ಕೊಪ್ಪಳ
Vistara News Launch | ಮಾಧ್ಯಮ ಕ್ಷೇತ್ರ ವಾಸ್ತವಿಕತೆ, ನೈಜತೆಗೆ ಆದ್ಯತೆ ನೀಡಲಿ: ಶಾಸಕ ಅಮರೇಗೌಡ ಪಾಟೀಲ್ ಭಯ್ಯಾಪುರ
ನಿಖರ-ಜನಪರ ಘೋಷವಾಕ್ಯದೊಂದಿಗೆ ಆರಂಭವಾಗಿರುವ ವಿಸ್ತಾರ ನ್ಯೂಸ್ ಚಾನೆಲ್‌ನ ವಿಸ್ತಾರ ಕನ್ನಡ ಸಂಭ್ರಮಕ್ಕೆ ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ಶಾಸಕ ಅಮರೇಗೌಡ ಪಾಟೀಲ್ ಭಯ್ಯಾಪುರ ಚಾಲನೆ ನೀಡಿದರು.
ಕೊಪ್ಪಳ: ಜಿಲ್ಲೆಯ ಕುಷ್ಟಗಿ ಪಟ್ಟಣದ ಬಸವ ಭವನದಲ್ಲಿ ವಿಸ್ತಾರ ಕನ್ನಡ ಸಂಭ್ರಮ ಭಾನುವಾರ ನೆರವೇರಿತು. ಖ್ಯಾತ ಪತ್ರಕರ್ತ ಹರಿಪ್ರಕಾಶ್ ಕೋಣೆಮನೆ ನೇತೃತ್ವದಲ್ಲಿ ಆರಂಭವಾಗಿರುವ ವಿಸ್ತಾರ ನ್ಯೂಸ್ ಚಾನೆಲ್‌ನಿಂದ(Vistara News Launch) ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಶಾಸಕ ಅಮರೇಗೌಡ ಪಾಟೀಲ್ ಭಯ್ಯಾಪುರ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಶಾಸಕ ಅಮರೇಗೌಡ ಪಾಟೀಲ್ ಭಯ್ಯಾಪುರ, ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆಂದು ಪರಿಗಣಿತವಾಗಿರುವ ಮಾಧ್ಯಮ ರಂಗಕ್ಕೆ ಹೆಚ್ಚಿನ ಜವಾಬ್ದಾರಿಯಿದೆ. ಹೀಗಾಗಿ ಮಾಧ್ಯಮ ಕ್ಷೇತ್ರ ವಾಸ್ತವಿಕತೆಗೆ ಹಾಗೂ ನೈಜತೆಗೆ ಆದ್ಯತೆ ನೀಡಬೇಕು. ವ್ಯಕ್ತಿತ್ವ ತೇಜೋವಧೆ ಮಾಡುವಂತಹ ಸುದ್ದಿಗಳ ವಿಷಯದಲ್ಲಿ ನೈಜತೆಯನ್ನು ತಿಳಿದುಕೊಂಡು ನಂತರ ಪ್ರಸಾರ ಮಾಡಬೇಕು ಎಂದರು.
ಇದನ್ನೂ ಓದಿ | Vistara News Launch | ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಸಮಾಜ ಒಡೆಯುವ ಕೆಲಸ ಆಗಬಾರದು: ಸಂಸದ ಬಿ.ವೈ. ರಾಘವೇಂದ್ರ
ಕುಷ್ಟಗಿಯ ಮದ್ದಾನಿ ಹಿರೇಮಠದ ಶ್ರೀ ಕರಿಬಸವೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ವಿಸ್ತಾರ ಚಾನೆಲ್‌ಗೆ ಶುಭ ಹಾರೈಸಿದರು. ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಅಮರೇಗೌಡ, ಬಸವ ಸಮಿತಿ ಅಧ್ಯಕ್ಷ ಶಿವಸಂಗಪ್ಪ ಬಿಜಕಲ್, ಕಸಾಪ ತಾಲೂಕು ಅಧ್ಯಕ್ಷ ವೀರೇಶ ಬಂಗಾರಶೆಟ್ಟರ್, ನಿವೃತ್ತ ಪ್ರಾಚಾರ್ಯ ಟಿ. ಬಸವರಾಜ, ಅಗ್ನಿಶಾಮಕ ಠಾಣೆ ಅಧಿಕಾರಿ ಪಿ. ರಾಜು ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಮಲ್ಲನಗೌಡ ಅಗಸಿಮುಂದಿನ ಅವರ ತಂಡದಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಿತು. ಮಹೇಶ ನಿರೂಪಿಸಿದರು, ಜಗದೀಶ ಸ್ವಾಗತಿಸಿದರು. ವಿಸ್ತಾರ ನ್ಯೂಸ್ ಜಿಲ್ಲಾ ವರದಿಗಾರ ಮೌನೇಶ್ ಬಡಿಗೇರ್ ಪ್ರಾಸ್ತವಿಕವಾಗಿ ಮಾತನಾಡಿದರು.
