ಗಂಗಾವತಿ: ಹಿಟ್ ಅಂಡ್ ರನ್ ಪ್ರಕರಣದಲ್ಲಿ (Hit and Run Case) ಬೆಂಗಳೂರಿನಲ್ಲಿ ಮೃತಪಟ್ಟ ಸ್ಥಳೀಯ ಯುವಕನ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ ಶಾಸಕ ಜಿ. ಜನಾರ್ದನರೆಡ್ಡಿ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದಿಂದ ಮಂಜೂರಾಗಿದ್ದ ಒಂದು ಲಕ್ಷ ರೂಪಾಯಿ ಮೊತ್ತದ ಪರಿಹಾರದ ಚೆಕ್ (Compensation Check) ಕುಟುಂಬ ಸದಸ್ಯರಿಗೆ ನೀಡಿದರು.
ಇಲ್ಲಿನ ವಿರುಪಾಪುರ ತಾಂಡದಲ್ಲಿರುವ ಮೃತ ಯುವಕ ರಾಘವೇಂದ್ರ ಅವರ ನಿವಾಸಕ್ಕೆ ಭೇಟಿ ನೀಡಿದ ಶಾಸಕ ಜಿ. ಜನಾರ್ದನರೆಡ್ಡಿ, ನಿಗಮದ ಪರಿಹಾರದ ಜತೆಯಲ್ಲಿ ತಮ್ಮ ವೈಯಕ್ತಿಕ 25 ಸಾವಿರ ರೂಪಾಯಿ ಪರಿಹಾರ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು.
ಇದನ್ನೂ ಓದಿ: School timing : ಶಾಲಾ ಸಮಯ ಬದಲಾವಣೆ ಇಲ್ಲ; ಶಿಕ್ಷಣ ಇಲಾಖೆ ಸ್ಪಷ್ಟ ನಿರ್ಧಾರ
ಈ ಸಂದರ್ಭದಲ್ಲಿ ಮಾತನಾಡಿದ ಅವರು, ದುಡಿಯಲು ಬೆಂಗಳೂರಿಗೆ ಹೋಗಿದ್ದ ಯುವಕ ರಾಘವೇಂದ್ರ ಅಲ್ಲಿನ ಬಾಗಲೂರು ಮುಖ್ಯ ರಸ್ತೆಯಲ್ಲಿ ಆಕಸ್ಮಿಕ ರಸ್ತೆ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾನೆ ಎಂಬ ಮಾಹಿತಿ ಇದೆ. ಆತನನ್ನೇ ನೆಚ್ಚಿಕೊಂಡಿದ್ದ ಕುಟುಂಬ ಆರ್ಥಿಕವಾಗಿ ಸಂಕಷ್ಟದಲ್ಲಿದೆ.
ಹೀಗಾಗಿ ಸರ್ಕಾರದಿಂದ ತಾಂಡ ಅಭಿವೃದ್ಧಿ ನಿಗಮದ ಮೂಲಕ ಒಂದು ಲಕ್ಷ ರೂಪಾಯಿ ಪರಿಹಾರದ ಜತೆಗೆ ವೈಯಕ್ತಿಕ ಪರಿಹಾರವೂ ನಾನು ನೀಡಿದ್ದೇನೆ. ಮುಂದಿನ ದಿನಗಳಲ್ಲಿ ಈ ಕುಟುಂಬಕ್ಕೆ ಸರ್ಕಾರದಿಂದ ಹೆಚ್ಚಿನ ಸೌಲಭ್ಯ ಕಲ್ಪಿಸಿಕೊಡಲು ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಇದನ್ನೂ ಓದಿ: ICC World Cup 2023 : ಡೈವ್ ಹೊಡಿಬೇಡಿ, ಕಾಲು ಮುರ್ಕೊತೀರಿ; ಇಂಗ್ಲೆಂಡ್ ತಂಡದ ಆಟಗಾರರಿಗೆ ಎಚ್ಚರಿಕೆ
ಈ ಸಂದರ್ಭದಲ್ಲಿ ತಾಂಡಾ ನಿಗಮ ಬೆಂಗಳೂರಿನ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ ನಾಯ್ಕ, ಕೊಪ್ಪಳ ಜಿಲ್ಲಾ ಅಭಿವೃದ್ಧಿ ಅಧಿಕಾರಿ ಗಣೇಶ ಎಲ್, ಪ್ರಥಮ ದರ್ಜೆ ಸಹಾಯಕರಾದ ರವಿನಾಯ್ಕ ಚವ್ಹಾಣ್ ಮತ್ತು ರಾಘವೇಂದ್ರ ಇದ್ದರು.