Site icon Vistara News

Vistara News Launch | ಮಾಧ್ಯಮ ಕ್ಷೇತ್ರ ವಾಸ್ತವಿಕತೆ, ನೈಜತೆಗೆ ಆದ್ಯತೆ ನೀಡಲಿ: ಶಾಸಕ ಅಮರೇಗೌಡ ಪಾಟೀಲ್ ಭಯ್ಯಾಪುರ

Vistara News Launch

ಕೊಪ್ಪಳ: ಜಿಲ್ಲೆಯ ಕುಷ್ಟಗಿ ಪಟ್ಟಣದ ಬಸವ ಭವನದಲ್ಲಿ ವಿಸ್ತಾರ ಕನ್ನಡ ಸಂಭ್ರಮ ಭಾನುವಾರ ನೆರವೇರಿತು. ಖ್ಯಾತ ಪತ್ರಕರ್ತ ಹರಿಪ್ರಕಾಶ್ ಕೋಣೆಮನೆ ನೇತೃತ್ವದಲ್ಲಿ ಆರಂಭವಾಗಿರುವ ವಿಸ್ತಾರ ನ್ಯೂಸ್‌ ಚಾನೆಲ್‌ನಿಂದ(Vistara News Launch) ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಶಾಸಕ ಅಮರೇಗೌಡ ಪಾಟೀಲ್ ಭಯ್ಯಾಪುರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಶಾಸಕ ಅಮರೇಗೌಡ ಪಾಟೀಲ್ ಭಯ್ಯಾಪುರ, ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆಂದು ಪರಿಗಣಿತವಾಗಿರುವ ಮಾಧ್ಯಮ ರಂಗಕ್ಕೆ ಹೆಚ್ಚಿನ ಜವಾಬ್ದಾರಿಯಿದೆ. ಹೀಗಾಗಿ ಮಾಧ್ಯಮ ಕ್ಷೇತ್ರ ವಾಸ್ತವಿಕತೆಗೆ ಹಾಗೂ ನೈಜತೆಗೆ ಆದ್ಯತೆ ನೀಡಬೇಕು. ವ್ಯಕ್ತಿತ್ವ ತೇಜೋವಧೆ ಮಾಡುವಂತಹ ಸುದ್ದಿಗಳ ವಿಷಯದಲ್ಲಿ ನೈಜತೆಯನ್ನು ತಿಳಿದುಕೊಂಡು ನಂತರ ಪ್ರಸಾರ ಮಾಡಬೇಕು ಎಂದರು.

ಇದನ್ನೂ ಓದಿ | Vistara News Launch | ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಸಮಾಜ ಒಡೆಯುವ ಕೆಲಸ ಆಗಬಾರದು: ಸಂಸದ ಬಿ.ವೈ. ರಾಘವೇಂದ್ರ

ಕುಷ್ಟಗಿಯ ಮದ್ದಾನಿ ಹಿರೇಮಠದ ಶ್ರೀ ಕರಿಬಸವೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ವಿಸ್ತಾರ ಚಾನೆಲ್‌ಗೆ ಶುಭ ಹಾರೈಸಿದರು. ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಅಮರೇಗೌಡ, ಬಸವ ಸಮಿತಿ ಅಧ್ಯಕ್ಷ ಶಿವಸಂಗಪ್ಪ ಬಿಜಕಲ್, ಕಸಾಪ ತಾಲೂಕು ಅಧ್ಯಕ್ಷ ವೀರೇಶ ಬಂಗಾರಶೆಟ್ಟರ್, ನಿವೃತ್ತ ಪ್ರಾಚಾರ್ಯ ಟಿ. ಬಸವರಾಜ, ಅಗ್ನಿಶಾಮಕ ಠಾಣೆ ಅಧಿಕಾರಿ ಪಿ. ರಾಜು ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಮಲ್ಲನಗೌಡ ಅಗಸಿಮುಂದಿನ ಅವರ ತಂಡದಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಿತು‌. ಮಹೇಶ ನಿರೂಪಿಸಿದರು, ಜಗದೀಶ ಸ್ವಾಗತಿಸಿದರು. ವಿಸ್ತಾರ ನ್ಯೂಸ್ ಜಿಲ್ಲಾ ವರದಿಗಾರ ಮೌನೇಶ್ ಬಡಿಗೇರ್ ಪ್ರಾಸ್ತವಿಕವಾಗಿ ಮಾತನಾಡಿದರು.

ಇದನ್ನೂ ಓದಿ | Vistara News Launch | ಯಲ್ಲಾಪುರದಲ್ಲಿ ಅದ್ಧೂರಿ ವಿಸ್ತಾರ ಕನ್ನಡ ಸಂಭ್ರಮ

Exit mobile version