ಇದನ್ನೂ ಓದಿ | Vistara News Launch | ಯಲ್ಲಾಪುರದಲ್ಲಿ ಅದ್ಧೂರಿ ವಿಸ್ತಾರ ಕನ್ನಡ ಸಂಭ್ರಮ
ಉಡುಪಿ
Weather Report : ಮಾಸಾಂತ್ಯದವರೆಗೂ ಮಳೆ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Rain News : ಉತ್ತರ ಕರ್ನಾಟಕದ ಹಲವು ಕಡೆ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಐಎಂಡಿ ನೀಡಿದೆ. 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಸಾಮಾನ್ಯವಾಗಿದ್ದು, ಸೆ. 26ರಂದು ಉತ್ತರ ಒಳನಾಡಿನ ಹಲವು ಕಡೆ ಭಾರಿ ಮಳೆಯಾಗುವ (Rain News) ಮುನ್ಸೂಚನೆ ಇದೆ. ಬೆಂಗಳೂರಲ್ಲಿ ಸಂಜೆ ವೇಳೆಗೆ ಸಾಧಾರಣ ಮಳೆ ಸುರಿಯಲಿದೆ. ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ (weather report) ಸಾಧ್ಯತೆ ಇದೆ.
ಭಾರೀ ಮಳೆ ಮುನ್ನೆಚ್ಚರಿಕೆ
ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.
ಬೆಂಗಳೂರಲ್ಲಿ ಸಾಧಾರಣ ಮಳೆ
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯದಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಮೈಸೂರಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರದಲ್ಲಿ ಅತಿ ಕಡಿಮೆ ಮಳೆಯಾಗಲಿದೆ.
ಉತ್ತರ ಒಳನಾಡಿನ ರಾಯಚೂರು, ಬೀದರ್, ಬೆಳಗಾವಿ, ವಿಜಯಪುರ, ಯಾದಗಿರಿ, ಧಾರವಾಡದ ಹಲವೆಡೆ ಅಲ್ಲಲ್ಲಿ ಹಗುರ ಮಳೆಯಾಗಲಿದೆ. ಕೊಪ್ಪಳದಲ್ಲಿ ಅಲ್ಲಲ್ಲಿ ಅತಿ ಕಡಿಮೆ ಮಳೆ ಬೀಳಲಿದೆ. ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಟಿ ಜಿಟಿ ಮಳೆ ಸುರಿಯಲಿದೆ.
ಇದನ್ನೂ ಓದಿ:Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ
ರಾಜ್ಯದಲ್ಲಿ ಭಾನುವಾರದಂದು ನೈರುತ್ಯ ಮುಂಗಾರು ಸಾಮಾನ್ಯವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ, ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿದೆ. ಭಾರಿ ಮಳೆಯು ಶಹಪುರದಲ್ಲಿ 7 ಸೆಂ.ಮೀ ವರದಿ ಆಗಿದೆ. ಅಂಕೋಲಾ, ಹೆಬ್ಬೂರಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ. ಕುಮಟಾ, ಗೇರ್ಸೊಪ್ಪ, ಗೋಕರ್ಣ, ಮಂಕಿಯಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ.
ಕುಂದಾಪುರ, ಕೋಟ, ಸಿದ್ದಾಪುರ, ಬೇಲಿಕೇರಿ, ಹೊನ್ನಾವರ, ಖಜೂರಿ, ಮೈಸೂರು, ರಾಯಲ್ಪಾಡದಲ್ಲಿ ತಲಾ 3 ಸೆಂ.ಮೀ, ಉಡುಪಿ, ಕಾರ್ಕಳ , ಮಂಗಳೂರು, ಉಪ್ಪಿನಂಗಡಿ, ಮೂಲ್ಕಿ, ಕದ್ರಾ, ಕೆಂಭಾವಿ, ಮುನಿರಾಬಾದ್ , ಗಬ್ಬೂರು ಹಾಗೂ ಆಳಂದ, ಸೇಡಂ, ಕಳಸ, ಗುಬ್ಬಿ, ತಿಪಟೂರು, ಚಿತ್ರದುರ್ಗ, ಕುಡತಿನಿಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ.
ಕಾರವಾರ, ಮಂಗಳೂರು, ಧರ್ಮಸ್ಥಳ, ಬೆಳ್ತಂಗಡಿ, ಕಿರವತ್ತಿ, ಮುಂಡಗೋಡ ಯಲ್ಲಾಪುರ, ಮಂಚಿಕೆರೆ, ಜಾಲಹಳ್ಳಿ, ಮಹಾಗೋಣ, ಮುಧೋಳೆ, ಗುಂಡಗುರ್ತಿ, ಆಡಕಿ, ಕವಡಿಮಟ್ಟಿ ಅರ್ಗ, ಭಾಲ್ಕಿ , ಮಂಠಾಳ, ಹಾವೇರಿ, ಚಿಕ್ಕಬಳ್ಳಾಪುರ, ಕಡೂರು, ಕೋಲಾರ, ಲಿಂಗನಮಕ್ಕಿ ಎಚ್‌ಎಂಎಸ್, ತಾಳಗುಪ್ಪ, ತ್ಯಾಗರ್ತಿ, ಯಗಟಿ , ಹೊಸಕೋಟೆಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಕರ್ನಾಟಕ
Gangavathi News: ಆನೆಗೊಂದಿ ಜಯತೀರ್ಥ-ರಘುವರ್ಯರ ವೃಂದಾವನ ವಿವಾದ; ರಾಯರ ಮಠದ ಪರ ಹೈಕೋರ್ಟ್ ತೀರ್ಪು
ಹೈಕೋರ್ಟ್‌ನ ದ್ವಿ ಸದಸ್ಯ ಪೀಠದ ಆದೇಶದಿಂದಾಗಿ ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದ ಅನುಯಾಯಿಗಳಿಗೆ ಆನೆಗೊಂದಿಯ ಜಯತೀರ್ಥರ ವೃಂದಾವನಕ್ಕೆ ಪೂಜೆ ಸಲ್ಲಿಸುವ ಅವಕಾಶ ನೀಡಿದಂತಾಗಿದೆ.
