿದರು.
ಜಿಲ್ಲೆ ಮತ್ತು ತಾಲ್ಲೂಕಿನಲ್ಲಿ ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಖುದ್ಧಾಗಿ ಭೇಟಿ ನೀಡಿ ತ್ವರಿತಗತಿಯಲ್ಲಿ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಿ, ಸಂತ್ರಸ್ಥರಿಗೆ ಪರಿಹಾರ ವಿತರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹಾಲಪ್ಪ ಆಚಾರ್ ತಿಳಿಸಿದರು.
ಇದನ್ನೂ ಓದಿ | ಭಾರೀ ಮಳೆ-ಬಿರುಗಾಳಿಗೆ ಕೊಪ್ಪಳದಲ್ಲಿ 5,599 ಪ್ರದೇಶದ ಕೃಷಿ ಬೆಳೆ ಹಾನಿ
ತಡೆಗೋಡೆ ನಿರ್ಮಾಣ :
ಮಳೆಯಿಂದಾಗಿ ಪಟ್ಟಣದ ಸಿದ್ಧರಾಮೇಶ್ವರ ಕಾಲನಿಗೆ ನೀರು ನುಗ್ಗಿ, ಅವಾಂತರಕ್ಕೆ ಕಾರಣವಾಗುತ್ತಿತ್ತು. ಇದನ್ನು ಅರಿತು ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ತಡೆಗೋಡೆ ನಿರ್ಮಿಸಿದ್ದು, ನಿವಾಸಿಗಳಿಗೆ ಅನುಕೂಲವಾಗಿದೆ ಎಂದು ಹಾಲಪ್ಪ ಆಚಾರ್ ಹೇಳಿದರು. ತಾಲೂಕಿನಲ್ಲಿ ಗ್ರಾಮೀಣ ರಸ್ತೆಗಳ ಸುಧಾರಣೆಗೆ ಆದ್ಯತೆ ನೀಡಲಾಗಿದೆ. ಕಳಪೆ ಕಾಮಗಾರಿಯಿಂದಾಗಿ ನೆಲಜೇರಿ ಕೆರೆ ಬೋಂಗಾ ಬಿದ್ದಿದೆ. ಸೂಕ್ತ ಕ್ರಮಕ್ಕಾಗಿ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹಿರೇಹಳ್ಳ ಒಂದೇ ದಿನಕ್ಕೆ ಭರ್ತಿಯಾಗಿದ್ದು, ಹಳ್ಳದ ಪಾತ್ರದಲ್ಲಿರುವ ಹಳ್ಳಿ ಜನರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸಂಭಂದಿತ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.
ಪರಿಶೀಲನೆ ವೇಳೆಯಲ್ಲಿ ಡಿಸಿ ಎಸ್.ವಿಕಾಸ್ ಕಿಶೋರ್, ಜಿಪಂ ಸಿಇಒ ಫೌಜಿಯಾ ತರನ್ನುಮ್, ತಹಶೀಲ್ದಾರ್ ಶ್ರೀ ಶೈಲ, ತಳವಾರ್, ತಾಪಂ ಇಒ ಸಂತೋಷ್ ಬಿರದಾರ್ ಮತ್ತೀತರು ಇದ್ದರು.
ಇದನ್ನೂ ಓದಿ | ಕೊಪ್ಪಳದಲ್ಲಿ ಮಳೆಯಿಂದ ನೆಲಕ್ಕುರುಳಿದ ಬೆಳೆ; ನೀರು ತುಂಬಿದ ಗುಂಡಿಗೆ ಬಿದ್ದು ಬಾಲಕಿ ಸಾವು