ಗಂಗಾವತಿ (ಕೊಪ್ಪಳ): ಮಾಧ್ವ ಸಂಪ್ರದಾಯದ ಪ್ರಮುಖ ಧಾರ್ಮಿಕ ತಾಣವಾದ ಗಂಗಾವತಿ (Gangavathi News) ತಾಲೂಕಿನ ಆನೆಗೊಂದಿಯ ನವ ವೃಂದಾವನ ಗಡ್ಡೆಯಲ್ಲಿನ ವಿವಾದಿತ ಜಯತೀರ್ಥ-ರಘುವರ್ಯರ ವೃಂದಾವನದ ಪೂಜೆಯ ಸಂಬಂಧ ಈ ಹಿಂದೆ ಧಾರವಾಡದ ಏಕಸದಸ್ಯ ಪೀಠವು ನೀಡಿದ್ದ ಪೂಜೆಯ ನಿರ್ಬಂಧದ ತೀರ್ಪನ್ನು ದ್ವಿ ಸದಸ್ಯ ಪೀಠ ತಳ್ಳಿ ಹಾಕಿದೆ. ಇದರಿಂದ ಮಂತ್ರಾಲಯದ ರಾಘವೇಂದ್ರ ಸ್ವಾಮೀಜಿಗಳ ಮಠದ ಅನುಯಾಯಿಗಳಿಗೆ ಈ ಮೊದಲಿನಂತೆ, ಜಯತೀರ್ಥರ ವೃಂದಾವನಕ್ಕೆ ಪೂಜೆ ಸಲ್ಲಿಸುವ ಅವಕಾಶ ದೊರೆತಂತಾಗಿದೆ.
ಧಾರವಾಡದ ಹೈಕೋರ್ಟ್‌ನ ಆದೇಶ ಹೊರ ಬೀಳುತ್ತಿದ್ದಂತೆಯೆ ಸಂಭ್ರಮಿಸಿದ ಅನುಯಾಯಿಗಳು, ಆನೆಗೊಂದಿ ರಾಯರಮಠದ ಅರ್ಚಕರ ನೇತೃತ್ವದಲ್ಲಿ ತುಂಗಭದ್ರಾ ನದಿಯ ದಡದಲ್ಲಿರುವ ನವವೃಂದಾವನ ಗಡ್ಡೆಗೆ ತೆರಳಿ ಜಯತೀರ್ಥರ ವೃಂದಾವನಕ್ಕೆ ಶೇಷವಸ್ತ್ರ ಅಲಂಕಾರ ಮಾಡಿ, ವಿಶೇಷ ಪೂಜೆ ಮಾಡಿ ಸಂತಸ ವ್ಯಕ್ತಪಡಿಸಿದರು.
ಇದನ್ನೂ ಓದಿ | Chaitra Kundapura : ವಂಚಕಿ ಚೈತ್ರಾ ಜತೆಗೆ ಕುಂದಾಪುರದ ಹೆಸರು ಬಳಸಬೇಡಿ; ತಾತ್ಕಾಲಿಕ ನಿರ್ಬಂಧ ವಿಧಿಸಿದ ಕೋರ್ಟ್
ಏನಿದು ವಿವಾದ?
ಗಂಗಾವತಿ ತಾಲೂಕಿನ ಆನೆಗೊಂದಿ ಬಳಿಯ ತುಂಗಭದ್ರಾ ನದಿ ತಟದಲ್ಲಿರುವ ನವವೃಂದಾವನ ಗಡ್ಡೆಯಲ್ಲಿ ಮಾಧ್ವ ಮತ ಪ್ರಚಾರಕರ ಒಂಭತ್ತು ಯತಿಗಳ ಭೌತಿಕ ಸಮಾಧಿಗಳಿವೆ. ಈ ಪೈಕಿ ಒಂದು ಸಮಾಧಿ (ವೃಂದಾವನ) ವಿವಾದದ ಕೇಂದ್ರ ಬಿಂದುವಾಗಿದೆ.
ರಾಯರಮಠದ ಅನುಯಾಯಿಗಳು ಅದನ್ನು ಜಯತೀರ್ಥರದ್ದು ಎಂದು, ಉತ್ತರಾಧಿ ಮಠದ ಅನುಯಾಯಿಗಳು ಅದೇ ವೃಂದಾವನವನ್ನು ರಘುವರ್ಯ ತೀರ್ಥರದ್ದು ಎಂದು ವಾದಿಸುತ್ತಿರುವುದು ವಿವಾದಕ್ಕೆ ಕಾರಣವಾಗಿದ್ದು, ಕಾನೂನು ತೊಡಕಾಗಿ ಪರಿಣಾಮಿಸಿದೆ.
ನ್ಯಾಯಾಲಯದಲ್ಲಿ ಪ್ರಕರಣ
ರಘುವರ್ಯ ತೀರ್ಥರ ವೃಂದಾವನವನ್ನು ರಾಯರಮಠದವರು, ಜಯತೀರ್ಥರದ್ದು ಎಂದು ವಾದಿಸುತ್ತಿದ್ದು ಮತ್ತು ಅದಕ್ಕೆ ಧಾರ್ಮಿಕ ಕಾರ್ಯಗಳನ್ನು ಹಮ್ಮಿಕೊಳ್ಳುವ ಮೂಲಕ ಯತಿ ಪರಂಪರೆಗೆ ಅಪಚಾರ ಮಾಡುತ್ತಿದ್ದಾರೆ. ಇದಕ್ಕೆ ತಡೆ ನೀಡುವಂತೆ ಕೋರಿ ಈ ಸಂಬಂಧ ಉತ್ತರಾಧಿ ಮಠದ ಅನುಯಾಯಿಗಳು ಧಾರವಾಡದ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.
ಮನವಿ ಪುರಸ್ಕರಿಸಿದ್ದ ಧಾರವಾಡದ ಹೈಕೋರ್ಟ್ ಶಂಕರ್ ಮುಗುದುಮ್ ಅವರಿದ್ದ ಏಕಸದಸ್ಯ ಪೀಠ, ವಿವಾದಿತ ವೃಂದಾವನಕ್ಕೆ ಯಾವುದೇ ಪೂಜೆ-ಪುನಸ್ಕಾರ ಮಾಡದಂತೆ ರಾಯರ ಮಠದ ಅನುಯಾಯಿಗಳಿಗೆ ನಿಬಂರ್ಧ ಹೇರಿ ಸೆ.11ರಂದು ಆದೇಶ ನೀಡಿತ್ತು.
ಇದನ್ನು ಪ್ರಶ್ನಿಸಿ ರಾಯರಮಠದ ಪರವಾಗಿ ವಕೀಲರಾದ ಪ್ರಭುಲಿಂಗ ನಾವದಗಿ ಮತ್ತು ಶಿವಪ್ರಸಾದ ಶಾಂತನಗೌಡ ಮೇಲ್ಮನವಿ ಸಲ್ಲಿಸಿದ್ದರು. ಮನವಿ ಆಲಿಸಿದ ಧಾರವಾಡದ ಹೈಕೋರ್ಟ್‌ನ ನ್ಯಾಯಾಧೀಶರಾದ ಕೃಷ್ಣಕುಮಾರ್ ಹಾಗೂ ಬಸವರಾಜ್ ಅವರಿದ್ದ ದ್ವಿ ಸದಸ್ಯ ನ್ಯಾಯಪೀಠವು, ಈ ಹಿಂದೆ ಮಾಡಿದ್ದ ಆದೇಶವನ್ನು ತಳ್ಳಿ ಹಾಕಿದೆ.
ಇದನ್ನೂ ಓದಿ | Vinay Kulkarni: ಧಾರವಾಡ ಪ್ರವೇಶಕ್ಕೆ ವಿನಯ್ ಕುಲಕರ್ಣಿಗೆ ಮತ್ತೆ ಅನುಮತಿ ನಿರಾಕರಿಸಿದ ಹೈಕೋರ್ಟ್
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆನೆಗೊಂದಿ ರಾಯರಮಠದ ವ್ಯವಸ್ಥಾಪಕ ಈಡಪನೂರು ಸುಮಂತ ಕುಲಕರ್ಣಿ ಅವರು, ನ್ಯಾಯಪೀಠದ ಆದೇಶದಿಂದಾಗಿ ಸತ್ಯಕ್ಕೆ ಜಯ ಸಂಧಂತಾಗಿದೆ. ಜಯತೀರ್ಥರ ಮೂಲಕ ವೃಂದಾವನ ಆನೆಗೊಂದಿಯಲ್ಲಿಯೇ ಇದೆ ಎಂಬುವುದಕ್ಕೆ ಸಾಕ್ಷಿ ಸಿಕ್ಕಂತಾಗಿದ್ದು, ದೈನಿಕ ಧಾರ್ಮಿಕ ಕಾರ್ಯ ನಡೆಯುತ್ತವೆ ಎಂದಿದ್ದಾರೆ.
ಕರ್ನಾಟಕ
Accident Case : ಚಲಿಸುತ್ತಿದ್ದಾಗಲೇ ಸುಟ್ಟು ಕರಕಲಾದ ಕಾರು; ಬೈಕ್‌ಗೆ ಬಸ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು
Road Accident : ರಸ್ತೆ ಅಪಘಾತದಲ್ಲಿ ಡಿಎಸ್‌ಎಸ್ ಮುಖಂಡ ಮೃತಪಟ್ಟಿರುವ ಘಟನೆ ತುಮಕೂರಲ್ಲಿ ನಡೆದಿದೆ. ಇತ್ತ ಚಿಕ್ಕಮಗಳೂರಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ಸುಟ್ಟು ಕರಕಲಾಗಿದೆ.
ತುಮಕೂರು/ ಚಿಕ್ಕಮಗಳೂರು: ರಸ್ತೆ ಅಪಘಾತಗಳು ಹೆಚ್ಚಾಗುತ್ತಿದ್ದು, ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರನೊಬ್ಬ (road Accident) ಜೀವ ಬಿಟ್ಟಿದ್ದಾನೆ. ತುಮಕೂರಿನ ತಿಪಟೂರು ತಾಲೂಕಿನ ಹತ್ಯಾಳು ಬೆಟ್ಟದ ಬಳಿ ಘಟನೆ (Accident Case) ನಡೆದಿದೆ. ಬೈಕ್ ಸವಾರ ಪ್ರಕಾಶ್ (40) ಮೃತ ದುರ್ದೈವಿ.
ಡಿಎಸ್‌ಎಸ್ ಮುಖಂಡರಾಗಿದ್ದ ಪ್ರಕಾಶ್ ಹತ್ಯಾಳು ಬೆಟ್ಟದಿಂದ ಬೆನಾಯ್ಕನಹಳ್ಳಿಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಕೆ.ಬಿ.ಕ್ರಾಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಹೊತ್ತಿ ಉರಿದ ಕಾರು; ಪ್ರಯಾಣಿಕರು ಅಪಾಯದಿಂದ ಪಾರು
ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಕುದುರೆಗುಂಡಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ರಸ್ತೆ ಮಧ್ಯೆಯೇ ಕಾರೊಂದು ಹೊತ್ತಿ ಉರಿದಿದೆ. ಚಲಿಸುತ್ತಿದ್ದಾಗಲೇ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಕಾರಿನಲ್ಲಿದ್ದ ಮೂವರು ಇಳಿದು ಓಡಿ ಹೋಗಿದ್ದಾರೆ.
ಸಣ್ಣದಾಗಿ ಕಾಣಿಸಿಕೊಂಡ ಕಿಡಿ ಒಮ್ಮೆಲೆ ಪೂರ್ತಿ ಆವರಿಸಿ ಸುಟ್ಟು ಕರಕಲಾಗಿದೆ. ಬೆಂಕಿ ನಂದಿಸಲು ಸ್ಥಳೀಯರು ಹರಸಾಹಸ ಪಟ್ಟರು. ಬೆಂಕಿಯ ತೀವ್ರತೆಯಿಂದ ಕಾರು ಸಂಪೂರ್ಣ ಹಾನಿಯಾಗಿದೆ.
ಅಗ್ನಿಗೆ ಆಹುತಿಯಾದ ಎರಡು ಅಂಗಡಿಗಳು
ಕೊಪ್ಪಳ ನಗರದ ಗಂಜ್ ಸರ್ಕಲ್ ಬಳಿ ತಡರಾತ್ರಿ ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮವಾಗಿವೆ. ಶಫಿಕ್ ಸಿದ್ದಿಕಿ ಎಂಬುವವರಿಗೆ ಸೇರಿದ ಆಟೋ ಮೊಬೈಲ್ ಹಾಗೂ ಹನುಮಂತಪ್ಪ ಎಂಬುವವರ ಹೋಟೆಲ್ ಸುಟ್ಟು ಹೋಗಿವೆ. ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಭಸ್ಮವಾಗಿವೆ. ಕೊಪ್ಪಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೈಕ್ ಸವಾರ ಸತ್ತರೂ ನೋಡದೆ ಹೋದ ಕಾರು ಚಾಲಕ!
ಬೆಂಗಳೂರು: ಬೆಂಗಳೂರಿನ ಕೆಂಗೇರಿ ಸಮೀಪದ ಗಾಣಕಲ್ ರಸ್ತೆಯಲ್ಲಿ ಹಿಟ್ ಆ್ಯಂಡ್ ರನ್‌ಗೆ (Hit And Run case) ಬೈಕ್ ಸವಾರ (Road Accident) ಬಲಿಯಾಗಿದ್ದಾನೆ. ಅಜಯ್ ಕುಮಾರ್ ಮೃತ ದುರ್ದೈವಿ.
ಚಿಕ್ಕೇಗೌಡನಪಾಳ್ಯ ಕಡೆಯಿಂದ ಉತ್ತರಹಳ್ಳಿ ರಸ್ತೆ ಕಡೆಗೆ ವೇಗವಾಗಿ ಬಂದ ಕಾರು, ಮುಂದೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾನೆ.
ಅಪಘಾತದ ಬಳಿಕ ಸ್ಥಳದಿಂದ ಕಾರು ಸಮೇತ ಚಾಲಕ ಪರಾರಿ ಆಗಿದ್ದಾನೆ. ಘಟನೆ ಸಂಬಂಧ ಕೆಂಗೇರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಕಾರು ಚಾಲಕನಿಗಾಗಿ ಹುಡುಕಾಟ ನಡೆದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಕರ್ನಾಟಕ
Congress Politics : ಮೂರಲ್ಲ ಐದು ಡಿಸಿಎಂ ಬೇಕು; ಬಸವರಾಜ ರಾಯರೆಡ್ಡಿ ಹೊಸ ಬೇಡಿಕೆ; ಡಿಕೆಶಿ principal DCM ಆಗಲಿ!
Congress Politics : ಡಿಸಿಎಂ ಹೆಚ್ಚಳ ಬೇಡಿಕೆಗೆ ಇನ್ನೊಂದು ಸೇರ್ಪಡೆ. ಮೂರಲ್ಲ ಐದು ಬೇಕು ಎಂದಿದ್ದಾರೆ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ. ಇವರು ಕೂಡಾ ಸಿದ್ದರಾಮಯ್ಯ ಆಪ್ತರು ಎನ್ನುವುದು ವಿಶೇಷ.
ಬೆಂಗಳೂರು: ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ (DK Shivakumar) ಅವರಲ್ಲದೆ ಇನ್ನೂ ಮೂರು ಹೊಸ ಡಿಸಿಎಂ ಸ್ಥಾನಗಳನ್ನು ಸೃಷ್ಟಿಸಿ ಬೇರೆ ಬೇರೆ ವರ್ಗಕ್ಕೆ ಅವಕಾಶ ನೀಡಬೇಕು ಎಂಬ ಸಹಕಾರ ಸಚಿವ ಕೆ.ಎನ್. ರಾಜಣ್ಣ (KN Rajanna) ಅವರ ಬೇಡಿಕೆಯ ಚರ್ಚೆಯೇ (Congress Politics) ಜೋರಾಗಿದೆ. ಅದರ ನಡುವೆ ಶಾಸಕ ಬಸವರಾಜ ರಾಯರೆಡ್ಡಿ (MLA Basavaraja Rayareddy) ಇದನ್ನೂ ಮೀರಿಸಿ ಹೊಸದಾಗಿ ಐದು ಉಪಮುಖ್ಯಮಂತ್ರಿಗಳು ಬೇಕು ಎಂಬ ಅಭಿಪ್ರಾಯ ಮಂಡಿಸಿದ್ದಾರೆ. ಒಟ್ಟು ಆರು ಡಿಸಿಎಂಗಳ ಪೈಕಿ ಡಿ.ಕೆ. ಶಿವಕುಮಾರ್ ಅವರು ಪ್ರಿನ್ಸಿಪಾಲ್ ಡಿಸಿಎಂ (Principal DCM) ಆಗಲಿ ಎಂಬ ಸಲಹೆಯನ್ನೂ ಅವರೇ ನೀಡಿ ಸಂಧಾನ ಸೂತ್ರ ಹೊಸೆದಿದ್ದಾರೆ.
ಅಚ್ಚರಿ ಎಂದರೆ ಈ ಎಲ್ಲಾ ಹೆಚ್ಚುವರಿ ಡಿಸಿಎಂಗಳ ಬೇಡಿಕೆ ಬರುತ್ತಿರುವುದು ಸಿಎಂ ಸಿದ್ದರಾಮಯ್ಯ ಅವರ ಅತ್ಯಾಪ್ತ ವಲಯದಿಂದಲೇ ಎನ್ನುವುದು ವಿಶೇಷ. ಈ ಹಿಂದೆ ಮೂವರು ಬೇಕೆಂದ ಕೆ.ಎನ್. ರಾಜಣ್ಣ ಅವರು ಮತ್ತು ಈಗ ಬೇಡಿಕೆ ಮಂಡಿಸಿರುವ ಬಸವರಾಜ ರಾಯರೆಡ್ಡಿ ಇಬ್ಬರೂ ಸಿದ್ದರಾಮಯ್ಯ ಆಸ್ಥಾನಿಕರೇ. ಇವರೆಲ್ಲರೂ ಸಿದ್ದರಾಮಯ್ಯ ಅವರ ಮನದಿಂಗಿತವನ್ನೆ ಮಾತನಾಡುತ್ತಿದ್ದಾರೆ ಎಂಬ ಮಾತು ಜೋರಾಗಿ ಕೇಳಿಬಂದಾಗ ಕೆ.ಎನ್ ರಾಜಣ್ಣ ಅವರು ನಿರಾಕರಿಸಿದ್ದರು. ಇದು ಯಾರದೋಗ ಮನಸಿನ ಮಾತಲ್ಲ, ನನ್ನದೇ ಅಭಿಪ್ರಾಯ ಎಂದಿದ್ದರು.
ಹಾಗಿದ್ದರೆ ಬಸವರಾಜ ರಾಯರೆಡ್ಡಿ ವಾದವೇನು? ಯಾಕಂತೆ ಐದು ಡಿಸಿಎಂ?
- ನನ್ನ ಪ್ರಕಾರ ರಾಜ್ಯದಲ್ಲಿ ಮೂರಲ್ಲ, ಇನ್ನೂ ಐದು ಹೆಚ್ಚು ಡಿಸಿಎಂ ಹುದ್ದೆಗಳು ಸೃಷ್ಟಿ ಆಗಬೇಕು.
- ಈಗ ಡಿಕೆಶಿ ಡಿಸಿಎಂ ಆಗಿ ಇದ್ದಾರೆ. ಅವರ ಜತೆ ಪ್ರಾದೇಶಿಕವಾರು ಮತ್ತು ಜಿಲ್ಲಾವಾರು ಅವಕಾಶ ಕೊಡಬೇಕು.
- ಲಿಂಗಾಯತ, ಮುಸ್ಲಿಂ, ದಲಿತ, ಒಂದು ಮಹಿಳೆಗೆ ಅವಕಾಶ ಕೊಡಬೇಕು
ಐದು ಡಿಸಿಎಂ ಆದರೆ ಲಾಭವೇನು?
ಬಸವರಾಜ ರಾಯರೆಡ್ಡಿ ಅವರ ಪ್ರಕಾರ, ಐದು ಮಂದಿ ಡಿಸಿಎಂ ಆದರೆ, ಮುಂದೆ ಬರುವ ಲೋಕಸಭಾ ಚುನಾವಣೆಗೆ ಅನುಕೂಲವಾಗುತ್ತದೆ. ಲೋಕಸಭಾ ಚುನಾವಣೆಯಲ್ಲಿ ಎಲ್ಲ ಸಮುದಾಯಗಳು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತವೆ. ಹೀಗಾಗಿ ನಾನು ಡಿಸಿಎಂ ಹುದ್ದೆ ಸೃಷ್ಟಿ ವಿಚಾರದಲ್ಲಿ ರಾಜಣ್ಣ ಅವರನ್ನು ಬೆಂಬಲಿಸುತ್ತೇನೆ, ಎರಡು ಹೆಚ್ಚು ಮಾಡಬೇಕು ಎಂದು ಕೇಳುತ್ತೇನೆ ಎಂದಿದ್ದಾರೆ ರಾಯರೆಡ್ಡಿ.
ಹಾಗಂತ ಲೋಕಸಭೆಯಲ್ಲಿ ಬಿಜೆಪಿ ಗಿಂತಲೂ ಸ್ಥಾನ ಕಡಿಮೆ ಗೆದ್ದರೆ ಸರ್ಕಾರಕ್ಕೆ ಅಭದ್ರತೆ ಕಾಡಬಹುದು ಎಂಬ ರಾಜಣ್ಣ ವಾದವನ್ನು ಅವರು ಒಪ್ಪಲಿಲ್ಲ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸುಭದ್ರ ಸರ್ಕಾರ ಎಂದರು.
ಇದು ಡಿಕೆಶಿ ವಿರುದ್ಧ ಅಲ್ಲ, ಅವರು ಪ್ರಿನ್ಸಿಪಾಲ್ ಡಿಸಿಎಂ
ಇದೆಲ್ಲವೂ ಈಗ ಏಕೈಕ ಡಿಸಿಎಂ ಆಗಿರುವ ಡಿ.ಕೆ. ಶಿವಕುಮಾರ್ ಅವರ ಬಲವನು ಕುಂದಿಸಲು ಮಾಡುತ್ತಿರುವ ಪ್ರಯತ್ನ ಎಂಬ ವಾದವನ್ನು ಅವರು ಅಲ್ಲಗಳೆದರು. ʻʻಇದು ಡಿಕೆಶಿ ವಿರುದ್ಧ ಅಂದ್ರೆ ನಾನು ಒಪ್ಪಲ್ಲ. ಅವರು ಒಬ್ಬ ಒಳ್ಳೆಯ ಸಂಘಟನಾಕಾರ. ಅವರು ಮೊದಲ ಡಿಸಿಎಂ ಇಲ್ಲವೇ ಪ್ರಿನ್ಸಿಪಲ್ ಡಿಸಿಎಂ ಆಗಲಿ. ಉಳಿದವರಿಗೆ ಎರಡು ಮೂರು ಅಂತ ಕೊಡಲಿʼʼ ಎಂದು ವಾದಿಸಿದರು.
ಇದನ್ನೂ ಓದಿ: Congress Politics : ಮುಗಿಯದ 3 ಡಿಸಿಎಂ ಡ್ರಾಮಾ; ತೆವಲಿಗೆ ಮಾತಾಡ್ಬೇಡಿ ರಾಜಣ್ಣ ಎಂದು ಮಾಗಡಿ ಬಾಲಕೃಷ್ಣ ನೇರ ವಾಗ್ದಾಳಿ
ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ: ಸ್ಪಷ್ಟೋಕ್ತಿ
ಇದೇ ಸಂದರ್ಭದಲ್ಲಿ ಅವರು ಸಿದ್ದರಾಮಯ್ಯ ಅವರೇ ಮುಂದಿನ ಐದು ವರ್ಷವೂ ಸಿಎಂ ಆಗಿರಲಿದ್ದಾರೆ ಎಂದು ಹೇಳಿದ್ದಾರೆ.
ʻʻಸಿದ್ದರಾಮಯ್ಯ ಅವರನ್ನು ಪೂರ್ಣಾವಧಿ ಸಿಎಂ ಅಂತಲೇ ಮಾಡಿರುವುದು. ಒಮ್ಮೆ ಸಿಎಂ ಆದ ಮೇಲೆ ಅವರು ಸ್ವ ಇಚ್ಛೆಯಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬಹುದು. ಇಲ್ಲವೇ ಬೇರೆಯವರಿಗೆ ಅವಕಾಶ ಕೊಡಬೇಕು ಎಂದು ಹೈಕಮಾಂಡ್ ರಾಜೀನಾಮೆ ಕೊಡುವಂತೆ ಹೇಳಬಹುದು. ಆದರೆ, ಈಗ ಹೈಕಮಾಂಡ್ ಸಿಎಂ ಮಾಡುವಾಗ ಅವರನ್ನ ಪೂರ್ಣಾವಧಿ ಸಿಎಂ ಎಂದೇ ಹೇಳಿದೆʼʼ ಎಂದು ಸ್ಪಷ್ಟಪಡಿಸಿದರು ಬಸವರಾಜ ರಾಯರೆಡ್ಡಿ.
ಬೆಂಗಳೂರು: ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ (DK Shivakumar) ಅವರಲ್ಲದೆ ಇನ್ನೂ ಮೂರು ಹೊಸ ಡಿಸಿಎಂ ಸ್ಥಾನಗಳನ್ನು ಸೃಷ್ಟಿಸಿ ಬೇರೆ ಬೇರೆ ವರ್ಗಕ್ಕೆ ಅವಕಾಶ ನೀಡಬೇಕು ಎಂಬ ಸಹಕಾರ ಸಚಿವ ಕೆ.ಎನ್. ರಾಜಣ್ಣ (KN Rajanna) ಅವರ ಬೇಡಿಕೆಯ ಚರ್ಚೆಯೇ ಜೋರಾಗಿದೆ. ಅದರ ನಡುವೆ ಶಾಸಕ ಬಸವರಾಜ ರಾಯರೆಡ್ಡಿ (MLA Basavaraja Rayareddy) ಇದನ್ನೂ ಮೀರಿಸಿ ಹೊಸದಾಗಿ ಐದು ಉಪಮುಖ್ಯಮಂತ್ರಿಗಳು ಬೇಕು ಎಂಬ ಅಭಿಪ್ರಾಯ ಮಂಡಿಸಿದ್ದಾರೆ. ಒಟ್ಟು ಆರು ಡಿಸಿಎಂಗಳ ಪೈಕಿ ಡಿ.ಕೆ. ಶಿವಕುಮಾರ್ ಅವರು ಪ್ರಿನ್ಸಿಪಾಲ್ ಡಿಸಿಎಂ (Principal DCM) ಆಗಲಿ ಎಂಬ ಸಲಹೆಯನ್ನೂ ಅವರೇ ನೀಡಿ ಸಂಧಾನ ಸೂತ್ರ ಹೊಸೆದಿದ್ದಾರೆ.
ಹೆಚ್ಚುವರಿ ಡಿಸಿಎಂ ಬೇಡಿಕೆಗೆ ಭಾರಿ ಪರ-ವಿರೋಧ
ಡಿ.ಕೆ.ಶಿವಕುಮಾರ್ ಅವರ ಜತೆ ಹೆಚ್ಚುವರಿಯಾಗಿ ಡಿಸಿಎಂಗಳನ್ನು ಮಾಡುವ ವಿಚಾರ ಪಕ್ಷದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಜಿ. ಪರಮೇಶ್ವರ್ ಸೇರಿದಂತೆ ಕೆಲವೇ ಕೆಲವು ಮಂದಿ ಇದನ್ನು ಬೆಂಬಲಿಸಿದ್ದಾರೆ. ಈಗ ಬಸವರಾಜ ರಾಯರೆಡ್ಡಿ ಬೆಂಲ ನೀಡಿದ್ದಾರೆ. ಉಳಿದವರಲ್ಲಿ ಹೆಚ್ಚಿನವರು ಇದು ಅನಗತ್ಯವಾಗಿ ಗೊಂದಲ ಸೃಷ್ಟಿಸುವ ಪ್ರಯತ್ನ ಎಂದಿದ್ದಾರೆ.
-
ವಿದೇಶ18 hours ago
Akshardham : ವಿದೇಶದಲ್ಲಿನ ಅತೀ ದೊಡ್ಡ ದೇವಾಲಯ ಉದ್ಘಾಟನೆಗೆ ಸಜ್ಜು; ಏನಿದರ ವಿಶೇಷ?
-
ಕರ್ನಾಟಕ16 hours ago
PSI Scam : ಪಿಎಸ್ಐ ನೇಮಕಾತಿ ಅಕ್ರಮ; ಕೊನೆಗೂ ಅಮೃತ್ ಪಾಲ್ಗೆ ಜಾಮೀನು
-
ದೇಶ11 hours ago
Swara Bhasker: ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಸ್ವರಾ ಭಾಸ್ಕರ್, ಮಗಳ ಹೆಸರು ‘ರಾಬಿಯಾ’
-
ಕರ್ನಾಟಕ12 hours ago
Weather Update: ಭಾರತದಲ್ಲಿ ಮುಗೀತು ಮಳೆಗಾಲ! ಎಷ್ಟು ಮಳೆ ಕೊರತೆ, ಬರಗಾಲ ಪಕ್ಕಾ?
-
South Cinema15 hours ago
Darshan Thoogudeepa: ನಟ ದರ್ಶನ್ ವಿರುದ್ಧ ಮಂಡ್ಯದಲ್ಲಿ ರೈತರ ಆಕ್ರೋಶ; ಕ್ಷಮೆಗೆ ಆಗ್ರಹ
-
ಅಂಕಣ18 hours ago
ವಿಧಾನಸೌಧ ರೌಂಡ್ಸ್: ಜೆಡಿಎಸ್ಗೆ ಸಂಜೀವಿನಿಯಾದ ಬಿಜೆಪಿ ಮೈತ್ರಿ; ಬೆಂಗಳೂರು ದಕ್ಷಿಣದಿಂದ ಕಾಂಗ್ರೆಸ್ ಅಚ್ಚರಿ ಅಭ್ಯರ್ಥಿ?
-
ದೇಶ16 hours ago
Army Jawan: ಯೋಧನ ಮೇಲೆ ಹಲ್ಲೆ ನಡೆಸಿ, ಬೆನ್ನಿನ ಮೇಲೆ ‘ಪಿಎಫ್ಐ’ ಎಂದು ಬರೆದ ದುರುಳರು!
-
ದೇಶ8 hours ago
Lawyer Sara Sunny: ಸುಪ್ರೀಂ ಕೋರ್ಟ್‌ನಲ್ಲಿ ಮೊದಲ ಬಾರಿಗೆ ಸಂಜ್ಞೆ ಭಾಷೆಯಲ್ಲಿ ವಾದ ಮಂಡನೆ! ಇತಿಹಾಸ ಸೃಷ್ಟಿಸಿದ ಸಾರಾ